ಧಾರವಾಡ, : ಧಾರವಾಡ ಕೆಐಎಡಿಬಿ(KIADB) ಕಚೇರಿ ಅಂದರೆ ಅಲ್ಲಿ ಅಕ್ರಮಗಳದ್ದೇ ಪಾರುಪತ್ಯ. ಕಳೆದ ವರ್ಷ ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿತ್ತು. ಅದಕ್ಕೂ ಮುನ್ನ 20 ಕೋಟಿ ರೂ. ಡಬಲ್ ಪೇಮೆಂಟ್ ಹಗರಣವೂ ನಡೆದು, ಅದರಲ್ಲಿ ಸಜ್ಜನ್ ಮೊದಲನೇ ಆರೋಪಿ ಆಗಿ, ಜೈಲು ಕೂಡ ಕಂಡು ಬಂದಿದ್ದರು. ಡಬಲ್ …
Read More »ಕೊಳಲು ವಾದಕ ವೇಣುಗೋಪಾಲ ಹೆಗಡೆ ನಿಧನ
ಧಾರವಾಡ: ಇಲ್ಲಿನ ರಾಧಾಕೃಷ್ಣನಗರ ನಿವಾಸಿ, ಕೊಳಲು ವಾದಕ ವೇಣುಗೋಪಾಲ ಎಸ್.ಹೆಗಡೆ (41) ಬುಧವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರ ಇದ್ದಾರೆ. ನಿತ್ಯಾನಂದ ಹಳದಿಪುರ ಅವರ ಶಿಷ್ಯರಾಗಿದ್ದ ವೇಣುಗೋಪಾಲ ಅವರು, ಕೊಳಲು ವಾದನದಲ್ಲಿ ಸಾಧನೆ ಮಾಡಿದ್ದರು. ಆಕಾಶವಾಣಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಮುಂಬೈನ ಐಟಿಸಿ ಸಂಶೋಧನಾ ಅಕಾಡೆಮಿಯ ಪ್ರಶಸ್ತಿ ಸಹಿತ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ.
Read More »ಕುಡಿದು ವಾಹನ ಚಾಲನೆ: 3 ದಿನಗಳಲ್ಲಿ ₹9.60 ಲಕ್ಷ ದಂಡ ಸಂಗ್ರಹ!
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿ ಕುಡಿದು ವಾಹನ ಚಲಾಯಿಸಿದವರ ವಿರುದ್ಧ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಕಳೆದ ವಾರಾಂತ್ಯದ ಮೂರು ದಿನಗಳಲ್ಲಿ 96 ಪ್ರಕರಣಗಳನ್ನು ದಾಖಲಿಸಿಕೊಂಡು ₹9.60 ಲಕ್ಷ ದಂಡ ಸಂಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮೂರು ಮತ್ತು ಧಾರವಾಡದಲ್ಲಿ ಒಂದು ಸಂಚಾರ ಪೊಲೀಸ್ ಠಾಣೆಯಿದ್ದು, ಕಳೆದ ಶುಕ್ರವಾರ, ಶನಿವಾರ ಮತ್ತು ಭಾನುವಾರ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಕುಡಿದು ವಾಹನ ಚಲಾಯಿಸುವವರ ಪತ್ತೆಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದರು. ಉತ್ತರ ಸಂಚಾರ …
Read More »ಖಾಲಿ ಹುದ್ದೆಗಳ ಭರ್ತಿಗೆ ಕ್ರಮವಹಿಸಿ: ಬಸವರಾಜ ಹೊರಟ್ಟಿ
ಧಾರವಾಡ: ‘ಸರ್ಕಾರಿ ನೌಕರರು ಇಂದು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನೌಕರರ ಮೇಲಿನ ಒತ್ತಡ ಕಡಿಮೆ ಮಾಡಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ ಗೌರಮ್ಮ ಹಿರೇಮಠ (ರಪಾಟಿ) ಕಲ್ಯಾಣ ಮಂಟಪದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ವತಿಯಿಂದ ಭಾನುವಾರ ಆಯೋಜಿಸಿದ್ದ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ, ಸದಸ್ಯರ ಸಾಮಾನ್ಯ ಸಭೆ ಮತ್ತು 7ನೇ ವೇತನ …
Read More »ಟ್ರಾನ್ಸ್‌ಫಾರ್ಮರ್ ಅವ್ಯವಸ್ಥೆಗೆ ಬಳಲಿದ ರೈತ!
