ಕೋಲಾರ : ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಅವರು, ಬುಧವಾರ ಇಲಾಖೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು, ಸಭೆಯಲ್ಲಿ ಉಸ್ತುವಾರಿ ಸಚಿವ ಎಚ್ ನಾಗೇಶ್, ಶಾಸಕಿ ರೂಪಕಲಾ, ಪರಿಷತ್ ಶಾಸಕ ಗೋವಿಂದರಾಜು, ಡಿಸಿ ಸಿ ಸತ್ಯಭಾಮ ಭಾಗಿಯಾಗಿದ್ದರು, ಸಭೆಯಲ್ಲಿ ನೇಕಾರರ ಜೊತೆಗೆ ಚರ್ಚಿಸಿದ ಸಚಿವರು ಸಮಸ್ಯೆಗಳು ಇದ್ದಲ್ಲಿ ಇಲಾಖೆ ಅಧಿಕಾರಿಗಳ ಸಹಾಯ ಪಡೆಯಿರಿ …
Read More »ಶಿರಾ ಉಪಚುನಾವಣೆ: ಜೆಡಿಎಸ್ನಿಂದ ಯಾರಾಗ್ತಾರೆ ಅಭ್ಯರ್ಥಿ?
ತುಮಕೂರು: ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ . ಜೆಡಿಎಸ್ನಿಂದ ಶಾಸಕರಾಗಿದ್ದ ಬಿ. ಸತ್ಯನಾರಾಯಣ್ ಅವರು ಆಗಸ್ಟ್ 4 ರಂದು ನಿಧನರಾದ ಹಿನ್ನೆಲೆಯಲ್ಲಿ ಅವರ ಸ್ಥಾನ ತೆರವಾಗಿದ್ದು, ಖಾಲಿ ಇರುವ ಶಾಸಕ ಸ್ಥಾನ ತುಂಬಲು ಜೆಡಿಎಸ್ ಪಕ್ಷದಲ್ಲಿ ಪೈಪೋಟಿ ಜೋರಾಗಿದೆ. ಸದ್ಯದ ಮಟ್ಟಿಗೆ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ಗೆ ಉತ್ತಮವಾದ ವಾತಾವರಣ ಇದೆ. 2018 ರಲ್ಲಿ ನಡೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರವಾದ ಇಲ್ಲಿಂದ ಜೆಡಿಎಸ್ …
Read More »ಗದಗ ಜಿಲ್ಲೆಯಲ್ಲಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ಗದಗ : ಮದ್ಯ ಪ್ರಿಯರೇ ಎಚ್ಚರ.. ಎಚ್ಚರ.. ಇನ್ಮುಂದೆ ಮದ್ಯ ಸೇವನೆ ಮಾಡಬೇಕಾದ್ರೆ, ಹತ್ತು ಸಾರಿ ವಿಚಾರ ಮಾಡಿ. ಇಲ್ಲವಾದ್ರೆ, ನೀವು ನಕಲಿ ಮದ್ಯ ಸೇವನೆ ಮಾಡಿ ಯಮರಾಯನ ಪಾದ ಸೇರೋದು ಗ್ಯಾರಂಟಿ. ಗದಗ ಜಿಲ್ಲೆಯಲ್ಲಿ ನಕಲಿ ಮದ್ಯವನ್ನು ರಾಜರೋಷವಾಗಿ ಮಾರಾಟ ಮಾಡಲಾಗುತ್ತಿದೆ. ಸ್ವಲ್ಪವೂ ಅನುಮಾನ ಬಾರದ ಹಾಗೆ ಒರಿಜನಲ್ ಬಾಟಲ್ ಹಾಗೇ ಪ್ಯಾಕ್ ಮಾಡಿ ನಕಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದು ನಕಲಿ ಮದ್ಯದ ಅಸಲಿ ಕಥೆ. ನಕಲಿ …
Read More »ಬೆಳೆ-ಮನೆ ಹಾನಿ ಪ್ರಾಮಾಣಿಕ ಸರ್ವೇಗೆ ಸೂಚನೆ
ರಾಮದುರ್ಗ: ಪ್ರವಾಹದಿಂದಾಗಿ ಹಾನಿಗೊಳಗಾದ ಬೆಳೆ ಹಾಗೂ ಮನೆಗಳ ಸರ್ವೇ ಕಾರ್ಯವನ್ನು ಜಂಟಿಯಾಗಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಮಾಡಬೇಕು. ಏನಾದರೂ ಲೋಪದೋಷ ಎಸಗಿದಲ್ಲಿ ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಅಧಿಕಾರಿಗಳಿಗೆ ಖಡಕ ಸೂಚನೆ ನೀಡಿದರು. ಸ್ಥಳೀಯ ತಾಪಂ ಸಭಾಭವನದಲ್ಲಿ ಮಂಗಳವಾರ ಪ್ರವಾಹಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿ ತಪ್ಪು ನಡೆಯಬಾರದು. ಆ ಸಂದರ್ಭದಲ್ಲಿ ಮಾಡಿದ ತಪ್ಪು ಇನ್ನೂವರೆಗೂ ಬಗೆಹರಿಯುತ್ತಿಲ್ಲ. ನೋಡಲ್ …
Read More »ಸಿದ್ದಪ್ಪ ಕನಮಡ್ಡಿ ಕೊಲೆ ಪ್ರಕರಣ: ₹ 30.48 ಲಕ್ಷ, ಮಾರಕಾಸ್ತ್ರ ವಶ
ಗೋಕಾಕ: ಇಲ್ಲಿ ಮೇ 6ರಂದು ನಡೆದಿದ್ದ ಯುವ ಮುಖಂಡ, ಆದಿಜಾಂಬವ ನಗರ ಬಡಾವಣೆಯ ನಿವಾಸಿ ಸಿದ್ದಪ್ಪ ಅರ್ಜುನ ಕನಮಡ್ಡಿ ಕೊಲೆ ಪ್ರಕರಣದ ತನಿಖೆ ವೇಳೆ ಆರೋಪಿಗಳು ಮತ್ತು ಅವರ ಸಹಚರರ ಮನೆಗಳ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿದ ಪೊಲೀಸರು, ₹ 30.48 ಲಕ್ಷ ನಗದು, ಮಾರಕಾಸ್ತ್ರ ಹಾಗೂ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕರಣದ ಮಾಹಿತಿ ನೀಡಿದರು. ‘ಇಲ್ಲಿನ …
