ಹುಬ್ಬಳ್ಳಿ : ಡಿ.ಕೆ. ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಗರದ ತಮ್ಮ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ. ಹಳ್ಳಿಗಳಿಗೆ, ರೈತರಿಗೆ ಸಮರ್ಪಕ …
Read More »ರಾಜ್ಯಾಧ್ಯಕ್ಷರ ಆಯ್ಕೆ ಮಾಡುವ ವಿಚಾರದಲ್ಲಿ ಬಿಜೆಪಿ ಫೇಲ್: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ”ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಅತ್ತು ಕರೆದು ಮಾಡಿರೋ ತರಹ ಕಾಣುತ್ತಿದೆ. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಆದ್ರೆ, ಇವಗ್ಯಾಕೆ ಆಯ್ಕೆ ಮಾಡಿದ್ರು” ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ರಾಜಕೀಯ ಪಕ್ಷ ಆಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಆದ್ರೆ ಬಿಜೆಪಿ ಈ ವಿಚಾರದಲ್ಲಿ ಸಂಪೂರ್ಣ ಫೇಲ್ ಆಗಿದೆ” ಎಂದರು. ಲಿಂಗಾಯತ ನಾಯಕರಿಗೆ ಮಣೆ ಹಾಕಿರುವ ವಿಚಾರಕ್ಕೆ …
Read More »ಹುಬ್ಬಳ್ಳಿ ಧಾರವಾಡ ಅವಳಿ ನಗರ ಧೂಳಿನಿಂದ ಮುಕ್ತ ಮಾಡಲು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ..!
ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಗಳಿಸಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರ ಬೆಳೆಯುತ್ತಲೇ ಇದೆ. ಆದ್ರೆ ನಗರದಲ್ಲಿ ಉಸಿರಾಡಲು ಸ್ವಚ್ಛ ಗಾಳಿ ಸಿಗದಂತಾಗಿದೆ. ಅವಳಿ ನಗರದಲ್ಲಿ ಧೂಳಿನ ಸಮಸ್ಯೆಯಿಂದ ಜನರು ಹೈರಾಣ ಆಗಿದ್ದಾರೆ. ಅವಳಿ ನಗರದಲ್ಲಿ ಧೂಳು ಹೆಚ್ಚಾಗಿರುವ ಹಿನ್ನೆಲೆ ಹುಬ್ಬಳ್ಳಿ ಧಾರವಾಡ ಜನರಿಗೆ ವಿವಿಧ ಅಲರ್ಜಿಗಳು ಕಾಡುತ್ತಿವೆ. ಹೀಗಾಗಿ ಅವಳಿನಗರ ಧೂಳುಮುಕ್ತ ಮಾಡಲು ಹಾಗೂ ಧೂಳು ತೆಗೆಯಲು ಈಗ ಪಾಲಿಕೆ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಧೂಳು …
Read More »ನಿಖಿಲ್ ಕುಂದಗೋಳ ಆತ್ಮಹತ್ಯೆ ಪ್ರಕರಣದಲ್ಲಿ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಕುಟುಂಬಸ್ಥರ ಆಗ್ರಹ
ಹುಬ್ಬಳ್ಳಿ: ನಿಖಿಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ನಮಗೆ ಸೂಕ್ತ ನ್ಯಾಯ ಒದಗಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಾದ ಸಾತೇನಹಳ್ಳಿ, ಜಯಶ್ರೀ ಅವರನ್ನು ಅಮಾನತು ಮಾಡಬೇಕು ಹಾಗೂ ನಿಖಿಲ್ ಪತ್ನಿ ಮನೆಯವರನ್ನು ಕೂಡಲೇ ಬಂಧಿಸಬೇಕು ಎಂದು ನಿಖಿಲ್ ಕುಂದಗೋಳ ಕುಟುಂಬಸ್ಥರು ಒತ್ತಾಯಿಸಿದರು. ನಗರಲ್ಲಿಂದು ನಿಖಿಲ್ ತಾಯಿ ಗೀತಾ ಕುಂದಗೋಳ, ಸಹೋದರ ರಘುವೀರ್ ಕುಂದಗೋಳ ಹಾಗೂ ತಂದೆ ಮೋಹನ್ ಕುಂದಗೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೌಟುಂಬಿಕ ಜಗಳವನ್ನು ನಾವು ಹಿರಿಯ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳುತ್ತಿದ್ದೆವು . ಆದರೆ …
