Breaking News

ಹುಬ್ಬಳ್ಳಿ

ಶಕ್ತಿ ಯೋಜನೆ: NWKRTC ಬಸ್​ಗಳಲ್ಲಿ ಇದುವರೆಗೂ 13 ಕೋಟಿಗೂ ಅಧಿಕ ಮಹಿಳೆಯರ ಪ್ರಯಾಣ

ಹುಬ್ಬಳ್ಳಿ: ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಮೂರು ತಿಂಗಳು ಪೂರೈಸಿದೆ. ಇದುವರೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್​ಗಳಲ್ಲಿ 13.20 ಕೋಟಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದುಕೊಂಡು ಉಚಿತ ಸಂಚಾರ ಮಾಡಿದ್ದು, ಇದರ ಟಿಕೆಟ್ ಪ್ರಯಾಣದ ಮೊತ್ತ 332.77 ಕೋಟಿ ರೂ.ಗಳಾಗಿದೆ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದಿಂದ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್​​ ನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ …

Read More »

ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ: ಕೋಡಿಮಠ ಸ್ವಾಮೀಜಿ

ಹುಬ್ಬಳ್ಳಿ: ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ರಾಜಕೀಯದಲ್ಲಿ ಏನಾಗುತ್ತದೆ ಎಂದು ಯುಗಾದಿ ನಂತರ ಕಾದು‌ನೋಡಿ ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಬರಗಾಲದ ಛಾಯೆ ಬಗ್ಗೆ ಮಾತನಾಡಿ, ಮನುಷ್ಯ ಮಾಡಿದ ತಪ್ಪುಗಳಿಗೆ ದೇವರು ಕ್ಷಮಿಸುತ್ತಾನೆ. ಆದರೆ, ಮನುಷ್ಯ ಮಾಡಿದ ಪಾಪ‌ಕರ್ಮಗಳು ಮನುಷ್ಯನನ್ನ‌ ಕ್ಷಮಿಸುವುದಿಲ್ಲ. ಮನುಷ್ಯನ‌ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ, ಮನುಷ್ಯನ‌ ಕರ್ಮ ಭಾದೆಗಳು ಹೆಚ್ಚಾದಾಗ …

Read More »

23 ಪಾರಿವಾಳಗಳನ್ನು ಕತ್ತು ಕೊಯ್ದು ಕೊಂದ ಕಿಡಿಗೇಡಿಗಳು

ಹುಬ್ಬಳ್ಳಿ : 23 ಪಾರಿವಾಳಗಳನ್ನು ಕತ್ತು ಕೊಯ್ದು ಕೊಂದಿರುವ ಘಟನೆ ಹುಬ್ಬಳ್ಳಿಯ ಗೋಕುಲ್ ರೋಡ್ ಯಾವಗಲ್ ಫ್ಲಾಟ್​ನಲ್ಲಿ ಶನಿವಾರ ನಡೆದಿದೆ. ರಾಹುಲ್ ದಾಂಡೇಲಿ ಎಂಬವರು ಸಾಕಿದ್ದ 23 ಪಾರಿವಾಳಗಳನ್ನು ಹಾಗೂ ಪಾರಿವಾಳದ ಮೊಟ್ಟೆಯನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೇ ಪಾರಿವಾಳಗಳ ಗೂಡನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ. ಈ ಕುರಿತು ಪಾರಿವಾಳಗಳ ಮಾಲೀಕ ರಾಹುಲ್ ದಾಂಡೇಲಿ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರುದಾರ ರಾಹುಲ್ ದಾಂಡೇಲಿ ಸಹೋದರ ನಿಖಿಲ್​ ದಾಂಡೇಲಿ ಈ …

Read More »

ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣವಾದ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈತ್ರಿ ಅನಿವಾರ್ಯ ಎಂದು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ಮೈತ್ರಿ ವಿಚಾರವಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. …

Read More »

ಧಾರವಾಡದ ಕೃಷಿ ವಿವಿ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನಕ್ಕೆ ಸಾವಿರಾರು ಜನರು ಆಗಮಿಸಿ ಬಗೆಬಗೆಯ ಹೂವುಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ

ಧಾರವಾಡ: ಉತ್ತರ ಕರ್ನಾಟಕ ಭಾಗದ ರೈತರ ಜಾತ್ರೆ ಎಂದು ಕರೆಸಿಕೊಳ್ಳುವ ಕೃಷಿಮೇಳದ ಎರಡನೇ ದಿನವಾದ ಇಂದು ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ ಪ್ರದರ್ಶನವನ್ನು ಸಾರ್ವಜನಿಕರ ಗಮನ ಸೆಳೆಯಿತು. ವಿವಿಧ ಬಗೆಯ ಹೂವುಗಳನ್ನು ಒಂದೇ ಕಡೆ ಕಣ್ತುಂಬಿಕೊಂಡ ಜನರು ಸಂತಸಪಟ್ಟರು. ಧಾರವಾಡ ಕೃಷಿ ವಿಶ್ವವಿದ್ಯಾಲಯ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಸಾವಿರಾರು ಜನರು ಆಗಮಿಸಿ ತಮ್ಮಗಿಷ್ಟವಾದ ಹೂವುಗಳ ಕಲಾಕೃತಿಗಳ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡರು. ನಾಲ್ಕು ದಿನಗಳ ಕಾಲ ಕೃಷಿ …