ಹುಬ್ಬಳ್ಳಿ: ಹೊಸದಾಗಿ ಕೃಷಿ ಪಂಪ್‌ಸೆಟ್ ಅಳವಡಿಸುವುದನ್ನು ಸ್ಥಗಿತಗೊಳಿಸಿರುವ ಸರ್ಕಾರ ಒಂದೆಡೆಯಾದರೆ, ಕೆಟ್ಟುಹೋಗಿರುವ ಹಳೆಯ ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾಯಿಸಲು ಹೆಸ್ಕಾಂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ರೈತರು ತೀವ್ರ ಕಷ್ಟ ಎದುರಿಸುತ್ತಿದ್ದಾರೆ. ಇದು ಕೇವಲ ರೈತರ ಜೀವನದ ಮೇಲಲ್ಲದೇ ಕೃಷಿ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವ ಅಪಾಯ ತಂದೊಡ್ಡಿದೆ. ಕಳೆದ ವರ್ಷಕ್ಕಿಂತ ಮುಂಚೆ ಸರ್ಕಾರವೇ ರೈತರ ಜಮೀನುಗಳಲ್ಲಿ ನೀರಾವರಿ ಪಂಪ್‌ಸೆಟ್ ಅಳವಡಿಸುತ್ತಿತ್ತು. ಇದಕ್ಕಾಗಿ ಬೇಕಾದ ವಿದ್ಯುತ್ ತಂತಿ, ಕಂಬ, ಟ್ರಾನ್ಸ್‌ಫಾರ್ಮರ್‌ಗಳನ್ನು ಪೂರೈಸುತ್ತಿತ್ತು. 5-6 …
Read More »ಚಂದ್ರಶೇಖರ್ ಗುರೂಜಿ ಹತ್ಯೆ ಆರೋಪಿ ಜಾಮೀನು ಅರ್ಜಿ ವಜಾ
ಹುಬ್ಬಳ್ಳಿ,ಆ.3- ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿಗೆ ಜಾಮೀನು ನೀಡಲು ಧಾರವಾಡ ಹೈಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕ ಸದಸ್ಯ ಪೀಠ ದುಮವಾಡ ಗ್ರಾಮದ ನಿವಾಸಿ ಆರೋಪಿ ಮಹಾಂತೇಶ ಶಿರೂರ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದ್ದು, ಸಮಾಜದಲ್ಲಿ ಆತಂಕ ಸೃಷ್ಠಿಸಿದೆ. ಅಷ್ಟೇ ಅಲ್ಲ ಗುರೂಜಿ ಕುಟುಂಬ ಸೇರಿದಂತೆ ಸಾಕ್ಷಿಗಳಿಗೆ ತೊಂದರೆಯಾಗುವ ಸಾದ್ಯತೆ ಇದೆ ಎಂದು ಕಾರಣ ನೀಡಿ …
Read More »ಹೆಚ್ಚು ನೀರು ಬೇಡುವ ಬೆಳೆ: ರೈತ ಕುಟುಂಬಕ್ಕೆ ‘ಸುಗಂಧರಾಜ’ ಆಸರೆ
ಉಪ್ಪಿನಬೆಟಗೇರಿ: ಧಾರವಾಡ ತಾಲ್ಲೂಕಿನ ಕನಕೂರ, ಚಂದನಮಟ್ಟಿ ಹಾಗೂ ತಲವಾಯಿ ಗ್ರಾಮಗಳ ಬಳಿ ಸಾಗಿದರೆ ಸುಗಂಧರಾಜ ಹೂವಿನ ಘಮಲು ಹಿತಾನುಭವ ನೀಡುತ್ತದೆ. ಇಲ್ಲಿನ ರೈತರು ಸುಗಂಧರಾಜ ಹೂವು ಬೆಳೆಯುವ ಮೂಲಕ, ಜೀವನ ನಿರ್ವಹಣೆ ಮಾರ್ಗ ಕಂಡುಕೊಂಡಿದ್ದಾರೆ. ಹತ್ತು ವರ್ಷಗಳಿಂದ ಸುಗಂಧರಾಜ ಹೂವಿನ ಕೃಷಿ ನಡೆಸುತ್ತಿರುವ ರೈತರು, ಈ ಭಾಗದ ಪುಷ್ಪಕೃಷಿಗೆ ಹೊಸ ಆಯಾಮ ನೀಡಿದ್ದಾರೆ. ಜಮೀನಿನ ಫಲವತ್ತತೆ ಕಾಪಾಡಲು ಸಗಣಿ ಗೊಬ್ಬರ ಬಳಸುತ್ತಾರೆ. ಇದರಿಂದ ಬೆಳೆ ಸಮೃದ್ಧವಾಗಿ, ಗಿಡದ ತುಂಬ ಹೂವು …
