ಹುಬ್ಬಳ್ಳಿ : ನಗರದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿದು ಗಾಯಗೊಳಿಸಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಶೋಯೆಬ್ ಅಬ್ಬನ್ನವರ (24) ಎಂಬುವವರಿಗೆ ಗಾಯಗೊಳಿಸಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೇಶ್ವಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಧವ ನಗರದಲ್ಲಿ ಮತ್ತೊಂದು ಚಾಕು ಇರಿತ ಘಟನೆ ನಡೆದಿದೆ. ಹಳೆ ವೈಷಮ್ಯದ ಕಾರಣಕ್ಕೆ ಈ ಘಟನೆಗಳು ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ …
Read More »ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದ ಕೊರೊನಾ ಸೋಂಕಿತರು
ಧಾರವಾಡ/ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರು ತಮ್ಮ ಹಕ್ಕು ಚಲಾಯಿಸಲು ಮೀಸಲಿಡಲಾಗಿತ್ತು. ಈ ವೇಳೆ ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50ರಲ್ಲಿ ಇಬ್ಬರು ಕೊರೊನಾ ಸೋಂಕಿತರು ಪಿಪಿಇ ಕಿಟ್ ಧರಿಸಿ ಕೋವಿಡ್ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಮತ ಚಲಾಯಿಸಿದರು. ಹೋಂ ಐಸೋಲೇಷನ್ ನಲ್ಲಿದ್ದ ಓರ್ವ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದ ಓರ್ವ ಪಿಪಿಇ ಕಿಟ್ ಧರಿಸಿ ಮತದಾನ …
Read More »ಡಿಸಿಸಿ ಬ್ಯಾಂಕ್, ಬೆಳಗಾವಿ ಲೋಕಸಭೆ ಚುನಾವಣೆ ಟಿಕೆಟ್ ಫೈಟ್ : ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಂಗಳವಾರ ತಡರಾತ್ರಿವರೆಗೂ ರಹಸ್ಯ ಸಭೆ
ಹುಬ್ಬಳ್ಳಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಚುನಾವಣೆ ಮತ್ತು ಸುರೇಶ ಅಂಗಡಿ ನಿಧನದಿಂದ ತೆರವಾಗಿರುವ ಲೋಕಸಭಾ ಕ್ಷೇತ್ರದ ಟಿಕೆಟ್ ಅಂತಿಮ ಗೊಳಿಸುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಂಗಳವಾರ ತಡರಾತ್ರಿವರೆಗೂ ರಹಸ್ಯ ಸಭೆ ನಡೆಸಿದೆ. ಸುಮಾರು ನಾಲ್ಕು ಗಂಟೆ ನಡೆದ ಸಭೆಯಲ್ಲಿ ಧಾರವಾಡ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಬಿಜೆಪಿಯ ಪ್ರಮುಖರು ಪಾಲ್ಗೊಂಡಿದ್ದರು. ಕೇಂದ್ರ …
Read More »ಶಾರ್ಟ್ ಸರ್ಕ್ಯೂಟ್- ಪೊರಕೆ, ಹುಬ್ಬಳ್ಳಿ ಫಿನಾಯಿಲ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ
ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಫಿನಾಯಿಲ್ ಹಾಗೂ ಪೊರಕೆ ತಯಾರಿಕೆ ಕಾರ್ಖಾನೆಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಫಿನಾಯಿಲ್ ಹಾಗೂ ಪೊರಕೆಗಳು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿಯ ಸಮೀಪದ ಶೇರವಾಡ ಗ್ರಾಮದ ಬಳಿಯ ವಿಭವ್ ಇಂಡಸ್ಟ್ರೀಯಲ್ ನಲ್ಲಿ ನಡೆದಿದೆ. ಸಂಜೆ ವಿದ್ಯುತ್ ನಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಕುಂದಗೋಳ ಹಾಗೂ ಹುಬ್ಬಳ್ಳಿಯ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿ …
