ನವದೆಹಲಿ: ʻಇಂದು ನನ್ನ ಗಂಡನ ಹುಟ್ಟುಹಬ್ಬ, ನಿಮ್ಮ ಪ್ರಶ್ನೆಗಳನ್ನ ಸ್ಬಲ್ಪ ಚಿಕ್ಕದಾಗಿ ಕೇಳಿʼ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಹಾಸ್ಯ ಮಾಡಿದ ಪ್ರಸಂಗ ನಡೆದಿದೆ. ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಒಂದು ದಿನದ ನಂತರ ದೆಹಲಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ರು. ಈ ವೇಳೆ ಪತ್ರಕರ್ತರೊಬ್ಬರು ಇನ್ನಷ್ಟು ಪ್ರಶ್ನೆಗಳಿವೆ ನಿಮ್ಮ ಬಳಿ ಸಮಯ ಇದೆಯೇ? ಅಂತ ಪ್ರಶ್ನೆ ಮಾಡಿದ್ರು, ಇದಕ್ಕೆ ಮುಗುಳು ನಕ್ಕ ಪ್ರಿಯಾಂಕಾ, …
Read More »ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ
ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿದೆ. ಮಹಿಳಾ ಮೀಸಲಾತಿ ಕಾಯ್ದೆಗೆ 131ನೇ ತಿದ್ದುಪಡಿ ತರುವ ಮೂಲಕ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿತ್ತು. ಮತದಾನದ ಮೂಲಕ ಮಸೂದೆ ಅಂಗೀಕರಿಸಲು ನಿರ್ಧರಿಸಲಾಗಿತ್ತು. ಆದ್ರೆ 3ನೇ ಎರಡರಷ್ಟು ಬಹುಮತ ಸಿಗದ ಹಿನ್ನೆಲೆ ಮಸೂದೆಗೆ ಸೋಲಾಗಿದೆ. ವಿಪಕ್ಷಗಳ ಹಠದಿಂದಾಗಿ ಮೊದಲು ಮಂಡಿಸಿದ ಮಹಿಳಾ ಮೀಸಲಾತಿ ಬಿಲ್ ಸೋಲು ಕಂಡಿದೆ. ಆದ್ದರಿಂದ ಉಳಿದ 2 ಬಿಲ್‌ಗಳನ್ನೂ …
Read More »ಚಾಣಕ್ಯನನ್ನು ಉಲ್ಲೇಖಿಸಿ ಅಮಿತ್ ಶಾಗೆ ನಗುನಗುತ್ತಲೇ ತಿವಿದ ಪ್ರಿಯಾಂಕಾ- ಗೊಳ್ಳೆಂದು ನಕ್ಕ ಗೃಹಮಂತ್ರಿ
ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಚರ್ಚೆಯಲ್ಲಿ ವಯನಾಡು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಇಂದು ಚಾಣಕ್ಯ ಬದುಕಿದ್ದರೆ ನಿಮ್ಮ ರಾಜಕೀಯ ಚತುರತೆಯನ್ನು ನೋಡಿ ಆತನಿಗೆ ಆಘಾತವಾಗುತ್ತಿತ್ತು ಎಂದು ಟಾಂಗ್ ಕೊಟ್ಟಿದ್ದಾರೆ. ಮಹಿಳಾ ಮೀಸಲಾತಿ ಬೆಂಬಲಿಸಿ ಮಾತನಾಡಿದ ಅವರು, ತಮ್ಮ ಪಕ್ಷವು ಮಹಿಳಾ ಪ್ರಾತಿನಿಧ್ಯವನ್ನು ವಿರೋಧಿಸುತ್ತಿಲ್ಲ. ಆದರೆ ಮಸೂದೆಯ ಸಮಯ ಮತ್ತು ರಚನೆಯ ಹಿಂದಿನ ರಾಜಕೀಯ ಉದ್ದೇಶವನ್ನು ಪ್ರಶ್ನಿಸುತ್ತಿದೆ …
Read More »ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ
ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸಲು ಕ್ಷೇತ್ರ ಪುನರ್‌ವಿಂಗಡಣೆಗಾಗಿ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಮಂಡನೆಯಾಗಿದೆ. ಜನಗಣತಿ ಆಧಾರದಡಿ ಕ್ಷೇತ್ರಗಳ ಗಡಿ ನಿರ್ಧರಿಸುವ ಪ್ರಕ್ರಿಯೆ ಇದಾಗಿದೆ. ಜನಸಂಖ್ಯೆ ಮೂಲಕ ಸಮಾನ ಪ್ರತಿನಿಧಿತ್ವ ಒದಗಿಸುವುದು ಇದರ ಉದ್ದೇಶವಾಗಿದೆ. ಸಂವಿಧಾನದ 82 ಹಾಗೂ 170ನೇ ವಿಧಿ ಪ್ರಕಾರ, ಪ್ರತಿ ಜನಗಣತಿಯ ನಂತರ ಈ ಪ್ರಕ್ರಿಯೆ ನಡೆಯಬೇಕು. ಆದ್ರೆ, ಕುಟುಂಬ ನಿಯಂತ್ರಣ ನೀತಿಗೆ ಉತ್ತೇಜನ ಕೊಡೋ ಸಲುವಾಗಿ 2001ರ …
Read More »ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ
ನವದೆಹಲಿ: ಅಸ್ಸಾಂ ಸಿಎಂ ಪತ್ನಿ ರಿಂಕಿ ಭುಯಾನ್ ಶರ್ಮಾ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ. ತೆಲಂಗಾಣ ಹೈಕೋರ್ಟ್ ಏ.10 ರಂದು ನೀಡಿದ್ದ ವಾರದ ಮಟ್ಟಿಗಿನ ತಾತ್ಕಾಲಿಕ ನಿರೀಕ್ಷಣಾ ಜಾಮೀನು ಆದೇಶಕ್ಕೆ ಕೋರ್ಟ್ ತಡೆ ನೀಡಿದೆ. ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ, ನಕಲಿ ದಾಖಲೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ …
Read More »ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್ ಶಾಸಕರು
ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ಯಾರೆಲ್ಲಾ ಹೋಗುತ್ತಿದ್ದಾರೆ? ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.
