ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಅನ್ನು ಸಂಚಾರಿ ಫೀವರ್ ಕ್ಲೀನಿಕ್ ಆಗಿ ಮಾರ್ಪಡಿಸಲಾಗಿದೆ. ಕೊರೊನಾ ಸೋಂಕು ಕಂಡುಬಂದ ಹುಬ್ಬಳ್ಳಿ-ಧಾರವಾಡ ಪ್ರದೇಶದಲ್ಲಿ ಸಂಚರಿಸಿ ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡವರನ್ನು ಪರೀಕ್ಷಿಸಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವರೂ ಆಗಿರುವ ಬೃಹತ್ ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು. ನಗರದ ಬಿಆರ್ ಟಿಎಸ್ ಪ್ರಾದೇಶಿಕ ಬಸ್ ನಿಲ್ದಾಣದಲ್ಲಿನ ಕಂಟ್ರೋಲ್ ರೂಂ ಹಾಗೂ …
Read More »ಹುಬ್ಬಳ್ಳಿ ಮಂದಿಗೆ ಶುರುವಾಯ್ತು ಹೊಸ ಆತಂಕ..!
ಹುಬ್ಬಳ್ಳಿ : ಹುಬ್ಬಳ್ಳಿಯ ಮಂದಿಗೆ ಇಂದು ಆತಂಕ ಮತ್ತಷ್ಟು ಜಾಸ್ತಿಯಾಗಿದೆ. ಕಾರಣ ಹುಬ್ಬಳ್ಳಿಯ ವಿವಿಧ ಕಡೆ ರೋಗಿ ನಂಬರ್ 236 ಆಹಾರ ಧಾನ್ಯ ಕಿಟ್ ಹಂಚಿದ್ದ…! ಆತನಿಂದ ಸ್ಮಶಾನ ಕಾವಲುಗಾರನಾಗಿರೊನಿಗೋ ಸೋಂಕು ತಗುಲಿ ಇದೀಗ ರೋಗಿ ನಂಬರ್ 363. ಎಂದು ಗುರುತಿಸಲಾಗಿದೆ. ಆತನೊಂದಿಗೆ ಆಹಾರ ಧಾನ್ಯ ಹಂಚಿದ ಹಿನ್ನಲೆ ಇತನಿಗೂ ಕೊರೊನಾ ವಕ್ಕರಿಸಿದೆ. ಮಾಚ್9 27 ರಂದು ಹುಬ್ಬಳ್ಳಿಯ ಡಾಕಪ್ಪ ವೃತ್ತದಿಂದ ಕಾಳಮ್ಮನ ಅಗಸಿಯವರೆಗೆ ಆಹಾರ ದಾನ್ಯ ಹಂಚಿದ್ರು ಪುಣ್ಯಾತ್ಮರು…! …
Read More »ಏ. 20ರ ನಂತರ ದ್ವಿಚಕ್ರ ವಾಹನಕ್ಕೆ ರಿಲ್ಯಾಕ್ಸ್ ನೀಡಿದ್ದು ಸರಿಯಲ್ಲ: ಹೊರಟ್ಟಿ
ಹುಬ್ಬಳ್ಳಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 20ರ ನಂತರ ದ್ವಿಚಕ್ರ ವಾಹನ ಸವಾರರಿಗೆ ರಿಲಾಕ್ಸ್ ನೀಡಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿಯತನಕ ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಸದ್ಯ ರಾಜ್ಯ ಸರ್ಕಾರ ಲಾಕ್‍ಡೌನ್‍ನಲ್ಲಿ ವಿನಾಯಿತಿ ನೀಡಿದ್ದು, ನನಗೆ ಸರಿ ಅನ್ನಿಸುತ್ತಿಲ್ಲ ಎಂದರು. ಇಲ್ಲಿಯವರೆಗೆ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಇಲ್ಲ. ಆದರೆ ದ್ವಿಚಕ್ರ ವಾಹನ ಸವಾರರಿಗೆ ರಿಲ್ಯಾಕ್ಸ್ …
Read More »ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಗರದ ಮುಲ್ಲಾ ಓಣಿಯ ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡ್ತಿದೆ. P-236 ರೋಗಿ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ 63 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ ಎಂದು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೋಗಿ ನಂಬರ್ P-236ನೇ ವ್ಯಕ್ತಿ ಜೊತೆ ದ್ವಿತೀಯ ಸಂಪರ್ಕ ಹೊಂದಿದವರಿಗೆ ಸೋಂಕು ತಗುಲಿದೆ. ಪ್ರಯೋಗಾಲಯದಿಂದ ಬಂದ ವರದಿಯಲ್ಲಿ ಸೋಂಕು ತಗುಲಿರೋದು ಖಚಿತವಾಗಿದೆ. ಜಿಲ್ಲೆಯಲ್ಲಿ …
Read More »ಸತ್ತ ಅಪ್ಪನನ್ನೇ ಮತ್ತೆ ಸಾಯಿಸಿದ ಹುಬ್ಬಳ್ಳಿಯ ಕೈ ಮುಖಂಡ,……….
