ಧಾರವಾಡ: ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವಿನ ಜಗಳ ತಾರಕಕ್ಕೇರಿ ಶೂಟೌಟ್ ನಡೆದಿದ್ದು, ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿವಯೋಗಿ ಬಾವಿಕಟ್ಟಿ (44) ಮೃತ ವ್ಯಕ್ತಿ. ನಗರದ ಮದಿಹಾಳದ ಗಣೇಶನಗರದಲ್ಲಿ ಶನಿವಾರ ಕಳೆದ ತಡರಾತ್ರಿ ಘಟನೆ ನಡೆದಿದೆ. ಜಿಲ್ಲೆಯ ಶಿರೂರ ಗ್ರಾಮದ ಶ್ರೀ ಶೈಲ್ ಎಂಬಾತ ತನ್ನ ರಿವಾಲ್ವರ್‌ನಿಂದ ಶಿವಯೋಗಿಯನ್ನು ಶೂಟ್ ಮಾಡಿ ಕೊಲೆ ಮಾಡಿದ್ದಾನೆ. ಶಿರೂರ ಗ್ರಾಮದಲ್ಲಿ ಶ್ರೀಶೈಲ್ ಹಾಗೂ ಆತನ ಸಹೋದರಿ ಸುವರ್ಣಾಗೆ ಸಂಬಂಧಿಸಿದ ಆಸ್ತಿ …
Read More »ದತ್ತಪೀಠ ಹಿಂದುಗಳಿಗೆ ಸೇರಿದೆ ಎಂದು ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸಬೇಕು. ಇಲ್ಲವಾದರೆ ಎಲ್ಲ ಶಾಸಕರಿಗೆ ಘೇರಾವ್: ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ,ಜು,3- ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠ ಹಿಂದುಗಳಿಗೆ ಸೇರಿದ್ದು. ಅದರಂತೆ ಈಗಿನ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ಟ್ ನಿರ್ದೇಶನದ ಮೇರೆಗೆ ಹಿಂದಿನ ಕಾಂಗ್ರೆಸ್ ಸರ್ಕಾರ ನ್ಯಾ. ನಾಗಮೋಹನದಾಸ್ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ಅದರಲ್ಲಿ ಎಡಪಂಥೀಯರು, ಹಿಂದು ವಿರೋಧಿಗಳು ಇದ್ದರು. ಈ ಆಯೋಗದ ವರದಿ ತಿರಸ್ಕರಿಸಿ, ದತ್ತಪೀಠ ಹಿಂದುಗಳಿಗೆ ಸೇರಿದೆ ಎಂದು ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸಬೇಕು. …
Read More »ಬೆಳ್ಳಂಬೆಳಗ್ಗೆ ಕೊರೊನಾ ಸೋಂಕಿತ ಕಳ್ಳ ಆಸ್ಪತ್ರೆಯಿಂದ ಎಸ್ಕೇಪ್!
ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ (ರೋಗಿ-14,537) ಎಸ್ಕೇಪ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಉಪನಗರ ಠಾಣೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಆರೋಪಿತನಾಗಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ 5:30ಕ್ಕೆ ಕಿಮ್ಸ್ ಕೋವಿಡ್ ವಾರ್ಡಿನಿಂದ ಎಸ್ಕೇಪ್ ಆಗಿದ್ದಾನೆ. ಸೋಂಕಿತ ವ್ಯಕ್ತಿ ಕಿಮ್ಸ್ ನಿಂದ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರು ಪೊಲೀಸ್ ಸಿಬ್ಬಂದಿ ಕಾವಲಿಗಿದ್ದರೂ ಖದೀಮ ಎಸ್ಕೇಪ್ ಆಗಿದ್ದಾನೆ. …
Read More »ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿ
