ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸದ್ಯದಲ್ಲೇ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಒಂದನೇ ಪ್ಲಾಟ್ ಫಾರ್ಮ್ 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‍ಗೆ ಹೆಚ್ಚಿಸಲಾಗುತ್ತಿದ್ದು, ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ …
Read More »ಕೊರೊನಾ ನಂತ್ರ ಗ್ಯಾಂಗ್ರೀನ್ ಕಾಣಿಸಿಕೊಂಡ ವ್ಯಕ್ತಿಗೆ ಕಿಮ್ಸ್‌ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿ ಬಳಿಕ ಗ್ಯಾಂಗ್ರೀನ್ ಕಾಣಿಸಿಕೊಂಡಿದ್ದ ರೋಗಿಯೊಬ್ಬರಿಗೆ ಕಿಮ್ಸ್ ನಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕೊರೊನಾ ಕಾರಣದಿಂದ 69 ವರ್ಷದ ವ್ಯಕ್ತಿಯನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನದ ಹಿಂದೆ ಕಾಲು ನೋವು ಕಾಣಿಸಿಕೊಂಡಿದ್ದರಿಂದ ಕಪ್ಪು ಬಣ್ಣಕ್ಕೆ ತಿರುಗಿತ್ತು. ಹೀಗಾಗಿ ಕಳೆದ ಗುರುವಾರ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ತಪಾಸಣೆ ಮಾಡಿದಾಗ ಗ್ಯಾಂಗ್ರೀನ್ ಆಗಿರುವುದು ಪತ್ತೆಯಾಗಿತ್ತು. ಹೀಗಾಗಿ ಇಲ್ಲಿನ ವೈದ್ಯರು …
Read More »ಜಾನುವಾರುಗಳಂತೆ ಲಾರಿಯಲ್ಲಿ ಕಾರ್ಮಿಕರ ಸಾಗಾಟ……….
ಧಾರವಾಡ/ಹುಬ್ಬಳ್ಳಿ: ಚಿತ್ರದುರ್ಗ ಜಿಲ್ಲೆಯಿಂದ ಲಾರಿಗಳ ಮೂಲಕ ಮಹಾರಾಷ್ಟ್ರಕ್ಕೆ ಹೊರಟಿದ್ದ ಕಾರ್ಮಿಕರನ್ನು ಧಾರವಾಡ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಹಾಗೂ ಗ್ರಾಮೀಣ ತಹಶೀಲ್ದಾರ ಪ್ರಕಾಶ್ ನಾಶಿ ತಡೆದಿದ್ದಾರೆ. ಹುಬ್ಬಳ್ಳಿ ಸಮೀಪದ ವರೂರ- ಅಗಡಿ ಬಳಿ ಪೊಲೀಸರ ಕಣ್ಣು ತಪ್ಪಿಸಿ ಲಾರಿಯಲ್ಲಿ ನೂರಾರು ಜನರು ಮಹಾರಾಷ್ಟ್ರಕ್ಕೆ ಹೊರಟಿದ್ದರು. ಖಚಿತ ಮಾಹಿತಿ ಮೇಲೆ ಲಾರಿಯನ್ನು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಎಲ್ಲರನ್ನು ವೈದ್ಯಕೀಯ ಪರೀಕ್ಷೆ ನಡೆಸಿ ಬೇರೆ ವಾಹನಗಳ ಮೂಲಕ ಕಳುಹಿಸಿಕೊಡುವ ಏರ್ಪಾಡುಗಳನ್ನು ಉಪವಿಭಾಗಾಧಿಕಾರಿ …
Read More »ಲಾಕ್‍ಡೌನ್ ಸಂದರ್ಭದಲ್ಲಿ ಪ್ರಯಾಣಿಕರ ಲಭ್ಯತೆ ಮೇಲೆ ರಾತ್ರಿ ಬಸ್ ಓಡಿಸಲು ನಿರ್ಧಾರ:ಲಕ್ಷ್ಮಣ ಸವದಿ
ಹುಬ್ಬಳ್ಳಿ: ಲಾಕ್‍ಡೌನ್ ಸಂದರ್ಭದಲ್ಲಿ ಪ್ರಯಾಣಿಕರ ಲಭ್ಯತೆ ಮೇಲೆ ರಾತ್ರಿ ಬಸ್ ಓಡಿಸಲು ನಿರ್ಧಾರ ಕೈಗೊಳ್ಳಲಾಗಿದೆ. ದೂರದ ಜಿಲ್ಲೆಗಳಿಗೆ ರಾತ್ರಿ ಬಸ್ ಸಂಚಾರ ಆರಂಭವಾಗಿದ್ದು, ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಸಿದರು. ನಗರದಲ್ಲಿ ಇಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್‍ಡೌನ್‍ನಿಂದಾಗಿ ಇಲ್ಲಿಯವರೆಗೆ 1,800 ಕೋಟಿ ರೂ. ಹಾನಿಯಾಗಿದೆ. ನಾಲ್ಕು …
