Breaking News

ಹುಬ್ಬಳ್ಳಿ

‘ಕೊರೊನಾ ತಡೆಗೆ ಜನರು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕು”

ಹುಬ್ಬಳ್ಳಿ ಏ 26 : ಕೊರೊನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ಜನರು ಸೋಂಕು ತಡೆಗಟ್ಟಲು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಲಹೆ ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ದವಾಗಿದೆ. ಈಗಾಗಲೇ 1.22 ಲಕ್ಷ ರೆಮ್ ಡಿಸಿವಿಯರ್ ನೀಡಿದ್ದೇವೆ. ಕೇಂದ್ರ ಸರ್ಕಾರ ಹೊಸದಾಗಿ 551 ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಅನುಮತಿ ‌ನೀಡಿದೆ ಎಂದರು. ಲಾಕ್ …

Read More »

ಕೊರೋನಾ ಹೆಸರಲ್ಲಿ ಉಚಿತ ಕೊಡುಗೆಗಳು ದೇಶಕ್ಕೆ ಗಂಡಾಂತರ – ವಿಜಯ ಸಂಕೇಶ್ವರ್

ಹುಬ್ಬಳ್ಳಿ: ಉಚಿತ ಆಹಾರ ವಿತರಣೆಯಂತಹ ಸ್ಕೀಂ ಗಳು ದೇಶದ ಉತ್ಪಾದನಾ ವಲಯದ ಮೇಲೆ ತೀವ್ರ ತರದ ಪರಿಣಾಮ ಬೀರಲಿದೆ ಎಂದು ಮಾಜಿ ಸಂಸದ, ಉದ್ಯಮಿ ವಿಜಯ ಸಂಕೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೋವಿಡ 2 ನೇ ಅಲೆ ಅಬ್ಬರಿಸುತ್ತಿದೆ. ಜನ ಸಾಮಾನ್ಯರು ತೊಂದರೆಗೆ ಈಡಾಗ್ತಿದಾರೆ ಅಂತ ಪ್ರಧಾನಿ ನರೇಂದ್ರ ಮೋದಿ, ಅವರ ನರವಿಗೆ ಮುಂದಾಗಿದಾರೆ. 80 ಕೋಟಿ ಜನರಿಗೆ ಉಚಿತ ರೇಷನ್ ಕೊಡೋದಾಗಿ ಪ್ರಧಾನಿ ಹೇಳಿದಾರೆ. ಇದರಿಂದ …

Read More »

ಹುಬ್ಬಳ್ಳಿ: ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತನೆಯಾಗುತ್ತಿದೆ ರೈಲ್ವೆ ಬೋಗಿಗಳು; ಮಹತ್ವದ ಕಾರ್ಯಕ್ಕೆ ಮುಂದಾದ ರೈಲ್ವೆ ಇಲಾಖೆ

ಹುಬ್ಬಳ್ಳಿ: ದೇಶದಲ್ಲಿ ಕೊರೊನಾ ಎರಡನೇ ಅಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಲ್ಲದೆ ಸೋಂಕಿನ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹರಸಾಹಸ ಪಡುತ್ತಿವೆ. ಇದಕ್ಕೆ ಬೆಂಬಲವಾಗಿ ರೈಲ್ವೆ ಇಲಾಖೆಯೂ ಸಹ ಕೈ ಜೋಡಿಸಿದ್ದು, ರೈಲ್ವೆ ಬೋಗಿಗಳನ್ನು ಇದೀಗ ಮತ್ತೇ ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತಿಸಲಾಗುತ್ತಿದೆ. ಇಡೀ ದೇಶವೇ ಆತಂಕಕ್ಕೆ ತಳ್ಳಿದ ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕೆ ಈಗಾಗಲೇ ಕೇಂದ್ರ ಸರ್ಕಾರ ಅನೇಕ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ದೇಶದೆಲ್ಲೆಡೆ ಯಾವುದೇ ರೀತಿಯಲ್ಲಿ …

Read More »

ರೈಲ್ವೆ ಇಲಾಖೆ ಹುಬ್ಬಳ್ಳಿ ವಿಭಾಗದಿಂದ ಪಾರ್ಸೆಲ್ ಸಾಗಣೆಗೆ ಎನ್.ಎಂ.ಜಿ ರೇಕ್ ಗಳ ಬಳಕೆಗೆ ನಿರ್ಧರಿಸಿದೆ.

