Breaking News

ಹುಬ್ಬಳ್ಳಿ

ತಾಯಂದಿರೊಂದಿಗೆ ನರ್ಸ್‍ಗಳ ಅನುಚಿತ ವರ್ತನೆ- ಸಾರ್ವಜನಿಕರ ಆಕ್ರೋಶ

ಹುಬ್ಬಳ್ಳಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಾಗೂ ನರ್ಸ್ ಗಳು ತಮ್ಮ ಜೀವ ಪಣಕ್ಕಿಟು ರೋಗಿಗಳ ಉಪಚಾರ ಮಾಡುತ್ತಿದ್ದಾರೆ. ಆದರೆ ಹಳೇ ಹುಬ್ಬಳ್ಳಿಯ ಹೆಗ್ಗೇರಿ ನಗರ ಆರೋಗ್ಯ ಕೇಂದ್ರದ ನರ್ಸ್ ಗಳು ಮಾತ್ರ ಮಕ್ಕಳು ಹಾಗೂ ಪೋಷಕರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಹೆಗ್ಗೇರಿ ಆರೋಗ್ಯ ಕೇಂದ್ರದಲ್ಲಿ ಪ್ರತಿ ಗುರುವಾರ ನವಜಾತ ಶಿಶುಗಳಿಂದ ಹಿಡಿದು 10 ವರ್ಷದ ಮಕ್ಕಳಿಗೆ ಓಪಿವಿ, ಬಿಸಿಜಿ, ಪೆಂಟಾ, ಐಪಿವಿ, ವಿಟಮಿನ್ ಲಸಿಕೆಯನ್ನು ಹಾಕಲಾಗುತ್ತದೆ. …

Read More »

ವೈನ್ ಶಾಪ್ ತೆರೆಯಲು ಹಣದ ಬೇಡಿಕೆ- ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ!

ಹುಬ್ಬಳ್ಳಿ: ವೈನ್ ಶಾಪ್ ತೆರೆಯಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಪಿಡಿಒ ಅಧಿಕಾರಿಯನ್ನ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ವರೂರು ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ್ ಬಡಿಗೇರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಗ್ರಾಮದ ‘ಗಾಯತ್ರಿ ವೈನ್ಸ್’ ಮುಚ್ಚಿಸಲು ಮಹಿಳಾ ಸಂಘದವರು, ಗ್ರಾಮಸ್ಥರು ಅರ್ಜಿ ಕೊಟ್ಟಿದ್ದರು. ಇದನ್ನೇ ಹಣ ಪೀಕಲು ಬಳಸಿಕೊಂಡ ಪಿಡಿಒ ಬಸವರಾಜ್, ಗ್ರಾಮಸ್ಥರು ನೀಡಿರುವ ಅರ್ಜಿ ತಿರಸ್ಕಾರ ಮಾಡಿ ವೈನ್ ಶಾಪ್ ತೆರಯಲು ತೊಂದರೆ ಇಲ್ಲದಂತೆ ಮಾಡಲು …

Read More »

ರಕ್ತದಾನ ಮಾಡಿ ಮಾದರಿಯಾದ ಪಿಎಸ್‍ಐ…………

ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿರುವ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮಾಡಿದ ಹಿನ್ನೆಲೆಯಲ್ಲಿ ರಕ್ತದ ಅವಶ್ಯಕತೆ ಇತ್ತು. ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ಗುಡಗೇರಿ ಪೊಲೀಸ್ ಠಾಣೆಯ ಪಿಎಸ್‍ಐ ನವೀನ ಜಕ್ಕಲಿಯವರು ಆಸ್ಪತ್ರೆಗೆ ಭೇಟಿ ನೀಡಿ ರಕ್ತದಾನ ಮಾಡುವ ಮೂಲಕ ರೋಗಿಯೊಬ್ಬರಿಗೆ ಜೀವದಾನ ಮಾಡಿದ್ದಾರೆ. ವಿಲಿಯಂ ವರ್ಗೀಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಲಾಕ್‍ಡೌನ್ ಸಂದರ್ಭದಲ್ಲಿ …

Read More »

ಫೇಸ್‍ಬುಕ್ ನಲ್ಲಿ ಅಗ್ಗದ ಐಫೋನ್ ಜಾಹೀರಾತು ನೋಡಿ ವ್ಯಕ್ತಿಯೊಬ್ಬ ಆರ್ಡರ್ ಮಾಡುವ ಮೂಲಕ 20 ಸಾವಿರ ವಂಚನೆಗೆ ಒಳಗಾಗಿದ್ದಾನೆ.