Read More »

JDSನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವ: ಸಿದ್ದರಾಮಯ್ಯ

ಹುಬ್ಬಳ್ಳಿ: ಜೆಡಿಎಸ್​ನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವದ ಸಂಗತಿ. ಮಾಜಿ ಪ್ರಧಾನಿ ದೇವೇಗೌಡ ಅವರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌ ಎಂದಿದ್ದರು. ಆದರೆ ಇದೀಗ ಬಿಜೆಪಿಯವರ ಜೊತೆ ಸೇರಿ‌ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಯಾದರೂ ಜೆಡಿಎಸ್​ನವರು ಸೇರಿಕೊಳ್ಳುತ್ತಾರೆ ಎಂಬುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಜೆಡಿಎಸ್​ನ ಬಿಜೆಪಿಯ …

Read More »

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ.. ಹುಬ್ಬಳ್ಳಿಯಲ್ಲಿ ಆರೋಪಿ ಬಂಧನ

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.   ಈತ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು ಜಾಯ್ನಿಂಗ್ ಲೆಟರ್ ತೋರಿಸಿ ನಂಬಿಕೆ ಬರುವಂತೆ ಮಾಡಿದ್ದನು. ರೈಲ್ವೆ ಇಲಾಖೆಯಲ್ಲಿ ನೌಕರಿ …

Read More »

ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ವಾಚ್ ವಿಚಾರವಾಗಿ ಸ್ನೇಹಿತರ ನಡುವೆ ಜಗಳ.. ಕೊಲೆಯಲ್ಲಿ ಅಂತ್ಯ

ಹುಬ್ಬಳ್ಳಿ: ಸ್ಮಾರ್ಟ್ ವಾಚ್ ವಿಚಾರವಾಗಿ ಸ್ನೇಹಿತರಿಬ್ಬರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ನಗರದ ಬೆಂಗೇರಿಯ ವೆಂಕಟೇಶ ಕಾಲೋನಿಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಸಿದ್ರಾಮನಗರ ನಿವಾಸಿ ಅಸ್ಲಾಂ ಮಕಾಂದಾರ್ (31) ಕೊಲೆಯಾದ ವ್ಯಕ್ತಿ. ಗಾಯತ್ರಿ ನಗರದ ಮಂಜುನಾಥ ನಾಗರಾಜ ಜೀನಹಳ್ಳಿ ಕೊಲೆ ಆರೋಪಿ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಮೃತ ಅಸ್ಲಾಂ ಮಕಾಂದಾರ್ ಹಾಗೂ ಅರೋಪಿ ಮಂಜುನಾಥ ಇಬ್ಬರು ಸ್ನೇಹಿತರಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಮಂಜುನಾಥ್ …

Read More »

ಒಂದು ದೇಶ ಒಂದು ಚುನಾವಣೆ ಅದು ಸಾಧ್ಯವಿಲ್ಲ

ಹುಬ್ಬಳ್ಳಿ: ಒಂದು ದೇಶ ಒಂದು ಚುನಾವಣೆ ನಡೆದರೇ ಒಳ್ಳೆಯದು. ಆದರೆ, ಭಾರತ ವಿಭಿನ್ನ ಸಂಸ್ಕೃತಿಯ ದೇಶ. ಹೀಗಾಗಿ ಇದು ಇಂಪ್ರ್ಯಾಕ್ಟಿಕಲ್ ಆಗಿದೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮ್ಮೆಯೇ ಚುನಾವಣೆ ಆಗಬೇಕೆಂದರೇ ಸದ್ಯದ ರಾಜ್ಯ ಸರ್ಕಾರವನ್ನು ವಿಸರ್ಜಿಸಿಸಬೇಕಾ. ಹಾಗಾಗಿ ರಾಷ್ಟ್ರದಲ್ಲಿ ಒಂದು ದೇಶ ಒಂದು ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದರು. ಇಂಡಿಯಾ ಭಾರತ ನಾಮಕರಣ ವಿಚಾರವಾಗಿ ಮಾತನಾಡಿ, ಭಾರತ …

Read More »

ದೇವೇಗೌಡರು ಹಳ್ಳಿಯಲ್ಲಿ ಹುಟ್ಟಿ ಪ್ರಧಾನಿ ಆದರು: ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ : ಹೆಚ್ ವಿಶ್ವನಾಥ

ಹುಬ್ಬಳ್ಳಿ : ರಾಜಕಾರಣದಲ್ಲಿ ಯಾರು ಕನಸು ಕಂಡಿರೋದಿಲ್ಲ. ಅದರಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ ಅವರು ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋಗಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.   ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಯಾಕೆ ರಾಷ್ಟ್ರದ ರಾಜಕಾರಣಕ್ಕೆ ಹೋಗಬಾರದು. ಈ ಹಿಂದೆ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ಆಗುವ ಯಾವುದೇ ಕನಸು ಕಂಡಿರಲಿಲ್ಲ. ಅದರಂತೆ ಸಿದ್ದರಾಮಯ್ಯ ಅವರು …

Read More »