HUBLI#NEWS#RAILWAT#

ಹುಬ್ಬಳ್ಳಿ: ರೈಲ್ವೆ ಇಲಾಖೆ ಹುಬ್ಬಳ್ಳಿ ವಿಭಾಗದಿಂದ ಪಾರ್ಸೆಲ್ ಸಾಗಣೆಗೆ ಎನ್.ಎಂ.ಜಿ ರೇಕ್ ಗಳ ಬಳಕೆಗೆ ನಿರ್ಧರಿಸಿದೆ. ಭಾರತೀಯ ರೈಲ್ವೆಯಲ್ಲಿಯೇ ಮೊಟ್ಟ ಮೊದಲ ಬಾರಿಗೆ ಹುಬ್ಬಳ್ಳಿ ವಿಭಾಗವು ಬಳಕೆಯಾಗದ ಸಾಮಾನ್ಯ ದ್ವಿತಿಯ ದರ್ಜೆಯ ಕೋಚ್ ಗಳನ್ನು ಪಾರ್ಸೆಲ್ ಸಾಗಣೆಗೆ ಬಳಸಿಕೊಂಡಿತ್ತು. ಇದೀಗ ಬಳಕೆಯಾಗದ ಎನ್.ಎಂ.ಜಿ ರೇಕ್ ಗಳನ್ನು ಪಾರ್ಸೆಲ್ ಸಾಗಣೆಗೆ ಉಪಯೋಗಿಸಿದೆ. ಎನ್.ಎಂ.ಜಿ ರೇಕ್ ಗಳನ್ನು ಸಾಮಾನ್ಯವಾಗಿ ವಾಹನಗಳ ಸಾಗಾಣಿಕೆಗೆ ಬಳಸಲಾಗುತ್ತದೆ. 25 ಎನ್.ಎಂ. ವ್ಯಾಗನ್ ಗಳ ಮೂಲಕ 210 ಟನ್ …

Read More »

ಮೂಗಿಗೆ ನಿಂಬೆ ರಸ ಹಾಕಿದರೆ ಉಸಿರಾಟದ ಸಮಸ್ಯೆ ಪರಿಹಾರವಾಗುತ್ತದೆ: ವಿಜಯ ಸಂಕೇಶ್ವರ

ಹುಬ್ಬಳ್ಳಿ: ಕೋವಿಡ್-19 ಸಂದರ್ಭದಲ್ಲಿ ನಿಂಬೆ ಹಣ್ಣಿನ ರಸವನ್ನು ಮೂಗಿಗೆ ಹಾಕಿಕೊಳ್ಳುವುದಿಂದ ಅರ್ಧ ಗಂಟೆಯಲ್ಲಿ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಫ ಹೊರ ಬಂದು ಉಸಿರಾಟದ ಸಮಸ್ಯೆ ಸರಿ ಹೋಗಲಿದೆ, ಇದನ್ನು ನಾನು, ನನ್ನ ಕುಟುಂಬ ಹಾಗೂ ಸುಮಾರು 200 ಜನರಿಗೆ ಸೂಚಿಸಿದ್ದೆ ಇದರಿಂದ ಪರಿಣಾಮಕಾರಿ ಫಲಿತಾಂಶ ಬಂದಿದೆ ಎಂದು ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ತಿಳಿಸಿದರು. ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಂಬೆ ಹಣ್ಣಿನ ರಸ ಹಾಕಿಕೊಳ್ಳುವುದರಿಂದ ಉತ್ತಮ …

Read More »

ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಕೊರತೆಯಿಲ್ಲ:ಜಗದೀಶ ಶೆಟ್ಟರ

ಹುಬ್ಬಳ್ಳಿ, ಏ24: ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಕೊರತೆಯಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಿಲ್ಲಾಡಳಿತ ತುರ್ತು ಪರಿಸ್ಥಿತಿಯಿದ್ದರೆ ದಿನದ 24 ತಾಸು ಕಾರ್ಯ ನಿರ್ವಹಿಸುತ್ತಿದೆ. ಸದ್ಯ ಧಾರವಾಡ ಜಿಲ್ಲೆಯಲ್ಲಿ 2ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಂಡಿದ್ದು, ಆಕ್ಸಿಜನ್ ಜೊತೆಗೆ 2 ಸಾವಿರ ಬೆಡ್‍ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದ ಅವರು ಕಿಮ್ಸನಲ್ಲಿ 500 ಬೆಡ್ ಬದಲಿಗೆ 1 ಸಾವಿರ …

Read More »

