*ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, …
Read More »ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಲಾಂಗ್ ಹಿಡಿದು ಕುಣಿದ ಯುವಕರು ಅರೆಸ್ಟ್
ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಪರಸ್ಪರ ಹೊಟೆದಾಡಿಕೊಂಡಿದ್ದರು. ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿತ್ತು. ಬೆಳಗಾವಿ: ರಾಮದುರ್ಗದಲ್ಲಿ ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆಗೈದಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು …
Read More »ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು
ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು ಎನ್ನುವುದಕ್ಕೆ ನಿದರ್ಶನವಾಗಿ ಚಿಕ್ಕೋಡಿಯಲ್ಲೊಂದು ಘಟನೆ ನಡೆದಿದೆ. ಆತ್ಮೀಯ ಸ್ನೇಹಿತರ ನಡುವೆ ಹೆಂಡತಿ ವಿಚಾರ ಬಂದು ಅದು ಕೊಲೆಯಲ್ಲಿ ಅಂತ್ಯಗೊಂಡಿದೆ. ಆಗಿದ್ದೇನೆಂದರೆ, ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಹೆಂಡ ಕುಡಿಸಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಸುನೀಲ್ ಸಾಳುಂಕೆ(೩೪) ಕೊಲೆಯಾದವನು. ಮಹಾಂತೇಶ ಮತ್ತು ರಾಜು ಎಂಬವರನ್ನು ಈ ಕೊಲೆಗೆ ಸಂಬಂಧಿಸಿ ಬಂಧಿಸಲಾಗಿದೆ. ಅಕ್ಟೋಬರ್ ೭ರಂದು ಈ ಕೊಲೆ …
Read More »ತಾಯಿ ಮತ್ತು ಮೂರು ಮಕ್ಕಳು ಸಾವು
ಬೆಳಗಾವಿ ಮೂಲದ ಮೂರು ಹೆಣ್ಣು ಮಕ್ಕಳು ಹಾಗೂ ತಾಯಿಯ ಶವ ಮಹಾರಾಷ್ಟ್ರದ ಜತ್ತ ತಾಲೂಕಿನ ಬಿಳ್ಳೂರು ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ ಆಗಿರುವ ಸುನಿತಾ ತುಕಾರಾಮ್ ಮಾಳಿ ಮತ್ತು ಪುತ್ರಿಯರಾದ ಅಮೃತಾ, ಅಂಕಿತಾ ಹಾಗೂ ಐಶ್ವರ್ಯಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದೆ. ಕಳೆದ ಭಾನುವಾರ ಮುಂಜಾನೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಮತ್ತು ಮೂವರು ಪುಟ್ಟ ಹೆಣ್ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. …
Read More »ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ …
Read More »ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಗಳೊಂದಿಗೆ ಮಂಗಳವಾರ ರಾತ್ರಿ …
Read More »194 ಕೋಟಿ ರೂ. ವೆಚ್ಚದ ಕೌಜಲಗಿ ಭಾಗದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ರೈತರಿಗೆ ವರದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. ಮೊತ್ತದ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ. ರೈತರ ಜಮೀನುಗಳಿಗೆ ಹೊಲಗಾಲುವೆ ಮೂಲಕ ನೀರು …
Read More »೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*
ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …
Read More »ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ
ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ ಬೆಳಗಾವಿ :ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ …
Read More »ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*
*ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …
Read More »