ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಎರಡು ಲಕ್ಷದ ಗಡಿ ದಾಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 6,706 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆ ಕಂಡಿದೆ. ಈ ಪೈಕಿ 78,337 ಸಕ್ರೀಯ ಪ್ರಕರಣಗಳಿವೆ. ಅಲ್ಲದೇ, ಇಂದು ಕೂಡ 103 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ 727 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಂಗಳೂರು ನಗರದಲ್ಲಿ 1,893 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, …
Read More »ಸ್ವದೇಶಿ ಎಂದರೆ ಎಲ್ಲ ವಿದೇಶಿ ಉತ್ಪನ್ನಗಳ ಬಹಿಷ್ಕಾರವಲ್ಲ; ಭಾಗವತ್ ಸ್ಪಷ್ಟನೆ
ಹೊಸದಿಲ್ಲಿ: ಸ್ವದೇಶಿ ಎಂದರೆ ಪ್ರತಿಯೊಂದು ವಿದೇಶಿ ಉತ್ಪನ್ನವನ್ನು ಬಹಿಷ್ಕರಿಸುವುದಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಜೀ ಭಾಗವತ್ ಸ್ಪಷ್ಟಪಡಿಸಿದ್ದಾರೆ. ಎಲ್ಲ ವಿದೇಶಿ ವಸ್ತುಗಳನ್ನು ಬಹಿಷ್ಕರಿಸುವುದ ರಲ್ಲಿ ಅರ್ಥವಿಲ್ಲ. ದೇಶದಲ್ಲಿ ಸಾಂಪ್ರದಾಯಿಕ ಕೊರತೆ ಇರುವ, ಸ್ಥಳೀಯವಾಗಿ ಲಭ್ಯ ವಿಲ್ಲದ ತಂತ್ರ ಜ್ಞಾನಗಳು ಅಥವಾ ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Read More »ಖಾಸಗಿ ರೈಲುಗಳಿಗೆ ಇರಲಿದೆ ಕೇಂದ್ರದ ನಿಗಾ; ನಿಯಮಗಳ ಪ್ರಕಟ; ಸಮಯ ಪಾಲನೆಗೆ ಇರಲಿದೆ ಬಿಗಿ ಕ್ರಮ
ಹೊಸದಿಲ್ಲಿ: ಖಾಸಗಿ ಕಂಪೆನಿಗಳ ಪಾಲುದಾರಿಕೆಯಲ್ಲಿ ಆರಂಭವಾಗಲಿರುವ ರೈಲು ಸೇವೆಗಳಿಗೆ ಮತ್ತಷ್ಟು ಕಟ್ಟುನಿಟ್ಟಿನ ನಿಯಮಗಳನ್ನು ಹೇರಲು ರೈಲ್ವೆ ಇಲಾಖೆ ಮುಂದಾಗಿದೆ. ಸಮಯ ಪರಿಪಾಲನೆ ಮಾಡದ ರೈಲುಗಳ ಮೇಲೆ ದಂಡ ವಿಧಿಸುವ, ಸುಳ್ಳು ಆದಾಯ ತೋರಿಸುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂಥ ನಿಯಮಗಳನ್ನು ಪ್ರಕಟಿಸಲಾಗಿದೆ. ತಡವಾದರೆ, ಬೇಗ ಬಂದರೆ ದಂಡ: ಖಾಸಗಿ ರೈಲೊಂದು ನಿಲ್ದಾಣದಿಂದ ತಡವಾಗಿ ಹೊರಟರೆ ಅಥವಾ ನಿಗದಿತ ನಿಲ್ದಾಣವನ್ನು ತಡವಾಗಿ ತಲುಪಿದರೆ ಆ ರೈಲನ್ನು ನಿರ್ವಹಿಸುವ ಖಾಸಗಿ ಕಂಪೆನಿಯ ಮೇಲೆ ದಂಡ …
Read More »ದೇವರ ನಾಡಿನಲ್ಲಿ ಅಲೆಪ್ಪಿಯೇ ಸ್ವರ್ಗ.!
