Breaking News

ಹುಬ್ಬಳ್ಳಿ

ವಿವಾದದಿಂದಲೇ ಸುದ್ದಿಯಾಗುತ್ತಿರುವ ಕಿಮ್ಸ್ ಆಸ್ಪತ್ರೆ,ಹೃದಯಾಘಾತದಿಂದ ವೃದ್ಧ ಸಾವು

ಹುಬ್ಬಳ್ಳಿ: ವಿವಾದದಿಂದಲೇ ಸುದ್ದಿಯಾಗುತ್ತಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಇದೀಗ ಕಿಮ್ಸ್ ಆರೋಗ್ಯ ಅಧಿಕಾರಿಗಳು ಮಾಡಿದ ಕೆಲಸದಿಂದ ಮನೆಯ ಹಿರಿಯನ ಮುಖವನ್ನು ನೋಡದೇ ಅಂತ್ಯಕ್ರಿಯೆ ಮಾಡುವಂತ ಪರಿಸ್ಥಿತಿ ತಂದಿಟ್ಟಿರುವುದು ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಳ್ಳ ಗ್ರಾಮದ 72 ವರ್ಷದ ವೃದ್ಧ ಬಸಪ್ಪ ಹುಬ್ಬಳ್ಳಿ ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಅವರನ್ನು ಕೋವಿಡ್ ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಕೋವಿಡ್ ಇದೆ …

Read More »

ಕಾರ್ಯಕರ್ತರನ್ನ ಕೇಳದೇ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ.ಸ್ಪಷ್ಟನೆ ನೀಡಿದ ವಿನಯ್ ಕುಲಕರ್ಣಿ

ಧಾರವಾಡ: ಬಿಜೆಪಿ ಸೇರ್ಪಡೆ ಸುದ್ದಿಗೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸ್ಪಷ್ಟನೆ ನೀಡಿದ್ದಾರೆ.ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ವಿನಯ್ ಕುಲಕರ್ಣಿ, ನಾನು ಯಾವ ಬಿಜೆಪಿ ನಾಯಕರನ್ನೂ ಭೇಟಿಯಾಗಿಲ್ಲ. ಬಿಜೆಪಿ ಸೇರುವ ಯಾವುದೇ ಪ್ರಸ್ತಾಪವೂ ನನ್ನ ಮುಂದೆ ಬಂದಿಲ್ಲ. ಎಲ್ಲವೂ ಮಾಧ್ಯಮಗಳ ಉಹಾಪೋಹ. ನಾನು ಬೆಳೆದ ಬಂದ ದಾರಿಯೇ ಬೇರೆ ಎಂದು ಹೇಳಿದರು. ಮೊದಲ ಬಾರಿಗೆ ಪಕ್ಷೇತರ ಶಾಸಕನಾಗಿ ಆಯ್ಕೆಯಾಗಿದ್ದು, ಹೀಗಾಗಿ ಕಾರ್ಯಕರ್ತರು ಮತ್ತು ಎಲ್ಲ ಸಮಾಜದ …

Read More »

ಸಚಿವರೊಬ್ಬರ ಮನೆ ಮುಂದೆ ಮಾತ್ರ ಹೈಟೆಕ್ ರಸ್ತೆ, ಮಹಾನಗರದ ರಸ್ತೆಗಳನೋಡಿದ್ರೂ ಬರೀ ಹಳ್ಳಬಿದ್ದ ರಸ್ತೆಗಳು,

ಹುಬ್ಬಳ್ಳಿ: ಜಿಲ್ಲೆಯ ಸಚಿವರೊಬ್ಬರ ಮನೆ ಮುಂದೆ ಮಾತ್ರ ಹೈಟೆಕ್ ರಸ್ತೆ ನಿರ್ಮಾಣ ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾರ್ವಜನಿಕ ರಸ್ತೆಗಳನ್ನ ರಿಪೇರಿ ಮಾಡದ ಅಧಿಕಾರಿಗಳು, ಸಚಿವರ ಮನೆ ಮುಂದೆ ಮಾತ್ರ ಹೈಟೆಕ್ ರಸ್ತೆ ನಿರ್ಮಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎಲ್ಲಿ ನೋಡಿದ್ರೂ ಬರೀ ಹಳ್ಳಬಿದ್ದ ರಸ್ತೆಗಳು, ತಗ್ಗು ಗುಂಡಿ ಕಾಣ ಸಿಗುತ್ತವೆ. ಆದರೆ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಮನೆ ಮುಂದಿನ ರಸ್ತೆಗೆ …