ಹುಬ್ಬಳ್ಳಿ: ಕೊರೊನಾದಿಂದ ಮದುವೆ, ಸಭೆ-ಸಮಾರಂಭ ಎಲ್ಲ ಕ್ಯಾನ್ಸಲ್ ಆಗಿದೆ. ಸಂಬಂಧಿಕರು ಸತ್ತರೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ. ಹೀಗಾಗಿ ಕೆಲವೆಡೆ ಮಾನವೀಯ ದೃಷ್ಟಿಯಿಂದ ಪೊಲೀಸರು ಬಿಟ್ಟುಕಳಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡನೊಬ್ಬ ಐದು ವರ್ಷದ ಹಿಂದೆಯೇ ಸತ್ತ ತಂದೆಯನ್ನೇ ಮತ್ತೊಮ್ಮೆ ಸತ್ತಿರುವುದಾಗಿ ಸುಳ್ಳು ಹೇಳಿ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲಾಡಳಿತದಿಂದ ಪಾಸ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ಬಯಲಿದೆ ಬಂದಿದೆ. ಹುಬ್ಬಳ್ಳಿಯ ಕೈ ಮುಖಂಡ, ಕರ್ನಾಟಕ ರಕ್ಷಣಾ ದಳದ ರಾಜಾದ್ಯಕ್ಷ ಸೋಮಲಿಂಗ್ ಯಲಿಗಾರ ಜಿಲ್ಲಾಡಳಿತದ ಪಾಸ್ …
Read More »ಏ.20ರ ನಂತರ ಕೆಲ ಉದ್ಯಮಗಳಿಗೆ ವಿನಾಯಿತಿ:
ನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳಿಗೆ ಏಪ್ರಿಲ್ 20ರ ಬಳಿಕ ವಿನಾಯಿತಿ ಕೊಡೋದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಸಾಫ್ಟ್ ವೇರ್ ಮತ್ತು ಐಟಿ ಪಾರ್ಕ್‍ಗಳಲ್ಲಿರುವ ಸ್ಟಾರ್ಟ್ ಅಪ್‍ಗಳಿಗೆ 4 ತಿಂಗಳ ಬಾಡಿಗೆ ಇಲ್ಲ ಅಂತ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ. ಯಾವುದಕ್ಕೆ ವಿನಾಯಿತಿ? * ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳು * ಇತರ ಹಣಕಾಸು ಸಂಸ್ಥೆಗಳಿಗೆ ಕನಿಷ್ಠ …
Read More »ಕೊರೊನಾ ಸೋಂಕಿತ ವ್ಯಕ್ತಿ ಬಡವರಿಗೆ ಆಹಾರ ಧಾನ್ಯ ವಿತರಿಸಿದ್ದು ಈ ವಿಚಾರ ಇದೀಗ ಆಘಾತವನ್ನುಂಟು ಮಾಡಿದೆ.
