Breaking News

ಹುಬ್ಬಳ್ಳಿ

ಶಾಸಕರು, ಸಚಿವರಿಗೆ ಪತ್ರ- ಸುರೇಶ್ ಕುಮಾರ್ ವಿರುದ್ಧ ಶೆಟ್ಟರ್ ಗರಂ

ಹುಬ್ಬಳ್ಳಿ: ಕೊರೊನಾ ನಂತರ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭದ ವಿಚಾರವಾಗಿ ಶಿಕ್ಷಣ ಸಚಿವರು ಎಲ್ಲ ಶಾಸಕರು, ಸಚಿವರಿಗೆ ಪತ್ರ ಬರೆದು ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ವಿಚಾರಕ್ಕೆ ಕೈಗಾರಿಕಾ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಗರಂ ಆಗಿದ್ದಾರೆ. ಅಲ್ಲದೆ ಶಾಲೆಗಳ ಆರಂಭ ಮಾಡೋ ವಿಚಾರದಲ್ಲಿ ಪೋಷಕರ ಅಭಿಪ್ರಾಯ ಮುಖ್ಯವಾಗಿದೆ. ನಮ್ಮದಲ್ಲವೆಂದು ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ. ಹುಬ್ಬಳ್ಳಿಯ ನಿವಾಸದಲ್ಲಿಂದು ಮಾತನಾಡಿದ ಶೆಟ್ಟರ್, ಶಾಲೆಗಳ ಆರಂಭದ ಬಗ್ಗೆ ಪಾಲಕರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ಪೋಷಕರಿಗೆ ನಮ್ಮ …

Read More »

ಸ್ಮಾರ್ಟ್ ಸಿಟಿ ಕಾಮಗಾರಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿಯ ಹೊಂಡದಲ್ಲಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ನಡೆದಿದೆ. ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಸ್ಮಾಟ್ ಸಿಟಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಕಾಮಗಾರಿಯ ಹೊಂಡದ ಪಕ್ಕದಲ್ಲೇ ಆಟವಾಡುತ್ತಿದ್ದ ಮೂವರು ಬಾಲಕರು ಹಾಗೂ ಬಾಲಕಿ ಹೊಂಡಕ್ಕೆ ಬಿಗಿದ್ದು, ಘಟನೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯನ್ನು ಹುಬ್ಬಳ್ಳಿಯ ಗಿರಣಿಚಾಳದ ತ್ರಿಶಾ ಎಂದು …

Read More »

ಹುಬ್ಬಳ್ಳಿಯ ರಂಗೋಲಿ ಹಾಕಿ ಶೆಟ್ಟರ್ ಫೋಟೋ ನೆಟ್ಟ ಸ್ಥಳೀಯ ನಿವಾಸಿಗಳು..

ಹುಬ್ಬಳ್ಳಿಯ ರಂಗೋಲಿ ಹಾಕಿ ಶೆಟ್ಟರ್ ಫೋಟೋ ನೆಟ್ಟ ಸ್ಥಳೀಯ ನಿವಾಸಿಗಳು.. ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ನಗರದ ವಿದ್ಯಾವನ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಅವರ ಭಾವಚಿತ್ರವನ್ನು ರಸ್ತೆಯ ಗುಂಡಿಯಲ್ಲಿ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು. ಮಳೆಯಿಂದ ರಸ್ತೆಗಳು ಹಾಳಾಗಿ ಹೋಗಿವೆ. ಎಲ್ಲೆಂದರಲ್ಲಿ ಗುಂಡುಗಳು ಬಿದ್ದು ಜನರು ಓಡಾಡಲು ಆಗದ ಸ್ಥಿತಿ ಇದೆ. ಹೀಗಾಗಿ ರಸ್ತೆ ದುರಸ್ತಿ ಹಾಗೂ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ರಸ್ತೆ ಗುಂಡಿಗೆ ರಂಗೋಲಿ ಹಾಕಿ ಹಾಗೂ …

Read More »

ಹುಬ್ಬಳ್ಳಿಯಲ್ಲಿ ಕೂಡಾ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ..

