Breaking News
Home / Madikeri (page 6)

Madikeri

ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ನಿಧನ

ಬೆಂಗಳೂರು: ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ (55) ಕೋವಿಡ್‌-19 ಮತ್ತು ಬಹು ಅಂಗಾಂಗಳ ವೈಫಲ್ಯದಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೇ 2 ರಂದು ಕೊರೊನಾ ಸೋಂಕಿನಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಕೆಲವು ದಿನಗಳಿಂದ ಅವರನ್ನು ಜೀವ ರಕ್ಷಕ ವ್ಯವಸ್ಥೆಯಲ್ಲಿಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ 10.31ರ ವೇಳೆಗೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಅಶೋಕ ಗಸ್ತಿ ರಾಯಚೂರು ಜಿಲ್ಲೆಯವರು. ವಕೀಲರಾಗಿದ್ದ ಇವರು 1989ರಲ್ಲಿ ಬಿಜೆಪಿ ಸೇರ್ಪಡೆಯಾಗಿ, ಯುವ …

Read More »

331 ಮಂದಿ ಗುಣಮುಖ, ಬಿಡುಗಡೆ.

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 154 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘331 ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಮೂವರು ಹಾಗೂ ಬೈಲಹೊಂಲಗದ ಇಬ್ಬರು ಸೇರಿ ಐವರು ಮೃತಪಟ್ಟಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.

Read More »

ಕೈಗಾರಿಕೋದ್ಯಮಿಗಳ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ- ಶೆಟ್ಟರ್ ಸೂಚನೆ

ನೆಲಮಂಗಲ: ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‍ಪೇಟೆಯ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುವ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಗೆ ಶನಿವಾರ ಭೇಟಿ ನೀಡಿ ಸಚಿವರು ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದರು. ಡಾಬಸ್‍ಪೇಟೆ ಇಂಡಸ್ಟ್ರೀಸ್ ಅಸೋಸಿಯೇಷನ್ ಸದಸ್ಯರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ …

Read More »

ಕೊಡಗಿನಲ್ಲಿ ಧಾರಾಕಾರ ಮಳೆ – ಯೆಲ್ಲೊ, ಆರೆಂಜ್ ಅಲರ್ಟ್ ಘೋಷಣೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇದುವರೆಗೂ ಸಾಧಾರಣವಾಗಿ ಬರುತ್ತಿದ್ದ ಮಳೆ ಇಂದು ಮಧ್ಯಾಹ್ನದ ಬಳಿಕ ಧಾರಾಕಾರವಾಗಿ ಸುರಿಯಲಾರಂಭಿಸಿದೆ. ತಲಕಾವೇರಿ, ಭಾಗಮಂಡಲ, ಬ್ರಹ್ಮಗಿರಿ ತಪ್ಪಲು, ನಾಪೋಕ್ಲು, ಮಡಿಕೇರಿ ಮತ್ತು ಮಾದಾಪುರ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮತ್ತೊಂದೆಡೆ ಸೋಮವಾರ ಮತ್ತು ಮಂಗಳವಾರ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಸೋಮವಾರ 64 ಮಿಲಿ ಮೀಟರ್‌ನಿಂದ 115 ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೇ ಮಂಗಳವಾರ ಅದರ …

Read More »

ಕೊರೋನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧತೆ ಸಾಲದು: ಹೆಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದ್ದು, ಇಷ್ಟು ದಿನ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆಂದು ಹೇಳುತ್ತಿದ್ದ ರಾಜಕೀಯ ಪಕ್ಷಗಳು ಇದೀಗ ಸರ್ಕಾರದ ವಿರುದ್ಧ ತಿರುಗಿಬಿದ್ದಿವೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದರು. ಇದೀಗ ಇವರೊಂದಿಗೆ ಹೆಚ್.ಡಿ.ದೇವೇಗೌಡ ಅವರೂ ಕೂಡ ದನಿಗೂಡಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸುತ್ತಿದ್ದಂತೆಯೇ ಪರಿಸ್ಥಿತಿ ಕುರಿತು ಅವಲೋಕನ …

Read More »

