Breaking News

ಹುಬ್ಬಳ್ಳಿ

ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಪಲ್ಸ್ ಆಕ್ಸಿಮೀಟರ್: ಧಾರವಾಡ ಎಸ್‍ಪಿ

ಧಾರವಾಡ: ಕೊರೊನಾ ವಿರುದ್ಧ ನಮ್ಮ ಪೊಲೀಸರು ಹೋರಾಡಬೇಕಿದೆ, ಕೆಲಸ ಮಾಡಬೇಕಿದೆ. ಹೀಗಾಗಿ ಮುನ್ನೆಚ್ಚರಿಕಾ ಪರಿಕರಗಳ ಅಗತ್ಯವಿದೆ ಎಂದು ಧಾರವಾಡ ಎಸ್‍ಪಿ ವರ್ತಿಕಾ ಕಟಿಯಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಠಾಣೆಗೆ ಪಲ್ಸ್ ಆಕ್ಸಿಮೀಟರ್ ಕೊಟ್ಟಿದ್ದೇವೆ, ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಠಾಣೆಯವರು ಪಲ್ಸ್ ಆಕ್ಸಿಮೀಟರ್ ರೀಡಿಂಗ್ ತೆಗೆಯಬೇಕು ಎಂದು ಹೇಳಿದರು. ಈಗಾಗಲೇ ನಮ್ಮಲ್ಲಿ 8 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದೆ, ಇಬ್ಬರು ಗುಣಮುಖರಾಗಿದ್ದಾರೆ, ನಮ್ಮೊಂದಿಗೆ ಕರ್ತವ್ಯ …

Read More »

ಕೊರೊನಾ ಗೆದ್ದು ಬಂದವರಿಂದ್ಲೇ ಜಾಗೃತಿ- ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ

ಹುಬ್ಬಳ್ಳಿ: ಕೊರೊನಾ ಭಯವನ್ನು ಹೋಗಲಾಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತವು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ವಿನೂತನ ಪ್ರಯತ್ನವನ್ನು ಕೈಗೆತ್ತಿಕೊಂಡಿದೆ. ಈ ಮೂಲಕ ಜನರಲ್ಲಿರುವ ಆತಂಕ ದೂರ ಮಾಡುವ ಮಾರ್ಗವಾಗಿದೆ. ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಬಂದವರ ವಿಶೇಷ ತಂಡಗಳನ್ನು ರಚಿಸಿ, ಎನ್‍ಜಿಒ ಸಹಭಾಗಿತ್ವದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಆತ್ಮಸ್ಥೈರ್ಯ ಮೂಡಿಸುವ ಯೋಜನೆಯೊಂದನ್ನು ಜಿಲ್ಲಾಡಳಿತ ರೂಪಿಸಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಗೆ ಬಂದವರೇ ಇದಕ್ಕೆ …

Read More »

ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಸುವ ಕುರಿತು ಜಿಲ್ಲಾಡಳಿತ, ಜನಪ್ರತಿನಧಿಗಳು ಹಾಗೂ ಸಂಘ ಸಂಸ್ಥೆಗಳ ಅಭಿಪ್ರಾಯ ಪಡೆದು ತೀರ್ಮಾನ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಸುವ ಕುರಿತು ಜಿಲ್ಲಾಡಳಿತ, ಜನಪ್ರತಿನಧಿಗಳು ಹಾಗೂ ಸಂಘ ಸಂಸ್ಥೆಗಳ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಮಧುರ ಕಾಲೋನಿಯ ನಿವಾಸದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡುವ ಅವಶ್ಯಕತೆ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿಗಳು ಹಾಗೂ ಮುಖ್ಯಕಾರ್ಯದರ್ಶಿಗಳ ಒಪ್ಪಿಗೆ ಪಡೆದು …

Read More »

ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು:ಪ್ರಮೋದ ಮುತಾಲಿಕ್

ಧಾರವಾಡ: ಕೊರೊನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸರಿಯಾಗಿ ಕೆಲಸವಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರ ನೋಟದಲ್ಲಿ ಕೊರೊನಾ ಪ್ರಕ್ರಿಯೆಯಲ್ಲಿ ಗೊಂದಲ ಕಾಣುತ್ತಿದೆ. ರಾಜ್ಯ ಸರ್ಕಾರ ಡಾ.ಕಜೆಯವರ 70 ಲಕ್ಷ ಆಯುರ್ವೇದಿಕ್ ಮಾತ್ರೆ ಖರೀದಿಸಿದೆ ಅದನ್ನು ಎಲ್ಲಿಯೂ ವಿತರಿಸುತ್ತಿಲ್ಲ. ಇದರಿಂದ ಸರ್ಕಾರದ ಮೇಲೆ ಸಂಶಯ ಬರುತ್ತದೆ. ವಿರೋಧ ಪಕ್ಷದವರ …

