Breaking News

new delhi

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ: ಕೆನಡಾದಲ್ಲಿ ತಿರಂಗ ಕಾರು ರ‍್ಯಾಲಿ!

ಕೆನಡ: 74ನೇ ಸ್ವಾತಂತ್ರ್ಯ ದಿನಾಚರಣೆಗೆ ಭಾರತದಲ್ಲಿ ಮಾರ್ಗಸೂಚಿ ಪ್ರಕಟಿಸಲಾಗಿತ್ತು. ಹೀಗಾಗಿ ಅದ್ಧೂರಿ ಸ್ವಾತಂತ್ರ್ಯ ದಿನಾಚರೆ ಸಾಧ್ಯವಾಗಿಲ್ಲ. ಕೊರೋನಾ ವೈರಸ್ ಕಾರಣ ನಿಯಮ ಮೀರದಂತೆ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಇನ್ನು ವಿದೇಶಗಳಲ್ಲೂ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗಿದೆ. ಅದರಲ್ಲೂ ಕೆನಡಾದಲ್ಲಿ ತಿರಂಗ ಕಾರು ರ‍್ಯಾಲಿ ಮೂಲಕ ಆಚರಿಸಲಾಗಿದೆ. ಫ್ರೀಡಂ ಡ್ರೈವ್; ಸ್ವಾತಂತ್ರ್ಯ ದಿನಾಚರಣೆಗೆ ಹ್ಯುಂಡೈ ವಿಶೇಷ ಆಫರ್! ಕೆನಡದಲ್ಲಿನ ಭಾರತೀಯರು ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ತಿರಂಗ ಕಾರು ರ‍್ಯಾಲಿ ಆಯೋಜಿಸಿದ್ದರು. …

Read More »

1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಈ ಯೋಜನೆಯಿಂದಾಗಿ 50 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ನೇರವಾಗಿ ರೈತರ ಖಾತೆಗೇ ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಸಚಿವರು, ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ. 2019-20ನೇ ಸಾಲಿನ ಬೆಳೆವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ …

Read More »

ಮುಸುಕಿನ ಜೋಳ ಬೆಳೆದು ಆರ್ಥಿಕ ಸಂಕಷ್ಟಕೊಳಗಾದ ರೈತರು

ಹಾಸನ : ಕೋವಿಡ್‌-19ನ ಲಾಕ್‌ಡೌನ್‌ ಸಮಸ್ಯೆಯಿಂದ ಮುಸುಕಿನ ಜೋಳ ಬೆಳೆದು ಆರ್ಥಿಕ ಸಂಕಷ್ಟಕೊಳಗಾದ ಪ್ರತಿ ರೈತರಿಗೆ ನೇರವಾಗಿ 5,000 ರು.ಗಳನ್ನು ನೇರ ನಗದು ವರ್ಗಾವಣೆ ಮಾಡುವ ಯೋಜನೆಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಒಟ್ಟು 48,255 ರೈತರಿಗೆ ನೇರ ನಗದು ವರ್ಗಾವಣೆ ಮಾಡಿರುವುದಾಗಿ ಸಚಿವ ಗೋಪಾಲಯ್ಯ ಹೇಳಿದರು. ಜಿಲ್ಲಾ ಪಂಚಾಯತ್‌ ವತಿಯಿಂದ ಒಟ್ಟು 22 ಇಲಾಖೆಗಳಿಗೆ ಈಗಾಗಲೇ 112 ಕೋಟಿ ರು. ಬಿಡುಗಡೆಯಾಗಿದ್ದು, 105 ಕೋಟಿ ರು. ವೆಚ್ಚ ಮಾಡಲಾಗಿದೆ. 2019-20ನೇ ಸಾಲಿನಲ್ಲಿ …

Read More »

ಗೌರಿ, ಗಣೇಶ ಹಬ್ಬಕ್ಕೆ ಕೆಎಂಎಫ್‌ ನಿಂದ ಬಂಪರ್‌ ಕೊಡುಗೆ

ಬೆಂಗಳೂರು : ಕೆಎಂಎಫ್‌ ಸ್ವಾತಂತ್ರ್ಯ ದಿನಾಚರಣೆ, ಗಣೇಶ, ಗೌರಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬಂಪರ್‌ ಕೊಡುಗೆ ನೀಡಿದೆ. ಇಂದಿನಿಂದ ಆ.30ರವರೆಗೆ ನಡೆಯಲಿರುವ ‘ನಂದಿನಿ ಸಿಹಿ ಉತ್ಸವ’ದಲ್ಲಿ ಶೇ.10 ರಷ್ಟುರಿಯಾಯಿತಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಶನಿವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಹಾಲಿನ ಗುಣಮಟ್ಟಕಾಯ್ದುಕೊಂಡು ಗ್ರಾಹಕರಿಗೆ ಸದಾ ಕಾಲ ಉತ್ತಮ ಹಾಲು ಮತ್ತು …

Read More »

ಬೆಂಗಳೂರು ಗಲಭೆ ಪ್ರಕರಣ: ಮತ್ತೆ 35 ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 340ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮತ್ತೆ 35 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 340ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್ 11ರಂದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದ್ದ ಪೋಸ್ಟ್ ಗೆ ಸಂಬಂಧಿಸಿದಂತೆ ಪ್ರತಿಭಟನೆ ಹೆಸರಲ್ಲಿ ಗಲಭೆ ನಡೆಸಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಗೊಂಡಿದ್ದು, ಈ ವರೆಗೂ 340 ಮಂದಿಯನ್ನು ಬಂಧಿಸಿದ್ದಾರೆ. …