ಹುಬ್ಬಳ್ಳಿ:ಇಂದು ಕೇಂದ್ರ ಸರ್ಕಾರದ ವಿರುದ್ಧ ಭಾರತ ಬಂದ್ ಗೆ ಹಲವಾರು ರೈತ ಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬಂದ್ ಗೆ ಕರೆಯನ್ನು ನೀಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೂಡಾ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.. ಇಂದು ಬೆಳ್ಳಿಗ್ಗೆ ಇಂದಲೇ ವಿವಿಧ ಸಂಘಟನೆಗಳು ರಸ್ತೆಗೆ ಇಳಿದಿದ್ದು ಅಂಗಡಿ ಮುಂಗಟ್ಟುಗಳನ್ನು ತೆಗೆದವರಿಗೆ ಹೂ ಕೊಡುವುದರ ಮೂಲಕ ಬಂದ್ ಗೆ ಬೆಂಬಲ ಕೊಡಬೇಕು ಎಂದು ಮನವಿಯನ್ನು ಮಾಡಿಕೊಂಡರು. ಇನ್ನು ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದಲ್ಲಿ …

Read More »

ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭ

ಹುಬ್ಬಳ್ಳಿ: ಕೊರೊನಾ ಲಾಕ್‍ಡೌನ್ ನಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ- ಮಹಾರಾಷ್ಟ್ರ ಬಸ್ ಸಂಚಾರವನ್ನು ಇದೀಗ ಮತ್ತೆ ಆರಂಭಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ರಾಜ್ಯದಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದೆ. ಮೊದಲ ಹಂತದಲ್ಲಿ ವಿಜಯಪುರ ಹಾಗೂ ಚಿಕ್ಕೋಡಿ ಮಾರ್ಗವಾಗಿ ಮಹಾರಾಷ್ಟ್ರದ ಪ್ರಮುಖ ಸ್ಥಳಗಳಾದ ಸೊಲ್ಲಾಪುರ, ಬಾರ್ಶಿ, ಫಂಡರಪುರ, ಔರಂಗಬಾದ್, ಈಚಲಕರಂಜಿ, ಮೀರಜ್ ಮತ್ತಿತರ ಸ್ಥಳಗಳಿಗೆ …

Read More »

‘ಬೆಂಗಳೂರು ಅಭಿವೃದ್ಧಿ ಕುರಿತು ಮೋದಿಗಿರುವ ಕಲ್ಪನೆ ಅದ್ಭುತ’

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರು ವ್ಯಕ್ತಿಯಲ್ಲ, ದೇವಮಾನವ. ಅವರನ್ನು ನಾನು ರಾಜರ್ಷಿ ಎಂದು ಕರೆಯುತ್ತೇನೆ. ಬೆಂಗಳೂರು ಅಭಿವೃದ್ಧಿ ಕುರಿತು ಅವರ ಕಲ್ಪನೆ, ಅವರಿಗಿರುವ ಮಾಹಿತಿ ನನ್ನನ್ನು ಅಚ್ಚರಿಗೊಳಿಸಿದೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಭಾನುವಾರ ಹುಬ್ಬಳ್ಳಿ ಹಾಗೂ ಬೆಂಗಳೂರು ನಡುವಿನ ವರ್ಚುವಲ್‌ ರಾರ‍ಯಲಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅವರ ಜನ್ಮದಿನದ ನಿಮಿತ್ತ ದೆಹಲಿಗೆ ತೆರಳಿ ಭೇಟಿಯಾಗಿ 40 ನಿಮಿಷ ಅವರೊಡನೆ ಮಾತನಾಡಿದ್ದೆ. …

Read More »

ಎಚ್ ಐವಿ ಇಲ್ಲದಿದ್ದರು ಪಾಸಿಟಿವ್ ವರದಿ  ನೀಡಿ ಮಹಿಳೆಯೊಬ್ಬರನ್ನು ಗಂಡನಿಂದ ದೂರ ಮಾಡಿದ ಹುಬ್ಬಳ್ಳಿ K.I.M.S.ಆಸ್ಪತ್ರೆ,.

ಹುಬ್ಬಳ್ಳಿ:  ಸದಾ ಒಂದಿಲ್ಲದೊಂದು  ಯಡವಟ್ಟಿನಿಂದ  ಹೆಸರುವಾಸಿಯಾಗಿರುವ  ಕಿಮ್ಸ್ ಆಸ್ಪತ್ರೆ, ಇದೀಗ  ಎಚ್ ಐವಿ ಇಲ್ಲದಿದ್ದರು ಪಾಸಿಟಿವ್ ವರದಿ  ನೀಡಿ ಮಹಿಳೆಯೊಬ್ಬರನ್ನು ಗಂಡನಿಂದ ದೂರ ಮಾಡಿದೆ. ಕಿಮ್ಸ್ ಆಸ್ಪತ್ರೆಯ ವೈದ್ಯರು ಬೇಜವಾಬ್ದಾರಿಯಿಂದ ಕೆಲಸದಿಂದ   ದಿಕ್ಕು ತೋಚದೆ  ಮಹಿಳೆ ಕಳೆದ ಒಂದು  ವರ್ಷದಿಂದ  ತವರು  ಸೇರಿದ್ದಾಳೆ.  ನಗರದ ಜನತಾ ಕಾಲೋನಿ ನಿವಾಸಿ ಚೆನ್ನಮ್ಮ ಬೇಲಿ ಎಂಬ ಮಹಿಳೆ ಕಳೆದ ವರ್ಷದ ಹಿಂದೆ ಸ್ಯಾಮಸನ್ ಎಂಬಾತನನ್ನು ಮದುವೆ ಮಾಡಿಕೊಂಡಿದ್ದರು. ಬಳಿಕ  ಕಿಮ್ಸ್ ಆಸ್ಪತ್ರೆಯಲ್ಲಿ ನವ …