ಹುಬ್ಬಳ್ಳಿ: ಫೇಸ್‍ಬುಕ್ ನಲ್ಲಿ ಅಗ್ಗದ ಐಫೋನ್ ಜಾಹೀರಾತು ನೋಡಿ ವ್ಯಕ್ತಿಯೊಬ್ಬ ಆರ್ಡರ್ ಮಾಡುವ ಮೂಲಕ 20 ಸಾವಿರ ವಂಚನೆಗೆ ಒಳಗಾಗಿದ್ದಾನೆ. ಆನ್‍ಲೈನ್‍ನಲ್ಲಿ ಐಪ್ಯಾಡ್, ಐವಾಚ್, ಐಫೋನ್ ಆರ್ಡರ್ ಮಾಡಿದ ವ್ಯಕ್ತಿಗೆ ಕೊರಿಯರ್ ಹಾಗೂ ರಿಜಿಸ್ಟ್ರೇಷನ್ ಶುಲ್ಕದ ನೆಪದಲ್ಲಿ ಆನ್‍ಲೈನ್ ಕಳ್ಳ 20 ಸಾವಿರ ಪಡೆದು ವಂಚಿಸಿದ್ದಾನೆ. ಧಾರವಾಡದ ಪವನಕುಮಾರ್ ವಂಚನೆಗೆ ಒಳಗಾಗಿದ್ದು, ಪವನಕುಮಾರ್ ಅವರು ಮೊಬೈಲ್ ನಲ್ಲಿ ಫೇಸ್‍ಬುಕ್ ನೋಡುತ್ತಿದ್ದಾಗ ಬ್ಲಿಂಕ್ ಆಗುತ್ತಿದ್ದ, `ಐ ಫೋನ್ ಅಟ್ ಚೀಪೆಸ್ಟ್ ಪ್ರೈಸ್’ …

Read More »

ಅಣ್ಣನನ್ನು ಕೊಂದು ಹುಣಸೆಮರಕ್ಕೆ ನೇತು ಹಾಕಿದ ತಮ್ಮ……..

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ತಮ್ಮನೊಬ್ಬ ತನ್ನ ಸ್ವಂತ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಮಾವನೂರಿನಲ್ಲಿ ನಡೆದಿದೆ. ಅಣ್ಣ ಮಂಜುನಾಥ ಸುಳ್ಳದ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಕಲ್ಮೇಶ ಸುಳ್ಳದ ಎಂದು ಗುರುತಿಸಲಾಗಿದೆ. ಮೇ 9ರಂದು ಪಾನಮತ್ತನಾಗಿ ಮನೆಗೆ ಬಂದಿದ್ದ ಮಂಜುನಾಥ, ಆಸ್ತಿ ಮತ್ತು ಮನೆಯಲ್ಲಿ ತನಗೆ ಪಾಲು ಕೊಡುವಂತೆ ತಾಯಿ ಶಿವಲಿಂಗವ್ವ ಜೊತೆ ಜಗಳವಾಡಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವಿಚಾರ ತಿಳಿದು ಕೆರಳಿದ ತಮ್ಮ ಕಲ್ಮೇಶ ಅಣ್ಣನ …

Read More »

