ಏ ನೀನೇನು ತಲೆಕೆಡಿಸಿಕೊಳ್ಳಬೇಡ, ನಮಗೆ ಗೊತ್ತಿದೆ ಸರ್ಕಾರ ಹೇಗೆ ನಡೆಸಬೇಕು ಎನ್ನುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸಾರಿಗೆ ನೌಕರರ ಮುಷ್ಕರ ಕುರಿತಂತೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮುಷ್ಕರ ನಿರತರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಇನ್ಶೂರೆನ್ಸ್, ಪರ್ಮಿಟ್ ಲ್ಯಾಪ್ಸ್ ಆದ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಏನಾದ್ರೂ ಅಪಾಯವಾದ್ರೆ ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಸಿಎಂ ಗರಂ ಆಗಿದ್ದಾರೆ. …
Read More »ಯುವತಿಗೆ ತಾಳಿ ಕಟ್ಟಲು ಪ್ರಯತ್ನ ವಿರೋದಿಸಿದಕ್ಕೆ “ಬರ್ಬರ ಹತ್ಯೆ”…!
ತುಮಕೂರು : ತನ್ನ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಆಕ್ರೋಶಗೊಂಡು ಯುವತಿಗೆ ಚಾಕು ಇರಿದ ಪರಿಣಾಮ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಗುಳ್ಳ ಗ್ರಾಮದ ಈರಣ್ಣ ಎಂಬಾತ ತನ್ನದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದ,ದಿನಂಪ್ರತಿ ನನ್ನನ್ನು ಪ್ರೀತಿಸು ಅಂತಾ ಹಿಂದೆ ಬಿದ್ದಿದ್ದ ಆದ್ರೆ ಯುವತಿಯ ಈರಣ್ಣ ನ ಪ್ರೀತಿಯನ್ನು ನಿರಾಕರಿಸಿದ್ದಳು. ಹೀಗಾಗಿ ಯುವತಿ ಕಾಲೇಜಿಗೆ ಹೋಗುವಾಗ ಆಕೆಗೆ ತಾಳಿಯನ್ನು ಕಟ್ಟಲು ಪ್ರಯತ್ನ ಮಾಡಿದ್ದ ಆದ್ರೆ …
Read More »ಮಂಜುಕವಿದ ವಾತಾವರಣ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಮಂಗಳೂರಿಗೆ
ಹುಬ್ಬಳ್ಳಿ, ಏಪ್ರಿಲ್ 3: ದಟ್ಟವಾದ ಮಂಜು ಹಾಗೂ ಮೋಡಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ, ಮಂಗಳೂರು ಕಡೆಗೆ ಹಾರಾಟ ನಡೆಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿಕೊಂಡು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಗೆ ಪ್ರಯಾಣ ಬೆಳೆಸಿತು. ಶನಿವಾರ ಬೆಳಗ್ಗೆ ಸರಿಯಾಗಿ 7.20ಕ್ಕೆ ಆಗಮಿಸಿದ ಇಂಡಿಗೋ ವಿಮಾನ, ಹುಬ್ಬಳ್ಳಿ ನಗರ ಸುತ್ತಮುತ್ತ ದಟ್ಟ ಮಂಜು …
Read More »ಸಾರಿಗೆ ನೌಕರರ ಮುಷ್ಕರ: ರಾಜ್ಯದಾದ್ಯಂತ ಏಪ್ರಿಲ್ 7ರಿಂದ ಬಸ್ ಸಂಚಾರ ಸ್ಥಗಿತ
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸದ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಏಪ್ರಿಲ್ 7ರಿಂದ ರಾಜ್ಯದಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದೆ ಎಂದು ಕೂಟದ ಗೌರವಾಧ್ಯಕ್ಷ ಪಿ.ಎಚ್. ನೀರಲಕೇರಿ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನೌಕರರು ಮುಷ್ಕರ ನಡೆಸಿದಾಗ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಅದಾಗಿ ಮೂರು ತಿಂಗಳು ಕಳೆದರೂ ಒಂದೇ ಒಂದು ಬೇಡಿಕೆ …
Read More »ಸರಕು ಸಾಗಣೆಯಲ್ಲಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗ ಹೊಸ ದಾಖಲೆ
ಹುಬ್ಬಳ್ಳಿ, ಏ.2- ದೇಶದಲ್ಲಿ ಕೊರೊನಾ ಸೋಂಕಿನ ಆರ್ಭಟ ಮತ್ತು ಆರ್ಥಿಕ ಹಿಂಜರಿತದ ಪರಿಣಾಮದ ಹೊರತಾಗಿಯೂ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗ ಸರಕು ಸಾಗಣೆ ಮೂಲಕ ಉತ್ತಮ ಆದಾಯ ಗಳಿಸಿದೆ. ಪ್ರಸಕ್ತ ವರ್ಷದ ಮಾರ್ಚ್ ತಿಂಗಳಲ್ಲಿ ಸುಮಾರು 3.45 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಹೊಸ ದಾಖಲೆ ಮಾಡಿದ್ದು, ಇದು ಕಳೆದ 4 ವರ್ಷಗಳಲ್ಲಿ ಗರಿಷ್ಠ ಮಾಸಿಕ ಸರಕು ಸಾಗಣೆ ಆಗಿದೆ. ಮಾರ್ಚ್ 31 ರಂದು 2286 ವ್ಯಾಗನ್ …
Read More »ಸಿದ್ದರಾಮಯ್ಯ ಶೇ.100ರಷ್ಟು ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ: ಸಚಿವ ಈಶ್ವರಪ್ಪ ಭವಿಷ್ಯ