Read More »ಬೆಂಗಳೂರು-ಹುಬ್ಬಳ್ಳಿ ವಿಮಾನ ಹಾರಾಟ ಆರಂಭ
ಹುಬ್ಬಳ್ಳಿ, ಮೇ 26- ಪ್ರಯಾಣಿಕರು ಮತ್ತು ವಾಣಿಜ್ಯೊದ್ಯಮ ಚಟುವಟಿಕೆ ಗಳನ್ನು ಉತ್ತೆಜಿಸಲು ನಿನ್ನೆಯಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಪ್ರಯಾಣಿಕರ ವಿಮಾನಯಾನ ಪ್ರಾರಂಭವಾಗಿದ್ದು ಕೇವಲ 30 ಜನ ಪ್ರಯಾಣಿಸಿದ್ದಾರೆ. ಎರಡು ತಿಂಗಳ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸ್ಟಾರ್ ಏರಲೈನ್ಸ್ ವಿಮಾನಕ್ಕೆ ಪ್ರಯಾಣಿಕರಿಂದ ದೊಡ್ಡ ಪ್ರಮಾಣದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಕೇವಲ ನಾಲ್ಕು ಜನ ಪ್ರಯಾ ಣಿಕರು ಆಗಮಿಸಿದರೆ, ಹುಬ್ಬಳ್ಳಿಯಿಂದ ಬೆಂಗಳೂರಿಗೆ 30 ಜನ ಪ್ರಯಾಣ ಮಾಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ …
Read More »ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಂತೆ ಶ್ರೀರಾಮ ಸೇನಾ ಮನವಿ
ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನಲೆ ಮುಸ್ಲಿಂ ಬಾಂಧವರ ರಂಜಾನ್ ಹಬ್ಬದ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬಾರದು ಎಂದು ಶ್ರೀರಾಮ ಸೇನಾ ಮುಖಂಡರು ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಚಿಂತಾಜನಕ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಯಾವುದೇ ಸಾಮೂಹಿಕ ಪ್ರಾರ್ಥನೆ, ಸಭೆ ಸಮಾರಂಭ …
Read More »ಹುಬ್ಬಳ್ಳಿಯಲ್ಲಿ ರಸ್ತೆ ಬದಿಯಲ್ಲಿಯೇ ತಾಯಿ ಮಗುವಿಗೆ ಜನ್ಮ ನೀಡಿದ್ದಾಳೆ.
ಹುಬ್ಬಳ್ಳಿ: ಮಹಿಳೆಯರಿಗೆ ಹೆರಿಗೆ ಅಂದರೇ ಅದು ಪುನರ್ಜನ್ಮವೇ ಸರಿ. ಇನ್ನೊಂದು ಜೀವಕ್ಕೆ ಜನ್ಮ ನೀಡುವ ತಾಯಿ ಅದೆಷ್ಟೋ ನೋವನ್ನು ಅನುಭವಿಸುತ್ತಾಳೆ. ಅಲ್ಲದೇ ತನ್ನ ಹೆರಿಗೆ ತವರು ಮನೆಯಲ್ಲಿಯೇ ಆಗಬೇಕು ಎಂಬುವಂತ ಬಯಕೆ ಪ್ರತಿಯೊಬ್ಬ ತಾಯಿಯಲ್ಲಿಯೂ ಇದ್ದೆ ಇರುತ್ತದೆ. ಆದರೆ ಹುಬ್ಬಳ್ಳಿಯಲ್ಲಿ ರಸ್ತೆ ಬದಿಯಲ್ಲಿಯೇ ತಾಯಿ ಮಗುವಿಗೆ ಜನ್ಮ ನೀಡಿದ್ದಾಳೆ. ಪಂಜಾಬ್ ಮೂಲದ ಮಹಿಳೆಯೊಬ್ಬರು ಲಾಕ್‍ಡೌನ್‍ನಿಂದ ಹುಬ್ಬಳ್ಳಿಯಲ್ಲೇ ಸಿಲುಕಿದ್ದು, ಆಸ್ಪತ್ರೆಗೂ ತೆರಳಲು ಸಾಧ್ಯವಾಗದೆ ರಸ್ತೆ ಬದಿಯಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. …
Read More »ಹುಬ್ಬಳ್ಳಿ: ಕಾರ್ಮಿಕರಿಗೆ ನೀಡುವ ಕಿಟ್ ಕಲಘಟಗಿ ಬಿಜೆಪಿ ಶಾಸಕರ ಕಚೇರಿಯಲ್ಲಿಯೇ ಉಳಿದುಕೊಂಡಿದೆ.
