Breaking News

ಹುಬ್ಬಳ್ಳಿ

ಕರ್ನಾಟಕವನ್ನು ಗೂಂಡಾರಾಜ್ಯ ಮಾಡಲು ಈ ಸರಕಾರ ಪಣತೊಟ್ಟಂತಿದೆ : ಪ್ರಲ್ಹಾದ ಜೋಶಿ

ಹುಬ್ಬಳ್ಳಿ, ಅ.02: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ (G Parameshwara) ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ವೀಡಿಯೋ ಹೇಳಿಕೆ ನೀಡಿರುವ ಪ್ರಲ್ಹಾದ ಜೋಶಿಯವರು, …

Read More »

ಜಗದೀಶ್ ಶೆಟ್ಟರ್​ಗೆ ಡಿಸಿಎಂ ಸ್ಥಾನ ನೀಡಬೇಕು”: ವೀರಶೈವ ಮಹಾಸಭಾದಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ

ಹುಬ್ಬಳ್ಳಿ: ಬಿಜೆಪಿಯಲ್ಲಿ ವೀರಶೈವ ಸಮಾಜವನ್ನು ಕಡೆಗಣನೆ ಮಾಡಲಾಗುತ್ತಿದೆ. ಹೀಗಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವೀರಶೈವ ಮಹಾಸಭಾ ಕುಂದಗೋಳ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಯಂಟ್ರಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ವೀರಶೈವ ಸಮಾಜದ ಜಗದೀಶ್ ಶೆಟ್ಟರ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಬಿಜೆಪಿಯಲ್ಲಿ ವೀರಶೈವ ಸಮಾಜ‌ವನ್ನು ಕಡೆಗಣನೆ ಮಾಡಲಾಗುತ್ತಿದೆ. ಹೀಗಾಗಿ ವೀರಶೈವ ಸಮಾಜಕ್ಕೆ ಉನ್ನತ ಸ್ಥಾನಕ್ಕಾಗಿ ಜಗದೀಶ್ ಶೆಟ್ಟರ್​ಗೆ …

Read More »

ಕರ್ನಾಟಕ ಬಂದ್​: ಹುಬ್ಬಳ್ಳಿ ಧಾರವಾಡದಲ್ಲಿ ಮಿಶ್ರ ಪ್ರತಿಕ್ರಿಯೆ… ಶಾಲಾ ಕಾಲೇಜಿಗಿಲ್ಲ ರಜೆ, ಎಂದಿನಂತೆ ಆಟೋ ಬಸ್ ಸಂಚಾರ

ಹುಬ್ಬಳ್ಳಿ-ಧಾರವಾಡ/ಹಾವೇರಿ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವದನ್ನು ಖಂಡಿಸಿ ಕರ್ನಾಟಕ ಬಂದ್​​ಗೆ ಹುಬ್ಬಳ್ಳಿ, ಧಾರವಾಡ ಮತ್ತು ಹಾವೇರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಮಹದಾಯಿ ಹೋರಾಟಗಾರರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಹೊಸೂರ ವೃತ್ತದಲ್ಲಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಕಾವೇರಿ ನಮ್ಮದು, ಕಾವೇರಿ ಹೋರಾಟಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆದರೇ ಆಟೋ ಸಂಚಾರ, ಬಸ್ ಸಂಚಾರ …

Read More »

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿ- ಮೋಹನ್​ ಲಿಂಬಿಕಾಯಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಕರೆಸಿದ್ದರು. ಅವರೊಂದಿಗೆ ಸುದೀರ್ಘವಾದ ಚರ್ಚೆಯೂ ಆಯಿತು. ಚರ್ಚೆಯಾಗಿ ಅವರು ಪೂರಕವಾಗಿ ಸ್ಪಂದಿಸುತ್ತೇವೆ ಎಂದು …

Read More »

ರಾಷ್ಟ್ರಧ್ವಜ ತಯಾರಿಸುವ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಧಾರವಾಡ : ರಾಷ್ಟ್ರಧ್ವಜ ತಯಾರಿಸುವ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಸಿಕ್ಕಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಘ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿಗೆ ಬಾಜನವಾಗಿದ್ದು, ಅಕ್ಟೋಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ. ಐದು ಲಕ್ಷ ರೂ. ನಗದು ಒಳಗೊಂಡ ಪ್ರಶಸ್ತಿ ಇದಾಗಿದೆ‌. ವಿಶ್ರಾಂತ ನ್ಯಾಯಮೂರ್ತಿ ಬಿ ವೀರಪ್ಪ ಅಧ್ಯಕ್ಷತೆ ಸಮಿತಿಯಿಂದ ಪ್ರಶಸ್ತಿ ಆಯ್ಕೆಯಾಗಿದೆ. ಸಂಘ ಐದು ದಶಕಗಳಿಂದ …

Read More »

ಸುವರ್ಣ ಮಹೋತ್ಸವ ಹೊಸ್ತಿಲಿನಲ್ಲಿ ಹುಬ್ಬಳ್ಳಿ ಕಾ ರಾಜಾ.. ಈ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಏನು ಗೊತ್ತಾ?