ಮಹಾಮಳೆಗೆ ಮನೆ ಕಳೆದುಕೊಂಡು 2 ವರ್ಷವಾದ್ರೂ ಸೂರು ಕೊಡದ ಜಿಲ್ಲಾಡಳಿತ

ಮಡಿಕೇರಿ: ಸ್ವರ್ಗದಂತಹ ಸ್ಥಳವಾಗಿರುವ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮುಕ್ಕೋಡ್ಲು ಗ್ರಾಮದಲ್ಲಿ 2018ರ ಆಗಸ್ಟ್ ತಿಂಗಳಲ್ಲಿ ಕಂಡು ಕೇಳರಿಯದಂತಹ ಭೀಕರ ಭೂಕುಸಿತ ಮತ್ತು ಜಲಪ್ರಳಯ ಸಂಭವಿಸಿತ್ತು. ಈ ವೇಳೆ ಮುಕ್ಕೋಡ್ಲಿನ ಪರಮೇಶ್ವರ್ ನಾಯಕ್ ಮತ್ತು ಜಯಮ್ಮ ದಂಪತಿ ನೆಲೆಸಿದ್ದ ಮನೆಯ ಪಕ್ಕದಲ್ಲೇ ಹರಿಯುತ್ತಿದ್ದ ಹೊಳೆ ಸಂಪೂರ್ಣವಾಗಿ ಆವರಿಸಿಕೊಂಡಿತ್ತು. ಮನೆಯಿಂದ 30 ಅಡಿ ದೂರದಲ್ಲಿದ್ದ ಚಿಕ್ಕ ಹೊಳೆ ನೋಡನೋಡುತ್ತಿದ್ದಂತೆ ನದಿಯಾಗಿ ಪರಿವರ್ತನೆ ಆಗಿತ್ತು. ಇದರಿಂದ ಕಷ್ಟಪಟ್ಟು ಕಟ್ಟಿದ್ದ ಮನೆಯ ಒಂದೊಂದೇ ಭಾಗ …

Read More »

ಬಾಲಕಿಗೆ ಕೊರೊನಾ ವರದಿ ನೆಗೆಟಿವ್ ಬಂದ್ರೂ ಗ್ರಾಮ ಸೀಲ್‍ಡೌನ್

ಮಡಿಕೇರಿ: ಬಾಲಕಿಗೆ ಕೊರೊನಾ ವರದಿ ನೆಗೆಟಿವ್ ಬಂದ್ರೂ ಗ್ರಾಮ ಸೀಲ್‍ಡೌನ್ ಮಾಡಿದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಜನತಾ ಕಾಲೋನಿಯನ್ನು ಸೀಲ್‍ಡೌನ್ ಮಾಡಿ ಮೂರು ದಿನಗಳ ಕಳೆದಿವೆ. ಜನತಾ ಕಾಲೋನಿಯ 17 ವರ್ಷದ ಯುವತಿಗೆ ಕೊರೊನಾ ಸೋಂಕು ಇದೆ ಎಂದು ಶಂಕಿಸಲಾಗಿತ್ತು. ಆದ್ರೆ ಪರೀಕ್ಷೆಗೆ ಒಳಪಡಿಸಿದಾಗ ವರದಿಯಲ್ಲಿ ನೆಗೆಟಿವ್ ಬಂದಿದೆ. ಇಂದಿಗೂ ಸೀಲ್‍ಡೌನ್ ಮಾಡಿರುವ ಗ್ರಾಮವನ್ನು ತೆರವು ಮಾಡದೇ ಇರುವುದರಿಂದ ಗ್ರಾಮಸ್ಥರು ಅಧಿಕಾರಿಗಳ …

Read More »

ಮಳೆರಾಯನ ಆರ್ಭಟ- ಕೊಡಗಿನಲ್ಲಿ 2 ದಿನ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟದ ಮಧ್ಯೆ ಹಲವೆಡೆ ಧಾರಾಕಾರ ಮಳೆ ಆಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೊಡಗು ಜಿಲ್ಲೆಯ ಭಾಗಮಂಡಲ-ತಲಕಾವೇರಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಕಾವೇರಿ ನದಿ ತುಂಬಿ ಹರಿಯುತ್ತಿದೆ. ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಬಂದ್ ಆಗಿದೆ. ಚೇರಂಗಾಲದ ಬಳಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಬಂದ್ ಆಗಿದೆ. ಮಡಿಕೇರಿಯ ರಾಜಾಸೀಟ್ ರಸ್ತೆಯಲ್ಲಿ ತಡೆಗೋಡೆಯೊಂದು ಕುಸಿದು ಬಿದ್ದಿದೆ. ಮುಂದಿನ 2 ದಿನಗಳ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. …

