Breaking News

ಹುಬ್ಬಳ್ಳಿ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು. ತಪ್ಪಿದ ಅನಾಹುತ

ಗದಗ: ಹೆಸ್ಕಾಂ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಪ್ರವಹಿಸಿ 11 ಕುರಿ ಮತ್ತು 1 ನಾಯಿ ಸಾವಿಗೀಡಾದ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಹೋಬಳಿಯಲ್ಲಿ ಸೋಮವಾರ (ಸೆ.30) ಸಂಜೆ ನಡೆದಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ನವಲಪ್ಪ ಹೆಗಡೆ ಸಂಚಾರಿ ಕುರಿಗಾಯಿ ನರೇಗಲ್ ಭಾಗದ ಜಮೀನೊಂದರಲ್ಲಿ‌ ಕುರಿ ಮೇಯಿಸುವ ಸಂದರ್ಭದಲ್ಲಿ, ಹೊಲದಲ್ಲಿ ವಿದ್ಯುತ್ ಕಂಬ ನೆಲಕ್ಕೆ ಬಿದ್ದಿದೆ. ಆದರೆ, ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಸಂಚಾರ ನಿಷ್ಕ್ರಿಯವಾಗದ ಕಾರಣ ವಿದ್ಯುತ್ ತಂತಿಯ …

Read More »

ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

ಧಾರವಾಡ: ಧಾರವಾಡ ತಾಲೂಕಿನ ನಿಗದಿ ಗ್ರಾಮದ ರೈತರ ಕಬ್ಬಿನ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಮರಳಿ ಅರಣ್ಯಕ್ಕೆ ಬಿಡಲಾಗಿದೆ. ನಿಗದಿ ಗ್ರಾಮದ ರೈತ ಸಿದ್ಧಬಸಪ್ಪ ಹಳಿಯಾಳ ಎಂಬ ರೈತ ಅಂಬ್ಲಿಕೊಪ್ಪ ಗ್ರಾಮದ ಹದ್ದಿನಲ್ಲಿ ಕಬ್ಬಿನ ಜಮೀನು ಹೊಂದಿದ್ದು, ಕಬ್ಬಿನ ಸೋಗೆ ಸುಲಿಯುವ ಸಂದರ್ಭದಲ್ಲಿ ಈ ಹೆಬ್ಬಾವು ರೈತನ ಕಣ್ಣಿಗೆ ಬಿದ್ದಿದೆ. ಕೂಡಲೇ ಈ ಮಾಹಿತಿಯನ್ನು ಉರಗ ರಕ್ಷಕ ಯಲ್ಲಪ್ಪ ಜೋಡಳ್ಳಿ ಅವರ ಗಮನಕ್ಕೆ ತಂದಾಗ …

Read More »

ಸೈಟ್ ವಾಪಾಸ್ ಕೊಟ್ಟರೆ ಪ್ರಕರಣ ಜಟೀಲ: ಬಸವರಾಜ ಬೊಮ್ಮಾಯಿ ಸಲಹೆ ಕೊಟ್ರಾ!

ಹುಬ್ಬಳ್ಳಿ, ಅಕ್ಟೋಬರ್ 01: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ರಾಜಕೀಯ ಬದುಕಿನಲ್ಲಿ ಬಿರುಗಾಳಿ ಏಳಲು ಕಾರಣವಾದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿದೆ. ಇದೀಗ 14 ನಿವೇಶನಗಳನ್ನು ಮರಳಿ ನೀಡಲು ನಿರ್ಧರಿಸಲಾಗಿದೆ. ಇದರಿಂದ ಸೈಟ್ ವಾಪಾಸ್ ಕೊಟ್ಟು ಮತ್ತಷ್ಟು ಜಟೀಲ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮೈಸೂರು …

Read More »

ಪಾಲಿಕೆ ಆವರಣದಲ್ಲಿ ವಡ್ಡರ ಯಲ್ಲಣ್ಣ ಪ್ರತಿಮೆ ಸ್ಥಾಪಿಸಲು ಆಗ್ರಹ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ‌ ಪಾಲಿಕೆ ಆವರಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ವಡ್ಡರ ಯಲ್ಲಣ್ಣ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ರಾಜ್ಯ ಭೋವಿ(ವಡ್ಡರ) ಮಹಾಸಭಾ ಸಂಘಟನೆ ಸದಸ್ಯರು ಸೋಮವಾರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.   ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಭೋಜಗಾರ ಮತ್ತು ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಲಲಿತಾ ಭೋಜಗಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮೇಯರ್ ರಾಮಪ್ಪ ಬಡಿಗೇರ ಮತ್ತು ಆಯುಕ್ತ ಈಶ್ವರ ಉಳ್ಳಾಗಡ್ಡಿ …

