ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ನಮ್ಮದು ಪ್ರಜಾಪ್ರಭುತ್ವ ದೇಶ, ಎಲ್ಲರೂ ಜನಪರ ಕೆಲಸ ಮಾಡಬೇಕು. ಜೋಶಿ ಪುತ್ರಿಯ ಮದುವೆಗೆ …
Read More »ಬೆಲೆ ಏರಿಕೆ ಕುರಿತು ಹಣಕಾಸು ಸಚಿವರ ಜೊತೆ ಚರ್ಚೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ‘ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತಂತೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾದ ಕಾರಣ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಸೆ.5 ರಂದು ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಬರಲಿದ್ದು, ಅವರೊಂದಿಗೆ ಚರ್ಚಿಸುತ್ತೇನೆ’ ಎಂದರು. ‘ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. …
Read More »ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪುತ್ರಿಯ ಅದ್ಧೂರಿ ವಿವಾಹ: ಗಣ್ಯರ ದಂಡು
ಹುಬ್ಬಳ್ಳಿ: ಇಲ್ಲಿನ ಡೆನಿಸನ್ಸ್ ಹೋಟೆಲ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನಡೆದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪುತ್ರಿ ಅರ್ಪಿತಾ ಮದುವೆ ಸಮಾರಂಭದಲ್ಲಿ ರಾಷ್ಟ್ರ, ರಾಜ್ಯ ನಾಯಕರ ದಂಡೇ ಭಾಗವಹಿಸಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್, ಕೇಂದ್ರ ಸಚಿವರಾದ ಡಿ.ರಾವ್‌ಸಾಹೇಬ್ ದಾದಾರಾವ್, ಅರ್ಜುನ್ ರಾಮಪಾಲ್ ಮೇಘ್ವಾಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್, ಹಾಲಪ್ಪ ಆಚಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತಿತರರು ಪಾಲ್ಗೊಂಡಿದ್ದರು. ಗುರವಾರ …
Read More »ಬೈಕ್-ಗೂಡ್ಸ್ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ದುರ್ಮರಣ
ಧಾರವಾಡ: ಬೈಕ್ ಮತ್ತು ಗೂಡ್ಸ್ ವಾಹನದ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
Read More »ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ಕಾರ್ಯಕ್ರಮ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದು, ಅನೇಕ ಗಣ್ಯರು ಭಾಗಿಯಾಗಿ ನವ ವಧು-ವರರನ್ನು ಹಾರೈಸಿದರು. ಜೋಶಿ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ ಮದುವೆ ಸಭಾರಂಭ ನಡೆಯುತ್ತಿದ್ದು, ಗೋಧೂಳಿ ಮುಹೂರ್ತದಲ್ಲಿ ನವಜೋಡಿ ಹಸೆಮಣೆ ಏರಿದೆ. ಜೋಶಿ ಪುತ್ರಿಯ ಮದುವೆ ಸಮಾರಂಭದಲ್ಲಿ ರಾಜ್ಯಪಾಲ ಥಾವರಚೆಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ಮೇಘವಾಲ್ ಸೇರಿದಂತೆ ರಾಜ್ಯದ ಬಿಜೆಪಿ ನಾಯಕರು ಭಾಗಿಯಾಗಿ ಶುಭ ಹಾರೈಸಿದ್ದಾರೆ. …
Read More »ಕಾಂಗ್ರೆಸ್ ಮಾಡಿದ ಸಾರ್ವಜನಿಕ ಆಸ್ತಿಗಳನ್ನು BJP ಖಾಸಗಿ ಪಾಲಿಗೆ ನೀಡುತ್ತಿದೆ:ಎಚ್.ಕೆ.ಪಾಟೀಲ
ಹುಬ್ಬಳ್ಳಿ: ಕಾಂಗ್ರೆಸ್ ಏನು ಮಾಡಿದೆ ಎಂದು ಹೋದಲ್ಲಿ ಬಂದಲ್ಲಿ ಆರೋಪಿಸುವ ಬಿಜೆಪಿಯವರು, ದೇಶದ ಹಿತ ದೃಷ್ಟಿಯಿಂದ ಕಾಂಗ್ರೆಸ್ ಅಧಿಕಾರದಲ್ಲಿ ಕೈಗೊಂಡ ಸಾರ್ವಜನಿಕ ಆಸ್ತಿ-ಉದ್ಯಮಗಳನ್ನು ಖಾಸಗಿಯವರ ಪಾಲಾಗಿಸಲು ಮುಂದಾಗಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ ಆರೋಪಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹೆದ್ದಾರಿ, ರೈಲ್ವೆ, ಹಡಗು, ವಿಮಾನ ನಿಲ್ದಾಣ, ವೇರ್ ಹೌಸ್, ಗಣಿಗಳು, ನೈಸರ್ಗಿಕ ಅನಿಲ ಹೀಗೆ ಎಲ್ಲವನ್ನು ಖಾಸಗಿಯವರ ತೆಕ್ಕೆಗೆ ನೀಡಲು …
Read More »ಪಕ್ಷದಿಂದ 34 ಮಂದಿಯನ್ನು ಉಚ್ಛಾಟಿಸಿದ ಕಾಂಗ್ರೆಸ್
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಹೋದ ಬಂಡಾಯ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಿದೆ. ಪಾಲಿಕೆ ಚುನಾವಣೆಯಲ್ಲಿ ಪಕ್ಷದ ನಾಯಕರ ಮನವೊಲಿಕೆಗೂ ಮಣಿಯದೇ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 34 ಜನರನ್ನು ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿದ್ದು, ನಗರದ ಮೊದಲ ಪ್ರಜೆಯಾಗಲು ಮೂರು ಪಕ್ಷಗಳು ತೀವ್ರ ಜಟಾಪಟಿ ನಡೆಸುತ್ತಿವೆ.