Read More »

ಅವಳಿನಗರದ ವಿವಿಧೆಡೆ ಕಳ್ಳತನ ಮಾಡಿದ ಇಬ್ಬರನ್ನೂ ಹುಬ್ಬಳ್ಳಿಯ ನವನಗರ ಪೊಲೀಸರು ಬಂಧಿಸುವಲ್ಲಿ ಯಶ್ವಸಿ

ಹುಬ್ಬಳ್ಳಿ: ಅವಳಿನಗರದ ವಿವಿಧೆಡೆ ಕಳ್ಳತನ ಮಾಡಿದ ಇಬ್ಬರನ್ನೂ ಹುಬ್ಬಳ್ಳಿಯ ನವನಗರ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಹುಬ್ಬಳ್ಳಿಯ ವೀರಮಾರುತಿ ನಗರದ ಭೀಮಣ್ಣ ಕ್ವಾಟಿ ಮತ್ತು ನಾಗರಾಜ ಕ್ವಾಟಿ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 6.32 ಲಕ್ಷ ಮೌಲ್ಯದ 158 ಗ್ರಾಂ ಬಂಗಾರ ಹಾಗೂ 3, 800 ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಿಬ್ಬರು ಭೈರಿದೇವರಕೊಪ್ಪದಲ್ಲಿ ನಡೆದ ಎರಡು ಮನೆ ಹಾಗೂ ನವನಗರದ ಕೆಸಿಸಿ ಕಾಲೋನಿಯಲ್ಲಿ ಒಂದು ಮನೆ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. …

Read More »

ವಿನಯ್ ಕುಲಕರ್ಣಿ BJPಗೆ ಸೇರ್ಪಡೆಯಾವುದೇ ಚರ್ಚೆ ಆಗಿಲ್

ಹುಬ್ಬಳ್ಳಿ: ಮಾಜಿ ಸಚಿವ, ಕಾಂಗ್ರೆಸ್ಸಿನ ವಿನಯ್ ಕುಲಕರ್ಣಿ BJPಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಮಾತನಾಡಿದ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನಮ್ಮ ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ತಿಳಿಸಿದ್ರು. ನಮ್ಮದು ರಾಷ್ಟ್ರೀಯ ಪಕ್ಷ ಆ ರೀತಿ ಸೇರ್ಪಡೆ ಆಗುವುದಿಲ್ಲ. ಜಿಲ್ಲಾ, ರಾಜ್ಯ, ನಮ್ಮ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡೇ ಮಾಡ್ತಾರೆ‌. ನಾನು ಇದೇ ಜಿಲ್ಲೆಯ‌ ಜನಪ್ರತಿನಿಧಿ, ನನ್ನ …

Read More »

ಹೋಮ್ ಮಿನಿಸ್ಟರ್ ತವರಲ್ಲೇ ಐಪಿಎಸ್ ಅಧಿಕಾರಿಗಳ ವಾರ್

ಧಾರವಾಡ/ಹುಬ್ಬಳ್ಳಿ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತವರೂರಿನಲ್ಲೇ ಐಪಿಎಸ್ ಅಧಿಕಾರಗಳ ವಾರ್ ತಾರಕಕ್ಕೇರಿದೆ. ಹುಬ್ಬಳ್ಳಿ-ಧಾರವಾಡ ಕಮೀಷನರ್ ಆರ್ ದಿಲೀಪ್ ಹಾಗೂ ಡಿಸಿಪಿ ಕೃಷ್ಣಕಾಂತ್ ಮಧ್ಯೆ ಜಗಳ ಶುರುವಾಗಿದ್ದು, ಇಬ್ಬರು ಐಪಿಎಸ್ ಅಧಿಕಾರಿಗಳ ತಿಕ್ಕಾಟ ಇದೀಗ ಪೊಲೀಸ್ ಮಹಾನಿರ್ದೇಶಕರವರೆಗೂ ತಲುಪಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ ಕಮೀಷನರ್ ಆರ್.ದಿಲೀಪ್ ಇಲಾಖೆಯ ವಿಚಾರಗಳು, ಅಕ್ರಮ ಚಟುವಟಿಕೆ, ಕೋವಿಡ್ 19 ವಿಚಾರದಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ ದಂಡ ವಿಧಿಸುವ ವಿಚಾರ ಹಾಗೂ ಸಾಮಾಜಿಕ ಅಂತರ ಕಾಪಾಡುವ …

Read More »

