Breaking News

ಹುಬ್ಬಳ್ಳಿ

ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹಿಂದೂಗಳ ಮೇಲೆ ಹಲ್ಲೆ ಹೆಚ್ಚುತ್ತಿದೆ: ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಯಾವ ರಾಜ್ಯದಲ್ಲಿ ಅಧಿಕಾರದಲ್ಲಿ ಇರುತ್ತದೆಯೋ ಅಲ್ಲೆಲ್ಲಾ ಹಿಂದೂಗಳ ಮೇಲೆ, ಯಾತ್ರಾರ್ಥಿಗಳ ಮೇಲೆ ಹಲ್ಲೆ, ಬೆದರಿಕೆ ಪ್ರಕರಣಗಳು ನಡೆಯುತ್ತವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು. ಹೊಸಪೇಟೆಯಲ್ಲಿ ಅಯೋಧ್ಯೆಯ ಯಾತ್ರಿಗಳಿಗೆ ಬೆದರಿಕೆ ಹಾಕಿದ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಹೀಗಾಗುತ್ತದೆ ಎಂದರು. ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಅಂತಹವರು ತುಷ್ಟೀಕರಣಕ್ಕಾಗಿ, ಮತ ಬ್ಯಾಂಕ್‌ ಗಾಗಿ ಉತ್ತೇಜನ ಕೊಡುತ್ತಾರೆ. ಬೆದರಿಕೆ ಹಾಕಿದವರನ್ನು …

Read More »

ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಸಿಂಪತಿ ಇತ್ತು: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಪ್ರಕರಣದ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಮೊದಲಿನಿಂದಲೂ ಅನುಕಂಪ(Sympathy) ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ.   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ …

Read More »

ಅಳಿಯ ಅನಾಥ.. ಲಕ್ಷ್ಮೀ ಹೆಬ್ಬಾಳ್ಕರ್‌ ವರಸೆ.. ಟಿಕೆಟ್‌ಗೆ ಶಕ್ತಿ ಪ್ರದೇಶ

ಹುಬ್ಬಳ್ಳಿ(Hubli) ಬಳಿಯ ಗಿರಣಿ ಚಾಳ್ ಮೈದಾನದಲ್ಲಿ ರಜತ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಜತ ಸಂಭ್ರಮದ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅಳಿಯ ರಜತ್(Rajath) ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ಮಾಡಿದ್ರು. ಹತ್ತಾರು ಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ್ರು. ಮಹಿಳಾ(Women) ಮತ್ತು ಮಕ್ಕಳ(Child) ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ರಜತ್ ಉಳ್ಳಾಗಡ್ಡಿ ಮಠ ನನ್ನ ಅಳಿಯ ಅನ್ನೋ ಕಾರಣಕ್ಕೆ ರಾಜಕಾರಣದಲ್ಲಿ ಬಂದಿಲ್ಲ. ನನ್ನ ಮಗಳನ್ನು …

Read More »

ಕಿಮ್ಸ್‌ ಪಕ್ಕದ ಚರಂಡಿಯಲ್ಲಿ ಶವ ಪತ್ತೆ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್‌ ಆಸ್ಪತ್ರೆಯ ಹಾಸ್ಟೆಲ್‌ ಆವರಣ ಗೋಡೆಗೆ ಹೊಂದಿಕೊಂಡ ಚರಂಡಿಯಲ್ಲಿ ಅಪರಿಚಿತ ಶವವೊಂದು ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಚರಂಡಿ ಸ್ವಚ್ಛತೆ ಕೈಗೊಂಡಿದ್ದ ಸಂದರ್ಭದಲ್ಲಿ ಶವದ ಅಸ್ಥಿಪಂಜರ ಮತ್ತು ತಲೆಬುರುಡೆ ಸಿಕ್ಕಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಹಲವು ತಿಂಗಳುಗಳ ಹಿಂದೆಯೇ ದೇಹ ಚರಂಡಿಗೆ ಬಿದ್ದಿರಬಹುದು ಎನ್ನುವ ಅನುಮಾನವಿದ್ದು, ಇದು ಕೊಲೆಯೋ ಅಥವಾ ಸಹಜ ಸಾವಾಗಿದೆಯೋ …