Read More »ಕುಲ್ಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ
ಹುಬ್ಬಳ್ಳಿ: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಗೆ ದೊಡ್ಡ ಹುದ್ದೆ ಸಿಗುತ್ತಿತ್ತು ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈ ಬಗ್ಗೆ ಚರ್ಚೆ ನಡೆದಿರುವ ಕುರಿತು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ದಿ.ಸುರೇಶ್ ಅಂಗಡಿಯವರಿಗೆ ಶೀಘ್ರದಲ್ಲಿಯೇ ದೊಡ್ಡ ಹುದ್ದೆ ಸಿಗುವುದರಲ್ಲಿತ್ತು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ, ಬಿಜೆಪಿ ರಾಷ್ಟ್ರಾಧ್ಯಕ್ಷರ ಜೊತೆ ನಾನು ಸಂಪರ್ಕದಲ್ಲಿದ್ದೇನೆ. ಅಂತಹ ಚರ್ಚೆ ನಡೆದಿರುವ …
Read More »ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಕಾಂಗ್ರೆಸ್ ಮುಖಂಡ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ
ಹುಬ್ಬಳ್ಳಿ : ಹೌದು.. ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವರ ಆಪ್ತರಾಗಿದ್ದಂತ ಗಿರೀಶ್ ಗದಿಗೆಪ್ಪಗೌಡರೇ ಹೀಗೆ ನಿರೀಕ್ಷಣಾ ಜಾಮೀನು ಪಡೆದಂತ ಕೈ ಮುಖಂಡ ಆಗಿದ್ದಾರೆ. ನಟಿ ರಾಗಿಣಿ ಜೊತೆಗೆ ನಂಟು ಹೊಂದಿದ್ದರಿಂದಾಗಿ, ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿ ಗಿರೀಶ್ ಗದಿಗೆಪ್ಪಗೌಡರ ಇದ್ದರು. ಇದೇ ಕಾರಣದಿಂದಾಗಿ ಸಿಸಿಬಿ ಪೊಲೀಸರಿಂದ ಯಾವುದೇ ಸಂದರ್ಭದಲ್ಲಿಯಾದರೂ ಬಂಧನದ ಭೀತಿ ಕೂಡ ಎದುರಿಸುವಂತಾಗಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತೆಯಾಗಿ ಧಾರವಾಡ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಲಯದಿಂದ …
Read More »ಧಾರವಾಡದ ನಾರಾಯಣ ಹೃದಾಯಲಯ ನವಜಾತ ಶಿಶುವಿಗೆ ಪುನರ್ಜನ್ಮ ನೀಡಿದೆ.
ಧಾರವಾಡ: ಗಂಭೀರ ಹೃದಯ ರೋಗದಿಂದ ಬಳಲುತ್ತಿದ್ದ 20 ದಿನದ ಮಗುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಧಾರವಾಡದ ನಾರಾಯಣ ಹೃದಾಯಲಯ ನವಜಾತ ಶಿಶುವಿಗೆ ಪುನರ್ಜನ್ಮ ನೀಡಿದೆ. ಹುಬ್ಬಳ್ಳಿ ಮೂಲದ ಫಾರುಕ್ ಮತ್ತು ಮುಬಿನ್ ದಂಪತಿಯ 20 ದಿನದ ಮಗು ಹುಟ್ಟಿದಾಗ 2.3 ಕೆಜೆ ತೂಕವಿತ್ತು. ಮಗುವಿನ ಹೃದಯದಲ್ಲಿ ರಕ್ತ ಪರಿಚಲನೆ ಸಮಸ್ಯೆ ಕಾರಣದಿಂದ ಕುಟುಂಬದವರು ಮಗುವಿನ ಚಿಂತೆಯಲ್ಲೇ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮಾಡಿಸಿದರೂ ಅದು ಸರಿಯಾಗಿರಲಿಲ್ಲ. ನಂತರ …