Read More »

ಬೆಳಗಾವಿ, ಹುಬ್ಬಳ್ಳಿ ಕಲ್ಯಾಣ ಜ್ಯುವೆಲರ್ಸ್ ಕಳ್ಳತನ:

ಹುಬ್ಬಳ್ಳಿ: ಗ್ರಾಹಕರ ಸೋಗಿನಲ್ಲಿ ಬೆಳಗಾವಿ, ಹುಬ್ಬಳ್ಳಿ, ದಾವಣಗೆರೆಯ ಕಲ್ಯಾಣ ಜ್ಯುವೆಲರಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆಗಳನ್ನು ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿಜಯನಗರದದ ನಿವಾಸಿ ವಿರಕ್ತಾನಂದ ಅಲಿಯಾಸ್ ಸಂತೋಷ್ ಮಹದೇವಪ್ಪ ಕಟಗಿ, ಗದಗದ ಶರತ್ ಶ್ರೀಕಾಂತ್ ಕಾರಂತ ಬಂಧಿತರು. ಪೊಲೀರು ಬಂಧಿತರಿಂದ 8 ಲಕ್ಷ 27 ಸಾವಿರ ಮೌಲ್ಯದ 130.681 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಅಂಗಡಿಯೊಂದರಲ್ಲಿ ಗ್ರಾಹಕರಂತೆ ಚಿನ್ನಾಭರಣ ಖರೀದಿಗೆಂದು …

Read More »

ರಾಗಿಣಿ ಡ್ರಗ್ಸ್ ಕೇಸ್- ಹುಬ್ಬಳ್ಳಿ ‘ಕೈ’ ಮುಖಂಡನಿಗೆC.C.B.ಯಿಂದ ವಿಚಾರಣೆ

ಹುಬ್ಬಳ್ಳಿ: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ಗಿರೀಶ್ ಗದಿಗೆಪ್ಪಗೌಡರ ಅವರನ್ನ ವಿಚಾರಣೆ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗಿರೀಶ್ ಗದಿಗೆಪ್ಪಗೌಡರ್ ಮಾಜಿ ಸಚಿವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸ್ಥಳೀಯ ಕಾಂಗ್ರೆಸ್ ಮುಖಂಡ. ನಟಿ ರಾಗಿಣಿ ದ್ವಿವೇದಿ ಮೊಬೈಲ್ ನಲ್ಲಿ ಗಿರೀಶ್ ಗದಿಗೆಪ್ಪಗೌಡರ್ ಫೋಟೋ ಲಭ್ಯವಾದ ಹಿನ್ನೆಲೆ ಸಿಸಿಬಿ ಪೊಲೀಸರು ಗಿರೀಶ್ ಅವರನ್ನ ವಿಚಾರಣೆ ನಡೆಸಿದ್ದಾರೆ. ರಾಗಿಣಿ ಮತ್ತು ಗಿರೀಶ್ ಜೊತೆಯಾಗಿ …

Read More »

ಜೆಡಿಎಸ್ ಶಾಸಕರು, ಮಾಜಿ ಶಾಸಕರು,ಕುಮಾರಸ್ವಾಮಿಕ್ಯಾಸಿನೋಗೂ ಹೋಗಿರಬಹುದುನಾನು ಹೋಗಿರಲಿಲ್ಲ.

ಹುಬ್ಬಳ್ಳಿ: ಕೊಲಂಬೋದ ಕ್ಯಾಸಿನೋಗೆ ಯಾರು ಹೋಗಿದ್ದಾರೋ ಅವರಿಗೇ ಗೊತ್ತು. ನಾನು ಹೋಗಿರಲಿಲ್ಲ. ಅಲ್ಲದೆ ಈ ಕುರಿತು ಸ್ವತಃ ಕುಮಾರಸ್ವಾಮಿಯವರೇ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಎಲ್ಲ ವಿಚಾರವನ್ನು ಅವರು ತಿಳಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್ ಶಾಸಕರು, ಮಾಜಿ ಶಾಸಕರು ಕೊಲಂಬೋದ ಪ್ರವಾಸಕ್ಕೆ ಹೋಗಿದ್ದು ನಿಜ. ಈ ವೇಳೆ ಕ್ಯಾಸಿನೋಗೂ ಹೋಗಿರಬಹುದು. ಆದರೆ ಯಾರು ಹೋಗಿದ್ದಾರೆ ಅವರಿಗೇ …

Read More »