Read More »

ಮಹದಾಯಿ ಯೋಜನೆಗಾಗಿ ಮತ್ತೆ ಹೋರಾಟ: ಸೊಬರದಮಠ

ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ಮಾಡುವ ವಿಷಯವನ್ನು ರಾಜಕೀಯ ವ್ಯಕ್ತಿಗಳು ತಮ್ಮ ಅನುಕೂಲಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಯಾವುದೇ ಸರ್ಕಾರಗಳು ರೈತರ ಅಳಲು ಆಲಿಸುತ್ತಿಲ್ಲ. ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಎಲ್ಲ ರೀತಿಯಿಂದಲೂ ಮತ್ತೆ ತೀವ್ರ ಸ್ವರೂಪದ ಹೋರಾಟ ಆರಂಭಿಸಲಾಗುವುದು ಎಂದು ರೈತ ಸೇನಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.   ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಈ ಬಗ್ಗೆ ಚರ್ಚಿಸುವಾಗ ಹುಬ್ಬಳ್ಳಿ-ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುವ ಕೇಂದ್ರ …

Read More »

ಅತಿಯಾದ ಬಿಸಿಲಿಗೆ ಹೈರಾಣಾದ ಜನರು

ಹುಬ್ಬಳ್ಳಿ: ಪ್ರಸಕ್ತ ವರ್ಷ ಬೇಸಿಗೆಗೂ ಮುನ್ನ ಫೆಬ್ರುವರಿಯಲ್ಲೇ ಬಿಸಿಲು ಹೆಚ್ಚಾಗಿದ್ದು, ಅತಿ ತಾಪಮಾನವು ಜನರನ್ನು ಹೈರಾಣಾಗಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 36.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹಾವೇರಿಯಲ್ಲಿ ದಾಖಲಾಗಿದೆ. ಕೋಲಾರದಲ್ಲಿ ಅತಿ ಕಡಿಮೆ 30.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಫೆಬ್ರುವರಿ 9ರಂದು 34.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. …

Read More »

ಸಮಸ್ಯೆಗಳ ಆಗರವಾದ ಹೊಸೂರ ಪ್ರಾದೇಶಿಕ ಬಸ್‌ ನಿಲ್ದಾಣ

ಹುಬ್ಬಳ್ಳಿ: ‘ಹೊಸ ಕೋರ್ಟ್‌ ಕಡೆಯಿಂದ ಹೊಸೂರ ಬಸ್‌ ನಿಲ್ದಾಣದೊಳಗೆ ಬಂದು ಗ್ರಾಮೀಣ ಬಸ್‌ಗಳ ಕಡೆ ಹೋಗಲು ವೃದ್ಧರಿಗೆ ಮತ್ತು ಅಂಗವಿಕಲರಿಗೆ ತುಂಬಾ ಕಷ್ಟವಾಗುತ್ತಿದೆ. ಮೇಲಿನ ಅಂತಸ್ತಿಗೆ ಹೋಗಲು ನಿಲ್ದಾಣದಲ್ಲಿ ಲಿಫ್ಟ್‌ ಮಾಡಿದ್ದು, ಅದು ಕೆಟ್ಟು ನಿಂತು ವರ್ಷವಾಗಿದೆ. ಈವರೆಗೆ ದುರಸ್ತಿಯಾಗಿಲ್ಲ. ನಮ್ಮ ಸಂಕಷ್ಟ ಯಾರೂ ಕೇಳುತ್ತಿಲ್ಲ’. ಇಲ್ಲಿನ ಹೊಸೂರ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಅದರಲ್ಲೂ ವೃದ್ಧರು, ಅಂಗವಿಕಲರು, ಅನಾರೋಗ್ಯಪೀಡಿತರು, ಮಹಿಳೆಯರು ತೋಡಿಕೊಳ್ಳುವ ಸಂಕಷ್ಟವಿದು. ‘ಹೆಸರಿಗೆ ಮಾತ್ರ ಲಿಫ್ಟ್ ಇದೆಯೇ ಹೊರತು …