Read More »ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ- ವಾಯುವ್ಯ ಸಾರಿಗೆ ಸಂಸ್ಥೆಯ ಆದಾಯದಲ್ಲಿ ಚೇತರಿಕೆ
ಹುಬ್ಬಳ್ಳಿ: ಲಾಕ್‍ಡೌನ್ ಬಹುತೇಕ ಸಡಿಲಿಗೊಳಿಸಿದ ಹಿನ್ನೆಲೆಯಲ್ಲಿ ಜನರ ಕೋವಿಡ್ ಪೂರ್ವ ಸ್ಥಿತಿಗೆ ಮರಳುತ್ತಿದ್ದು, ಇದರೊಂದಿಗೆ ಬಸ್ ಪ್ರಯಾಣಿಕರ ಸಂಖ್ಯೆಯೂ ಏರಿಕೆಯಾಗಿದೆ. ಕಳೆದ ತಿಂಗಳಿಗಿಂತ ಅಕ್ಟೋಬರ್ ನಲ್ಲಿ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ಸಾರಿಗೆ ಆದಾಯ ಹೆಚ್ಚಾಗಿದ್ದು, ಮತ್ತಷ್ಟು ಮಾರ್ಗಗಳಲ್ಲಿ ಬಸ್ಸುಗಳನ್ನು ಹೆಚ್ಚಿಸಲಾಗಿದೆ. ಲಾಕ್‍ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಲ್ಲಿ 419 ಬಸ್ಸುಗಳು ಪ್ರತಿದಿನ 1.63 ಲಕ್ಷ ಕಿ.ಮೀ ಸಂಚರಿಸುತ್ತಿದ್ದವು. 1.25 ಲಕ್ಷ ಜನರಿಂದ 1.35 ಲಕ್ಷ ಜನರು ಪ್ರತಿದಿನ ಪ್ರಯಾಣ ಮಾಡುತ್ತಿದ್ದರು. …
Read More »ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಸೋಂಕು,ಕೋವಿಡ್ ವಾರ್ಡಿಗೆ ಹೋಗೋಕೆ ಸಿಬ್ಬಂದಿಗೆ ಭಯ
ಹುಬ್ಬಳ್ಳಿ: ರಾಜ್ಯದಲ್ಲಿ ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ಚಿಕ್ಕವರಿಂದ ಹಿಡಿದು ವಯೋವೃದ್ಧರವರೆಗೂ ಸೋಂಕು ಇನ್ನಿಲ್ಲದಂತೆ ಹರಡುತ್ತಿದೆ. ಈ ಮಧ್ಯೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೂ ಸಹ ಕೊರೊನಾ ಬೆನ್ನು ಬಿಡದೇ ಕಾಡ್ತಾ ಇದೆ. ಹೀಗಾಗಿ ನೂರಾರು ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಸೋಂಕು ಹರಡುತ್ತಿರುವ ಪರಿಣಾಮ ವೈದ್ಯರು ಸಹ ಚಿಕಿತ್ಸೆ ನೀಡಲು ಹಿಂದೆ ಮುಂದೆ ನೋಡುವಂತಾಗಿದೆ. ರಾಜ್ಯದಲ್ಲಿ ಕಿಲ್ಲರ್ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಲೇ ಸಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯಲ್ಲೂ ಸಹ …
Read More »ಕೆಐಎಡಿಬಿ ಕಾರ್ಯದರ್ಶಿಯ ಆಸ್ತಿ ನೋಡಿ ದಂಗಾದ ಎಸಿಬಿ
ಹುಬ್ಬಳ್ಳಿ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಕಾರ್ಯದರ್ಶಿ ಹರೀಶ್ ಹಳಪೇಟ ಆಸ್ತಿ ನೋಡಿ ಎಸಿಬಿ ಅಧಿಕಾರಿಗಳೇ ದಂಗಾಗಿ ಹೋಗಿದ್ದಾರೆ. ಹುಬ್ಬಳ್ಳಿ, ಧಾರವಾಡ ಹಾಗೂ ಬೆಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದ ಧಾರವಾಡದ ಎಸಿಬಿ ಅಧಿಕಾರಿಗಳು ಕೆಐಎಡಿಬಿ ಕಾರ್ಯದರ್ಶಿಯ ಅಪಾರ ಪ್ರಮಾಣದ ಆಸ್ತಿಯನ್ನ ಪತ್ತೆ ಮಾಡುವಲ್ಲಿ ಯಶ್ವಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೆಐಎಡಿಬಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಹರೀಶ್ ಹಳಪೇಟ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಪತ್ತೆಯಾದ ಸ್ಥಿರಾಸ್ತಿ ಹಾಗೂ ಚರಾಸ್ತಿಗಳ ಪಟ್ಟಿಯನ್ನ …
Read More »