ಧಾರವಾಡ: ತಾಲ್ಲೂಕಿನ ಉಪ್ಪಿನಬೆಟಗೇರಿಯ ಕೆಲವು ರೈತರ ಪಹಣಿಯಲ್ಲಿ ‘ಜಮೀನು ವಕ್ಫ್ ಆಸ್ತಿಗೆ ಒಳಪಟ್ಟಿರುತ್ತದೆ’ ಎಂದು ನಮೂದಾಗಿರುವ ಕುರಿತು ಚರ್ಚಿಸಲು ನವೆಂಬರ್ 5ರಂದು ತಹಶೀಲ್ದಾರ್ ಕಚೇರಿಗೆ ಹಾಜರಾಗುವಂತೆ ರೈತರಿಗೆ ಮೌಖಿಕವಾಗಿ ತಿಳಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿ (ವಿಎ) ಚೈತನ್ಯ ಮಳಿಯೆ ಅವರು ಮಂಗಳವಾರ ರೈತರ ಮನೆಗಳಿಗೆ ತೆರಳಿ ಮಾಹಿತಿ ನೀಡಿದ್ದಾರೆ. ಜಮೀನಿನ ದಾಖಲೆಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಹಾಜರಾಗಲು ತಿಳಿಸಿದ್ಧಾರೆ. ‘ನಮ್ಮದು ಪಿತ್ರಾರ್ಜಿತ ಆಸ್ತಿ. ನಮ್ಮ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಎಂದು ಯಾಕೆ ನಮೂದಾಗಿದೆ …
Read More »ವಕ್ಫ್ ಕಾನೂನು ತೆಗೆದು ಹಾಕುವುದೇ ಸೂಕ್ತ: ಸಚಿವ ಜೋಶಿ
ಧಾರವಾಡ: ಭಾರತದಲ್ಲಿ ವಕ್ಫ್ ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಕಾಲದಲ್ಲಿ ಕಾಂಗ್ರೆಸ್ ಅದೇಕೆ ವಕ್ಪ್ ಕಾನೂನು ಮಾಡಿತೋ ಗೊತ್ತಿಲ್ಲ. ಆದರೆ, 2013ರಲ್ಲಿ ವಕ್ಫ್ ಗೆ ಮತ್ತೆ ಅಪರಿಮಿತ ಅಧಿಕಾರ ಕೊಟ್ಟಿದ್ದೇಕೆ? ದೇಶದಲ್ಲಿ ವಕ್ಫ್ ಕಾನೂನು ಮಾಡಿದ್ದೇ ಮೊದಲ ತಪ್ಪು. ಅಂತದ್ದರಲ್ಲಿ ಸುಪ್ರೀಂಕೋರ್ಟ್ ಸಹ ಪ್ರಶ್ನಿಸದಂತಹ …
Read More »ಶಿಗ್ಗಾವಿ ಬೈ ಎಲೆಕ್ಷನ್ : ನಾಳೆ ಅಜ್ಜಂಪೀರ್ ಖಾದ್ರಿ ಸ್ವಇಚ್ಛೆಯಿಂದ ನಾಮಪತ್ರ ಹಿಂಪಡೆಯುತ್ತಾರೆ : ಸಚಿವ ಜಮೀರ್ ಅಹ್ಮದ್
ಹುಬ್ಬಳ್ಳಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು ಈ ಹಿನ್ನಲೆಯಲ್ಲಿ ನಾಳೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ …
Read More »ಹಿಂದುಳಿದ ವರ್ಗಗಳ ಮಠಾಧೀಶರು, ನಾಯಕರ ಸಭೆ ನ.3ರಂದು
