ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನಿಗೆ ತಲೆ ಬಾಗುತ್ತಾರೆ ಎನ್ನುವ ವಿಶ್ವಾಸವಿದೆ. ರಾಜೀನಾಮೆ ನೀಡುವುದಿಲ್ಲ ಎಂದು ಅವರು ಹೇಳಿಲ್ಲ. ಬೇರೆಯವರು ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ರೈಲ್ವೆ ಖಾತೆ ರಾಜ್ಯ ಸಚಿವರಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಮ್ಮ ಜೀವನ ತೆರೆದ ಪುಸ್ತಕ ಎಂದು ಹೇಳಿಕೊಳ್ಳುತ್ತಾರೆ. ಆ ಪುಸ್ತಕದಲ್ಲಿ ಕೆಲವು ತಪ್ಪುಗಳಾಗಿವೆ …
Read More »ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು
ಹುಬ್ಬಳ್ಳಿ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ಮಹಜರಿಗೆ ಕರೆದೊಯ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದವನ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದ ಘಟನೆ ಸೋಮವಾರ (ಸೆ.23) ನಗರದ ಹೊರವಲಯದ ತಾರಿಹಾಳ ಸೇತುವೆ ಬಳಿ ನಡೆದಿದೆ. ಸುಲಿಗೆಕೋರ ವಿನೋದ ಎಂಬಾತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳ ಮಹಜರಿಗೆ ಕರೆದೊಯ್ದಾಗ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆಗ ಪಿಎಸ್ ಐ ಜಯಶ್ರೀ ಚಲವಾದಿ ಕಾಲಿಗೆ …
Read More »ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
ಹುಬ್ಬಳ್ಳಿ: ಬಿಜೆಪಿ ರಾಜಭವನವನ್ನು ಯಾವುದೇ ರೀತಿಯಿಂದ ದುರ್ಬಳಕೆ ಮಾಡಿಕೊಂಡಿಲ್ಲ. ಆದರೆ ಕಾಂಗ್ರೆಸ್ ರಾಜಭವನವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ದೊಡ್ಡ ಇತಿಹಾಸವೇ ಇದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ (Mahesh Tenginakai) ಆರೋಪಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಲು, ಮಾಹಿತಿ ಪಡೆಯಲು ರಾಜ್ಯಪಾಲರು ಮುಂದಾಗಿದ್ದಾರೆ ಇದರಲ್ಲಿತಪ್ಪೇನಿದೆ. ಅಂತಹ ಅಧಿಕಾರ ರಾಜ್ಯಪಾಲರಿಗಿದೆ ಎಂದರು. ಮುಡಾ, ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿಲ್ಲವೆಂದರೆ ಸಿಎಂಗೆ ಭಯ ಯಾಕೆ. ಆರೋಪದ ಹಿನ್ನೆಲೆಯಲ್ಲಿ …
Read More »ಧಾರವಾಡ, ವಿಜಯಪುರದಲ್ಲಿ ರಭಸದ ಮಳೆ
ಹುಬ್ಬಳ್ಳಿ: ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಶನಿವಾರ ಧಾರವಾಡ, ವಿಜಯಪುರ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಸುರಿದಿದೆ. ಧಾರವಾಡ ಜಿಲ್ಲೆ ನವಲಗುಂದ ಪಟ್ಟಣವೂ ಸೇರಿದಂತೆ ತಾಲ್ಲೂಕಿನ ವಿವಿಧಡೆ ಶನಿವಾರ ಸಂಜೆ ನಾಲ್ಕು ತಾಸು ನಿರಂತರ ಮಳೆಯಾಗಿದೆ. ಹಲವೆಡೆ ಮನೆಯೊಳಗೆ ಮಳೆ ನೀರು ನುಗ್ಗಿ ದಿನಸಿ ಹಾಗೂ ಕಾಳು ಕಡಿಗೆ ಹಾನಿಯಾಗಿದೆ. ವಿಜಯಪುರ ನಗರ ಸೇರಿದಂತೆ ಮುದ್ದೇಬಿಹಾಳ, ತಿಕೋಟಾ, ಇಂಡಿ, ಸಿಂದಗಿ, ಬಸವನ ಬಾಗೇವಾಡಿಗಳಲ್ಲಿ ಶುಕ್ರವಾರ ಮತ್ತು ಶನಿವಾರ ಧಾರಾಕಾರ …
Read More »ಸಿಂಗಾರ ಸಿರಿ… ಚೆಂದದ ಹೋರಿ…
ಹುಬ್ಬಳ್ಳಿ: ಮೈತುಂಬಾ ಚೆಂದದ ವಸ್ತ್ರ… ಮುಖದ ಮೇಲೆ ಚಿತ್ತಾರ…ಕೋಡಿನ ಮೇಲೆ ಉದ್ದದ ಕಿರೀಟ… ಸರ್ವಾಲಂಕಾರಭೂಷಿತರಾದ ಈ ‘ಸುಂದರ’ರನ್ನು ನೀವು ನೋಡಲು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿಮೇಳಕ್ಕೆ ಬರಬೇಕು. ನೂರಾರು ಸ್ಪರ್ಧೆಗಳಲ್ಲಿ ಭಾಗವಹಿಸಿ, ಬಹುಮಾನ ಗೆದ್ದ ಹೋರಿಗಳು, ಅವುಗಳಿಗೆ ಮಾಡಿದ ಸಿಂಗಾರ ಈ ಬಾರಿಯ ಮೇಳದ ವಿಶೇಷತೆಗಳಲ್ಲೊಂದು. ರೈತರು, ಸಾರ್ವಜನಿಕರು ಆಸಕ್ತಿಯಿಂದ ಇವುಗಳನ್ನೇ ನೋಡಲು ಮುಗಿಬಿದ್ದಾಗ, ಒಮ್ಮೆ ದುರುಗುಟ್ಟಿ ನೋಡಿ, ಇನ್ನೊಮ್ಮೆ ನಾಚಿ ಹಿಂದೆ ಸರಿಯುವ ಹೋರಿಗಳ ಸೊಬಗು ಕಣ್ಣಿಗೆ …
