ಹುಬ್ಬಳ್ಳಿ : ನರ್ಸ್ಗಳನ್ನು ಕುರಿತು ಕನ್ನಡ ಚಿತ್ರವೊಂದರ ಹಾಡಿಗೆ ರೀಲ್ಸ್ ಮಾಡಿ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಕಿಮ್ಸ್ ಆಸ್ಪತ್ರೆಯ ನರ್ಸ್ಗಳಿಗೆ ಅಪಮಾನ ಮಾಡಲಾಗಿದೆ. ಈ 11 ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೆ ನರ್ಸ್ ಅಸೋಸಿಯೇಷನ್ ಅಧ್ಯಕ್ಷೆ ಸುನೀತಾ ನಾಯ್ಕ ಸೋಮವಾರ ದೂರು ಸಲ್ಲಿಸಿದ್ದರು. ಹುಬ್ಬಳ್ಳಿ ಕಿಮ್ಸ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ನರ್ಸ್ಗಳನ್ನು ಗುರಿಯಾಗಿಟ್ಟುಕೊಂಡು ಯಾವುದೇ ಅನುಮತಿ ಪಡೆಯದೆ …
Read More »ರಾಷ್ಟ್ರ ಧ್ವಜಗಳಿಗೆ ಭಾರೀ ಬೇಡಿಕೆ: ಸಿದ್ಧವಾಗುತ್ತಿವೆ ಸಾವಿರಾರು ತ್ರಿವರ್ಣ ಧ್ವಜಗಳು
ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆ ಎಂದರೆ ಅದು ಹುಬ್ಬಳ್ಳಿಯ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ. ಕೋವಿಡ್ ನಂತರ ಮತ್ತೆ ಇಲ್ಲಿನ ರಾಷ್ಟ್ರಧ್ವಜಗಳಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸ್ಥೆಯು ಈ ವರ್ಷ ಮೂರು ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯನ್ನು ಹೊಂದಿದೆ. ದೇಶದ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಅಧಿಕೃತವಾಗಿ ರಾಷ್ಟ್ರಧ್ವಜಗಳನ್ನು ಸರಬರಾಜು ಮಾಡುವ ಹುಬ್ಬಳ್ಳಿಯ …
Read More »ಸೋರುತಿಹುದು ಹುಬ್ಬಳ್ಳಿ ಕೇಂದ್ರಿಯ ಬಸ್ ನಿಲ್ದಾಣ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ನಿತ್ಯ ಸುರಿಯುತ್ತಿರುವ ಮಳೆ ಅಬ್ಬರಕ್ಕೆ ನಗರದ ಬಹುತೇಕ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಸೋರುತ್ತಿವೆ. ಹುಬ್ಬಳ್ಳಿಯ ಕೇಂದ್ರಿಯ ಬಸ್ ನಿಲ್ದಾಣ ಕೂಡ ಇದರಿಂದ ಹೊರತಾಗಿಲ್ಲ. ಹುಬ್ಬಳ್ಳಿಯಿಂದ ಬೆಂಗಳೂರು, ವಿಜಯಪುರ,ಬಳ್ಳಾರಿ, ಚೆನೈ, ಹೈದರಬಾದ್,ಮುಂಬೈ, ಪುಣೆ, ಶಿರಡಿ ಸಾಂಗಲಿ ಮೀರಜ್ ಸೇರಿ ಹಲವಾರು ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್ ನಿಲ್ದಾಣದ ಕಟ್ಟಡ ಚಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ …
Read More »ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಶಾಲೆಯಿಂದ ಮನೆಗೆ ವಾಪಸ್ ತೆರಳಲು ಮಕ್ಕಳು ಪರದಾಟ