Read More »ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಒತ್ತಾಯ; ಶೆಟ್ಟರ್ ಮನೆಮುಂದೆ ಶ್ರೀರಾಮ ಸೇನೆ ಪ್ರತಿಭಟನೆ
ಹುಬ್ಬಳ್ಳಿ: ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಒತ್ತಾಯಿಸಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆ ಮುಂದೆ ಶ್ರೀರಾಮ ಸೇನೆ ಪ್ರತಿಭಟನೆ ನಡೆಸಿದೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಇಲ್ಲದ ಕೋವಿಡ್ ನಿಯಮ ಗಣೇಶನಿಗೆ ಯಾಕೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯ ರ್ಯಾಲಿಗಳಲ್ಲಿ ಕೋವಿಡ್ ನಿಯಮಗಳೇ ಇಲ್ಲ. ಆದ್ರೆ ಗಣೇಶನಿಗೆ ಮಾತ್ರ ನಿಯಮ ಪಾಲನೆ ಇದೆ. ಇಂದು ಸಿಎಂ ಜೊತೆಗಿನ …
Read More »ಹುಬ್ಬಳ್ಳಿ- ಧಾರವಾಡ: 25 ಭರವಸೆಗಳ ಬಿಜೆಪಿ ಪ್ರಣಾಳಿಕೆ
ಹುಬ್ಬಳ್ಳಿ: ‘ಮನೆ ಬಾಗಿಲಿಗೆ ಮಹಾನಗರ ಪಾಲಿಕೆ’ ಸಂಕಲ್ಪದೊಂದಿಗೆ 25 ಭರವಸೆಯುಳ್ಳ ಚುನಾವಣೆ ಪ್ರಣಾಳಿಕೆಯನ್ನು ಬಿಜೆಪಿ ಮುಖಂಡರು ಭಾನುವಾರ ನಗರದಲ್ಲಿ ಬಿಡುಗಡೆ ಮಾಡಿದರು. ನಿರಂತರ ಕುಡಿಯುವ ನೀರು ಯೋಜನೆ, ನೀರಿನ ಕರದ ಮೇಲಿನ ದಂಡ ಮನ್ನಾ, ಕಸಮುಕ್ತ ನಗರ, ಮೇಲ್ಸೇತುವೆ ನಿರ್ಮಾಣ, ಸ್ಮಾರ್ಟ್ ಸಿಟಿ ಯೋಜನೆ ಸಮರ್ಪಕ ಅನುಷ್ಠಾನ, ಜನಸ್ನೇಹಿ ಆಡಳಿತಕ್ಕೆ ಎಚ್‌ಡಿಎಂಸಿ-ಇ-ಗವರ್ನೆನ್ಸ್ ಆಯಪ್ ವ್ಯವಸ್ಥೆ ಪ್ರಣಾಳಿಕೆಯಲ್ಲಿದ್ದ ಪ್ರಮುಖ ಭರವಸೆಗಳು. ಪ್ರಣಾಳಿಕೆ ಬಿಡುಗಡೆ ನಂತರ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, …
Read More »ಹುಬ್ಬಳ್ಳಿ ಪಾಲಿಕೆ ಚುನಾವಣಾ ಪ್ರಚಾರದ ವೇಳೆ ಸಚಿವ ಶ್ರೀರಾಮುಲುರವರಿಂದ ಕರೋನಾ ನಿಯಮ ಉಲ್ಲಂಘನೆ
ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಪಾಲಿಕೆ ಚುನಾವಣಾ ಪ್ರಚಾರ ರಂಗೇರಿದೆ. ರಾಜಕಾರಣಿಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.ಆಡಳಿತ ಪಕ್ಷದ ಸಚಿವ ಶ್ರೀರಾಮುಲು ತಮ್ಮ ಚುನಾವಣಾ ಪ್ರಚಾರದ ವೇಳೆ ಕರೋನ ನಿಯಮಗಳನ್ನು ಉಲ್ಲಂಘಿಸಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆದ ಪಾಲಿಕೆ ಚುನಾವಣಾ ಪ್ರಚಾರದ ವೇಳೆ ತಮ್ಮ ಅಭ್ಯರ್ಥಿಯ ಪರ ಬೃಹತ್ ಪ್ರಚಾರದ ಸಭೆ ವೇಳೆ ಕಿಕ್ಕಿರಿದು ಜನ ಸೇರಿದ್ದರು. ಕಾರ್ಯಕರ್ತರು ನಿಯಮ ಉಲ್ಲಂಘನೆ ಮಾಡಿ ಶ್ರೀರಾಮುಲುಗೆ ಬೃಹತ್ ಹೂವಿನ ಹಾರ ಹಾಕಿದ್ದಾರೆ.ನಿಯಮಗಳು ಕೇವಲ ಸಾಮಾನ್ಯ ಜನರಿಗಷ್ಟೇನಾ …
Read More »