Breaking News

ಹುಬ್ಬಳ್ಳಿ

ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ಹುಬ್ಬಳ್ಳಿ: ಯುವಕನೊರ್ವ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ್ದಾನೆ (Kidnap Case) ಎಂಬ ಆರೋಪವೊಂದು ಕೇಳಿ ಬಂದಿದೆ. ಮಗಳ ಅಪಹರಣವಾಗಿದೆ ಎಂದು ಶಿಕ್ಷಕಿ ತಂದೆಯಿಂದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More »

ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ

ಹುಬ್ಬಳ್ಳಿ: ‘ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ ನಡೆಯಲಿದೆ’ ಎಂದು ಟೂರ್ನಿಯ ಆಯೋಜಕ ರಾಜು ಮಾರುತಿ ಪೆಜೋಳೆ ಹೇಳಿದರು. ‘ಇರಾನ್‌ನ ಮಿರ್ಜಾ, ಭಾರತ ಕೇಸರಿ ಜಸ್ಸಾ ಪಟ್ಟಿ, ಮಹಾರಾಷ್ಟ್ರ ಕೇಸರಿ ಸಿಖಂದರ್ ಶೇಖರ್‌ ಸೇರಿ 82 ಜೋಡಿಗಳು ಟೂರ್ನಿಯಲ್ಲಿ ಸೆಣಸಲಿವೆ’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.   ‘ವಿಜೇತರಿಗೆ ಪ್ರಥಮ ಬಹುಮಾನ ₹12 ಲಕ್ಷ, ದ್ವಿತೀಯ ₹8 …

Read More »

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

ಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಇನ್ನೊಂದೆಡೆ ಮುಸ್ಲಿಂ ಸಮುದಾಯ ಧಾರವಾಡದಲ್ಲಿ ಅರ್ಧ ದಿನ ಸ್ವಯಂ ಪ್ರೇರಿತ ಬಂದ್‌ಗೆ ಕರೆ ಕೊಟ್ಟಿದೆ. ಎಂಸಿಎ ವಿದ್ಯಾರ್ಥಿ ನೇಹಾ ಹತ್ಯೆ ಖಂಡಿಸಿ ಹುಬ್ಬಳ್ಳಿ-ಧಾರವಾಡಗಳಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಶಾಸಕ ಮಹೇಶ್ ಟೆಂಗಿನಕಾಯಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಧಾರವಾಡದಲ್ಲಿ …

Read More »

ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

ಧಾರವಾಡ : ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯ ಆರೋಪಿ ಫಯಾಜ್‌ಗೆ ಶೀಘ್ರ ಕಠಿನ ಶಿಕ್ಷೆ ಕೊಡಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲುವ ಉದ್ದೇಶದಿಂದ ಸ್ವಯಂ ಪ್ರೇರಿತವಾಗಿ ಏ.22 ರಂದು ಮುಸ್ಲಿಂ ಸಮುದಾಯ ಹುಬ್ಬಳ್ಳಿ-ಧಾರವಾಡದಲ್ಲಿ ಅಂಗಡಿ-ಮುಂಗಟ್ಟು ಬಂದ್‌ ಮಾಡಿ ಮೌನ ಮೆರವಣಿಗೆ ಮಾಡಲು ಧಾರವಾಡದ ಅಂಜುಮನ್‌ ಇ-ಇಸ್ಲಾಂ ಸಂಸ್ಥೆಯಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್‌ ತಮಟಗಾರ ಹೇಳಿದರು‌. ಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 22ರಂದು ಬೆಳಗ್ಗೆ 10 …

Read More »

ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ : ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಆಕ್ರೋಶ

ಹುಬ್ಬಳ್ಳಿ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹ ಹಿರೇಮಠಳನ್ನು ಚಾಕುವಿನಿಂದ ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್ ನನ್ನು ನಮಗೆ ಕೊಡಿ ಆತನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಫಯಾಜ್ ನನ್ನು ನಮಗೆ ಕೊಡಿ ತುಂಡು ತುಂಡು ಮಾಡಿ ಎಸೆಯುತ್ತೇವೆ.ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ …

Read More »

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹುಬ್ಬಳ್ಳಿ: ಗೃಹ ಸಚಿವರು ಹೇಳಿದಂತೆ ಇದೊಂದು ಆಕಸ್ಮಿಕ ಘಟನೆ. ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿಗೆ ತಂದರೆ ನೇಹಾ ಹತ್ಯೆಯಂತಹ ಹೇಯ ಕೃತ್ಯಗಳು ನಿಲ್ಲುತ್ತವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಎನ್‌ಕೌಂಟರ್‌ ಕಾನೂನು ಜಾರಿಗೊಳಿಸಿದರೆ ಯುಪಿ ಮಾದರಿಯ ಬುಲ್ಡೋಜರ್‌ ಕಾನೂನಿನ ಅಗತ್ಯವೇ ಬರುವುದಿಲ್ಲ. ಬಿಜೆಪಿಯವರು ನೇಹಾಳ ಹತ್ಯೆಯನ್ನು ರಾಜಕೀಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದನ್ನು ರಾಜಕೀಯ ಮಾಡಬಾರದು. ಆದರೆ ಈ ರೀತಿಯ ಘಟನೆಗಳು …