ಹುಬ್ಬಳ್ಳಿ: ಕೊರೊನಾ ಸೋಂಕಿತ ವ್ಯಕ್ತಿ ಬಡವರಿಗೆ ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿದ್ದು, ಈ ವಿಚಾರ ಇದೀಗ ಆಘಾತವನ್ನುಂಟು ಮಾಡಿದೆ. ಹುಬ್ಬಳ್ಳಿಯ ಮುಲ್ಲಾ ಓಣಿಯ ರೋಗಿ ನಂ.236 ತನ್ನ ಗೆಳೆಯರು, ಬಂಧುಗಳ ಜೊತೆಗೂಡಿ ಮಾ.27ರಂದು ಮುಲ್ಲಾ ಓಣಿಯ ಜನತೆಗೆ ಆಹಾರ ಧಾನ್ಯ ವಿತರಿಸಿದ್ದು, ಜನ ಆತಂಕಗೊಂಡಿದ್ದಾರೆ. ಡಾಕಪ್ಪಾ ಸರ್ಕಲ್ ನಿಂದ ಕಾಳಮ್ಮನ ಅಗಸಿಯವರೆಗೆ ವಾಸಿಸುತ್ತಿರುವ ಸಾರ್ವಜನಿಕರಿಗೆ 5 ಕೆ.ಜಿ ಅಕ್ಕಿ, 2 ಕೆ.ಜಿ ತೊಗರಿಬೇಳೆ, 1 ಕೆ.ಜಿ ಸಕ್ಕರೆ, …
Read More »ಹುಬ್ಬಳ್ಳಿ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ……
ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತನ ಅಣ್ಣ ರೋಗಿ ನಂಬರ್-236 ಟ್ರಾವೆಲ್ ಹಿಸ್ಟರಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು, ಸಂಪರ್ಕದಲ್ಲಿರುವವರು ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ. ಪಿ.194ನ ಅಣ್ಣ ಪಿ-236 ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾರ್ಚ್ 23ರಂದು ವಾಹನ ಚಾಲಕನ ಸಮೇತ ಯಲ್ಲಾಪುರಕ್ಕೆ ಪ್ರಯಾಣ ಬೆಳೆಸಿ, ಅಲ್ಲಿಂದ ತನ್ನ ಫುಟ್ ವೇರ್ ಅಂಗಡಿ ಓಪನ್ ಮಾಡಿದ್ದಾನೆ. ಅಂದೇ ಭಾರತ …
Read More »ಇನ್ಫೋಸಿಸ್ ಫೌಂಡೇಶನ್‍ನಿಂದ 220ಕ್ಕೂ ಅಧಿಕ ಕಾರ್ಮಿಕರಿಗೆ ಆಹಾರದ ಕಿಟ್
ಹುಬ್ಬಳ್ಳಿ: ಸುಧಾಮೂರ್ತಿ ಅವರ ಇನ್ಫೋಸಿಸ್ ಫೌಂಡೇಶನ್ ನೀಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಭಾನುವಾರ 220ಕ್ಕೂ ಹೆಚ್ಚು ಕಾರ್ಮಿಕರಿಗೆ ವಿತರಿಸಲಾಯಿತು. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್‍ಸಿಎಫ್‍ಸಿ) 8 ಗೋದಾಮುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 220ಕ್ಕೂ ಹೆಚ್ಚು ಕಾರ್ಮಿಕರು, ಲಾರಿ ಚಾಲಕರು, ಕ್ಲೀನರ್‌ಗಳಿಗೆ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಇಸ್ಕಾನ್‍ನ ಸಾಯಿನಾಥ್ ವಿತರಿಸಿದರು ಇನ್ಫೋಸಿಸ್ ಫೌಂಡೇಶನ್ ನೀಡಿರುವ ಆಹಾರ ಧಾನ್ಯಗಳ ಪ್ರತಿ ಕಿಟ್‍ನಲ್ಲಿ 5 ಕೆ.ಜಿ. ಅಕ್ಕಿ, …
Read More »ಹುಬ್ಬಳ್ಳಿಯಲ್ಲಿ ಪಶು ವೈದ್ಯರ ಮಾನವೀಯತೆ; ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗರ್ಭಿಣಿ ಹಸುವಿಗೆ ಮರುಜೀವ
ಹುಬ್ಬಳ್ಳಿ(ಏ.12): ಕೊರೋನಾ ಸೋಂಕಿನ ವಿರುದ್ಧ ವಿಶ್ವದ ವೈದ್ಯರು ಮನುಕುಲದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಉಣಕಲ್ ಗ್ರಾಮದ ಪಶುವೈದ್ಯರು ಮೃತ್ಯುವಿನ ಬಾಗಿಲು ತಟ್ಟಿದ್ದ ಅನಾಥ ಗರ್ಭಿಣಿ ಹಸುವಿಗೆ ಮರುಜನ್ಮ ನೀಡಿದ್ದಾರೆ. ಈ ಹೃದಯಸ್ಪರ್ಶಿ ಘಟನೆ ಉಣಕಲ್ ಸಿದ್ದಪ್ಪಜ್ಜನ ಹೊಸಮಠದ ಆವರಣದಲ್ಲಿ ನಡೆದಿದೆ. ಉಣಕಲ್ ಕ್ರಾಸ್ ರಾಮಲಿಂಗೇಶ್ವರ ದೇವಸ್ಥಾನದ ಬಯಲಿನಲ್ಲಿ ಪರಸ್ಪರ ಬಡಿದಾಡುತ್ತ ಬಂದ ನಾಲ್ಕಾರು ಬೀಡಾಡಿ ದನಗಳು ತುಂಬು ಗರ್ಭಿಣಿ ಹಸುವೊಂದನ್ನು ಕೆಳಗೆ ಬೀಳಿಸಿದ್ದವು. ಹಸುವಿನ ಮೇಲೆ ದಾಳಿ …
Read More »