ಹುಬ್ಬಳ್ಳಿ: ಕಾರ್ಮಿಕರಿಗೆ ನೀಡುವ ಕಿಟ್ ಕಲಘಟಗಿ ಬಿಜೆಪಿ ಶಾಸಕರ ಕಚೇರಿಯಲ್ಲಿಯೇ ಉಳಿದುಕೊಂಡಿದೆ. ಅಲ್ಲದೆ ಕಾರ್ಮಿಕರಿಗೆ ಬಿಟ್ಟು ಶಾಸಕ ಸಿ.ಎಂ ನಿಂಬಣ್ಣವರ ಅವರು ಬಿಜೆಪಿ ಕಾರ್ಯಕರ್ತರಿಗೆ ಕಿಟ್ ಕೊಡುತ್ತಾರೆ ಎಂದು ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ ನಿಂಬಣ್ಣವರಿಂದ ಕಿಟ್ ದುರ್ಬಳಕೆ ಆರೋಪ ಕೇಳಿ ಬಂದಿದೆ. ಕಾರ್ಮಿಕ ಇಲಾಖೆ ನೀಡುವ ಕಿಟ್‍ಗಳನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಗಂಭೀರವಾಗಿ ಆರೋಪಿಸಿದ್ದಾರೆ. …
Read More »ಕಾಮಾಗಾರಿ ವೇಳೆ ಮಣ್ಣು ಕುಸಿತ – ಚರಂಡಿಯಲ್ಲಿ ಸಿಲುಕಿದ ಕಾರ್ಮಿಕ……..
ಹುಬ್ಬಳ್ಳಿ: ಒಳಚರಂಡಿ ಕಾಮಾಗಾರಿ ಮಾಡುತ್ತಿದ್ದಾಗ ಮಣ್ಣು ಕುಸಿದ ಪರಿಣಾಮ ಮಣ್ಣಿನಡಿಯಲ್ಲಿ ಕಾರ್ಮಿಕನೋರ್ವ ಸಿಲುಕಿಕೊಂಡ ಘಟನೆ ಹುಬ್ಬಳ್ಳಿಯ ಬೈಲಪ್ಪನವರ ನಗರದ ನಡೆದಿದೆ. ಕಾರ್ಮಿಕ ಯಲ್ಲಪ್ಪ ಮಣ್ಣಿನಲ್ಲಿ ಸಿಲುಕಿ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಇಂದು ಬೆಳಗ್ಗೆ ಒಳಚರಂಡಿ ಒಳಗೆ ಇಳಿದು ಯಲ್ಲಪ್ಪ ಕೆಲಸ ಮಾಡುತ್ತಿದ್ದರು. ಈ ವೇಳೆ ಮೇಲಿಂದ ಮಣ್ಣು ಕುಸಿದು ಯಲ್ಲಪ್ಪ ಅವರ ಮೇಲೆ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರ ರಕ್ಷಣೆಗೆ ಧಾವಿಸಿದರು. ಆದರೆ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು …
Read More »ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು……..
ಹುಬ್ಬಳ್ಳಿ: ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೆಲಸ ಮಾಡುವ ಉತ್ತರ ಪ್ರದೇಶ ಮೂಲದ ಪ್ರವಾಸಿ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಲು ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು ಪ್ರಯಾಣಿಸಿತು. ಶ್ರಮಿಕ ಎಕ್ಸ್‌ಪ್ರೆಸ್ ರೈಲು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹೊರಟಿದೆ. ಈ ರೈಲಿನ ಮೂಲಕ 1,443 ಪ್ರಯಾಣಿಕರು ತಮ್ಮ ತಮ್ಮ ತವರಿಗೆ ತೆರಳಿದರು. ಉತ್ತರ ಪ್ರದೇಶಕ್ಕೆ ಹೋಗುತ್ತಿರುವ ಎಲ್ಲ ಪ್ರವಾಸಿ ಪ್ರಯಾಣಿಕರಿಗೆ ಬೆಳಗ್ಗೆ …
Read More »