Read More »

ಲಿಂಬು, ಅಂಟವಾಳದಿಂದ ಪರಿಸರಸ್ನೇಹಿ ಮಾರ್ಜಕ

ಹುಬ್ಬಳ್ಳಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕಳೆದ ವಾರ ಆಯೋಜಿಸಿದ್ದ ಕೃಷಿ ಮೇಳದಲ್ಲಿ ನವೋದ್ಯಮಿಗಳ ಉತ್ಸಾಹವೂ ಜನರನ್ನು ಸೆಳೆದವು. ಮೇಳದ ಫಲಪುಷ್ಪ ಪ್ರದರ್ಶನ ವಿಭಾಗದಲ್ಲಿ ಹತ್ತಾರು ನವೋದ್ಯಮಿಗಳು ತಮ್ಮ ಉದ್ಯಮವನ್ನು ಪರಿಚಯಿಸಿದರು. ಅವುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪೂಜಾ ದೇಶಪಾಂಡೆ ಪರಿಸರಸ್ನೇಹಿ ಮಾರ್ಜಕಗಳನ್ನು (ಡಿಟೆರ್ಜೆಂಟ್‌), ಖಾನಾಪುರದ ಆರ್‌.ಐ.ಪಾಟೀಲರು ಕಬ್ಬಿನ ಹಾಲನ್ನು ವರ್ಷವಿಡೀ ಬಾಳುವಂತೆ ಮಾಡಿರುವುದರ ಜತೆಗೆ ಟೀ, ಕಾಫಿಗೆ ಸಕ್ಕರೆ ಬದಲು ಸಾವಯವ ಬೆಲ್ಲದ ಪುಡಿ ಬಳಸುವಂಥ ಕಬ್ಬಿನ ಉತ್ಪನ್ನ …

Read More »

HDK ವಿರುದ್ಧ ಅವಹೇಳನಕಾರಿ ಪದ ಬಳಕೆ: ಕ್ಷಮೆ‌ ಕೇಳಲು ಕೇಂದ್ರ ಸಚಿವ ಜೋಶಿ ಆಗ್ರಹ

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.   ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಒಬ್ಬ ಜನಪ್ರತಿನಿಧಿ, ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಲೋಕಾಯುಕ್ತ ಎಡಿಜಿಪಿಗೆ ಸರ್ವೀಸ್ ಕಂಡಕ್ಟ್ ನಿಯಮದ …

Read More »

ಇಂಧನ ಪೂರೈಕೆ ಟ್ಯಾಂಕರ್‌ ಸಂಚಾರ ಸ್ಥಗಿತ‌

ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಪೆಟ್ರೋಲ್‌, ಡೀಸೆಲ್‌ ಪೂರೈಕೆ ಟ್ಯಾಂಕರ್‌ ಸಂಚಾರಕ್ಕೆ ವಿಧಿಸಿದ ನಿರ್ಬಂಧ ತೆರವಿಗೆ ಆಗ್ರಹಿಸಿ ಐಒಸಿಎಲ್‌ ಮತ್ತು ಎಚ್‌ಪಿಸಿಎಲ್‌ ಟ್ರಾನ್ಸ್‌ಪೋರ್ಟರ್‌ ಕಂಟ್ರಾಕ್ಟರ್ಸ್‌ ಸಂಘಟನೆ ಮತ್ತು ಉತ್ತರ ಕರ್ನಾಟಕ ಟ್ಯಾಂಕರ್‌ ಡ್ರೈವರ್ಸ್ ಅಂಡ್‌ ಹೆಲ್ಪರ್ಸ್ ಸಂಘದವರು ಶನಿವಾರ ಟ್ಯಾಂಕರ್‌ ಸಂಚಾರ ಸ್ಥಗಿತಗೊಳಿಸಿ, ಪ್ರತಿಭಟನೆ ಆರಂಭಿಸಿದರು.   ‘ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಮತ್ತು ಮಧ್ಯಾಹ್ನ 4 ರಿಂದ ರಾತ್ರಿ 9ರವರೆಗಿನ ಅವಧಿಯಲ್ಲಿ ಟ್ಯಾಂಕರ್‌ಗಳಿಗೆ ಹುಬ್ಬಳ್ಳಿ-ಧಾರವಾಡ ಪ್ರವೇಶಿಸಲು ನಿರ್ಬಂಧಿಸಿರುವುದನ್ನು ತೆರವುಗೊಳಿಸಬೇಕು. ಶನಿವಾರ ಟ್ಯಾಂಕರ್‌ಗಳಿಗೆ …

