ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮಾಯಿ ಹೇಳಿದರು. ಅವರು ಬಾಗಲಕೋಟೆಯಲ್ಲಿ ಶನಿವಾರ ಸಿಟಿಜನ್ ಫಾರ್ …
Read More »ಕಂಬಳ ಅತ್ಯಂತ ಜನಪ್ರಿಯ ಗ್ರಾಮೀಣ ಕ್ರೀಡೆ: ಸಿಎಂ ಸಿದ್ದರಾಮಯ್ಯ
ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ …
Read More »ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದರ ಪ್ರಜ್ವಲ್ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿಗೂ ಮುಂಚಿನ ವಾದ ಪ್ರತಿವಾದ ಆಲಿಸಬಹುದಾಗಿದೆ. ಆದರೆ, ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ಎಲ್ಲಾ ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ …
Read More »ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,
ಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. …
Read More »ಅಣ್ಣಾವ್ರ ಬಗ್ಗೆ ಸುದೀಪ್ ಅಂದು ಹೇಳಿದ್ದ ಮಾತು ಇಂದು ವೈರಲ್, ಕಾಮೆಂಟ್ಸ್ ಸುರಿಮಳೆ!
ಕಿಚ್ಚ ಸುದೀಪ್ ಅವರು ಡಾ ರಾಜ್‌ಕುಮಾರ್ () ಬಗ್ಗೆ ಮಾತನ್ನಾಡಿದ್ದಾರೆ. ಅವರು ಅಣ್ಣಾವ್ರ ಬಗ್ಗೆ ಅದೇನು ಹೇಳಿದ್ದಾರೆ ಅನ್ನೋದು ಇಲ್ಲಿದೆ. ಜೊತೆಗೆ, ಅವರು ಹೇಳಿದ್ದು ಯಾವಾಗಲೋ ಇರಬಹುದು. ಆದರೆ ಅದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗಿದ್ದರೆ ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಮೇರುನಟ ಡಾ ರಾಜ್‌ಕುಮಾರ್ ಬಗ್ಗೆ ಅದೇನು ಹೇಳಿದ್ದಾರೆ? ಬಹುಶಃ ನೀವು ಊಹಿಸಿರಲಿಕ್ಕೂ ಸಾಧ್ಯವಿಲ್ಲ. ಅಂತಹ ಮಾತನ್ನು ಸುದೀಪ್ ಹೇಳಿದ್ದಾರೆ. ಅದಕ್ಕೆ ತುಂಬಾ …
Read More »ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸೂರು ಗೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (೩೪) ಮೃತರು, ಪತ್ನಿ ಇದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ದೊಡ್ಡ ಆಣೆ ಗ್ರಾಮದವರು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಇವರು ಪತ್ನಿ ಜ್ಯೋತಿ ಗರ್ಭಿಣಿಯಾಗಿದ್ದು, ಕಾಮಾಕ್ಷಿ ಆಸ್ಪತ್ರೆಯಲ್ಲಿ …
Read More »ಪೂರ್ವ ಮುಂಗಾರು ಮಳೆಯಿಂದ ಮಣ್ಣಿನಲ್ಲಿ ತೇವಾಂಶ ಹೆಚ್ಚಳ: ಖಾರಿಫ್ ಪೂರ್ವ ಬಿತ್ತನೆ ವಿಳಂಬ
ಬೆಂಗಳೂರು: ಮುಂಗಾರು ಪ್ರವೇಶಕ್ಕೆ ಮುನ್ನ ಕರ್ನಾಟಕದಲ್ಲಿ ಈ ವರ್ಷ ಸಾಕಷ್ಟು ವಿಳಂಬದ ನಂತರ ಖಾರಿಫ್ ಪೂರ್ವ ಬಿತ್ತನೆ ಆರಂಭವಾಗಿದೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆ ಸುರಿದು ಸಂಕಷ್ಟದಲ್ಲಿರುವ ರೈತರಿಗೆ ಸಮಾಧಾನ ತಂದಿದೆ. ಆದರೆ ಹಲವೆಡೆ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿದ್ದು, ರೈತರ ಬೀಜ ಬಿತ್ತನೆ ಕಾರ್ಯ ನಿರೀಕ್ಷಿತ ಮಟ್ಟ ತಲುಪಿಲ್ಲ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ(KSNDMC) ಅಂಕಿಅಂಶಗಳ ಪ್ರಕಾರ, ಮೇ 1 ರಿಂದ ಇಲ್ಲಿಯವರೆಗೆ, ರಾಜ್ಯದಲ್ಲಿ ಸರಾಸರಿ …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ: ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ
ದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಶಿರಾಡಿಘಾಟ್ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು. …
Read More »ಕಾಣೆಯಾಗಿದ ಗೋಕಾಕ ಪ್ರತಿಷ್ಠಿತ ಉದ್ಯಮಿ ಶವವಾಗಿ ಪತ್ತೆ
ಗೋಕಾಕ : ಗೋಕಾಕ್ ನಗರದ ಶುಕ್ರವಾರ ಸಂಜೆ ಅಪಹರಣಕ್ಕೆ ಒಳಗಾದ ಉದ್ಯಮಿಯ ಶವ ಕೊಲೆಯಲ್ಲಿ ಪರ್ಯವಸನಗೊಂಡಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ರಾಜು/ಮುನ್ನಾ ಝಂವರ ಎಂಬ ಗೋಕಾಕ ನಗರದ ಉದ್ಯಮಿ ಶುಕ್ರವಾರ ಸಂಜೆ 6:00 ರ ಸುಮಾರಿಗೆ ನಗರದ ಸಿಟಿ ಹೆಲ್ತ್ ಕೇರ್ ವೈದ್ಯ ಸಚಿನ್ ಶಿರಗಾಂವಿ ಜೊತೆ ಸೇರಿ ಮಾತುಕತೆ ನಡೆಸಿದ ನಂತರ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಸಹಾ ಅಷ್ಟೇ ಹೊತ್ತಿಗೆ ಬಂದ್ ಆಗಿತ್ತು. ಈ ಬಗ್ಗೆ ರಾಜು …
Read More »ಕುಂದರಗಿ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಸದಸ್ಯರಾದಲಖನ ಜಾರಕಿಹೊಳಿ
ಗೋಕಾಕ: ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿದ್ದಾರೆ. ಜಾತ್ರೆಯ ಸಂಭ್ರಮ ಜಿಲ್ಲೆ ಯಾದ್ಯಂತ ಸುಮಾರ ಕಡೆ ಗ್ರಾಮ ದೇವಿಯ ಜಾತ್ರೆಗಳು ನಡಿತಿವೆ. ಲಖನ ಜಾರಕಿಹೊಳಿ ಅವರು ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರ ರಾಗಿದ್ದಾರೆ. ಗ್ರಾಮದ ವಿಶೇಷ ಕುಂದು ಕೊರತೆಗಳ ಹಾಗೂ ದೇವಿಯ ಜಾತ್ರೆಗೆ ಬೇಕಾಗುವು ವ್ಯವಸ್ಥೆ ಬಗ್ಗೆ ಗಮನ ಹರಿಸಿ …
Read More »