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಗೂ ಮುಂಬೈ ಗಣೇಶನಿಗೂ ಅವಿನಾಭಾವ ಸಂಬಂಧವಿದೆ.‌ ದೇಶದಲ್ಲಿ ಮುಂಬೈ ಗಣೇಶ ಪ್ರತಿಷ್ಠಾಪನೆಗೆ ಎಷ್ಟು ಪ್ರಸಿದ್ಧಿ ಪಡೆದಿದೆಯೋ ಅದೇ ರೀತಿ ರಾಜ್ಯದಲ್ಲಿಯೇ ಮಹಾನಗರ ಹುಬ್ಬಳ್ಳಿ ಗಣೇಶ ಮೂರ್ತಿಗಳ ಪ್ರತಿಷ್ಠಾಪಿಸುವುದರಲ್ಲಿ ಖ್ಯಾತಿ ಹೊಂದಿದೆ.   ಇದಕ್ಕೆ ಕಾರಣ ಹುಬ್ಬಳ್ಳಿ ‌ದಾಜೀಬಾನ ಪೇಟೆಯ ಶ್ರೀ ಗಜಾನನ ಉತ್ಸವ ಮಂಡಳಿ ಪ್ರತಿಷ್ಠಾಪಿಸುವ ಹುಬ್ಬಳ್ಳಿ ಕಾ ರಾಜಾ ಗಣಪತಿ. ಇದು ಹುಬ್ಬಳ್ಳಿಯಲ್ಲಿ ದೊಡ್ಡದಾದ ಗಜಮುಖನ ಮೂರ್ತಿಯಾಗಿದೆ. ಜೊತೆಗೆ ಬೇಡಿದವರ ಇಷ್ಟಾರ್ಥಗಳನ್ನು ಈಡೇರಿಸುವ ಸಿದ್ಧಿ ವಿನಾಯಕನಾಗಿ …

Read More »

ಸೆ. 29ರಂದು ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಂದ್‌ಗೆ ಧಾರವಾಡ ಜಿಲ್ಲೆಯಿಂದ ಬೆಂಬಲ

ಧಾರವಾಡ: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದಕ್ಕೆ ರಾಜ್ಯದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಕಳೆದ ಒಂದು ವಾರದಿಂದ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಹೋರಾಟ ಮಾಡುತ್ತಿದೆ. ಸೆ. 29ರಂದು ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಂದ್‌ಗೆ ಧಾರವಾಡ ಜಿಲ್ಲೆಯಿಂದ ಬೆಂಬಲ ವ್ಯಕ್ತವಾಗಿದೆ. ಉತ್ತರ ಕರ್ನಾಟಕ ಭಾಗದ ಮಹದಾಯಿ ಹೋರಾಟಗಾರರು ಹಾಗೂ ಇತರೆ ಸಂಘಟನೆಗಳು ಕರ್ನಾಟಕ ಬಂದ್​ಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಅಂದು ಧಾರವಾಡ ಬಂದ್ ಮಾಡಲು ನಿರ್ಧಾರ ಮಾಡಿದ್ದಾರೆ. ಬೆಳಗ್ಗೆ 6 …

Read More »

ಮುತಾಲಿಕ್ ವಿರುದ್ಧ ದೂರು ದಾಖಲು; ಶ್ರೀರಾಮಸೇನೆ ಯಿಂದ ಪ್ರತಿಭಟನೆ

ಹುಬ್ಬಳ್ಳಿ : ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪಾಲಿಕೆಯ ವಲಯ ಆಯುಕ್ತ ಉಪನಗರ ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದನ್ನು ವಿರೋಧಿಸಿ, ಇಂದು ಶ್ರೀರಾಮ ಸೇನಾ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು, ಹಿಂದೂಪರ ಹೋರಾಟಗಾರರು, ಹಿಂದೂತ್ವಕ್ಕೆ ಸಾಕಷ್ಟು ದುಡಿದವರು ಅಂತವರ ಮೇಲೆ ಇವರು ದೂರು ನೀಡ್ತಾರೆ. ಇದಕ್ಕೆ ರಾಜ್ಯ ಸರ್ಕಾರ ಕುಮ್ಮತ್ತು ನೀಡುತ್ತಿದೆಂದು ಸರ್ಕಾರದ ವಿರುದ್ಧ ಘೋಷಣೆ …

Read More »

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದ ಕಮೀಟಿ ಸದಸ್ಯನಿಗೆ ಧಾರವಾಡದಲ್ಲಿ ಸನ್ಮಾನ

ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿ ಹಾಗೂ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಸಮಿತಿ ಸದಸ್ಯರಿಗೆ ಧಾರವಾಡದಲ್ಲಿ ಮಾಜಿ ಮೇಯರ್ ಹಾಗೂ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಸನ್ಮಾನಿಸಿ ಗೌರವಿಸಿದರು. ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಮಾನಯ್ಯ ಬಡಿಗೇರ ಅವರು ಇಂದು ಧಾರವಾಡಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನ ಮಾಜಿ ಮಹಾಪೌರರಾದ ಈರೇಶ ಅಂಚಟಗೇರಿ ರವರು ಭೇಟಿ ನೀಡಿ ಧಾರವಾಡ ಪೇಢಾ ನೀಡಿ ಆತ್ಮೀವಾಗಿ ಸನ್ಮಾನಿಸಿ, ಅಭಿನಂದಿಸಿ ಶುಭ ಕೋರಿದರು ಕೋಟ್ಯಾಂತರ ಹಿಂದುಗಳ …

Read More »

ಪ್ರಮೋದ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ : ಗಡಿಪಾರಿಗೆ ಆಗ್ರಹಿಸಿ ಪೊಲೀಸ್ ಕಮೀಷನರ್ ಗೆ ದೂರು

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಪ್ರಮೋದ್ ಮುತಾಲಿಕ್​​ ಮೈದಾನಕ್ಕೆ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಮಾಡಲಾಗಿದ್ದು, ಗಣೇಶೋತ್ಸವ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ …

Read More »