Read More »

ಹುಬ್ಬಳ್ಳಿ-ಧಾರವಾಡದ 45ಕ್ಕೂ ಹೆಚ್ಚು ಪೊಲೀಸರಿಗೆ ಕೊರೋನಾ

ಹುಬ್ಬಳ್ಳಿ: ನಗರದ ಕಸಬಾಪೇಟೆ ಠಾಣೆ ಪೊಲೀಸರಿಗೆ ಕೊರೋನಾ ಕಾಟ ಮುಂದುವರಿದಿದ್ದು, ಶನಿವಾರ ಮತ್ತೆ ಆರು ಸಿಬ್ಬಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಇಲ್ಲಿನ ಒಟ್ಟಾರೆ 17 ಪೊಲೀಸರಿಗೆ ಸೋಂಕು ತಗಲಿದ್ದು, ಇನ್ನೂ ಏಳು ಜನ ಹೋಮ್‌ ಕ್ವಾರಂಟೈನ್‌ನಲ್ಲಿದ್ದಾರೆ. ಆದರೂ ಠಾಣೆಯನ್ನು ಸೀಲ್‌ಡೌನ್‌ ಮಾಡದಿರುವುದು, ಸ್ಯಾನಿಟೈಸಿಂಗ್‌ ನಡೆಸದಿರುವುದು ಇನ್ನುಳಿದ ಸಿಬ್ಬಂದಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕಸಬಾಪೇಟೆ ಠಾಣೆಯಲ್ಲಿ ಒಬ್ಬ ಇನಸ್ಪೆಕ್ಟರ್‌, ಒಬ್ಬ ಸಬ್‌ ನಸ್ಪೆಕ್ಟರ್‌, 8 ಎಎಸ್‌ಐ, 17 ಹೆಡ್‌ಕಾನ್‌ಸ್ಟೇಬಲ್‌, ಇಬ್ಬರು ಮಹಿಳಾ …

Read More »

ಹುಬ್ಬಳ್ಳಿಯಲ್ಲಿ ಕೊರೊನಾಗೆ ಎಎಸ್‍ಐ ಬಲಿ………..

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕಿಲ್ಲರ್ ಕೊರೊನಾಗೆ ಹುಬ್ಬಳ್ಳಿಯಲ್ಲಿ ಕೊರೊನಾ ವಾರಿಯರ್ ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಎಎಸ್‍ಐಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎಎಸ್‍ಐ ಆಗಿ ಸೇವೆ ಸಲ್ಲಿಸುತ್ತಿದ್ದ ಎಎಸ್‌ಐ ಕಳೆದ ಒಂದು ವಾರದಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜುಲೈ 1ರಿಂದ 7ರವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇದ್ದ ಎಎಸ್‍ಐಗೆ 7ರಂದು ಕೊರೊನಾ …

Read More »

ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೂ ಕೊರೊನಾ ಸೋಂಕು

ಹುಬ್ಬಳ್ಳಿ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಿನ್ನೆ ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದರಿಂದ ಗುರುವಾರ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆಯೇ ಶಾಸಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿತ್ತು. ಇಂದು ವರದಿ ಕೈ ಸೇರಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತ ಶಾಸಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕರಿಗೆ ಸೋಂಕು …

Read More »