ಹುಬ್ಬಳ್ಳಿ, ಮಾರ್ಚ್ 30: “ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಸ್ಪರ್ಧಿಸುವುದಿಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, “ವಿಪಕ್ಷ ನಾಯಕ ಸಿದ್ದರಾಮಯ್ಯ ಎಲ್ಲ ವಿಷಯಗಳಲ್ಲೂ ದ್ವಂದ್ವ ನಿಲುವು ಪ್ರದರ್ಶಿಸುತ್ತಾರೆ” ಎಂದು ವ್ಯಂಗ್ಯವಾಡಿದರು. ಕಳೆದ ಬಾರಿಯ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಸಿದ್ದರಾಮ್ಯಯ ಹೇಳಿದ್ದರು. ಆದರೆ, ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದರು. ಈ …
Read More »ಅಂತರಾಜ್ಯ ಡ್ರಗ್ಸ್ ದಂಧೆ : ಹುಬ್ಬಳ್ಳಿಯಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಖ್ಯಾತ ಉದ್ಯಮಿ ಮಗಳು ಸೇರಿದಂತೆ ಇಬ್ಬರ ಬಂಧನ
ಹುಬ್ಬಳ್ಳಿ : ದೇಶದಾದ್ಯಂತ ಭಾರೀ ಸದ್ದು ಮಾಡುತ್ತಿರುವ ಈ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಓರ್ವ ಯುವಕ, ಓರ್ವ ಯುವತಿ ಪೊಲೀಸರ ಬಲೆಗೆ ಬಿದ್ದ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಪೆಡ್ಲರ್ ಸೇರಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆಖಚಿತವಾದ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಪೆಡ್ಲರ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಅಪಾರ ಪ್ರಮಾಣದಲ್ಲಿ ಡ್ರಗ್ಸ್ ನ್ನು …
Read More »ತುಂಡಾಗಿ ಕಳಚಿ ಬಿದ್ದ ಶಿವಾಜಿ ಪ್ರತಿಮೆ
ಹುಬ್ಬಳ್ಳಿ : ಇಲ್ಲಿನ ಪಾಲಿಕೆ ಕಚೇರಿಯ ಪಕ್ಕದ ಚಿಟಗುಪ್ಪಿ ಪಾರ್ಕ್ ನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಬೃಹದಾಕಾರದ ಛತ್ರಪತಿ ಶಿವಾಜಿ ಮೂರ್ತಿ ತುಂಡಾಗಿ ಕಳಚಿ ಬಿದ್ದಿದೆ. ಕಳೆದ ಮೂರು ವರ್ಷಗಳ ಹಿಂದೆ ಛತ್ತೀಸಘಡದಿಂದ ಹುಬ್ಬಳ್ಳಿ ಮಹಾನಗರ ಪಾಲಿಕೆ ವತಿಯಿಂದ ತಯಾರಿಸಿ ಇಲ್ಲಿಗೆ ತಂದು ಪ್ರತಿಷ್ಠಾಪಿಸಲಾಗಿತ್ತು. ಇದಕ್ಕಾಗಿ 17.5 ಲಕ್ಷ ರೂ ಖರ್ಚಾಗಿತ್ತು. ಕುದುರೆಯ ಮೂರು ಕಾಲುಗಳು ತುಂಡಾಗಿವೆ. ಶಿವಾಜಿ ಮೂರ್ತಿ ತಲೆ, ಖಡ್ಗ ಸೇರಿದಂತೆ ಸಂಪೂರ್ಣ ಜಖಂಗೊಂಡಿದೆ. ತುಂಡಾಗಿ ಬಿದ್ದಿರುವ ಮೂರ್ತಿಗೆ ಪಾಲಿಕೆ …
Read More »ತಾನೂ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮುತಾಲಿಕ್
ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ತಾವು ಟಿಕೆಟ್ ಆಕಾಂಕ್ಷಿ ಆಗಿದ್ದು, ತಮಗೆ ಟಿಕೆಟ್ ದೊರೆಯುವ ವಿಶ್ವಾಸವಿದೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಷಯವಾಗಿ ಹಲವು ನಾಯಕರೊಂದಿಗೆ ಚರ್ಚಿಸಿದ್ದೇನೆ. ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ನನಗೀಗ 66 ವರ್ಷ, ಇದು ಕೊನೆಯ ಯತ್ನ. ದೊರೆತರೆ ಸರಿ ಇಲ್ಲವಾದರೆ ಇಲ್ಲ. ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲ ಎಂದರು. …
Read More »ಶಾಸಕರ ಪುತ್ರನಿಗೆ ಯುವತಿ ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.
ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ಸಿಡಿ ಪ್ರಕರಣ ಬಹಿರಂಗವಾಗಿದೆ. ಅಶ್ಲೀಲ ವಿಡಿಯೋ ಇಟ್ಟುಕೊಂಡು ಮಾಜಿ ಶಾಸಕರ ಪುತ್ರನಿಗೆ ಯುವತಿಯೊಬ್ಬಳು ಬ್ಲ್ಯಾಕ್ ಮೇಲ್ ಮಾಡಿ ಹಣ ಪೀಕಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಧಾರವಾಡದ ಮಾಜಿ ಶಾಸಕರ ಪುತ್ರನಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಬಳಿಕ ವಿಡಿಯೋ ಕಾಲ್ ಮಾಡಿ ಸಲುಗೆ ಬೆಳೆಸಿಕೊಂಡಿದ್ದಳು. ಹೀಗೆ ಮಾಡಿದ್ದ ವಿಡಿಯೋ ಕಾಲ್ ಗಳನ್ನೇ ಎಡಿಟ್ ಮಾಡಿ …
Read More »