ಧಾರವಾಡ: ರಾಜ್ಯದಲ್ಲಿ ಬರದ ಛಾಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಿಸಿದ್ದು, ಇದರಿಂದ ಹೊರಗುಳಿದ ಜಿಲ್ಲೆಯ ಕೆಲ ತಾಲೂಕುಗಳ ರೈತರು ಆಕ್ರೋಶಗೊಂಡಿದ್ದಾರೆ. ಸರ್ಕಾರ ತೀವ್ರ ಮತ್ತು ಸಾಧಾರಣ ಬರ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಜಿಲ್ಲೆಯ ಮೂರು ತಾಲೂಕುಗಳು ಹೊರಗುಳಿದಿವೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿನಿಧಿಸುವ ಕಲಘಟಗಿ, ಅಳ್ನಾವರವನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗಿಡಲಾಗಿದೆ. ಇನ್ನು ನವಲಗುಂದ ವಿಧಾನಸಭಾ ವ್ಯಾಪ್ತಿಯ ಅಣ್ಣಿಗೇರಿ ತಾಲೂಕು ಕೂಡ …
Read More »ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಪಟ್ಟು: ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ವಿಳಂಬ ಮಾಡುತ್ತಿರುವದನ್ನು ಖಂಡಿಸಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಿಯೋಗ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿದರು. ಈದ್ಗಾ ಮೈದಾನಲ್ಲಿ ಅನುಮತಿ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಅರವಿಂದ ಬೆಲ್ಲದ ನೇತೃತ್ವದ ನಿಯೋಗ ಕೂಡಲೇ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇಲ್ಲದಿದ್ದರೆ ಇಲ್ಲಿಂದ ಎದ್ದು ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈದ್ಗಾ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ಮುಂಚೆಯೇ ಅನುಮತಿ ನೀಡಬೇಕು. ಪಾಲಿಕೆ …
Read More »ಬರಗಾಲದ ವಿಚಾರದಲ್ಲಿ ನಮಗೆ ಯಾವ ಗೊಂದಲವೂ ಇಲ್ಲ.ಕಂದಾಯ ಸಚಿವ ಕೃಷ್ಣಬೈರೇಗೌಡ
ಹುಬ್ಬಳ್ಳಿ : ಬರಗಾಲದ ವಿಚಾರದಲ್ಲಿ ನಮಗೆ ಯಾವ ಗೊಂದಲವೂ ಇಲ್ಲ. ರೈತರನ್ನು ಗೊಂದಲಕ್ಕೀಡು ಮಾಡಿದ್ದು ಕೇಂದ್ರ ಸರ್ಕಾರ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ನಿನ್ನೆ ಬರಗಾಲ ಘೋಷಣೆ ಮಾಡಿದ್ದೇವೆ. 195 ತಾಲೂಕುಗಳನ್ನು ಬರಪೀಡಿತವೆಂದುು ಘೋಷಿಸಿದ್ದೇವೆ. ಈ ಸಂಬಂಧ ಒಂದೂವರೆ ತಿಂಗಳಿಂದ ಕೆಲಸ ಮಾಡಿ ಬರಗಾಲ ಘೋಷಣೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಮಾನದಂಡಗಳಿಗೆ ಕೆಲ ತಾಲೂಕುಗಳು ಬರುತ್ತಿಲ್ಲ ಎಂದು ತಿಳಿಸಿದರು. ನಮಗೆ ಸರಿ ಮಾಡೋಕೆ …
Read More »ಸದ್ಯ ರಾಜ್ಯದಲ್ಲಿ ಒಬ್ಬರು ಮುಖ್ಯಮಂತ್ರಿಗಳಿದ್ದಾರೆ.:ಸತೀಶ್ ಜಾರಕಿಹೊಳಿ
ಹುಬ್ಬಳ್ಳಿ: ಸಚಿವ ಜಿ. ಪರಮೇಶ್ವರ್ ಮುಖ್ಯಮಂತ್ರಿ, ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಆಗಬೇಕೆಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಸಾಂದರ್ಭಿಕವಾಗಿ ಹೇಳಿರಬಹುದು. ಆದರೆ ಮುಂದೊಂದು ದಿನ ದಲಿತರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಅದಕ್ಕೆ ಕಾಯಬೇಕಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಅವರು ಒಳ್ಳೆಯ ದೃಷ್ಟಿಯಿಂದ ಹೇಳಿದ್ದಾರೆ. ಹೇಳಿದ ತಕ್ಷಣ ಯಾವುದು ಆಗೋದಿಲ್ಲ. ಈ ಬಗ್ಗೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ಸದ್ಯ ರಾಜ್ಯದಲ್ಲಿ …
Read More »ಶಕ್ತಿ ಯೋಜನೆ: NWKRTC ಬಸ್ಗಳಲ್ಲಿ ಇದುವರೆಗೂ 13 ಕೋಟಿಗೂ ಅಧಿಕ ಮಹಿಳೆಯರ ಪ್ರಯಾಣ
ಹುಬ್ಬಳ್ಳಿ: ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಮೂರು ತಿಂಗಳು ಪೂರೈಸಿದೆ. ಇದುವರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ 13.20 ಕೋಟಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದುಕೊಂಡು ಉಚಿತ ಸಂಚಾರ ಮಾಡಿದ್ದು, ಇದರ ಟಿಕೆಟ್ ಪ್ರಯಾಣದ ಮೊತ್ತ 332.77 ಕೋಟಿ ರೂ.ಗಳಾಗಿದೆ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದಿಂದ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ …
Read More »ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ: ಕೋಡಿಮಠ ಸ್ವಾಮೀಜಿ
ಹುಬ್ಬಳ್ಳಿ: ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ರಾಜಕೀಯದಲ್ಲಿ ಏನಾಗುತ್ತದೆ ಎಂದು ಯುಗಾದಿ ನಂತರ ಕಾದುನೋಡಿ ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಬರಗಾಲದ ಛಾಯೆ ಬಗ್ಗೆ ಮಾತನಾಡಿ, ಮನುಷ್ಯ ಮಾಡಿದ ತಪ್ಪುಗಳಿಗೆ ದೇವರು ಕ್ಷಮಿಸುತ್ತಾನೆ. ಆದರೆ, ಮನುಷ್ಯ ಮಾಡಿದ ಪಾಪಕರ್ಮಗಳು ಮನುಷ್ಯನನ್ನ ಕ್ಷಮಿಸುವುದಿಲ್ಲ. ಮನುಷ್ಯನ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ, ಮನುಷ್ಯನ ಕರ್ಮ ಭಾದೆಗಳು ಹೆಚ್ಚಾದಾಗ …
Read More »23 ಪಾರಿವಾಳಗಳನ್ನು ಕತ್ತು ಕೊಯ್ದು ಕೊಂದ ಕಿಡಿಗೇಡಿಗಳು
ಹುಬ್ಬಳ್ಳಿ : 23 ಪಾರಿವಾಳಗಳನ್ನು ಕತ್ತು ಕೊಯ್ದು ಕೊಂದಿರುವ ಘಟನೆ ಹುಬ್ಬಳ್ಳಿಯ ಗೋಕುಲ್ ರೋಡ್ ಯಾವಗಲ್ ಫ್ಲಾಟ್ನಲ್ಲಿ ಶನಿವಾರ ನಡೆದಿದೆ. ರಾಹುಲ್ ದಾಂಡೇಲಿ ಎಂಬವರು ಸಾಕಿದ್ದ 23 ಪಾರಿವಾಳಗಳನ್ನು ಹಾಗೂ ಪಾರಿವಾಳದ ಮೊಟ್ಟೆಯನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೇ ಪಾರಿವಾಳಗಳ ಗೂಡನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ. ಈ ಕುರಿತು ಪಾರಿವಾಳಗಳ ಮಾಲೀಕ ರಾಹುಲ್ ದಾಂಡೇಲಿ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರುದಾರ ರಾಹುಲ್ ದಾಂಡೇಲಿ ಸಹೋದರ ನಿಖಿಲ್ ದಾಂಡೇಲಿ ಈ …
Read More »ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣವಾದ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈತ್ರಿ ಅನಿವಾರ್ಯ ಎಂದು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ಮೈತ್ರಿ ವಿಚಾರವಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. …
Read More »ಧಾರವಾಡದ ಕೃಷಿ ವಿವಿ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನಕ್ಕೆ ಸಾವಿರಾರು ಜನರು ಆಗಮಿಸಿ ಬಗೆಬಗೆಯ ಹೂವುಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ
ಧಾರವಾಡ: ಉತ್ತರ ಕರ್ನಾಟಕ ಭಾಗದ ರೈತರ ಜಾತ್ರೆ ಎಂದು ಕರೆಸಿಕೊಳ್ಳುವ ಕೃಷಿಮೇಳದ ಎರಡನೇ ದಿನವಾದ ಇಂದು ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ ಪ್ರದರ್ಶನವನ್ನು ಸಾರ್ವಜನಿಕರ ಗಮನ ಸೆಳೆಯಿತು. ವಿವಿಧ ಬಗೆಯ ಹೂವುಗಳನ್ನು ಒಂದೇ ಕಡೆ ಕಣ್ತುಂಬಿಕೊಂಡ ಜನರು ಸಂತಸಪಟ್ಟರು. ಧಾರವಾಡ ಕೃಷಿ ವಿಶ್ವವಿದ್ಯಾಲಯ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಸಾವಿರಾರು ಜನರು ಆಗಮಿಸಿ ತಮ್ಮಗಿಷ್ಟವಾದ ಹೂವುಗಳ ಕಲಾಕೃತಿಗಳ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡರು. ನಾಲ್ಕು ದಿನಗಳ ಕಾಲ ಕೃಷಿ …
Read More »JDSನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವ: ಸಿದ್ದರಾಮಯ್ಯ
ಹುಬ್ಬಳ್ಳಿ: ಜೆಡಿಎಸ್ನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವದ ಸಂಗತಿ. ಮಾಜಿ ಪ್ರಧಾನಿ ದೇವೇಗೌಡ ಅವರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ ಎಂದಿದ್ದರು. ಆದರೆ ಇದೀಗ ಬಿಜೆಪಿಯವರ ಜೊತೆ ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಯಾದರೂ ಜೆಡಿಎಸ್ನವರು ಸೇರಿಕೊಳ್ಳುತ್ತಾರೆ ಎಂಬುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಜೆಡಿಎಸ್ನ ಬಿಜೆಪಿಯ …
Read More »