Read More »ಹುಬ್ಬಳ್ಳಿಯಲ್ಲಿ ಮಳೆ ರಗಳೆ: ಜಲಾವೃತಗೊಂಡ ರಸ್ತೆಗಳು
ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿದ ಮಳೆಗೆ ರಸ್ತೆಗಳೆಲ್ಲ ಕೆರೆಯಂತಾಗಿದ್ದವು. ನಗರದ ಬಹುತೇಕ ರಸ್ತೆಗಳಲ್ಲಿ ಮಳೆ ನೀರು ನಿಂತು ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಹುಬ್ಬಳ್ಳಿಯ ಗಣೇಶನಗರದ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಶಾಲಾ ಮಕ್ಕಳು, ಸಾರ್ವಜನಿಕರು ನೀರಿನಲ್ಲಿಯೇ ಓಡಾಡುವ ದೃಶ್ಯ ಸಾಮಾನ್ಯವಾಗಿತ್ತು. ಹೀಗಾಗಿ ಸ್ಥಳೀಯ ಆಡಳಿತದ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕಿದ್ದಾರೆ. ಅಲ್ಲದೇ ಪ್ರತಿಬಾರಿ ಮಳೆ ಬಂದಾಗಲೂ ಇಂತಹ ಅವ್ಯವಸ್ಥೆ ಸರ್ವೇ ಸಾಮಾನ್ಯವಾಗಿದೆ. ಹುಬ್ಬಳ್ಳಿಯ ಚನ್ನಪೇಟೆಯಲ್ಲಿ ಬಹುತೇಕ ಮನೆಗಳಿಗೆ ನೀರು …
Read More »ಹಣದ ಬೇಡಿಕೆ ಆರೋಪ: ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ದೂರು.. ಆರೋಪ – ಪ್ರತ್ಯಾರೋಪ
ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ನೀಡಬೇಕು. ಇಲ್ಲದಿದ್ದರೆ ಅಂಗಡಿ ನಡೆಸದಂತೆ ಮಾಡುತ್ತೇನೆ ಎಂದು ಬೆದರಿಸಿದ ಆರೋಪದ ಮೇಲೆ ಕರವೇ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ದ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಂಟಿಕೇರಿಯ ಅಳಗುಂಡಗಿ ಓಣಿಯ ಉದ್ಯಮಿ ವಿಜಯ ಅಳಗುಂಡಗಿ ಎಂಬುವವರು ಮಂಜುನಾಥ ಲೂತಿಮಠ, ರಾಹುಲ್, ಅಮಿತ್, ಪ್ರವೀಣ, ಬಸವರಾಜ, ಬಾಲು, ಪ್ರಕಾಶ ಮತ್ತು ವಿಜಯ ವಿರುದ್ದ ದೂರು ನೀಡಿದ್ದಾರೆ. ಮಂಜುನಾಥ …
Read More »ಕಾಂಗ್ರೆಸ್ ಸರ್ಕಾರ ಬಂದಾಗಿದ್ದ ಅಧಿಕಾರಕ್ಕಾಗಿ ಹೊಡೆದಾಟ ನಡೆದೇ ಇದೆ : ಶಾಸಕ ಅರವಿಂದ ಬೆಲ್ಲದ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ತಿಂಗಳಿನಿಂದ ಗದ್ದಲ ಆರಂಭವಾಗಿದೆ. ಇದು ಹನಿಮೂನ್ ಸಮಯ. ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ ಎಂದು ಸರ್ಕಾರದ ವಿರುದ್ದ ಶಾಸಕ ಅರವಿಂದ ಬೆಲ್ಲದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡೂವರೆ ವರ್ಷ, ಡಿ ಕೆ ಶಿವಕುಮಾರ್ ಎರಡೂವರೆ ವರ್ಷ ಅನ್ನೋ ಮಾಹಿತಿ ಇತ್ತು. ಆದ್ರೆ ಸಿದ್ದರಾಮಯ್ಯ ಈಗಿನಿಂದಲೇ ನಾಲ್ಕು ಜನರನ್ನು ರೆಡಿ ಮಾಡಿದ್ದಾರೆ. ಎರಡು ವರ್ಷ …
