ಹುಬ್ಬಳ್ಳಿ: ಬಳ್ಳಾರಿಯ ಪಾರ್ವತಿ ನಗರದಲ್ಲಿನ ಗುಣಶೀಲ ಫರ್ಟಿಲಿಟಿ ಸೆಂಟರ್‌ನಲ್ಲಿ ಆಗಸ್ಟ್ 31ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 2.30ರವರೆಗೆ ಸಂತಾನಹೀನತೆ (ಬಂಜೆತನ) ಸಮಸ್ಯೆ ಎದುರಿಸುತ್ತಿರುವ ದಂಪತಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಪದೇ ಪದೇ ಗರ್ಭಪಾತ, ಐವಿಎಫ್ ಚಿಕಿತ್ಸೆ ವೈಫಲ್ಯ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಬಹುದು. ಬಂಜೆತನ ನಿವಾರಣೆ ತಜ್ಞೆ ಡಾ. ದೇವಿಕಾ ಗುಣಶೀಲ ಅವರ ನೇತೃತ್ವದಲ್ಲಿ ವೈದ್ಯರ ತಂಡವು ಉಚಿತವಾಗಿ ಆರೋಗ್ಯ ತಪಾಸಣೆ …
Read More »ಜಿಎಸ್‌ಟಿಯಲ್ಲಿ ಬದಲಾವಣೆ: ಉದ್ಯಮಿಗಳಿಗೆ ಜಾಗೃತಿ
ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ತೆರಿಗೆ ಸಮಿತಿಯಿಂದ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಇತ್ತೀಚಿನ ಬದಲಾವಣೆ ಕುರಿತ ವಿಚಾರ ಸಂಕಿರಣವನ್ನು ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿತ್ತು. ಲೆಕ್ಕಪರಿಶೋಧಕ ಶಂಭುಲಿಂಗಪ್ಪ ಪಾಟೀಲ ಅವರು, ಆದಾಯ ತೆರಿಗೆ ಕಾಯ್ದೆಯ ತಿದ್ದುಪಡಿ, ಪರಿಷ್ಕೃತ ತೆರಿಗೆ ಪದ್ಧತಿ ಕುರಿತು ಮಾಹಿತಿ ನೀಡಿದರು. ಲೆಕ್ಕಪರಿಶೋಧಕ ಕಿರಣ್ ಶಾವಿ ಅವರು, ಜಿಎಸ್‌ಟಿ ಕಾಯ್ದೆಯಲ್ಲಿನ ಬದಲಾವಣೆ ಬಗ್ಗೆ ತಿಳಿಸಿದರು. ಉದ್ದಿಮೆದಾರರೊಂದಿಗೆ ಸಂವಾದ ನಡೆಯಿತು. ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ, …
Read More »ಸಮಸ್ಯೆಗಳ ಸುಳಿಯಲ್ಲಿ ‘ಹೆಗ್ಗೇರಿ’
ಹುಬ್ಬಳ್ಳಿ: ಈ ನಗರದ ಬೀದಿಗೆ ಕಾಲಿಟ್ಟರೆ ಸಾಕು ದುರ್ವಾಸನೆ ಮೂಗಿಗೆ ಅಸಹನೀಯವಾಗುತ್ತದೆ. ಮನೆ ಮುಂದೆ ಬಾಯ್ತೆರೆದ ದೊಡ್ಡ ಚರಂಡಿ ನಾಲಾ. ಚರಂಡಿ ಪಕ್ಕದಲ್ಲೇ ಆಡುವ ಮಕ್ಕಳು. ಸಂಜೆ ವಿಪರೀತ ಸೊಳ್ಳೆಗಳ ಕಾಟ.. ಈ ದುಸ್ಥಿತಿಯ ಚಿತ್ರಣವನ್ನು ಹಳೇಹುಬ್ಬಳ್ಳಿಯ ಹೆಗ್ಗೇರಿಯಲ್ಲಿ ಕಾಣಬಹುದು. ನಗರದ ಮಧ್ಯಭಾಗದಲ್ಲಿರುವ ಈ ಬಡಾವಣೆ ಸಮಸ್ಯೆಗಳ ಸರಮಾಲೆ ಹೊದ್ದು ಕೂತಿದೆ. 2 ಸಾವಿರಕ್ಕೂ ಹೆಚ್ಚು ಜನ ವಾಸಿಸುವ ಈ ಪ್ರದೇಶದಲ್ಲಿ ಸ್ವಚ್ಛತೆ ಇಲ್ಲ. ಮನೆ ಎದುರೇ ಬೀಳುವ ತ್ಯಾಜ್ಯ, ಮನೆ …
Read More »ಶತಮಾನ ಕಂಡ ಶಾಲೆ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು
ಹುಬ್ಬಳ್ಳಿ: ಇಲ್ಲಿನ ಗಿರಣಿಚಾಳದಲ್ಲಿರುವ ಶತಮಾನ ಕಂಡ ಶಾಲೆ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ ಘಟನೆ ನಡೆದಿದೆ. ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯವಾಗಿದ್ದು, ಜಾಗ ಕಬಳಿಸುವ ಹುನ್ನಾರವಾಗಿದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದರು. ಸುಮಾರು 135 ವರ್ಷಗಳ ಇತಿಹಾಸವುಳ್ಳ ಶಾಲೆಯಾಗಿದ್ದು, ಹಳೆ ಕಟ್ಟಡವನ್ನು ಕೆಡವಿದ್ದಾರೆ. ತಡರಾತ್ರಿ ಕಿಡಿಗೇಡಿಗಳು ಕಟ್ಟಡ ಕೆಡವಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಕೆಡವಿರುವ ಕಟ್ಟಡದಲ್ಲಿ 4 ಮತ್ತು 5ನೇ ವರ್ಗದ ತರಗತಿಗಳು ನಡೆಯುತ್ತಿದ್ದವು. ಬಾಗಿಲು ಹಾಗೂ ಗೋಡೆ ಭಾಗ ಕೆಡವಿದ್ದು, …
Read More »ಸ್ಥಾನಕ್ಕೆ ಕುತ್ತು ಬಂದಿದ್ದರಿಂದ ಜಾತಿಯ ಲೇಪನ: ಜೋಶಿ ಟೀಕೆ
ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸ್ಥಾನ ಹೋಗುತ್ತದೆ ಎಂಬುದು ಗೊತ್ತಾದ ನಂತರ ಅದಕ್ಕೆ ಜಾತಿಯ ಲೇಪನ ಮಾಡುತ್ತಿದ್ಧಾರೆ’ ಎಂದು ಕೇಂದ್ರ ನಾಗರಿಕ ಸರಬರಾಜು ಮತ್ತು ಆಹಾರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ನಾಯಕನನ್ನು ತೆಗೆದು ಬೇರೆಯವರನ್ನು ಸಿ.ಎಂ ಮಾಡುವಂತೆ ನಾವು ಹೇಳಿಲ್ಲ. ಸಿದ್ದರಾಮಯ್ಯ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜೀನಾಮೆ ಕೊಡಬೇಕು ಎಂಬುದಷ್ಟೇ ನಮ್ಮ ಆಗ್ರಹ. ಹಿಂದುಳಿದ ವರ್ಗದ ಎಸ್.ಬಂಗಾರಪ್ಪ ಅವರನ್ನು …
Read More »ಧಾರವಾಡ ಕೆಐಎಡಿಬಿ ಅಕ್ರಮ ಪ್ರಕರಣ; ಸಿಐಡಿ ತನಿಖೆ ಬೆನ್ನಲ್ಲೇ ಎಂಟ್ರಿ ಕೊಟ್ಟ ಇಡಿ
ಧಾರವಾಡ, : ಧಾರವಾಡ ಕೆಐಎಡಿಬಿ(KIADB) ಕಚೇರಿ ಅಂದರೆ ಅಲ್ಲಿ ಅಕ್ರಮಗಳದ್ದೇ ಪಾರುಪತ್ಯ. ಕಳೆದ ವರ್ಷ ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿತ್ತು. ಅದಕ್ಕೂ ಮುನ್ನ 20 ಕೋಟಿ ರೂ. ಡಬಲ್ ಪೇಮೆಂಟ್ ಹಗರಣವೂ ನಡೆದು, ಅದರಲ್ಲಿ ಸಜ್ಜನ್ ಮೊದಲನೇ ಆರೋಪಿ ಆಗಿ, ಜೈಲು ಕೂಡ ಕಂಡು ಬಂದಿದ್ದರು. ಡಬಲ್ …
Read More »ಕೊಳಲು ವಾದಕ ವೇಣುಗೋಪಾಲ ಹೆಗಡೆ ನಿಧನ
ಧಾರವಾಡ: ಇಲ್ಲಿನ ರಾಧಾಕೃಷ್ಣನಗರ ನಿವಾಸಿ, ಕೊಳಲು ವಾದಕ ವೇಣುಗೋಪಾಲ ಎಸ್.ಹೆಗಡೆ (41) ಬುಧವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರ ಇದ್ದಾರೆ. ನಿತ್ಯಾನಂದ ಹಳದಿಪುರ ಅವರ ಶಿಷ್ಯರಾಗಿದ್ದ ವೇಣುಗೋಪಾಲ ಅವರು, ಕೊಳಲು ವಾದನದಲ್ಲಿ ಸಾಧನೆ ಮಾಡಿದ್ದರು. ಆಕಾಶವಾಣಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಮುಂಬೈನ ಐಟಿಸಿ ಸಂಶೋಧನಾ ಅಕಾಡೆಮಿಯ ಪ್ರಶಸ್ತಿ ಸಹಿತ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ.