Read More »ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಬಸ್ ಪಾಸ್ ದರ ಏರಿಕೆ ಇಲ್ಲ : ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು : ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿದ್ಯಾರ್ಥಿಗಳ …
Read More »ಕಡಿಮೆ ಸೋಂಕಿತರಿರುವ ಕೋವಿಡ್ ಕೇಂದ್ರ ಬಂದ್!
ಬೆಂಗಳೂರು : ಇತ್ತೀಚಿಗೆ ಕೊರೋನಾ ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿ ಇರಲು ಹೆಚ್ಚು ಒಲವು ತೋರುತ್ತಿರುವುದರಿಂದ ಕಡಿಮೆ ಸೋಂಕಿತರು ಇರುವ ಕೋವಿಡ್ ಆರೈಕೆ ಕೇಂದ್ರಗಳನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು 12 ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿತ್ತು. ಸೋಂಕು ದೃಢಪಟ್ಟವರು ಹೋಮ್ ಐಸೋಲೇಷನ್‌ನಲ್ಲಿರಲು ಹೆಚ್ಚು ಆಸಕ್ತಿ ವ್ಯಕ್ತಪಡಿಸುತ್ತಿದ್ದು, ಕಡಿಮೆ ಸೋಂಕಿತರು ಇರುವ ಕೋವಿಡ್ …
Read More »ಕೋಲಾರ: ಜಿಲ್ಲೆಯಲ್ಲಿ 79 ಮಂದಿಗೆ ಸೋಂಕು
ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 79 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಬುಧವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 763ಕ್ಕೆ ಏರಿಕೆಯಾಗಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 72 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 5 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 28 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರಪೀಡಿತ 27 ಮಂದಿಗೆ ಹಾಗೂ ಆರೋಗ್ಯ …
Read More »‘ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ಕ್ಕೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಿಂದ ಇದುವರೆಗೆ ರಾಜ್ಯ ಸೇರಿದಂತೆ ರಾಜಧಾನಿಯ ಅನೇಕ ಭಾಗಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದೀಗ ಮತ್ತೊಂದು ಹೆಜ್ಜೆ ಎನ್ನುವಂತೆ ಕೆ ಎಸ್ ಆರ್ ಟಿ ಸಿ ಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಮಾರ್ಗದಲ್ಲಿ ಪ್ಲೈ ಬಸ್ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಈ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕೆ ಎಸ್ ಆರ್ …
Read More »ಆರ್.ಪಿ.ಶರ್ಮಾ ಔಟ್ ಆಫ್ ಡೇಂಜರ್ – ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು : ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅವರಿಗೆ ಮಿಸ್ ಫೈರಿಂಗ್ ನಿಂದ ಗುಂಡು ಹಾರಿದೆ. ಆರ್ ಪಿ ಶರ್ಮಾ ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಮಿಸ್ ಫೈರಿಂಗ್ ನಿಂದ ಘಟನೆ ನಡೆದಿದೆ. ಮಿಸ್ ಫೈರಿಂಗ್ ನಿಂದ ಆರ್ ಪಿ ಶರ್ಮಾ …
Read More »