Read More »ಹುಬ್ಬಳ್ಳಿ, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಿ: ವೀರೇಶ ಧೂಪದಮಠ
ಹುಬ್ಬಳ್ಳಿ: ಸಾರ್ವಜನಿಕರ ಅನುಕೂಲ ಹಾಗೂ ಸುಗಮ ಆಡಳಿತದ ಹಿತದೃಷ್ಟಿಯಿಂದ ಹುಬ್ಬಳ್ಳಿ- ಧಾರವಾಡ ನಗರಗಳಿಗೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವೀರೇಶ ಧೂಪದಮಠ ಮನವಿ ಮಾಡಿದ್ದಾರೆ. ಸದ್ಯ ಎರಡೂ ನಗರಗಳನ್ನು ಒಳಗೊಂಡಂತೆ ಒಂದೇ ಮಹಾನಗರ ಪಾಲಿಕೆ ಇದೆ. ಆದರೆ ಹುಬ್ಬಳ್ಳಿ ಹಾಗೂ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡಿದರೆ ಸಾರ್ವಜನಿಕರು ತಮ್ಮ ಪ್ರದೇಶದ ವ್ಯಾಪ್ತಿಯಲ್ಲಿ ಕಚೇರಿಗೆ ತೆರಳಿ ಕೆಲಸ, ಕಾರ್ಯಗಳನ್ನು ಬೇಗ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದಿದ್ದಾರೆ. ಸರ್ಕಾರದ …
Read More »ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು: ಕಠಿಣ ಶಿಕ್ಷೆಯಾಗಲಿ-ಗುಣಧರನಂದಿ ಮಹಾರಾಜ
ಹುಬ್ಬಳ್ಳಿ: ‘ತಿರುಪತಿ ಸರ್ವಧರ್ಮಗಳ ಶಕ್ತಿ ಕೇಂದ್ರ. ಅಲ್ಲಿ ನೀಡುವ ಪ್ರಸಾದವಾದ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಇರುವ ತುಪ್ಪ ಬಳಕೆ ಮಾಡಿರುವುದು ಸರಿಯಲ್ಲ’ ಎಂದು ಹುಬ್ಬಳ್ಳಿ ತಾಲ್ಲೂಕು ವರೂರಿನ ನವಗ್ರಹತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜರು ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರಾದರೂ ಪ್ರಸಾದದ ಮೂಲಕ ಮಾಂಸಾಹಾರ ಸೇವನೆ ಮಾಡಿಸುವ ದುಷ್ಟ ಪ್ರಯತ್ನ ಮಾಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಮುಂದಿನ …
Read More »ಕೃಷಿ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿಗೆ ಒತ್ತು ನೀಡಬೇಕು: ಪ್ರಲ್ಹಾದ ಜೋಶಿ
ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಬೇಕು. ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಬೀಜ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡಲಾಗಿದೆ ಎಂದರು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ₹3.05 ಲಕ್ಷ …
Read More »ಸಿಡಿಲು ಬಡಿದು ರೈತ ಸಾವು
ಧಾರವಾಡ: ತಾಲ್ಲೂಕಿನ ಹನುಮನಾಳ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ರೈತ ಭೀಮನಗೌಡ ಮಲ್ಲನಗೌಡ ಪಾಟೀಲ (65) ಮೃತಪಟ್ಟಿದ್ಧಾರೆ. ಅವರು ಮಧ್ಯಾಹ್ನ ಹೊಲದಿಂದ ವಾಪಸ್ಸಾಗುವಾಗ ಸಿಡಿಲು ಬಡಿದಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ಧಾರೆ. ಧಾರವಾಡ ಜಿಲ್ಲೆಯ ವಿವಿಧೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ಕುಂದಗೋಳ, ಧಾರವಾಡ, ಉಪ್ಪಿನಬೆಟಗೇರಿ ಹುಬ್ಬಳ್ಳಿ ಭಾಗದಲ್ಲಿಯೂ ಗುಡುಗಿನ ಆರ್ಭಟ ಸಹಿತ ಮಳೆಯಾಗಿದೆ. ಕಾರವಾರ ವರದಿ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗ ಸೇರಿ ಕೆಲವೆಡೆ ಆಗಾಗ ಬಿರುಸಿನ ಮಳೆಯಾಗಿದೆ. ಕರಾವಳಿ ಭಾಗದಲ್ಲಿ …
Read More »ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ‘ಸ್ಥಾಯಿ ಸಮಿತಿ’ಗಳಿಗೆ ಚುನಾವಣೆಗೆ ಮಹೂರ್ತ ಫಿಕ್ಸ್
ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆಯನ್ನು ಆಯೋಜಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗೆ ಸ್ಪರ್ಧಿಸುವವರು ಅಕ್ಟೋಬರ್ 3, 2024 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಪಾಲಿಕೆಯ ಚುನಾವಣೆಯನ್ನು ಅಕ್ಟೋಬರ್ 3, 2024 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಮಹಾನಗರ …
Read More »