ಧಾರವಾಡ: ನಗರದ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳು ನೋಂದಣಿ ಮಾಡಿಸಲು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಕೆಲವೊಮ್ಮೆ ಕೌಂಟರ್ ಕೇಂದ್ರದ ಬಾಗಿಲಿನ ಹೊರಗೂ ರೋಗಿಗಳು ಸಾಲುಗಟ್ಟಿ ನಿಂತಿರುತ್ತಾರೆ. ಧಾರವಾಡ ಜಿಲ್ಲೆಯವರು ಮಾತ್ರವಲ್ಲ ಬೆಳಗಾವಿ ಜಿಲ್ಲೆಯ ಕಿತ್ತೂರು, ಬೈಲಹೊಂಗಲ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ದಾಂಡೇಲಿ ಭಾಗದವರು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಪ್ರತಿನಿತ್ಯ ಸುಮಾರು 1300 ಹೊರರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ರೋಗಿ ಜತೆಗೆ ಬಂದವರು ಚೀಟಿ …
Read More »ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಕೇಂದ್ರ ಚಿಂತನೆ
ಧಾರವಾಡ: ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸಲು ಚಿಂತನೆ ನಡೆದಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಪುಣೆ -ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲು ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊಂಕಣ ರೈಲ್ವೆ ಜಾಲ ಕೇರಳದಿಂದ ಮಹಾರಾಷ್ಟ್ರದವರೆಗೆ ವಿಸ್ತರಿಸಿದ್ದು, ಪ್ರಯಾಣಿಕರಿಗೆ ಮತ್ತಷ್ಟು ಉತ್ತಮವಾದ ಸೇವೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯೊಂದಿಗೆ …
Read More »ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ವಿಧಾನ, ಲಿಂಕ್ ಇಲ್ಲಿದೆ
ಧಾರವಾಡ ಸೆಪ್ಟೆಂಬರ್ 13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳುwww.karnemakaone.kar.nic.in/abcd/ವೆಬ್‍ಸೈಟ್ ಮೂಲಕ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447850 ಗೆ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು …
Read More »ರೀತಿ ಭಂಡತನ ತೋರದೆ ಸಿದ್ದು ರಾಜೀನಾಮೆ ನೀಡಲಿ’: ಕೆ.ಎಸ್. ಈಶ್ವರ
ಹುಬ್ಬಳ್ಳಿ: ಮುಡಾ, ವಾಲ್ಮೀಕಿ ಹಗರಣದಲ್ಲಿ ಕೋರ್ಟ್‌ನಿಂದ ವಿರುದ್ಧವಾಗಿ ತೀರ್ಪು ಬಂದರೆ ಸಿಎಂ ಸಿದ್ದರಾಮಯ್ಯ ಅವರು ಅರವಿಂದ ಕೇಜ್ರಿವಾಲ್ ರೀತಿ ಭಂಡತನ ತೋರದೆ ಮರ್ಯಾದೆಯಿಂದ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಒಂದು ಕಡೆ ಸಿಎಂ ಸಿದ್ದರಾಮಯ್ಯಗೆ ಬಹಿರಂಗವಾಗಿ ಬೆಂಬಲ ಎಂದು ಹೇಳಿ ಇನ್ನೊಂದೆಡೆ ತಾವು ಸಿಎಂ ಆಕಾಂಕ್ಷಿ ಎನ್ನುತ್ತಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದರೂ, ಕಾಂಗ್ರೆಸ್‌ನಲ್ಲಿ ಸಿಎಂ ಹೇಳಿಕೆಗಳು ನಿಂತಿಲ್ಲ. …
Read More »ಬಿಜೆಪಿಯಲ್ಲಿ ಎಲ್ಲಾ ಸರಿಯಾದರೆ ಶೀಘ್ರ ಪಕ್ಷಕ್ಕೆ ಮರಳುವೆ: ಕೆ.ಎಸ್.ಈಶ್ವರಪ್ಪ
ಹುಬ್ಬಳ್ಳಿ: ತವರು ಮನೆಗೆ ಹೋಗಲು ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ? ಬಿಜೆಪಿಗೆ ಮರಳಲು ನಾನೇಕೆ ಒಲ್ಲೆ ಎನ್ನಲಿ. ತವರು ಮನೆಯಲ್ಲಿ ಕೆಲ ಸಹೋದರರು ಇಲ್ಲಸಲ್ಲದ ಸ್ಥಿತಿ ನಿರ್ಮಿಸಿದ್ದು, ಶೀಘ್ರ ಅದು ಸರಿಯಾಗಿ ಮತ್ತೆ ತವರಿಗೆ ಮರಳುವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಕುಟುಂಬದ ಕೈಯಲ್ಲಿಪಕ್ಷ ಸಿಲುಕಿದೆ. ಎಲ್ಲವೂ ಸರಿಯಾಗಲಿದೆ ಎಂಬ ನನಗೆ ವಿಶ್ವಾಸವಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆರು ತಿಂಗಳಿಂದ …