Read More »

ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್​

ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಮಧ್ಯಾಹ್ನ ಎಂಸಿಎ ವಿದ್ಯಾರ್ಥಿನಿ ನೇಹಾ ಎಂಬುವರನ್ನು ಫಯಾಜ್​ ಕೊಲೆ ಮಾಡಿದ್ದನು. ಕೊಲೆ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸರು ಆರೋಪಿ ಫಯಾಜನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ತುಮಕೂರು, ಏಪ್ರಿಲ್​ 19: ನಗರದ ಬಿವಿಬಿ ಇಂಜಿನಿಯರ್​​ ಕಾಲೇಜು (BVB Engineering College) ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ (Student Neha) ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. …

Read More »

ಹುಬ್ಬಳ್ಳಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣದ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ : ಸಿಎಂ

ಬೆಂಗಳೂರು : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಬರೆದುಕೊಂಡಿರುವ ಅವರು, “ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.   “ಘಟನೆ ಸಂಬಂಧ ಯಾರೊಬ್ಬರೂ …

Read More »

ಶ್ರೀ ಶ್ರೀ ಹರಿ ವಿಠಲ ಪಾಂಡುರಂಗ ದೇವರಿಗೆ ತೊಟ್ಟಿಲೋತ್ಸವ ಸೇವೆ !

ಹುಬ್ಬಳ್ಳಿ; ನಗರದ ಎಸ್.ಎಸ್. ಕೆ. ಪಂಚ ಟ್ರಸ್ಟ್, ಶ್ರೀ ದುರ್ಗಾದೇವಿ ದೇವಸ್ಥಾನ, ದಾಜಿಬಾನ ಪೇಟ,ಹುಬ್ಬಳ್ಳಿ ಈ ಸಂಸ್ಥೆಯ , ದಾಜಿಬಾನ ಪೇಟನಲ್ಲಿರುವ ಶ್ರೀ ಶ್ರೀ ಹರಿ ವಿಠಲ ಪಾಂಡುರಂಗ ಶ್ರೀ ರುಕ್ಮಾಯಿ ದೇವಸ್ಥಾನದಲ್ಲಿ ಶ್ರೀ ರಾಮನವಮಿ ನಿಮಿತ್ಯ, ಶ್ರೀ ಶ್ರೀ ಹರಿ ಪಾಂಡುರಂಗ ವಿಠ್ಠಲ ದೇವರಿಗೆ ತೊಟ್ಟಿಲೋತ್ಸವ ಪೂಜೆಯು ನೆರವೇರಿತು. ಶ್ರೀ ರಾಮನವಮಿ ನಿಮಿತ್ಯ, ಶ್ರೀ ವಿಠ್ಠಲ ರುಕ್ಮಾಯಿ ಯರಿಗೆ ವಿಶೇಷ ಅಲಂಕಾರ ಮಾಡಿ,ಸಿಹಿ ನೈವೇದ್ಯ ಅರ್ಪಿಸಿ ಪೂಜೆ ಮಾಡಲಾಯಿತು. ದೇವಸ್ಥಾನದಲ್ಲಿ …

Read More »

ಧಾರವಾಡ: ಮನೆಯೊಂದರಲ್ಲಿ ಕಂತೆ ಕಂತೆ ಹಣ ಪತ್ತೆ; ಸುಮಾರು ₹ 18 ಕೋಟಿ?

ಧಾರವಾಡ: ನಗರದ ನಾರಾಯಣಪುರ ಮುಖ್ಯರಸ್ತೆಯ ಆರ್ನಾ ರೆಸಿಡೆನ್ಸಿಯ ಮೂರನೇ ಅಂತಸ್ತಿನ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಚೀಲ‌ಗಳಲ್ಲಿ ಹಣದ ಕಂತೆಗಳು ಪತ್ತೆಯಾಗಿವೆ. ಸುಮಾರು ₹ 18 ಕೋಟಿ ಹಣ ಇದೆ ಎಂದು ಹೇಳಲಾಗುತ್ತಿದ್ದು, ಎಣಿಕೆ ಪೂರ್ಣಗೊಂಡ ಬಳಿಕ ನಿಖರ ಮಾಹಿತಿ ಸಿಗಲಿದೆ.   ಮನೆಯಲ್ಲಿ ಮದ್ಯ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಮನೆಗೆ ತೆರಳಿ ತಪಾಸಣೆ ನಡೆಸಿದರು. ಆಗ ತಿಜೋರಿಯ ಚೀಲಗಳಲ್ಲಿ ಹಣದ ಕಂತೆಗಳು ಸಿಕ್ಕವು. ಆದಾಯ …

Read More »