ಹುಬ್ಬಳ್ಳಿ-ಧಾರವಾಡದಲ್ಲಿ ಪಾರ್ಸಲ್ ಸೇವೆ ಪ್ರಾರಂಭಿಸಿದ ಇಂದಿರಾ ಕ್ಯಾಂಟಿನ್

ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವ ಭೀತಿಯಿಂದ ಲಾಕ್‍ಡೌನ್ ಘೋಷಣೆಯಾಗಿದ್ದ ದಿನದಿಂದ ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ಆಗಿದ್ದ ಇಂದಿರಾ ಕ್ಯಾಂಟೀನ್‍ಗಳು ಈಗ ಪಾರ್ಸಲ್ ಸೌಲಭ್ಯ ಆರಂಭಿಸಿದೆ. ಹುಬ್ಬಳ್ಳಿಯಲ್ಲಿ ಮೂರು ಹಾಗೂ ಧಾರವಾಡದಲ್ಲಿ ಎರಡು ಇಂದಿರಾ ಕ್ಯಾಂಟಿನ್‍ಗೆ ಪಾರ್ಸಲ್ ಸೌಲಭ್ಯ ಆರಂಭಿಸಲು ಅನುಮತಿ ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಏಳು ಮತ್ತು ಧಾರವಾಡದಲ್ಲಿ ಎರಡು ಇಂದಿರಾ ಕ್ಯಾಂಟೀನ್‍ಗಳಿದ್ದು, ಮೊದಲ ಹಂತದಲ್ಲಿ ಐದು ಕ್ಯಾಂಟೀನ್‍ಗಳನ್ನು ಆರಂಭಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕಿಮ್ಸ್, ಉಣಕಲ್ ಮತ್ತು ಹೊಸ ಬಸ್ ನಿಲ್ದಾಣ, …

Read More »

ಪತಿಯ ಅಂತ್ಯಕ್ರಿಯೆಗೆ ತೆರಳಲು 20 ನಿಮಿಷದಲ್ಲೇ ಪಾಸ್ ನೀಡಿದ ತಾಲೂಕಾಡಳಿತ………

ಹುಬ್ಬಳ್ಳಿ: ಪತಿಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ಇಲ್ಲದೆ ಪುಟ್ಟ ಮಕ್ಕಳೊಂದಿಗೆ ಪರದಾಡುತ್ತಿದ್ದ ಮಹಿಳೆಗೆ 20 ನಿಮಿಷದಲ್ಲಿ ಪಾಸ್ ವ್ಯವಸ್ಥೆ ಮಾಡುವ ಮೂಲಕ ಹುಬ್ಬಳ್ಳಿ ತಾಲೂಕ ಆಡಳಿತ ಕಾರ್ಯದಕ್ಷತೆಯನ್ನು ಮೆರೆದಿದೆ. ಅರವಿಂದ ನಗರದ ಯಶೋಧ ಲೋಕಾಪುರ ಎಂಬವರ ಪತಿ ಬಾಗಲಕೋಟೆಯ ನವನಗರದಲ್ಲಿ ಸಾವನ್ನಪ್ಪಿದ್ದರು. ಬಾಗಲಕೋಟೆಗೆ ತೆರಳು ಪಾಸ್ ಇಲ್ಲದೆ ಎರಡು ಚಿಕ್ಕ ಮಕ್ಕಳ ಜೊತೆ ತಹಶೀಲ್ದಾರ ಕಚೇರಿಗೆ ಆಗಮಿಸಿದ್ದರು. ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ನೀಡುವಂತೆ ಮನವಿ ಮಾಡಿದ್ದಾರೆ. ಮಹಿಳೆಯ …

Read More »

ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಐಸಿಎಂಆರ್ ಅನುಮತಿ

ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣದ ಹಿನ್ನಲೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಸಲು ಐಸಿಎಂಆರ್ ಅನುಮತಿ ನೀಡಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಐಸಿಎಂಆರ್ ಅನುಮತಿ ನೀಡಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪ್ರಾರಂಭಗೊಳ್ಳಲಿದೆ. ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ ರಾಜ್ಯದಾದ್ಯಂತ 12 ಆಸ್ಪತ್ರೆಗೆ ಐಸಿಎಂಆರ್ ಅನುಮತಿ ನೀಡಿದೆ. ಕೆಲವೇ ದಿನಗಳಲ್ಲಿ ಪ್ಲಾಸ್ಟಾ ಥೆರಪಿ ಚಿಕಿತ್ಸೆ ಆರಂಭವಾಗಲಿದ್ದು, ಇದರಿಂದಾಗಿ ರಾಜ್ಯದಲ್ಲಿ ಕೊರೊನಾ …