Read More »

ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಗೋಕಾಕ: ಭಾರತದ ಇತಿಹಾಸದಲ್ಲಿ ಮೈಲುಗಲ್ಲನ್ನು ಸೃಷ್ಟಿಸಿದ ದಿನ ಮತು ಭಾರತ ದೇಶದ ಎಲ್ಲ ಪ್ರಜೆಗಳು ಸಂಭ್ರಮ ಪಡುವ ದಿನ ಅದುವೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸುದಿನ ಅಗಸ್ಟ 15. ದಿನಾಂಕ 15.08.2020 ರಂದು ಬೆಳಿಗ್ಗೆ 7.45ಕ್ಕೆ ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕಾರ್ಖಾನೆಗೆ ಅತಿ ಹೆಚ್ಚು ಕಬ್ಬು ಪೂರೈಸಿದ  ರೈತರುಗಳಾದ ಯಲ್ಲಪ್ಪಾ ರಂಗಪ್ಪಾ ಮಳಲಿ ಸಾ.ಮಲ್ಲಾಪೂರ ,ಈರಪ್ಪಾ ಸಿದ್ದಪ್ಪಾ ಕಿತ್ತೂರ ಇವರಿಂದ 74 ನೇಯ ಸ್ವಾತಂತ್ರ್ಯ …

Read More »

ಮುಂದುವರೆದ ಕೊರೊ‌ನಾ ಕಾಟ: ಮತ್ತೆ 61 ಜನರಿಗೆ ಸೋಂಕು

ಗೋಕಾಕ: ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ರವಿವಾರದಂದು 61 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ನಗರದಲ್ಲಿ 43, ಅಂಕಲಗಿ ಗ್ರಾಮದಲ್ಲಿ 4 , ದೂಪಧಾಳ 3, ಮಲ್ಲಾಪೂರ ಪಿ.ಜಿ2 , ಶಿಂಧಿಕೂರಬೇಟ, ಮದವಾಲ,ಮಲ್ಲಾಪೂರ, ಅವರಾಧಿ, ಕೌಜಲಗಿ, ತುಕ್ಕಾನಟ್ಟಿ, ಗಣೇಶವಾಡಿ, ಗೋಕಾಕ ಫಾಲ್ಸ, ಪಂಚನಾಯಕನಹಟ್ಟಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಡಪಟ್ಟಿದೆ.

Read More »

ಎಸ್‌ಪಿಬಿ ಆರೋಗ್ಯ ಇನ್ನೂ ಗಂಭೀರ

ಚೆನ್ನೈ: ಕೋವಿಡ್‌-19 ಬಳಲುತ್ತಿರುವ ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರವಾಗಿದ್ದು, ಜೀವರಕ್ಷಕ ವ್ಯವಸ್ಥೆಯೊಂದಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ. ಕೊರೊನಾ ಸೋಂಕು ದೃಢಪಟ್ಟ ಕಾರಣದಿಂದ ಆಗಸ್ಟ್‌ 5ರಂದು ಅವರನ್ನು ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಬಾಲಸುಬ್ರಹ್ಮಣ್ಯಂ ಅವರಿಗೆ ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಸೇವೆಯ ಸಹಾಯಕ ನಿರ್ದೇಶಕಿ ಡಾ.ಅನುರಾಧ ಭಾಸ್ಕರನ್‌ …

Read More »

ಕೋವಿಡ್: 404 ಮಂದಿ ಗುಣಮುಖ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 358 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ನಾಲ್ವರು ಬೆಳಗಾವಿ ಹಾಗೂ ಒಬ್ಬರು ಗೋಕಾಕ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಜಿಲ್ಲೆಯಲ್ಲಿ ಮಾದರಿ ಸಂಗ್ರಹ ಸಂಖ್ಯೆ 61,752ರ ಗಡಿ ದಾಟಿದೆ. ಈ ಪೈಕಿ 52,779 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 818 …

Read More »

ಬೆಳಗಾವಿ | ಕುಸಿದ ಹಳೆ ಮನೆ: 12 ಮಂದಿ ರಕ್ಷಣೆ

ಬೆಳಗಾವಿ: ಇಲ್ಲಿನ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ ಹಳೆ ಮನೆಯೊಂದು ಪಕ್ಕದ ಮನೆಯ ಮೇಲೆ ದಿಢೀರ್‌ ಕುಸಿದು ಬಿದ್ದಿದ್ದರಿಂದ, ಒಳಗೆ ಸಿಲುಕಿದ್ದ ಬಾಲಕ ಮತ್ತು ಬಾಲಕಿ ಸೇರಿದಂತೆ 12 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುತ್ತಮುತ್ತಲಿನ ಮನೆಗಳವರು ಆತಂಕಗೊಂಡಿದ್ದರು. ಡಾ.ಕೋಟೂರು ಎನ್ನುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಹಳೆಯದಾಗಿದ್ದ ಆ ಕಟ್ಟಡ ಸತತ ಮಳೆಯಿಂದಾಗಿ ಮತ್ತಷ್ಟು ಶಿಥಿಲಗೊಂಡಿತ್ತು. ಅದಕ್ಕೆ ಹೊಂದಿಕೊಂಡಂತೆ ಇದ್ದ ಗೋಡೆಯು ನಗರಪಾಲಿಕೆ ಮಾಜಿ ಸದಸ್ಯೆ ಶಶಿಕಲಾ ಸುರೇಕರ ಅವರ ಮನೆಯ …

Read More »