Read More »ನೈರುತ್ಯ ರೈಲ್ವೆ ಆದಾಯದಲ್ಲಿ ಗಣನೀಯ ಏರಿಕೆ
ಹುಬ್ಬಳ್ಳಿ : ನೈರುತ್ಯ ರೈಲ್ವೆ ಇಲಾಖೆಯು ಆದಾಯದಲ್ಲಿ ಅತ್ಯುತ್ತಮ ಬೆಳವಣಿಗೆ ದಾಖಲಿಸಿದೆ. ಈ ವಲಯವು 2023 ರ ಏಪ್ರಿಲ್ನಿಂದ ಅಕ್ಟೋಬರ್ ಅವಧಿಯಲ್ಲಿ ಶೇ. 10.44% ಹೆಚ್ಚಳದೊಂದಿಗೆ ಒಟ್ಟು 4288.27 ಕೋಟಿ ರೂ.ಗಳ ಆದಾಯವನ್ನು (ಹಂಚಿಕೆ) ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 3882.93 ಕೋಟಿ ರೂಪಾಯಿ ಸಂಗ್ರಹವಾಗಿತ್ತು. ನೈರುತ್ಯ ರೈಲ್ವೆಯ ಮೂಲ ಪ್ರಯಾಣಿಕರ ಆದಾಯವು 2023 ರ ಏಪ್ರಿಲ್ನಿಂದ ಅಕ್ಟೋಬರ್ ಅವಧಿಯಲ್ಲಿ 1801.68 ಕೋಟಿ ರೂ.ಗಳಾಗಿದ್ದು, ಕಳೆದ ವರ್ಷದ ಇದೇ ಅವಧಿಯ …
Read More »ಕೌಟುಂಬಿಕ ಕಲಹ ಹಿನ್ನೆಲೆ: ಮನನೊಂದು ವಿವಾಹಿತ ಯುವಕ ಆತ್ಮಹತ್ಯೆ
ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ವಿವಾಹಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ. ನಿಖಿಲ್ ಕುಂದಗೋಳ (28) ಮನೆಯಲ್ಲೆ ಆತ್ಮಹತ್ಯೆಗೆ ಶರಣಾದ ಯುವಕ. ಮೃತ ನಿಖಿಲ್ ಪ್ರೀತಿ ಎಂಬ ಯುವತಿಯನ್ನು ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ. ಆದರೆ, ಕಳೆದ ಕೆಲ ತಿಂಗಳಿಂದ ಪತಿ ಹಾಗೂ ಪತ್ನಿಯ ನಡುವೆ ವಿರಸ ಮೂಡಿದ್ದು, ನಿತ್ಯ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು. ಪರಿಣಾಮ ಪತ್ನಿ ಪ್ರೀತಿ ನಿಖಿಲ್ ಕಿರುಕುಳ ನೀಡಿದ್ದಾನೆಂದು …
Read More »ಶಾಸಕರಿಗೆ 50 ಕೋಟಿ ಆಫರ್ ನೀಡುವ ಅಗತ್ಯವಿಲ್ಲ, ಜಗಳದಲ್ಲೇ ಸರ್ಕಾರ ಬೀಳುತ್ತೆ’: ನಳಿನ್ ಕುಮಾರ್ ಕಟೀಲ್
ಹುಬ್ಬಳ್ಳಿ: “ಕಾಂಗ್ರೆಸ್ ಶಾಸಕರಿಗೆ ಐವತ್ತು ಕೋಟಿ ಆಫರ್ ನೀಡುವ ಅವಶ್ಯಕತೆ ಆಗಲಿ, ಅನಿವಾರ್ಯತೆಯಾಗಲಿ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ವಾಗ್ದಾಳಿ ನಡೆಸಿದರು. ಬಿಜೆಪಿ ಪ್ರಶಿಕ್ಷಣ ಕಾರ್ಯಾಗಾರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ‘ಜನರಿಗೆ ದಾರಿ ತಪ್ಪಿಸುವ ಭಾಗವಾಗಿ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸಿದ್ಧರಾಮಯ್ಯ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ …
Read More »