Read More »ಕುಡಿದು ವಾಹನ ಚಾಲನೆ: 3 ದಿನಗಳಲ್ಲಿ ₹9.60 ಲಕ್ಷ ದಂಡ ಸಂಗ್ರಹ!
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿ ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಕಳೆದ ವಾರಾಂತ್ಯದ ಮೂರು ದಿನಗಳಲ್ಲಿ 96 ಪ್ರಕರಣಗಳನ್ನು ದಾಖಲಿಸಿಕೊಂಡು ₹9.60 ಲಕ್ಷ ದಂಡ ಸಂಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮೂರು ಮತ್ತು ಧಾರವಾಡದಲ್ಲಿ ಒಂದು ಸಂಚಾರ ಪೊಲೀಸ್ ಠಾಣೆಯಿದ್ದು, ಕಳೆದ ಶುಕ್ರವಾರ, ಶನಿವಾರ ಮತ್ತು ಭಾನುವಾರ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕುಡಿದು ವಾಹನ ಚಲಾಯಿಸುವವರ ಪತ್ತೆಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದರು. ಉತ್ತರ ಸಂಚಾರ …
Read More »ಖಾಲಿ ಹುದ್ದೆಗಳ ಭರ್ತಿಗೆ ಕ್ರಮವಹಿಸಿ: ಬಸವರಾಜ ಹೊರಟ್ಟಿ
ಧಾರವಾಡ: ‘ಸರ್ಕಾರಿ ನೌಕರರು ಇಂದು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನೌಕರರ ಮೇಲಿನ ಒತ್ತಡ ಕಡಿಮೆ ಮಾಡಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ ಗೌರಮ್ಮ ಹಿರೇಮಠ (ರಪಾಟಿ) ಕಲ್ಯಾಣ ಮಂಟಪದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ವತಿಯಿಂದ ಭಾನುವಾರ ಆಯೋಜಿಸಿದ್ದ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ, ಸದಸ್ಯರ ಸಾಮಾನ್ಯ ಸಭೆ ಮತ್ತು 7ನೇ ವೇತನ …
Read More »ಟ್ರಾನ್ಸ್‌ಫಾರ್ಮರ್ ಅವ್ಯವಸ್ಥೆಗೆ ಬಳಲಿದ ರೈತ!
ಹುಬ್ಬಳ್ಳಿ: ಹೊಸದಾಗಿ ಕೃಷಿ ಪಂಪ್‌ಸೆಟ್ ಅಳವಡಿಸುವುದನ್ನು ಸ್ಥಗಿತಗೊಳಿಸಿರುವ ಸರ್ಕಾರ ಒಂದೆಡೆಯಾದರೆ, ಕೆಟ್ಟುಹೋಗಿರುವ ಹಳೆಯ ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾಯಿಸಲು ಹೆಸ್ಕಾಂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ರೈತರು ತೀವ್ರ ಕಷ್ಟ ಎದುರಿಸುತ್ತಿದ್ದಾರೆ. ಇದು ಕೇವಲ ರೈತರ ಜೀವನದ ಮೇಲಲ್ಲದೇ ಕೃಷಿ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವ ಅಪಾಯ ತಂದೊಡ್ಡಿದೆ. ಕಳೆದ ವರ್ಷಕ್ಕಿಂತ ಮುಂಚೆ ಸರ್ಕಾರವೇ ರೈತರ ಜಮೀನುಗಳಲ್ಲಿ ನೀರಾವರಿ ಪಂಪ್‌ಸೆಟ್ ಅಳವಡಿಸುತ್ತಿತ್ತು. ಇದಕ್ಕಾಗಿ ಬೇಕಾದ ವಿದ್ಯುತ್ ತಂತಿ, ಕಂಬ, ಟ್ರಾನ್ಸ್‌ಫಾರ್ಮರ್‌ಗಳನ್ನು ಪೂರೈಸುತ್ತಿತ್ತು. 5-6 …
Read More »