ಧಾರವಾಡ: ಕೊರೊನಾಗೆ ಹೆದರಿ ಪರೀಕ್ಷೆಗೆ ಹಾಜರಾಗದೆ ಮನೆಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ಹಾಗೂ ಅಧಿಕಾರಿಗಳು ಮನವೊಲಿಸಿ, ಪರೀಕ್ಷೆ ಬರೆಸಿದ್ದಾರೆ. ಧಾರವಾಡದ ಅಳ್ನಾವರ ತಾಲೂಕಿನ ವಿದ್ಯಾರ್ಥಿನಿ ನಿರೀಕ್ಷಾ(ಹೆಸರು ಬದಲಿಸಲಾಗಿದೆ) ಕೊರೊನಾ ಭಯದಿಂದ ದ್ವಿತೀಯ ಭಾಷೆ ಪರೀಕ್ಷೆಗೆ ಗೈರಾಗಿದ್ದಳು. ಪಾಲಕರು ಸಹ ಏನೂ ಮಾತನಾಡಿರಲಿಲ್ಲ. ಆದರೆ ಪರೀಕ್ಷೆಗೆ ಗೈರಾಗಿದ್ದನ್ನು ಗಮನಿಸಿದ ಶಿಕ್ಷಕರು ಹಾಗೂ ಅಧಿಕಾರಿಗಳು, ಇಂದು ಬಾಲಕಿ ಮನೆಗೆ ತೆರಳಿ ವಿದ್ಯಾರ್ಥಿನಿ ಹಾಗೂ ಪೋಷಕರನ್ನು ಮನವೊಲಿಸಿದ್ದಾರೆ. ಅಧಿಕಾರಿಗಳ ಮನವೊಲಿಕೆ ಬಳಿಕ ಅಳ್ನಾವರದ ಕಸ್ತೂರಬಾ …
Read More »ಎಚ್‍ಐವಿ ಸೋಂಕು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ: ಎಚ್‍ಐವಿ ಸೋಂಕು ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೆಚ್‍ಐವಿ ಹಾಗೂ ಇತರ ಅನಾರೋಗ್ಯ ಲಕ್ಷಣಗಳಿಂದ ಬಳಲುತ್ತಿದ್ದ 42 ವರ್ಷದ ಪುರುಷ ಜೂನ್ 24ರ ರಾತ್ರಿ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ. ಕೆಮ್ಮು, ಆಹಾರ ನುಂಗಲು ತೊಂದರೆ, ನಿಶ್ಯಕ್ತಿ ಮತ್ತಿತರ ಲಕ್ಷಣಗಳಿಂದ ಬಳಲುತ್ತಿದ್ದ ಇವರು ರೋಗಿ ಸಂಖ್ಯೆ 6839 ಜೊತೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಜೂನ್ 21ರಂದು ಕೋವಿಡ್ ದೃಢಪಟ್ಟಿತ್ತು. ಶ್ವಾಸಕೋಶದ ಸಮಸ್ಯೆ …
Read More »ಹುಬ್ಬಳ್ಳಿ:ಮಹಿಳೆಯರ ಬಟ್ಟೆ ಕಳ್ಳತನ ಮಾಡುತ್ತಿದ್ದ ಕಳ್ಳ…………
ಹುಬ್ಬಳ್ಳಿ: ಮಹಿಳೆಯರ ಬಟ್ಟೆ ಕದಿಯುತ್ತಿದ್ದ ವಿಕೃತ ಮನಸ್ಸಿನ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ಯುವಕನು ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯ ಈಶ್ವರ ನಗರ, ನೇಕಾರನಗರದ ವಿವಿಧ ಬಡಾವಣೆಗಳಲ್ಲಿ ಮಹಿಳೆಯರ ಬಟ್ಟೆ ಕಳ್ಳತನ ಮಾಡುತ್ತಿದ್ದ. ಇದರಿಂದಾಗಿ ಕಳ್ಳನನ್ನು ಹಿಡಿಯಲು ಸಾರ್ವಜನಿಕರು ಕಾಯುತ್ತಿದ್ದರು. ಯುವಕ ಇಂದು ಕೂಡ ಬಟ್ಟೆ ಕದಿಯಲು ನೇಕಾರನಗರದ ಬಡಾವಣೆಗೆ ಬಂದಿದ್ದ. ಬಟ್ಟೆ ಕದ್ದು ಇನ್ನೇನು ಪರಾರಿಯಾಗುತ್ತಿದ್ದಂತೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಳಿಕ ಆತನನ್ನು ಕಂಬಕ್ಕೆ ಕಟ್ಟಿದ …
Read More »ಫಾರ್ಮಾಸಿಟಿಕಲ್ ಎಜೆನ್ಸಿಯ ಮಾಲೀಕರಾದ ಮಹಿಳೆಗೆ ಲಾಡ್ಜ್ ಬಾ ಹಾಗಾದ್ರೆ ಸಾಮಗ್ರಿಗಳ ಬಿಲ್ ಪಾವತಿ ಮಾಡುತ್ತೆನೆ ಎಂದು ಅಸಭ್ಯ ವಾಗಿ ವರ್ತಿಸಿದ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿ: ಚಿಟಗುಪ್ಪಿ ಆಸ್ಪತ್ರೆಗೆ ವೈದ್ಯಕೀಯ ಸಾಮಗ್ರಿಗಳನ್ನು ಪೂರೈಕೆ ಮಾಡುತ್ತಿದ್ದ ಫಾರ್ಮಾಸಿಟಿಕಲ್ ಎಜೆನ್ಸಿಯ ಮಾಲೀಕರಾದ ಮಹಿಳೆಗೆ ಲಾಡ್ಜ್ ಬಾ ಹಾಗಾದ್ರೆ ಸಾಮಗ್ರಿಗಳ ಬಿಲ್ ಪಾವತಿ ಮಾಡುತ್ತೆನೆ ಎಂದು ಅಸಭ್ಯ ವಾಗಿ ವರ್ತಿಸಿದ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಪ್ರಭು ಬಿರಾದಾರ ಬಂಧಿತ ವೈದ್ಯ. ಪ್ರಭು ಆಸ್ಪತ್ರೆಗೆ ವೈದ್ಯಕೀಯ ಸಾಮಾಗ್ರಿಗಳನ್ನು ಪೂರೈಕೆ ಮಾಡಿದ್ದರು. ವಸ್ತುಗಳನ್ನು ಪಡೆದ ಪ್ರಭು ಹಣ ಪಾವತಿ ಮಾಡಿರಲಿಲ್ಲ. ಬಿಲ್ ಪಾವತಿ ಮಾಡಬೇಕಾದರೆ ಲಾಡ್ಜ್ ಗೆ ಬಾ …
Read More »ಸಿ ಎಂ ಇಂದ ಮಾಸ್ಕ್ ದಿನ ಆಚರಣೆ…
; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಮಾಸ್ಕ್ ಡೇ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೋವಿಡ್ ತಡೆಯಲು ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಬೇಕು. ಇದನ್ನು ಪ್ರತಿ ಜಿಲ್ಲೆ, ತಾಲ್ಲೂಕಿನ ಕೇಂದ್ರಗಳಲ್ಲೂ ಆಚರಣೆ ಮಾಡುವ ಅಗತ್ಯವಿದೆ ಎಂದು ಹೇಳಿದರು. ಕೊರೋನಾ …
Read More »ಕಿಮ್ಸ್ ವೈದ್ಯರ ಜೊತೆ ಕೊರೊನಾ ಚಿಕಿತ್ಸೆ ಬಗ್ಗೆ ಬೊಮ್ಮಾಯಿ ಚರ್ಚೆ……….
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ವೈದ್ಯರ ನಿಯೋಗ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಹುಬ್ಬಳ್ಳಿಯ ಗೃಹ ಕಛೇರಿಯಲ್ಲಿ ಭೇಟಿ ಮಾಡಿ, ಕೋವಿಡ್-19 ಕುರಿತು ಚರ್ಚಿಸಿದರು. ಕಿಮ್ಸ್ ಆಸ್ಪತ್ರೆ ವೈದ್ಯರ ತಂಡ ಕೊರೊನಾ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಐಸಿಎಂಆರ್ ಕಿಮ್ಸ್‍ಗೆ ಅನುಮತಿ ನೀಡಿದೆ. ಹೀಗಾಗಿ ತಮ್ಮ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಮನವಿಯನ್ನು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅವರ ನೇತೃತ್ವದ ತಂಡ ಗೃಹ ಸಚಿವರಿಗೆ ಸಲ್ಲಿಸಿದೆ. ಮನವಿಯನ್ನು …
Read More »ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ; ಏನೇ ಜವಾಬ್ದಾರಿ ಕೊಟ್ಟರೂ ಸ್ವೀಕರಿಸುತ್ತೇನೆ: ಮಾಜಿ ಬಿಜೆಪಿ ಸಂಸದ ವಿಜಯ್ ಸಂಕೇಶ್ವರ
ಹುಬ್ಬಳ್ಳಿ: ನಾನು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಉದ್ಯಮಿ ಹಾಗೂ ಮಾಜಿ ಸಂಸದ ವಿಜಯ ಸಂಕೇಶ್ವರ್ ಹೇಳಿದ್ದಾರೆ. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭೆಗೆ ಸ್ಪರ್ಧಿಸುವ ಕುರಿತು ನನ್ನ ಜೊತೆ ಯಾರೂ ಚರ್ಚಿಸಿಲ್ಲ ಎಂದಿದ್ದಾರೆ. ಉತ್ತರ ಕರ್ನಾಟಕ ಭಾಗದ ಲಿಂಗಾಯತ ಮುಖಂಡರನ್ನು ರಾಜ್ಯ ಸಭೆಗೆ ಕಳಿಸುವ ಚರ್ಚೆ ಹಾಗೂ ರಾಜ್ಯ ಸಭೆ ಪ್ರವೇಶಿಸಲು ನಡೆಯುತ್ತಿರುವ ಲಾಬಿಗಳ ಕುರಿತು ಪ್ರತಿಕ್ರಿಯಿಸಲು ವಿಜಯ ಸಂಕೇಶ್ವರ್ …
Read More »