Read More »

ಹಾವೇರಿಗೆ ವಂದೇ ಭಾರತ್ ರೈಲು ನಿಲುಗಡೆ ಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಸೆಪ್ಟಂಬರ್ 27: ಬೆಂಗಳೂರಿನಿಂದ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು (Vande Bharat Express Rail) ಬೆಳಗಾವಿವರೆಗೆ ವಿಸ್ತರಣೆ ಮಾಡಬೇಕು ಎಂಬ ಕೂಗಿನ ಜೊತೆಗೆ ಇದೀಗ ಈ ಜಿಲ್ಲೆಯಲ್ಲಿ ನಿಲುಗಡೆ ನೀಡುವಂತೆ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಖುದ್ದು ಕ್ರಮ ವಹಿಸುವಂತೆ ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.   ಹಾವೇರಿ-ಗದಗ ಜಿಲ್ಲೆಗಳ ವ್ಯಾಪ್ತಿಯ ನಡೆಯುತ್ತಿರುವ ವಿವಿಧ ರೈಲ್ವೇ ಕಾಮಗಾರಿಗಳ ಕುರಿತು …

Read More »

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ. ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

ಹುಬ್ಬಳ್ಳಿ: ತಮ್ಮ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದವನಿಗೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯ ತಾಯಿಗೆ ಚಾಕುವಿನಿಂದ ಇರಿದಿದ್ದು, ಚಾಕುವಿನಿಂದ ಇರಿದ ವ್ಯಕ್ತಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಬುಧವಾರ ಸಂಜೆ ಇಲ್ಲಿನ ಲೋಹಿಯಾ ನಗರದ ನೀಲಾ ಎನ್ನುವ ಮಹಿಳೆಗೆ ಚಾಕುವಿನಿಂದ ಇರಿದಿದ್ದು, ಮಹಿಳೆಯರನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದರೆ. ಗಾಯಗೊಂಡಿರುವ ನೀಲಾ ಅವರಿಗೆ ನಾಲ್ವರು ಮಕ್ಕಳಿದ್ದು, ಅವರಲ್ಲಿ ಓರ್ವಳನ್ನು ಆರೋಪಿ ಮಹೇಶ ಮೇಟಿ ಎಂಬಾತ …

Read More »

ಸಿದ್ದರಾಮಯ್ಯ ಬೆಂಬಲಿಸಿ ರಾಷ್ಟ್ರೀಯ ಅಹಿಂದ ಒಕ್ಕೂಟದಿಂದ ಅಕ್ಟೋಬರ್ 3 ರಂದು ಹುಬ್ಬಳ್ಳಿಯಿಂದ ಬೆಂಗಳೂರುವರೆಗೆ ಜಾಗೃತಿ ಜಾಥಾ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿ ರಾಷ್ಟ್ರೀಯ ಅಹಿಂದ ಒಕ್ಕೂಟದಿಂದ ಅಕ್ಟೋಬರ್ 3 ರಂದು ಹುಬ್ಬಳ್ಳಿಯಿಂದ ಬೆಂಗಳೂರುವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ರಾಜ್ಯಾದ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು. ಬುಧವಾರ(ಸೆ 25) ಇಲ್ಲಿನ‌ ಪ್ರವಾಸಿ ಮಂದಿರದಲ್ಲಿ ಅಹಿಂದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟವರು, ಅಂತಹ ನಾಯಕರ ಮೇಲೆ ಸಂಕಷ್ಟ ತರುವಂತಹ ಕಾರ್ಯವನ್ನು ಬಿಜೆಪಿ ಮಾಡಿದ್ದು, ಎಲ್ಲೆಲ್ಲಿ ಬಿಜೆಪಿ ಆಡಳಿತವಿಲ್ಲವೋ ಅಲ್ಲಿ …

Read More »