ಟೀಕೆ ಮಾಡಲು ಇದು ರಾಜಕೀಯವಲ್ಲ- ಸಿದ್ದರಾಮಯ್ಯ ಮಾತಿಗೆ ಶೆಟ್ಟರ್ ಗುದ್ದು

ಹುಬ್ಬಳ್ಳಿ: ಸರ್ಕಾರ ನಡೆಸುವ ಸಂದರ್ಭದಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ವಿರೋಧ ಪಕ್ಷದಲ್ಲಿ ಇದ್ದುಕೊಂಡು ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಟೀಕೆ ಮಾಡುವಂತ ಕಾಲವಲ್ಲ. ಪರಿಸ್ಥಿತಿ ನಿಭಾಯಿಸುವಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ಅವುಗಳ ಬಗ್ಗೆ ಸಲಹೆ ಸೂಚನೆ ನೀಡಲಿ ಅದನ್ನು ತುಘಲಕ್ ಆಡಳಿತ ಎಂದು ಕೊರೊನಾ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯನವರು …

Read More »

ಪ್ರೀತಿಗಾಗಿ ಅಣ್ಣನ ರುಂಡ ಚೆಂಡಾಡಿದ ತಂಗಿ

ಹುಬ್ಬಳ್ಳಿ:  ಧಾರವಾಡ ಜಿಲ್ಲೆಯ ಪೊಲೀಸರನ್ನೂ ಆತಂಕದಲ್ಲಿ ದೂಡಿದ್ದ ಪ್ರಕರಣದ ಹೊಸ ಸ್ವರೂಪ ಬಯಲಾಗಿದೆ. ರುಂಡ-ಮುಂಡ ಚೆಂಡಾಡಿದ ಪ್ರಕರಣದಲ್ಲಿ ಭೀಕರವಾಗಿ ಹತ್ಯೆಯಾದ ಯುವಕನ ಸಹೋದರಿ ಕಂ ಚಲನಚಿತ್ರ ನಟಿ ಕಂ ಮಾಡೆಲ್ ಕಂ ವಿಲನ್ ಪಾತ್ರ ಇರುವುದು ಸ್ಪಷ್ಟವಾಗಿದ್ದು, ಚಿತ್ರನಟಿ ಕೊನೆಗೂ ಜೈಲು ಪಾಲಾಗಿದ್ದಾಳೆ. ರಾಕೇಶ ಶೆಟ್ಟಿ ಎಂಬ ಸಹೋದರನನ್ನ ಮೂರು ಸೈಟ್ ವಿಚಾರಕ್ಕೆ ಕೊಲೆ ಮಾಡಿದ್ದು, ಈಗಾಗಲೇ ಸಿಕ್ಕಿರುವ ನಾಲ್ವರ ಜೊತೆ ರಾಕೇಶ ಶೆಟ್ಟಿಯ ಸಹೋದರಿ ಛೋಟಾ ಬಾಂಬೆ ಸಿನೇಮಾದ …

Read More »

ಸರ್ಕಾರದ ಮಾರ್ಗಸೂಚಿ ವಿಚಾರ-ಅಂಗಡಿ ಮಾಲೀಕರಿಂದ ಆಕ್ರೋಶ

ಧಾರವಾಡ: ಜಿಲ್ಲೆಯ ಜನತೇ ಸರ್ಕಾರದ ಕೊರೊನಾ ಮಾರ್ಗ ಸೂಚಿಗಳ ವಿಷಯದಲ್ಲಿ ಈಗಲೂ ಗೊಂದಲದಲ್ಲಿದ್ದಾರೆ. ನಗರದ ಅಂಗಡಿ ಮಾಲೀಕರು ಪ್ರತಿ ದಿನದಂತೆ ಇವತ್ತು ಅಂಗಡಿಗಳನ್ನು ತೆರೆದಿದ್ದರು. ಆದರೆ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನು ಕಂಡು ಸರ್ಕಾರದ ವಿರುದ್ಧ ಅಂಗಡಿ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ಜಿಲ್ಲೆಯ ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತು ಪಡಿಸಿ, ಬಟ್ಟೆ, ಪಾತ್ರೆ, ಮೊಬೈಲ್ ಸೇರಿ ಹಲವು ಅಂಗಡಿಗಳನ್ನು ಪೊಲೀಸರು ಬಂದ್ …

Read More »

ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಸರ್ಕಾರ ಅದರತ್ತ ಹೆಜ್ಜೆ ಇಡಬಾರದು: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ; ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಹೆಜ್ಜೆ ಇಡಬಾರದು ಎಂದು ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕರೋನಾ ಪ್ರಕರಣ ಹೆಚ್ಚುತ್ತಿದೆ. ಹಾಗೆಂದು ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. 17 ರ ನಂತರ ರಾಜ್ಯದಲ್ಲಿ ಲಾಕ್ …

Read More »