ಹುಬ್ಬಳ್ಳಿ: ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ ನಡೆದಿದ್ದು, 7 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅಪಘಾತವು ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಡೆದಿದೆ. ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ತುಂಬಿದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್ನಲ್ಲಿದ್ದ …
Read More »ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಧಾರವಾಡ: ಬಾಡಾ ಗ್ರಾಮದ ಬಳಿ ಶನಿವಾರ ಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ಬರುವಾಗ ನಿಗದಿ ಗ್ರಾಮದ 9 ಜನ ಮದುಮಗನ ಕಡೆಯವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮೃತ ಕುಟುಂಬಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದರು. ಈ ಹಿನ್ನೆಲೆ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿರುವ …
Read More »ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ: 7 ಮಂದಿ ದುರ್ಮರಣ!
ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ. ಧಾರವಾಡತಾಲೂಕಿನ ಬೆನಕಟ್ಟಿ ಗ್ರಾಮದ ಅನನ್ಯಾ(14), ಹರೀಶ್(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20) ಮಹೇಶ್ವರಯ್ಯ(11), ಶಂಭುಲಿಂಗಯ್ಯ(35) ಮೃತಪಟ್ಟವರು. ಕ್ರೂಸರ್ ಚಾಲಕನ ಅಜಾಗರೂಕತೆಯಿಂದಲೇ ಈ …
Read More »ಹುಬ್ಬಳ್ಳಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಕಾರಣ ಒಂದಲ್ಲ ಎರಡಲ್ಲ
ಹುಬ್ಬಳ್ಳಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೆ ಕಾರಣ ಒಂದಲ್ಲ ಎರಡಲ್ಲ ಎಂಬಂತಾಗಿದೆ. ಸಮಸ್ಯೆ ಜೊತೆಗೆ ಗೊಂದಲವೂ ಸೇರಿ ಕೊನೆಗೆ ಈ ವಿದ್ಯಾರ್ಥಿನಿ ಸಾವಿನ ಮೊರೆ ಹೋಗಿದ್ದಳು. ಹುಬ್ಬಳ್ಳಿಯ ಕಾರವಾರ ರಸ್ತೆಯ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಈ ಆತ್ಮಹತ್ಯೆ ನಡೆದಿದೆ. ಹೆಡ್ ಕಾನ್ಸ್ಟೆಬಲ್ ಮಲ್ಲಪ್ಪ ಬದಾಮಿ ಎಂಬುವರ ಪುತ್ರಿ ಕಾವ್ಯಾ ಬದಾಮಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ್ದಳು. ಆದರೆ ಪಿಯುಸಿ ಪ್ರಥಮ ವರ್ಷದ ಪರೀಕ್ಷೆಯಲ್ಲಿ …
Read More »ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ತಾನು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ: ಶಿಸ್ತು ಕ್ರಮಕ್ಕೆ ಸಾರ್ವಜನಿಕರ ಆಗ್ರಹ
ಹುಬ್ಬಳ್ಳಿ: ರೈಲಿನಿಂದ ಇಡ್ಲಿ-ವಡೆ ಮಾರಾಟ ಮಾಡುವ ವ್ಯಾಪಾರಿ ತಾನು ಧರಿಸುವ ಶರ್ಟ್ ನಲ್ಲಿ ಆಹಾರವನ್ನು ಮುಚ್ಚಿದ್ದ ವಿಡಿಯೊ ವೈರಲ್ ಆಗಿದ್ದು ರೈಲುಗಳಲ್ಲಿ ಮಾರಾಟ ಮಾಡಿಕೊಂಡು ಬರುವ ಊಟ ತಿಂಡಿಗಳ ಸ್ವಚ್ಛತೆ ಬಗ್ಗೆ ಮತ್ತೆ ಮತ್ತೆ ಪ್ರಯಾಣಿಕರು, ಸಾರ್ವಜನಿಕರು ಪ್ರಶ್ನೆ ಮಾಡುವಂತೆ ಮಾಡಿದೆ. ರೈಲು ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಪ್ರಯಾಣಿಕರಿಗೆ ಮಾರಾಟ ಮಾಡುವ ಆಹಾರ ಬಗ್ಗೆ ವ್ಯಾಪಾರಿಗಳು ಸ್ವಚ್ಛತೆಗೆ ಗಮನ ಹರಿಸಬೇಕೆಂದು ಮತ್ತು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ …
Read More »ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ
ಧಾರವಾಡ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿಯ ವಿದ್ಯಾಗಿರಿಯಲ್ಲಿ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಹುಬ್ಬಳ್ಳಿ ಮೂಲದ ವಿದ್ಯಾಧರ ಸಾಕರೆ ಎಂಬುವವರ ಕುಟುಂಬ ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಕಾರ್ಯಕ್ರಮಕ್ಕೆಂದು ಬರುತ್ತಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಹತ್ತಿದೆ. ತಕ್ಷಣ ಕಾರಿನಲ್ಲಿದ್ದ ಕುಟುಂಬದ ನಾಲ್ವರು ಕಾರಿನಿಂದ ಕೆಳಗಿಳಿದಿದ್ದಾರೆ. ಕ್ಷಣಮಾತ್ರದಲ್ಲಿ ಬೆಂಕಿ ಕಾರಿಗೆಲ್ಲ ಆವರಿಸಿಕೊಂಡಿದೆ. …
Read More »ಹುಬ್ಬಳ್ಳಿಯ ಲತಾ ಮೋಹನ ಸಂಕೇಶ್ವರ ನಿಧನ
ಹುಬ್ಬಳ್ಳಿ: ಹುಬ್ಬಳ್ಳಿಯ ಮೋಹನ ಪ್ರಿಂಟಿಂಗ್ ಪ್ರೆಸ್ ಮಾಲೀಕರಾದ ಮೋಹನ ಸಂಕೇಶ್ವರ ಅವರ ಧರ್ಮಪತ್ನಿ ಶ್ರೀಮತಿ ಲತಾ ಮೋಹನ ಸಂಕೇಶ್ವರ(59) ಸೋಮವಾರ ನಿಧನರಾದರು. ಲತಾ ಮೋಹನ ಸಂಕೇಶ್ವರ ಅವರು ದೇಶಪಾಂಡೆ ನಗರದ ವಾಸವಿದ್ದರು. ಇವರಿಗೆ ಪತಿ, ಪುತ್ರ ಸಂತೋಷ ಸಂಕೇಶ್ವರ, ಪುತ್ರಿ ಸ್ನೇಹಾ ಗುರುರಾಜ ಕಡಿವಾಳ, ಸೊಸೆ ಶ್ವೇತಾ ಸಂತೋಷ ಸಂಕೇಶ್ವರ ಹಾಗೂ ಅಪಾರ ಬಂಧುಗಳು ಇದ್ದಾರೆ. ಮಂಟೂರ ರಸ್ತೆಯ ಕಲಬುರ್ಗಿ ಮಠದ ರುದ್ರಭೂಮಿಯಲ್ಲಿ ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. …
Read More »ಲವರ್ ಜತೆಗೂಡಿ ತಮ್ಮನನ್ನೇ ಕೊಲೆ ಮಾಡಿ ಶವದ ಮುಂದೆ ಗೋಳೋ ಎಂದು ಅತ್ತ ಹುಬ್ಬಳ್ಳಿ ಹೆಣ್ಣು!
ಹುಬ್ಬಳ್ಳಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನ ಜತೆಗೆ ಸೇರಿ ತಮ್ಮನನ್ನೇ ಅಕ್ಕ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಕಳೆದ ಎರಡೂ ದಿನಗಳ ಹಿಂದೆ ನಡೆದ ಕೊಲೆ ಪ್ರಕರಣ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ಯುವಕ. ಅಕ್ಕ ಮತ್ತು ಪ್ರಿಯಕರ ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ …
Read More »ಸಿಎಂ ಕಾರ್ಯಕ್ರಮಕ್ಕೂ ತಟ್ಟಿತು ಲೋಡ್ ಶೆಡ್ಡಿಂಗ್ ಬಿಸಿ
ಧಾರವಾಡ: ಸಿಎಂ ಹಾಗೂ ಕೇಂದ್ರ ಹಾಗೂ ರಾಜ್ಯ ಸಚಿವರು ಭಾಗವಹಿಸಿದ್ದ ಉಳವಿ ಚನ್ನಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲೂ ವಿದ್ಯುತ್ ವ್ಯತ್ಯಯದ ಬಿಸಿ ಉಂಟಾಗಿದೆ. Advertisements ಧಾರವಾಡದಲ್ಲಿ ಇಂದು ಉಳವಿ ಚನ್ನಬಸವೇಶ್ವರರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಹಾಲಪ್ಪ ಆಚಾರ್ ಭಾಗವಹಿಸಿದ್ದರು. ಮೊದಲು ರೇಲ್ವೆ ಸ್ಟೇಷನ್ ರಸ್ತೆಯಲ್ಲಿ ಇರುವ ಚನ್ನಬಸವೇಶ್ವರ ಪುತ್ಥಳಿ ಅನಾವರಣ ಮಾಡಿದ …
Read More »ಹುಬ್ಬಳ್ಳಿಯಲ್ಲಿ ಏಷ್ಯಾದಲ್ಲಿಯೇ ಅತಿದೊಡ್ಡ ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ ಅನಾವರಣ
ಧಾರವಾಡ : ಮುಗಿಲೆತ್ತರಕ್ಕೆ ತಲೆಯೆತ್ತಿರುವ ಕಟ್ಟಡ. ಒಳಗೆ ಹೋದಂತೆ ನಿಸರ್ಗ ಸೌಂದರ್ಯ ಉಣಬಡಿಸುವ ಪರಿಸರ. ಮುಂದೆ ಹೆಜ್ಜೆ ಹಾಕುತ್ತಿದ್ದಂತೆ ಆಧ್ಯಾತ್ಮಿಕ ಜೀವನಕ್ಕೆ ಅಗತ್ಯವಾದ ಚಿತ್ರಣಗಳು. ಇದೆಲ್ಲದಕ್ಕೂ ಸಾಕ್ಷಿಯಾಗಿರುವುದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಿರ್ಮಾಣ ಮಾಡಿರುವ ಜ್ಞಾನಲೋಕ ಮ್ಯೂಸಿಯಂ/ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ. ಇಷ್ಟು ದಿನ ವಾಣಿಜ್ಯನಗರಿಯಾಗಿ ಬಿಂಬಿತವಾಗಿದ್ದ ಹುಬ್ಬಳ್ಳಿ ಇನ್ಮುಂದೆ ಧಾರ್ಮಿಕ ಹಾಗೂ ಆಧ್ಯಾತ್ಮಿಕ ನಗರವಾಗಿ ಹೊರಹೊಮ್ಮಲಿದೆ. ಇಲ್ಲಿನ ಬೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಈ ಮ್ಯೂಸಿಯಂ ಏಷ್ಯಾದಲ್ಲಿಯೇ ಅತಿದೊಡ್ಡ ಮ್ಯೂಸಿಯಂ …
Read More »