Read More »ಜೈಲಲ್ಲಿರುವ ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’
ಹುಬ್ಬಳ್ಳಿ, ಆಗಸ್ಟ್ 01: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ ಕಳಹಿಸಲಾಗಿದೆ. ಹೌದು, ಕೊಲೆ ಆರೋಪಿಯಾಗಿ ಸುಮಾರು 50 ದಿನಗಳಿಂದ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿರುವ ನಟ …
Read More »ಬಿಜೆಪಿ ಕಾಲದಲ್ಲಿ ಆದ ಹಗರಣ ಒಪ್ಪಿಕೊಳ್ಳಲಿ: ಸಂತೋಷ್ ಲಾಡ್
ಹುಬ್ಬಳ್ಳಿ; ಬಿಜೆಪಿಯವರು ಮಾಡಿದ ಹಗರಣ ಮೊದಲು ಒಪ್ಪಿಕೊಳ್ಳಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಹಾಗೂ ವಾಲ್ಮೀಕಿ ನಿಗಮದಲ್ಲಿ ಹಗರಣದಲ್ಲಿ ಸಿಎಂ ರಾಜೀನಾಮೆಗೆ ವಿಚಾರವಾಗಿ ವಿರೋಧ ಪಕ್ಷಗಳು ಒತ್ತಾಯ ನಡೆಸಿವೆ. ಇದಕ್ಕೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ. ವಿಪಕ್ಷಗಳಿಗೆ ಸಿಎಂ ಹೇಗೆ ಸ್ಪಷ್ಟನೇ ನೀಡಬೇಕು. ಬಿಜೆಪಿ ಕಾಲದಲ್ಲಿ ಏನು ಆಗಿದೆ ಮೊದಲು ಅವರನ್ನು ಹೇಳಲಿ ಎಂದು ಗುಡುಗಿದರು. ಬಿಜೆಪಿ …
Read More »ಮಹದಾಯಿ ಯೋಜನೆ ಜಾರಿಗೆ ಮನವಿ
ಹುಬ್ಬಳ್ಳಿ: ‘ಕೇಂದ್ರ ಸರ್ಕಾರವು ಮಹದಾಯಿ ಯೋಜನೆಯನ್ನು ಶೀಘ್ರ ಜಾರಿಗೊಳಿಸಬೇಕು ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು’ ಎಂದು ರೈತ ಹೋರಾಟಗಾರ ವೀರೇಶ ಸೊಬರದಮಠ ಒತ್ತಾಯಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರಧಾನಮಂತ್ರಿ, ರಾಷ್ಟ್ರಪತಿ, ವಿರೋಧ ಪಕ್ಷದ ನಾಯಕರ ಕಚೇರಿಗೆ, ರಾಜ್ಯದ 28 ಸಂಸದರಿಗೆ ಹಾಗೂ ದೆಹಲಿಯಲ್ಲಿ ಈಚೆಗೆ ಮನವಿ ಸಲ್ಲಿಸಲಾಗಿದೆ. ಈ ಯೋಜನೆ ಜಾರಿಗೆ ಕೇಂದ್ರ …
Read More »