ಅಲೆಪ್ಪಿಗೆ ಒಮ್ಮೆ ಭೇಟಿ ನೀಡಿದವರು ಅಲ್ಲಿನ ಸಹಜ ಸೌಂದರ್ಯವನ್ನು ಮರೆಯಲು ಸಾಧ್ಯವೇ ಇಲ್ಲ. ಒಂದು ಕಡೆ ಕಡಲು, ಮತ್ತೊಂದೆಡೆ ಕಡಲಿನಾಳದ ಹವಳಗಳು ತೇಲಿ ಬಂದು ಸೃಷ್ಟಿಸಿದ ಹವಳದ ದಂಡೆಗಳು, ಪಾಮ್ ಮರದ ದಟ್ಟ ಕಾಡು, ಹಿನ್ನೀರು..ಈ ಎಲ್ಲ ಸೊಬಗನ್ನು ಒಂದೆಡೆ ಸೇರಿಸಬೇಕಾದರೆ ನೀವು ಕೇರಳದ ಅಲೆಪ್ಪಿಗೆ ಭೇಟಿ ನೀಡಲೇ ಬೇಕು. ಇಲ್ಲಿನ ದೋಣಿ ವಿಹಾರ ಅವಿಸ್ಮರಣೀಯ. ಹಿನ್ನೀರಿನ ಪ್ರವಾಸ, ದೋಣಿ ಮನೆಯಲ್ಲಿ ತಂಗುವಿಕೆ, ಪ್ರಶಾಂತ ವಾತಾವರಣ ಎಂಥವರನ್ನೂ ಸೆಳೆಯುವಂತಿದೆ. ದೋಣಿ …
Read More »ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢ
ಹೊಸದಿಲ್ಲಿ: ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಾಗಿರುವ ಮಹಂತ್ ನೃತ್ಯ ಗೋಪಾಲ್ ದಾಲ್ ಅವರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿ ತಿಳಿಸಿವೆ. ಕೋಟ್ಯಾಂತ ಭಾರತೀಯರ ಕನಸ್ಸಾಗಿದ್ದ ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆ ಆಗಸ್ಟ್ 5 ರಂದು ನೆರವೇರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಐವರು ಪ್ರಮುಖ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. …
Read More »‘ಬೆಳೆ ಸಮೀಕ್ಷೆಗೆ ಮೊಬೈಲ್ ಆಯಪ್ ಬಳಸಿ’
ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ. ‘ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದೆ. ಸಂಗ್ರಹವಾದ ಬೆಳೆಗಳ ಮಾಹಿತಿಯನ್ನು ತಾಲ್ಲೂಕು ಆಡಳಿತದಿಂದ ಪರಿಶೀಲಿಸಲಾಗುವುದು’. ‘ರೈತರು ಸ್ಮಾರ್ಟ್ ಮೊಬೈಲ್ ಫೋನ್‌ನಲ್ಲಿ ಬೆಳೆ ಸಮೀಕ್ಷೆ ಆಯಪ್ ಅನ್ನು …
Read More »ಡಿ.ಜೆ. ಹಳ್ಳಿ ಗಲಭೆ ಖಂಡನೀಯ, ಸರ್ಕಾರ ಕಾನೂನಿನ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ಡಿ.ಜೆ. ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಬುಧವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಬೆಂಗಳೂರಿನ ಡಿ.ಜೆ. ಹಳ್ಳಿ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಇದು ಸಮಾಜಘಾತುಕ ಕೃತ್ಯ. ಶಾಸಕರ ಆಸ್ತಿಯಾಗಲಿ, ಸಾಮಾನ್ಯ ಜನರ ಆಸ್ತಿಯೇ ಆಗಿರಲಿ, ಪೊಲೀಸ್ ಠಾಣೆಯಾಗಿರಲಿ ಯಾವುದನ್ನು ಹಾನಿ ಮಾಡುವುದು ಸರಿಯಲ್ಲ. ಇದನ್ನು ನಾವ್ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು. …