Read More »

ಕೊರೊನಾ ಸೋಂಕಿತ ಗರ್ಭಿಣಿಗೆ ಗರ್ಭಪಾತ…………

ಹುಬ್ಬಳ್ಳಿ: ಜಿಲ್ಲೆಯ ಕಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕೊರೊನಾ ಸೋಂಕಿತ ಗರ್ಭಿಣಿಗೆ ಇಂದು ಬೆಳಗ್ಗೆ ಗರ್ಭಪಾತ ಮಾಡಲಾಗಿದ್ದು, ಮಹಿಳೆಯ ಆರೋಗ್ಯ ಸ್ಥಿರವಾಗಿದೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ 23 ವರ್ಷದ ಮಹಿಳೆ ಕೊರೊನಾ ಕಾರಣದಿಂದ ಮಾನಸಿಕವಾಗಿ ತೀವ್ರವಾಗಿನೊಂದಿದ್ದರು. ದೇಹದಲ್ಲಿ ಸೋಡಿಯಮ್ ಅಂಶ ಕೂಡ ಕಡಿಮೆಯಾಗಿ ಸುಸ್ತಾಗಿದ್ದು, ಅಲ್ಸರ್ ಉಂಟಾಗಿ ಊಟ ಮಾಡಲು ಆಗುತ್ತಿರಲಿಲ್ಲ. ಜೊತೆಗೆ ಹಿಮೋಗ್ಲೋಬಿನ್ ಕಡಿಮೆಯಾಗಿ ರಕ್ತ ನೀಡಲಾಗಿತ್ತು. ಹೀಗಾಗಿ ಮಹಿಳೆ ಉಳಿಸಿಕೊಳ್ಳಲು ಗರ್ಭಪಾತ ಅನಿವಾರ್ಯವಾಗಿತ್ತು. ಆದ್ದರಿಂದ ವೈದ್ಯರು ಗರ್ಭಪಾತ …

Read More »

ವಲಸೆ ಕಾರ್ಮಿಕರನ್ನು ಸ್ವ-ಸ್ಥಳಕ್ಕೆ ತಲುಪಿಸಿದ ಸಾರಿಗೆ ಸಿಬ್ಬಂದಿಗೆ ಹೂ ಮಳೆ ಸ್ವಾಗತ

ಹುಬ್ಬಳ್ಳಿ: ಲಾಕ್‍ಡೌನ್‍ನಿಂದಾಗಿ ಪರ ಊರುಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಸ್ವ-ಸ್ಥಳಗಳಿಗೆ ತಲುಪಿಸಲು ಶ್ರಮ ವಹಿಸಿದ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಇತರೆ ಸಿಬ್ಬಂದಿಗೆ ಹೂ ಮಳೆಗರೆದು ಅಭಿನಂದನೆ ಸಲ್ಲಿಸಲಾಯಿತು. ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ ಹಾಗೂ ಬಿ.ಆರ್.ಟಿ.ಎಸ್. ವ್ಯವಸ್ಥಾಕ ನಿರ್ದೇಶಕರಾದ ರಾಜೇಂದ್ರ ಚೋಳನ್ ಆಗಮಿಸಿ ಹುಬ್ಬಳ್ಳಿ ವಿಭಾಗದ ಚಾಲಕರು ಹಾಗೂ ನಿರ್ವಾಹಕರುಗಳ ಸಾರ್ಥಕ ಕಾರ್ಯಕ್ಕೆ ಮನದುಂಬಿ ಹರಿಸಿದರು. ಕಳೆದ ಮೂರು ದಿನಗಳಿಂದ ಸರ್ಕಾರದ …

Read More »