Read More »

ಕೊರೊನಾಗೆ ಮೃತಪಟ್ಟವರ ಗೌರವಯುತ ಸಂಸ್ಕಾರಕ್ಕೆ ಮುಂದಾಗಿರೋ ಸ್ವಯಂ ಸೇವಕರು….”

ಮಡಿಕೇರಿ: ಕೊರೊನಾ ಮಹಾಮಾರಿಗೆ ಮೃತಪಟ್ಟರೆಂದರೆ ಮುಗಿಯಿತು. ಅಂತ ಸಾವನ್ನು ಅತ್ಯಂತ ಕೀಳಾಗಿ ನೋಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‍ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದ ಸಂದರ್ಭ ನಡೆದುಕೊಂಡ ರೀತಿ ಅದನ್ನು ಸಾಬೀತು ಪಡಿಸಿವೆ. ಹೀಗಾಗಿ ಎಂತಹದ್ದೇ ಸಾವಿಗೂ ಗೌರವಯುವಾದ ಅಂತ್ಯ ಸಂಸ್ಕಾರವನ್ನು ಮಾಡಬೇಕೆಂಬ ದೃಷ್ಟಿಯಿಂದ ಕೊಡಗಿನ ಸ್ವಯಂ ಸೇವಕರ ತಂಡಗಳು ಸಿದ್ಧವಾಗಿವೆ. ಕೊರೊನಾ ಡೆಡ್ಲಿ ವೈರಸ್ ನಿಂದ ಮೃತಪಟ್ಟ ವ್ಯಕ್ತಿಗಳಿಗೆ ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮೂರು ಧರ್ಮಗಳ ಸ್ವಯಂ …

Read More »

ತಮ್ಮ ಗ್ರಾಮದ ರಸ್ತೆಗಳಿಗೆ ಸ್ವಂತ ಖರ್ಚಿನಲ್ಲಿ ಸ್ಯಾನಿಟೈಸ್ ಮಾಡಿದ ಯುವಕರು

ಕೊಡಗು: ಕೊರೊನಾ ಮಹಾಮಾರಿ ಸೋಂಕು ತಡೆಯುವ ಉದ್ದೇಶದಿಂದ ಗ್ರಾಮದ ಯುವಕರೇ ಸ್ವಯಂ ಪ್ರೇರಿತರಾಗಿ ರಸ್ತೆಗಳಿಗೆ ಸ್ಯಾನಿಟೈಸರ್ ಮಾಡುತ್ತಿರುವ ಘಟನೆ ವಿರಾಜಪೇಟೆ ತಾಲೂಕಿನ ಚಯ್ಯನಕೋಟೆ ಗ್ರಾಮದಲ್ಲಿ ನಡೆದಿದೆ. ಕೊರೊನಾ ವೈರಸ್ ಹರಡುವ ಮುನ್ನ ಎಚ್ಚರಿಕೆ ವಹಿಸಿದ ಯುವಕರು, ಒಂದು ವಾಟ್ಸಾಪ್ ಗ್ರೂಪ್ ಮಾಡಿಕೊಂಡು ಸ್ವಯಂ ಪ್ರೇರಿತರಾಗಿ ಗ್ರಾಮದ ಪ್ರತೀ ರಸ್ತೆಗಳಿಗೆ ಸ್ಯಾನಿಟೈಸರ್ ಸಿಂಪಡಿಸುತ್ತಿದ್ದಾರೆ. ಸ್ವಂತ ಖರ್ಚಿನಲ್ಲಿ ಸ್ಯಾನಿಟೈಸರ್ ಮಾಡಿರುವ ಯುವಕರ ಸಾಮಾಜಿಕ ಕಾಳಜಿಯ ಕೆಲಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗ್ರಾಮಕ್ಕೆ …

Read More »