ಹುಬ್ಬಳ್ಳಿ: ರಾಷ್ಟ್ರೀಯ ಕೋಲಿ ಬೆಸ್ತ ಹಿಂದುಳಿದ ವರ್ಗಗಳ ಮಠಾಧೀಶರ ಮಹಾಸಭಾ ವತಿಯಿಂದ ನ.3ರಂದು ಬೆಳಿಗ್ಗೆ 10 ಗಂಟೆಗೆ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಉಪ್ಪಾರ ಭಗೀರಥ ಗುರುಪೀಠದ ಭಗೀರಥಾನಂದಪುರಿ ಸ್ವಾಮೀಜಿ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಕುಲ ರಸ್ತೆಯ ಆರ್.ಎಂ.ಲೋಹಿಯಾನಗರದ ಅಪ್ಪು ಪ್ಲಾಜಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಕೋಲಿ ಬೆಸ್ತ, ಉಪ್ಪಾರ, ಶಿಕ್ಕಲಗಾರ, ಲಂಬಾಣಿ, ಕುರುಬ, ಕಮ್ಮಾರ, ಕಿಂಚಿ ಕೊರವರ ಸೇರಿದಂತೆ ವಿವಿಧ ಹಿಂದುಳಿದ ವರ್ಗಗಳ …
Read More »ಅಂಜಲಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ
ಹುಬ್ಬಳ್ಳಿ: ಕೆಲ ತಿಂಗಳ ಹಿಂದೆ ವೀರಾಪುರ ಓಣಿಯ ಮನೆಯಲ್ಲಿ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹5ಲಕ್ಷ ಪರಿಹಾರದ ಚೆಕ್ ಅನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿತರಿಸಿದರು. ಅಂಬಿಗೇರ ಸಮಾಜದ ಮುಖಂಡ ಮನೋಜ ಕರ್ಜಗಿ ಮಾತನಾಡಿ, ‘ಅಂಜಲಿ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಜನಪ್ರತಿನಿಧಿ ಗಳ ಸಹಕಾರ ದೊಡ್ಡದು. ₹25 ಲಕ್ಷ ಪರಿಹಾರಕ್ಕೆ ಒತ್ತಾಯಿಸಲಾಗಿತ್ತು. ಸದ್ಯ ಸಿಎಂ ಪರಿಹಾರ …
Read More »ಸಂಕಷ್ಟದಲ್ಲಿ ಅಲೆಮಾರಿಗಳ ಬದುಕು
ಹುಬ್ಬಳ್ಳಿ: ‘ಇವತ್ತು ಈ ಊರು, ನಾಳೆ ಮತ್ತೊಂದು ಊರು. ನಮ್ಮಂತಹ ಅಲೆಮಾರಿಗಳಿಗೆ ಸ್ವಂತ ಜಾಗ, ಮನೆ ಎಂಬುದು ಇರುವುದಿಲ್ಲ. ಆಶ್ರಯ ಸಿಕ್ಕ ಕಡೆ ಉಳಿಯುತ್ತೇವೆ. ಕೆಲ ದಿನಗಳ ಬಳಿಕ ಮತ್ತೆ ಮುಂದಿನ ಊರಿಗೆ ಪ್ರಯಾಣಿಸುತ್ತೇವೆ. ಆಯಾ ಸಮಯಕ್ಕೆ ಸಿಗುವ ವಸ್ತುಗಳನ್ನು ಮಾರುತ್ತ ಬದುಕುತ್ತೇವೆ’ ತಮ್ಮ ದೈನಂದಿನ ಬದುಕನ್ನು ಹೀಗೆ ಸಂಕ್ಷಿಪ್ತವಾಗಿ ವಿವರಿಸಿದವರು ಮಲ್ಲಶೆಟ್ಟಿ. ಅಲೆಮಾರಿ ಸಮುದಾಯದ ಅವರು ಕುಟುಂಬ ಸದಸ್ಯರ ಜೊತೆಗೆ ಹುಬ್ಬಳ್ಳಿಯ ಆರ್‌ಟಿಒ ಕಚೇರಿ ಬಳಿ ತಾತ್ಕಾಲಿಕ ನೆಲೆ …
Read More »ಡಿಜಿಟಲ್ ಅರೆಸ್ಟ್; ವಂಚಕರ ಹೊಸ ಟ್ರಿಕ್!