Read More »

ಶಕ್ತಿ ಯೋಜನೆ ಕೆಲವೇ ತಿಂಗಳು ಅಷ್ಟೇ:ಅಮೃತ ದೇಸಾಯಿ,

ಶಕ್ತಿ ಯೋಜನೆ – ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಾರಿಯಾದ ಮೊದಲ ಗ್ಯಾರಂಟಿ ಯೋಜನೆ. ಆದರೆ ಈ ಯೋಜನೆ ಯಶಸ್ವಿಯಾಗಿದೆ ಅಂತಾ ಸರಕಾರವೇನೋ ಹೇಳುತ್ತೆ. ಆದರೆ ಅದನ್ನು ಮುಂದಿನ ಬಹಳ ತಿಂಗಳುಗಳವರೆಗೆ ತೆಗೆದುಕೊಂಡು ಹೋಗೋದೇ ಸವಾಲಾಗಿದೆ. ಏಕೆಂದರೆ ಕೆಎಸ್ಸಾರ್ಟಿಸಿ ಹಲವಾರು ವರ್ಷಗಳಿಂದ ಹತ್ತಾರು ಸಮಸ್ಯೆಗಳಿಂದ ಕಂಗೆಟ್ಟುಹೋಗಿದೆ.ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಶುರುವಾದ ಶಕ್ತಿ ಯೋಜನೆಯಿಂದ ಮಹಿಳೆಯರ ಓಡಾಟದ ಸಂಖ್ಯೆ ಹೆಚ್ಚಾಗಿದೆ. ಆದರೆ ಈ ಯೋಜನೆಯಿಂದಾಗಿ ಸುರಕ್ಷತೆ, ಸಮಯೋಚಿತ …

Read More »

ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀಮದ್ ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳನ್ನು ಭಾನುವಾರ ಭೇಟಿಯಾಗಿ, ಆಶೀರ್ವಾದ ಪಡೆದರು. ಹಾವೇರಿ ಜಿಲ್ಲೆ ಬಂಕಾಪುರದ ಆರಳೆಲೆ ಹಿರೇಮಠದಲ್ಲಿ ಜರುಗಿದ ಲಿಂಗೈಕ್ಯ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಸುವರ್ಣ ಸ್ಮರಣೋತ್ಸವದಲ್ಲಿ ಚರಿತಾಮೃತ ಕೃತಿ ಬಿಡುಗಡೆ ಮಾಡಿ, ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದರು.   ದೇಶದಲ್ಲಿ ಸಾಂಸ್ಕೃತಿಕ ಪುನರುತ್ಥಾನ ಈ ವೇಳೆ ರಂಭಾಪುರಿ ಶ್ರೀಗಳು ಮಾತನಾಡಿ, …

Read More »

ಖರ್ಗೆ ಬಿಜೆಪಿಗೆ ಬರುತ್ತಾರೆ : ಜೋಶಿ ಅಚ್ಚರಿಯ ಹೇಳಿಕೆ!!

ಹುಬ್ಬಳ್ಳಿ : ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಿಜೆಪಿಗೆ (BJP) ಬರುತ್ತಾರೆ ಎನ್ನುವ ಬಗ್ಗೆ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸದನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು 2024ರ ಲೋಕಸಭೆಯ ಚುನಾವಣೆಯ ವೇಳೆಯೂ ಬಿಜೆಪಿಯವರೇ (BJP) ಎಂದು ಹೇಳಿದ್ದಾರೆ. ಇದನ್ನು ನೋಡಿದರೇ ಖರ್ಗೆ ಅವರೇ ಬಿಜೆಪಿಗೆ ಬರುತ್ತಾರೆ ಎನ್ನುವ ಅನುಮಾನ ಬರುತ್ತಿದೆ ಎಂಬ ಅನುಮಾನ …

Read More »