Read More »ಕಾಂಗ್ರೆಸ್ ಸರ್ಕಾರ ಪತನ: ಭವಿಷ್ಯ ನುಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಸೆಪ್ಟೆಂಬರ್ 11: ಕಾಂಗ್ರೆಸ್ ನಲ್ಲಿನ ಆಂತರಿಕ ವಿಚಾರ ದೊಡ್ಡ ಪ್ರಮಾಣದಲ್ಲಿ ಇದೆ. ಅದು ಬಹಿರಂಗ ಆಗಿದ್ದು ಅವರ ಕಚ್ಚಾಟದಿಂದಲೇ ಸರಕಾರ ಪತನ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು, ಮುಡಾ ಹಗರಣ ಆದ ಬಳಿಕ ಇದು ಇನ್ನೂ ದೊಡ್ಡ ಪ್ರಮಾಣದಲ್ಲಿ ನಡೆದಿದ್ದು, ಮುಖ್ಯಮಂತ್ರಿ ಆಗಬೇಕು ಅಂತಾ ಸಾಕಷ್ಟು ಜನ ತಯಾರಿ ನಡೆಸಿದ್ದಾರೆ. ಇದರಿಂದಲೇ …
Read More »ನಾನು ಯಾವ ರೇಸ್‌ನಲ್ಲೂ ಇಲ್ಲ: ಆರ್.ವಿ.ದೇಶಪಾಂಡೆ
ಧಾರವಾಡ: ‘ನಾನು ಯಾವ ರೇಸ್‌ನಲ್ಲೂಇಲ್ಲ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ’ ಎಂದು ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಪ್ರತಿಕ್ರಿಯಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದೆ.
Read More »ಅಸುರಕ್ಷಿತ ಸ್ಥಳಗಳಲ್ಲಿ ಪಟಾಕಿ ಮಳಿಗೆ!
ಹುಬ್ಬಳ್ಳಿ: ಗಣೇಶ ಹಬ್ಬದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಜಿಲ್ಲೆಯ ವಿವಿಧೆಡೆ ಇರುವ ಪಟಾಕಿ ಸಂಗ್ರಹ ಗೋದಾಮು ಹಾಗೂ ಮಾರಾಟ ಮಳಿಗೆಗಳ ಪರಿಶೀಲನೆಗೆ ಮುಂದಾಗಿದೆ. ನಿಯಮ ಉಲ್ಲಂಘಿಸಿದ ಮಳಿಗೆಗಳ ಮಾಲೀಕರಿಗೆ ನೋಟಿಸ್ ನೀಡಿ, ಬೀಗ ಹಾಕಲು ನಿರ್ಧರಿಸಿದೆ. ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಅಗ್ನಿಶಾಮಕ ದಳ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳ ವಿಶೇಷ ತಂಡ, ಪಟಾಕಿ ಅಂಗಡಿಗಳ ಪರಿಶೀಲನೆ ನಡೆಸಲು ಸಿದ್ಧತೆ ನಡೆಸಿವೆ. …
Read More »ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಮಗ
ಹುಬ್ಬಳ್ಳಿ: ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಪಾಲಕರು ಅಪ್ರಾಪ್ತ ಮಗನಿಗೆ ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ಗಾಮನಗಟ್ಟಿ ರಸ್ತೆಯ ರಾಧಿಕಾ ಪಾರ್ಕ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಸಮೃದ್ದ ಭೈರಿದೇವರಕೊಪ್ಪ (13) ಎಂಬಾತನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತನಿಗೆ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ. ಸರಿಯಾಗಿ ವಿದ್ಯಾಭ್ಯಾಸ ಮಾಡು ಎಂದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಎಪಿಎಂಸಿ-ನವನಗರ ಪೊಲೀಸ್ …
Read More »ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಗಿಫ್ಟ್: ಜೋಶಿ ಆಕ್ರೋಶ
ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬೆಂಬಲ ಬೆಲೆಯ ಗಿಫ್ಟ್ ಕೊಟ್ಟರೆ, ರಾಜ್ಯ ಸರ್ಕಾರ ಹಾಲಿನ ಬೆಲೆ ಕಡಿತದ ಕೊಡುಗೆ ಕೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಬೆಲೆ ಕುಸಿತದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ಎಂದು ಆಕ್ರೋಶ ಹೊರ …
Read More »