Read More »ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್ ಸ್ಪಷ್ಟನೆ
ನವದೆಹಲಿ: ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿರುವ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಇರಾನ್ ಯಾವುದೇ ಶುಲ್ಕವನ್ನು ವಿಧಿಸಿಲ್ಲ ಎಂದು ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಭಾರತೀಯ ಹಡಗುಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ, ಈ ಬಗ್ಗೆ ನೀವು ಭಾರತ ಸರ್ಕಾರವನ್ನೇ ವಿಚಾರಿಸಬಹುದು ಎಂದು ಹೇಳುವ ಮೂಲಕ ಈ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಟೋಲ್ ಪಾವತಿಸುವ ಹಡಗುಗಳನ್ನು …
Read More »ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ
ನವದೆಹಲಿ: ರಾಜ್ಯದಲ್ಲಿ ಸಿಎಂ ಕುರ್ಚಿ ತಿಕ್ಕಾಟದ ಮಧ್ಯೆ ಶಾಸಕರ ಮಿನಿಸ್ಟರ್ ಪಟ್ಟದಾಸೆ ಜೋರಾಗಿದೆ. ಹಿರಿಯ ಶಾಸಕರ ದಂಡು ಸಚಿವ ಸಂಪುಟ ಪುನರ್ ರಚನೆ ಆಗಬೇಕು ಎಂದು ಪಟ್ಟು ಹಿಡಿದು ದೆಹಲಿಯಲ್ಲಿ ಠಿಕಾಣಿ ಹೂಡಿದೆ. ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿ ಹಲವು ಶಾಸಕರು ಈಗಾಗಲೇ ದೆಹಲಿಯಲ್ಲಿದ್ದು, ಇನ್ನೂ ಆರೇಳು ಶಾಸಕರು ದೆಹಲಿಗೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿಯಾಗಿದ್ದಾರೆ. 3 ದಿನ ದೆಹಲಿಯಲ್ಲೇ ಉಳಿದು, ರಾಹುಲ್ ಗಾಂಧಿ, ಕೆ.ಸಿ …
Read More »ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ
ನವದೆಹಲಿ: ಭಾರತದಲ್ಲಿ ಸಮಾನತೆ ಇರಬಾರದು ಎಂಬ ಕಾರಣಕ್ಕೆ ಸಂವಿಧಾನವನ್ನು ಮುಗಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಏಪ್ರಿಲ್ 14ರಂದು ನಡೆಯಲಿರುವ ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ದೆಹಲಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಂಬೇಡ್ಕರ್ ಹಾದಿಯಲ್ಲಿ ನಡಿಗೆ, ಸಂವಿಧಾನಕ್ಕಾಗಿ ನಡಿಗೆ ಮ್ಯಾರಾಥಾನ್ ಚಾಲನೆ ನೀಡಿ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಸಂವಿಧಾನ ಭಾರತದ ಅಡಿಪಾಯವಾಗಿದೆ. ಸಂವಿಧಾನವಿಲ್ಲದಿದ್ದರೆ ಇಂದು ನಾವು ಭಾರತ ಎಂದು …
Read More »ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
ನವದೆಹಲಿ: ಆಶಾ ಭೋಸ್ಲೆ ಅವರ ದಶಕಗಳ ಕಾಲದ ಸಂಗೀತ ಪ್ರಯಾಣವು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಭಾರತ ಕಂಡ ಅತ್ಯಂತ ಪ್ರತಿಮಾರೂಪದ ಮತ್ತು ಬಹುಮುಖ ಪ್ರತಿಭೆಯ ಧ್ವನಿಗಳಲ್ಲಿ ಒಬ್ಬರಾದ ಆಶಾ ಭೋಸ್ಲೆ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಎಕ್ಸ್‌ನಲ್ಲಿ ಕಂಬನಿ ಮಿಡಿದಿದ್ದಾರೆ. ಭೋಸ್ಲೆ ಅವರ ಸಂಗೀತ ವಿಶ್ವಾದ್ಯಂತ ಲೆಕ್ಕವಿಲ್ಲದಷ್ಟು ಹೃದಯಗಳನ್ನು ತಲುಪಿತ್ತು. ಅದು ಅವರ ಭಾವಪೂರ್ಣ ಮಧುರ ಅಥವಾ ರೋಮಾಂಚಕ …
Read More »
Laxmi News 24×7