ಧಾರವಾಡ: ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕಳೆದ ಮೂರು ದಿನದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಜಿಲ್ಲೆಯ ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸೇತುವೆ ಜಲಾವೃತಗೊಂಡಿದೆ. ಮನೆಗಳಿಗೆ ವಾಪಸ್ ಆಗಲು ಶಾಲಾ ಮಕ್ಕಳು ಪರದಾಟ ನಡೆಸಬೇಕಾಯಿತು. ಟ್ರ್ಯಾಕ್ಟರ್ ಮತ್ತು ಜೆಸಿಬಿ ಮೂಲಕ ಮಕ್ಕಳು ಹಳ್ಳ ದಾಟಿದ್ದಾರೆ. ಕಂಬಾಗರಣವಿ ಗ್ರಾಮದ ಹೊರವಲಯದಲ್ಲಿರುವ ಹಳ್ಳದ ಸೇತುವೆ ನಿರಂತರ ಮಳೆಯಿಂದ ಜಲಾವೃತಗೊಂಡ ಹಿನ್ನೆಲೆಯಲ್ಲಿ ಸೇತುವೆ ಒಂದು ಬದಿಗೆ ಬಸ್ ಮಕ್ಕಳನ್ನು ಬಿಟ್ಟು ಹೋಗಿದೆ. ಹೀಗಾಗಿ ಮಕ್ಕಳನ್ನು …
Read More »ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಆಹಾರ ಪದಾರ್ಥ ವಿತರಣೆ
ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ಜೊತೆಗೆ ಸುರಕ್ಷಿತ ಪ್ರಯಾಣದ ಸೇವೆಯನ್ನು ಒದಗಿಸುತ್ತಿರುವ ನೈಋತ್ಯ ರೈಲ್ವೆ ಇಲಾಖೆ ಈಗ ಮತ್ತೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಪ್ರಯಾಣಿಕರ ಆರ್ಥಿಕ ಹೊರೆಯನ್ನು ತಗ್ಗಿಸುವ ಮೂಲಕ ಕಡಿಮೆ ದರದಲ್ಲಿಯೇ ಗುಣಮಟ್ಟದ ಆಹಾರ ನೀಡುವ ಕಾರ್ಯವನ್ನು ಕೈಗೆತ್ತಿಕೊಂಡಿದೆ. ವಿಶ್ವದ ಅತಿದೊಡ್ಡ ರೈಲ್ವೆ ಫ್ಲಾಟ್ ಫಾರಂ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಜೊತೆಗೆ ಸಾಕಷ್ಟು ಜನಪರ ಕಾರ್ಯವನ್ನು ಮಾಡಿರುವ ನೈಋತ್ಯ ರೈಲ್ವೆ ವಲಯವು, ಈಗ ಪ್ರಯಾಣಿಕರಿಗೆ ಕಡಿಮೆ ದರದಲ್ಲಿಯೇ ಗುಣಮಟ್ಟದ …
Read More »ಜಿಂಕೆಗಳ ಕಾಟದಿಂದ ಹಗಲು ರಾತ್ರಿ ಎನ್ನದೆ ರೈತರು ಜಮೀನು ಕಾಯುತ್ತಿದ್ದಾರೆ.
ಹುಬ್ಬಳ್ಳಿ : ಕಳೆದ ವರ್ಷ ಅತಿವೃಷ್ಟಿಯಾಗಿ ರೈತರಿಗೆ ಬರೆ ಎಳೆದರೆ. ಈ ವರ್ಷ ಮುಂಗಾರು ಸರಿಯಾಗಿ ಆಗದೆ ರೈತರು ಸಂಕಷ್ಟದಲ್ಲಿ ಇರುವ ಬೆನ್ನಲ್ಲೇ ಅಷ್ಟೋ ಇಷ್ಟೋ ಬೆಳೆದ ಬೆಳೆಗೆ ಕಾಡು ಪ್ರಾಣಿಗಳ ಕಂಟಕ ಎದುರಾಗಿದೆ. ಇದೀಗ ಮುಂಗಾರು ಬೆಳೆ ಉಳಿಸಿಕೊಳ್ಳಲು ಧಾರವಾಡ ಜಿಲ್ಲೆಯ ಅನ್ನದಾತರು ಬಿಯರ್ ಬಾಟಲಿ ಮೊರೆ ಹೋಗಿದ್ದಾರೆ. ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ, ಮುಳ್ಳೊಳ್ಳಿ, ಯರಗುಪ್ಪಿ, ಚಿಕ್ಕನೇರ್ತಿ, ಯರಿನಾರಾಯಣಪುರ ಸೇರಿದಂತೆ ಬಹುತೇಕ ಹಳ್ಳಿಗಳ ರೈತರ ಜಮೀನುಗಳಲ್ಲಿ ಜಿಂಕೆಗಳ ಹಾವಳಿ …
Read More »ಏಕರೂಪ ನಾಗರಿಕ ಸಂಹಿತೆ ಜಾರಿ ಶ್ರೀರಾಮಸೇನೆ ಸಂಪೂರ್ಣ ಬೆಂಬಲ;:ಮುತಾಲಿಕ್