ಡ್ರಗ್ ಕೇಸಿನಲ್ಲಿ ಚಿಕ್ಕದೊಂದು ಐಸ್ ಬರ್ಗ್ ಹೊರಬಂದಿದೆಯಷ್ಟೇ: ಭಾಸ್ಕರ್ ರಾವ್

ಧಾರವಾಡ: ಡ್ರಗ್ ಕೇಸ್‍ನಲ್ಲಿ ಈಗ ಹೊರ ಬಂದಿರೋದು ಟಿಪ್ ಆಫ್ ದಿ ಐಸ್ ಬರ್ಗ್ ಅಷ್ಟೇ ಎಂದು ಆಂತರಿಕ ಭದ್ರತಾ ದಳ (ಐಎಸ್‍ಡಿ) ಮುಖ್ಯಸ್ಥ ಭಾಸ್ಕರ್ ರಾವ್ ಹೇಳಿದ್ದಾರೆ .ಧಾರವಾಡದಲ್ಲಿ ಮಾತನಾಡಿದ ಅವರು, ಡ್ರಗ್ ಕೇಸಿನಲ್ಲಿ ಪೆಡ್ಲರ್ ಮತ್ತು ಗ್ರಾಹಕರವರೆಗೆ ಹೋಗಿದ್ದೇವೆ. ಇದು ಎಲ್ಲಿಂದ ಬರುತ್ತಿದೆ ಅದು ಪತ್ತೆ ಮಾಡಬೇಕಿದೆ ಎಂದು ಹೇಳಿದರು. ಕೆಮಿಕಲ್ ಮತ್ತು ಆರ್ಟಿಫಿಷಿಯಲ್ ಡ್ರಗ್ ಹೊರ ದೇಶದಿಂದ ಬರುತ್ತಿದೆ ಎಂದರು. ಡ್ರಗ್ಸ್ ಸಮುದ್ರ ಮತ್ತು ವಿಮಾನ …

Read More »

ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ- ರಾಷ್ಟ್ರೀಯ ಹೆದ್ದಾರಿ ಬಂದ್, ಟ್ರಾಫಿಕ್ ಜಾಮ್

ಹುಬ್ಬಳ್ಳಿ/ಮೈಸೂರು: ನಗರದಲ್ಲಿಂದು ಧಾರಾಕಾರವಾಗಿ ಮಳೆ ಸುರಿದಿದ್ದು, ಮಧ್ಯಾಹ್ನ ಒಂದು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಹುಬ್ಬಳ್ಳಿಯ ಕುಂದಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ಸೇತುವೆ ಕಾಮಗಾರಿಯಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿತು. ಮಳೆಯ ನೀರು ಹೆಚ್ಚು ಬಂದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಾಕಷ್ಟು …

Read More »

ಬಾಲಕಿ ಕುಟುಂಬಕ್ಕೆ ₹1.5 ಲಕ್ಷ ಪರಿಹಾರ

ಹುಬ್ಬಳ್ಳಿ:ನಗರದ ಇಂದಿರಾ ಗಾಜಿನಮನೆ ಉದ್ಯಾನದಲ್ಲಿರುವ ಮಳೆ ನೀರು ಇಂಗು ಗುಂಡಿಗೆ ಇತ್ತೀಚೆಗೆ ಬಿದ್ದು ಮೃತಪಟ್ಟ ಬಾಲಕಿ ಕುಟುಂಬಕ್ಕೆ, ಸ್ಮಾರ್ಟ್ ಸಿಟಿ ವತಿಯಿಂದ ಗುರುವಾರ ₹1.5 ಲಕ್ಷ ಪರಿಹಾರ ನೀಡಲಾಗಿದೆ. ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ನಗರದ ಐ.ಟಿ ಪಾರ್ಕ್ ಸಂಕೀರ್ಣದಲ್ಲಿರುವ ಸ್ಮಾರ್ಟ್ ಸಿಟಿ ಕಚೇರಿ ಎದುರು ಸಮತಾ ಸೇನಾ ಸೇರಿದೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬಾಲಕಿ ಕುಟುಂಬದವರೊಂದಿಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸ್ಮಾರ್ಟ್ …

Read More »

ಹುಬ್ಬಳ್ಳಿ TO ಹೈದರಾಬಾದ್ ಬಸ್ ಸಂಚಾರ ಪುನರಾರಂಭ

ಹುಬ್ಬಳ್ಳಿ: ಕೋವಿಡ್-19 ಲಾಕ್‍ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ ಟು ಹೈದರಾಬಾದ್ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ.ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಬಸ್ಸುಗಳು ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಕರಸಾಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 1 ಎಸಿ …

Read More »