ಹುಬ್ಬಳ್ಳಿ: ತಂತ್ರಜ್ಞಾನ ಆವಿಷ್ಕಾರಗಳು ಹೆಚ್ಚುತ್ತಾ ಹೋದಂತೆ, ಸೈಬರ್ ವಂಚಕರ ಯೋಜನೆ ಮತ್ತು ಯೋಚನೆಗಳು ಸಹ ವಿಸ್ತಾರವಾಗುತ್ತ ಹೋಗುತ್ತಿವೆ. ಒಟಿಪಿ, ಲಿಂಕ್ ಕಳುಹಿಸಿ ಹಣ ವರ್ಗಾವಣೆ, ಮಾರುಕಟ್ಟೆಯಲ್ಲಿ ಹಣ ಹೂಡಿಕೆ ನೆಪದಲ್ಲಿ ಆನ್‌ಲೈನ್ ಕಳ್ಳರು, ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ಕೋಟಿ ಕೋಟಿ ವಂಚಿಸುತ್ತಿದ್ದಾರೆ. ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಒಂದು ವಾರದ ಅವಧಿಯಲ್ಲಿ ‘ಡಿಜಿಟಲ್ ಅರೆಸ್ಟ್’ ಸಂಬಂಧಿಸಿ ಮೂರು ಪ್ರಕರಣಗಳು ದಾಖಲಾಗಿದ್ದು, ಒಟ್ಟು ₹1.84 ಕೋಟಿ ವರ್ಗಾಯಿಸಿಕೊಂಡಿದ್ದಾರೆ. …
Read More »ನಗರದ ವಿವಿಧೆಡೆ ಪೊಲೀಸರ ಕಾರ್ಯಾಚರಣೆ: 264 ದ್ವಿಚಕ್ರ ವಾಹನ ವಶ
ಹುಬ್ಬಳ್ಳಿ: ‘ಹು-ಧಾ ಕಮಿಷನರೇಟ್ ವ್ಯಾಪ್ತಿಯ ದಕ್ಷಿಣ ಉಪವಿಭಾಗದ ವಿವಿಧೆಡೆ ಶನಿವಾರ ಕಾರ್ಯಾಚರಣೆ ನಡೆಸಿ, ಸರಿಯಾದ ದಾಖಲೆ ಇಲ್ಲದ ಒಟ್ಟು 264 ದ್ವಿಚಕ್ರ ವಾಹನಗಳು ಹಾಗೂ ಮೂರು ಆಟೊಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದರು. ಕಸಬಾಪೇಟ್ ಪೊಲೀಸ್ ಠಾಣೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹುಬ್ಬಳ್ಳಿ ಶಹರ, ಘಂಟಿಕೇರಿ, ಕಸಬಾ, ಹಳೆ ಹುಬ್ಬಳ್ಳಿ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ಕಡೆ ಚೆಕ್‌ಪೋಸ್ಟ್ …
Read More »ಶಾಸಕ ಸ್ಥಾನದಿಂದ ಸತೀಶ್ ಸೈಲ್ ರನ್ನು ತಕ್ಷಣ ವಜಾಗೊಳಿಸಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ
ಹುಬ್ಬಳ್ಳಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕರಣವಾಗಿರುವ ಹಿನ್ನೆಲೆಯಲಿ ತಕ್ಷಣ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸತೀಶ್ ಸೈಲ್ ಅವರನ್ನು ಈ ಕೂಡಲೇ ಶಾಸಕ ಸ್ಥಾನದಿಂದ ಸ್ಪೀಕರ್ ಅವಜಾಗೊಳಿಸಬೇಕು ಹಾಗೂ ಚುನಾವಣೆ ಘೋಷಿಸಬೇಕು ಎಂದರು. ಇನ್ನು ಕಾಂಗ್ರೆಸ್ ನ ಕೆಲ ನಾಯಕರು ಸತೀಶ್ …
Read More »ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ
ಹುಬ್ಬಳ್ಳಿ: ಕಾಂಗ್ರೆಸ್ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಇದೀಗ ಬಿಜೆಪಿಯಲ್ಲಿ ಆಗುತ್ತಿರುವುದೇನು? ರಾಜಕಾರಣದಲ್ಲಿ ಇಂತಹ ಹೇಳಿಕೆ ನೀಡುವ ಮೊದಲು ಯೋಚಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಸುಮಾರು ಐದಾರು ಕುಟುಂಬಗಳು ಕುಟುಂಬ ರಾಜಕಾರದಲ್ಲಿವೆ. ಇದು ರಾಜಕಾರಣದಲ್ಲಿ ಸ್ವಾಭಾವಿಕ. ಇಂತಹ ಹೇಳಿಕೆ ನೀಡುವ ಮೊದಲು ಯೋಚಿಸಬೇಕು. ಹೇಳಿಕೆ ನೀಡುತ್ತಿದ್ದವರೇ ಇದೀಗ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದರು. ಶಿಗ್ಗಾವಿಯಲ್ಲಿ …
Read More »