ಧಾರವಾಡ : ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು. ಧಾರವಾಡ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾನ ನಾಗರಿಕ ಸಂಹಿತೆಗೆ ನಾವು ಬೆಂಬಲ ಸೂಚಿಸುತ್ತೇವೆ. ಇದು ಜಾರಿಗೆ ಬರಬೇಕು. ಇದಕ್ಕಾಗಿ ಜುಲೈ 18 ರಿಂದ ಸಹಿ ಅಭಿಯಾನ ಆರಂಭಿಸುತ್ತೇವೆ. ಅವತ್ತು ಇಡೀ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಭಿಯಾನ ಆರಂಭ …
Read More »ಮಳೆ ಪ್ರಮಾಣ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಈಗಾಗಲೇ ಸಾಕಷ್ಟು ಸಿದ್ಧತೆ
ಧಾರವಾಡ : ಮುಂಗಾರು ತಡವಾಗಿ ಆರಂಭವಾದರೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಮಾಡಿಕೊಂಡಿದ್ದು, ಪ್ರವಾಹದ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧವಾಗಿದೆ. ಹೌದು..ಈಗಾಗಲೇ ಅವಳಿನಗರದಲ್ಲಿ ನಡೆಯುವ ಅಗ್ನಿ ಅವಘಡ ಹಾಗೂ ನೀರಿನಲ್ಲಿ ಬಿದ್ದವರ ರಕ್ಷಣೆ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿರುವ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಈಗ ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ಎದುರಿಸಲು ಸಿದ್ಧತೆ ನಡೆಸಿದ್ದು, ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಕರ್ತವ್ಯ ನಿರ್ವಹಿಸಲು ಸನ್ನದ್ಧವಾಗುತ್ತಿದೆ.
Read More »ಜೈನ ಮುನಿ ಹತ್ಯೆ ಕೇಸ್: ಪೊಲೀಸ್ ಇಲಾಖೆ ಸಮರ್ಥ, ಸಿಬಿಐ ತನಿಖೆ ಅಗತ್ಯವಿಲ್ಲ
ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯೆ ತನಿಖೆಯ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪೊಲೀಸರು ಏನು ಕಾನೂನು ಕ್ರಮ ಕೈಗೊಳ್ಳಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ನಡೆದಾಗ ಯಾರೂ ಕೂಡ ತಾರತಮ್ಯ ಮಾಡಲು ಹೋಗುವುದಿಲ್ಲ. ಪೊಲೀಸರು ಆರೋಪಿಗಳನ್ನು ಬಂಧಿಸುವ ಕೆಲಸವನ್ನು …
Read More »ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ
ಹುಬ್ಬಳ್ಳಿ: “ಜೈನ ಮುನಿ ಹತ್ಯೆಯನ್ನು ಎಲ್ಲ ರಾಜಕೀಯ ಪಕ್ಷದವರು ಖಂಡಿಸಿದ್ದಾರೆ. ಇದಕ್ಕೆ ಧನ್ಯವಾದ. ಇಂತಹ ಕೃತ್ಯ ಆಗಲೇಬಾರದು. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಭೇಟಿ ಬಳಿಕ ನಾನು ಉಪವಾಸ ಸತ್ಯಾಗ್ರಹ ಹಿಂಪಡೆಯುತ್ತೇನೆ” ಎಂದು ಗುಣಧರನಂದಿ ಮುನಿ ಮಹಾರಾಜರು ಹೇಳಿದರು. ಇದೇ ವೇಳೆ ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ ಎಂದರು. ವರೂರಿಗೆ ಇಂದು ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈನ …
Read More »