ಕೊರೊನಾದಿಂದ ಕೆಲಸ ಕಳ್ಕೊಂಡ ತಂದೆ- ಬಿರಿಯಾನಿ ಮಾರಲು ನಿಂತ ಮಗ

ಹುಬ್ಬಳ್ಳಿ: ಕೊರೊನಾ ಮಹಾಮಾರಿ ಅದೆಷ್ಟೋ ಜನರ ಉದ್ಯೋಗ ಕಸಿದುಕೊಂಡು ಮೂಲೆ ಸೇರುವಂತೆ ಮಾಡಿದೆ. ಅಲ್ಲದೇ ಅನೇಕರು ಬೇರೆ ಉದ್ಯೋಗ ಮಾಡಲಾಗದೆ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಲೇಜಿಗೆ ಹೋಗಿ ವ್ಯಾಸಂಗ ಮಾಡಬೇಕಿದ್ದ ವಿದ್ಯಾರ್ಥಿಗಳಿಬ್ಬರು ಬಿರಿಯಾನಿ ಮಾರುವ ಮೂಲಕ ಕುಟುಂಬಕ್ಕೆ ಆಸರೆಯಾಗಿ ನಿಂತಿದ್ದಾರೆ. ಚೇತನ ಹಳ್ಳಿಕೇರಿ ತಂದೆ ಗ್ಯಾರೇಜ್ ನಡೆಸುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಗ್ರಾಹಕರು ಕಡಿಮೆಯಾಗಿ ಗ್ಯಾರೇಜ್ ಮುಚ್ಚಿದ್ದಾರೆ. ಹೀಗಾಗಿ ಕುಟುಂಬ ನಿರ್ವಹಣೆಗಾಗಿ ಚೇತನ ತನ್ನ …

Read More »

15 ಸಾವಿರ ರೂ. ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ!

ಹುಬ್ಬಳ್ಳಿ: ನಗರದ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಲ್ಲಿ ಇಳಿಯುವಾಗ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ 15,820 ರೂ. ಹಣ ಮತ್ತು ದಾಖಲಾತಿಗಳನ್ನು ವಾರಸುದಾರರಿಗೆ ಹಿಂದಿರುಗಿಸಿ ಬಸ್ ಚಾಲಕ, ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ಬಸ್ ನಿರ್ವಾಹಕ ಗುರುಸಿದ್ದಯ್ಯ ಜಿ. ಗೌಡರ್ ಮತ್ತು ಚಾಲಕ ಬಸವರಾಜ ಎನ್. ಬಾದಾಮಿ ರವರನ್ನು ವಾಕರಸಾಸಂಸ್ಥೆಯ ಹುಬ್ಬಳ್ಳಿ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಾಕರಸಾಸಂಸ್ಥೆಯ ಬಾಗಲಕೋಟೆ ವಿಭಾಗದ ಗುಳೇದಗುಡ್ಡ ಘಟಕಕ್ಕೆ ಸೇರಿದ ಕೆ.ಎ.29 ಎಫ್ 1251 ಸಂಖ್ಯೆಯ ಬಸ್ಸು …

Read More »

ಹುಬ್ಬಳ್ಳಿಯ ಯಾದಗಿರಿ/ ಕ್ವಾರಂಟೈನ್ ಕೇಂದ್ರಗಳಲ್ಲಿನರಕಯಾತನೆ

ಯಾದಗಿರಿ/ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಮಧ್ಯೆ ಮತ್ತೊಂದು ಅವಾಂತರ ಸೃಷ್ಟಿಯಾಗುತ್ತಿದೆ. ಹೇಳೋಕೆ ಅವರಿಗೆಲ್ಲಾ ಉತ್ತಮ ವ್ಯವಸ್ಥೆ ಇದೆ ಅಂತಾರೆ. ಆದರೆ ಅವರು ಪ್ರತಿ ಕ್ಷಣಕ್ಕೂ ನರಕಯಾತನೆ ಆನುಭವಿಸುತ್ತಿದ್ದಾರೆ. ಹೌದು. ಯಾದಗಿರಿ ಜಿಲ್ಲೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ನಾನ ಮಾಡೋಕೆ ನೀರಿಲ್ಲ. ರಾತ್ರಿ ಸೊಳ್ಳೆ ಕಡಿತದಿಂದ ನಿದ್ದೆ ಇಲ್ಲ. ಊಟಕ್ಕೆ ಹಳಸಿದ ಬೇಳೆ ಸಾರು ನೀಡುತ್ತಾರೆ. ರೂಮ್‍ನಲ್ಲಿ ಸ್ವಚ್ಛತೆ ಇಲ್ಲ. ಈ ಬಗ್ಗೆ ಕೇಳಿದರೆ ಅಧಿಕಾರಿಗಳು ಉಡಾಫೆಯ ಉತ್ತರ ನೀಡುತ್ತಾರೆ. ಕ್ವಾರೆಂಟೈನ್ ಕೇಂದ್ರ ಕೊರೊನಾ …

Read More »