Read More »ಡಿಜೆ ಹಳ್ಳಿ ಘಟನೆ| ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸುರೇಶ ಅಂಗಡಿ
ಬೆಳಗಾವಿ: ‘ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿ, ಸಮಾಜದಲ್ಲಿ ಶಾಂತಿ ಕದಡಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಒತ್ತಾಯಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಾಟೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಹಿಂದೆ ಇಲ್ಲಿನ ಬಿಮ್ಸ್ ಆಸ್ಪತ್ರೆ ಎದುರು ನಿಂತಿದ್ದ ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿತ್ತು. ಇಂತಹ ಘಟನೆಗಳು ಅತ್ಯಂತ ಖಂಡನೀಯ. ಇವೆಲ್ಲವೂ ದೇಶದ್ರೋಹಿಗಳು ಮಾಡುವ …
Read More »ಮತ್ತೆ 46 ಜನರಿಗೆ ಸೋಂಕು
ಗದಗ: ಜಿಲ್ಲೆಯಲ್ಲಿ ಹೊಸದಾಗಿ 46 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,399ಕ್ಕೆ ಏರಿದೆ. ಈ ವರೆಗೆ 1321 ಜನರು ಗುಣಮುಖರಾಗಿದ್ದು, 1027 ಪ್ರಕರಣಗಳು ಸಕ್ರಿಯವಾಗಿವೆ. ಗದಗ-28, ಮುಂಡರಗಿ-4, ನರಗುಂದ-6, ರೋಣ-6, ಶಿರಹಟ್ಟಿ-1, ಹೊರಜಿಲ್ಲೆಯ ಒಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಜೆ.ಟಿ. ಕಾಲೇಜು ರಸ್ತೆ, ನರಸಾಪುರ, ವಿವೇಕಾನಂದ ನಗರ,ಬೆಟಗೇರಿ, ಕಳಸಾಪುರ ರಸ್ತೆಯ ಬಾಪೂಜಿ ನಗರ, ಹುಡ್ಕೊ ಕಾಲೋನಿ, ಮದೀನಾ ಮಸೀದಿ ಹತ್ತಿರ, ಎಸ್.ಎಂ. ಕೃಷ್ಣಾ ನಗರ, …
Read More »ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠ
ರಾಮನಗರ: ಕೋವಿಡ್-19 ಲಾಕ್‌ಡೌನ್ ಕಾರಣಕ್ಕೆ ಕಲಿಕೆಯಿಂದ ವಿಮುಖರಾಗಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಆನ್‌ಲೈನ್ ಪಾಠ ಆರಂಭಿಸಿದೆ. ಈ ಮೂಲಕ ಮನೆಯಲ್ಲೇ ಕಲಿಕೆ ಮುಂದುವರಿಸುವ ಅವಕಾಶ ನೀಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಲ್ಲಿ ವಿವಿಧ ವಿಷಯಗಳ ನುರಿತ ಉಪನ್ಯಾಸಕರಿಂದ ಪಠ್ಯದ ವಿವಿಧ ಅಧ್ಯಾಯಗಳನ್ನು ವಿಡಿಯೊ ರೂಪದಲ್ಲಿ ಸಂಗ್ರಹಿಸಿ ಯೂಟ್ಯೂಬ್‍ಗೆ ಅಪ್‍ಲೋಡ್ ಮಾಡಲಾಗುತ್ತಿದೆ. ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮಗಳೆಡರಲ್ಲೂ ಈ ಪಾಠಗಳು ಲಭ್ಯವಿದೆ. ಕಳೆದ ಜುಲೈನಿಂದಲೇ ಈ …
Read More »
Laxmi News 24×7