Breaking News

new delhi

ಈಗ ಸಂಚರಿಸುವ ಯಾವುದೇ ರೈಲುಗಳನ್ನು ನಿಲ್ಲಿಸಿಲ್ಲ- ರೈಲ್ವೇಯಿಂದ ಸ್ಪಷ್ಟನೆ

ನವದೆಹಲಿ: ನಿತ್ಯ ಸಂಚರಿಸುವ ಯಾವುದೇ ರೈಲುಗಳನ್ನು ನಿಲ್ಲಿಸಲಾಗಿಲ್ಲ ಎಂದು ರೈಲ್ವೇ ಸಚಿವಾಲಯ ಸ್ಪಷ್ಟಪಡಿಸಿದೆ.ಈ ಕುರಿತು ಟ್ವೀಟ್ ಮಾಡುವ ಮೂಲಕ ತಿಳಿಸಿರುವ ಸಚಿವಾಲಯ, ಕೆಲ ಮಾಧ್ಯಮಗಳಲ್ಲಿ ಸೆಪ್ಟೆಂಬರ್ 30ರ ವರೆಗೆ ನಿತ್ಯ ಸಂಚರಿಸುವ ಎಲ್ಲ ರೈಲುಗಳನ್ನು ಸಚಿವಾಲಯ ರದ್ದು ಮಾಡಿದೆ ಎಂದು ವರದಿಯಾಗಿದೆ. ಈ ವರದಿ ಸರಿಯಲ್ಲ. ಸಚಿವಾಲಯ ಯಾವುದೇ ಹೊಸ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ನೋಟಿಫಿಕೇಶನ್ ಹರಿದಾಡುತ್ತಿದ್ದು, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ …

Read More »

ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.

ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …

Read More »

ಕೋವಿಡ್‌: ಸೋಂಕಿತರಿಗಿಂತ ಗುಣಮುಖರಾದವರ ಹೆಚ್ಚಳ

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 312 ಜನರಿಗೆ ಕೋವಿಡ್‌-19 ದೃಢಪಟ್ಟಿದೆ. ಇದೇ ವೇಳೆ, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 5,174ಕ್ಕೆ ತಲುಪಿದೆ. ಇವರಲ್ಲಿ 3,431 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಚಿಕ್ಕೋಡಿ, ರಾಮದುರ್ಗ, ಹುಕ್ಕೇರಿ, ರಾಯಬಾಗ ಸೇರಿದಂತೆ ಬಹುತೇಕ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸೋಂಕು ಕಂಡುಬಂದಿದೆ. ಬೆಳಗಾವಿಯ 60 ವರ್ಷದ ವೃದ್ಧೆಯೊಬ್ಬರು …

Read More »

ಪ್ರವಾಹ ನಿಯಂತ್ರಣಕ್ಕೆ 5 ಪರಿಹಾರ ಕೇಂದ್ರಗಳ ಪ್ರಾರಂಭ, 25 ಬೋಟ್​ ವ್ಯವಸ್ಥೆ: ಬೆಳಗಾವಿ ಡಿ.ಸಿ

ಬೆಳಗಾವಿ: ಕಳೆದ ಬಾರಿ ಪ್ರವಾಹದ ಹಿನ್ನೆಲೆ ನಮಗೆ ಅನುಭವ ಇದೆ. ಹೀಗಾಗಿ ಈ ಬಾರಿ ಪ್ರವಾಹ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ್​ ತಿಳಿಸಿದ್ದಾರೆ. ಗ್ರಾಮ, ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 1 ಲಕ್ಷ 55 ಸಾವಿರ ಕ್ಯೂಸೆಕ್​​​ ಒಳಹರಿವು ಇದ್ದು, ಅದು 2.5ಲಕ್ಷ ಕ್ಯೂಸೆಕ್​​​ಗೆ ಏರಿಕೆಯಾದ್ರೆ ಮಾತ್ರ ಜಮೀನು- ಮನೆಗೆ ನೀರು ನುಗ್ಗುವ ಆತಂಕ ಇದೆ. …

Read More »

ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ …

Read More »

ಯೋಗಿ ಆದಿತ್ಯನಾಥ್ ಬೆಸ್ಟ್ ಸಿಎಂ

ನವದೆಹಲಿ : ಇತ್ತೀಚಿಗೆ ಇಂಡಿಯಾ ಟುಡೆ-ಕಾರ್ವಿ ಇನ್ಸೈಟ್ಸ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ನಡೆಸಿದ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸತತ ಮೂರನೇ ಬಾರಿಗೆ ಭಾರತದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಲ್ಲಿ ಮೊದಲನೆಯವರಾಗಿ ಸ್ಥಾನ ಪಡೆದಿದ್ದಾರೆ. ಯೋಗಿ ಆದಿತ್ಯನಾಥ್ ಒಟ್ಟು ಮತಗಳ ಪೈಕಿ ಶೇಕಡಾ 24 ರಷ್ಟು ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿ ಸತತ ಮೂರನೇ ಬಾರಿಗೆ ‘ಅತ್ಯುತ್ತಮ ಸಿಎಂ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಇತ್ತೀಚಿನ …

Read More »

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ವಿಜಯಪುರ‌ದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ನಗರದ ಕೆ‌ಎಲ್‌ಇ ಆಸ್ಪತ್ರೆಗೆ ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು. ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಶುಕ್ರವಾರ ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ. ಆ. 8ರಂದು ಹುಬ್ಬಳ್ಳಿಯಲ್ಲಿ …

Read More »

ಪೊಲೀಸರ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಕೈಪಿಡಿ

ಬೆಂಗಳೂರು: ಪೊಲೀಸರ ಆರೋಗ್ಯ ರಕ್ಷಣೆಗಾಗಿ ಮಾರ್ಗಸೂಚಿ ಕೈಪಿಡಿ ಬಿಡುಗಡೆ ಮಾಡಲಾಗಿದೆ. ನಗರದ ಹಲವು ಪೊಲೀಸರು ಕೊರೊನಾ ಸೋಂಕಿತರಾಗಿದ್ದರು. ಹೀಗಾಗಿ, ಪೊಲೀಸರು ಆರೋಗ್ಯದ ಬಗ್ಗೆ ಕಾಳಜಿ ವಹಿಸಲೆಂದು ಈ ಕೈಪಿಡಿ ಸಿದ್ಧಪಡಿಸಲಾಗಿದೆ. ಇದರಲ್ಲಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್‌ ಸೂಚನೆ ನೀಡಿದ್ದಾರೆ. ‘ಠಾಣೆಯಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಆಗಾಗ ಕೈ ತೊಳೆಯಬೇಕು, ಹೊರಗಡೆ ಕರ್ತವ್ಯನಿರತ ಸಿಬ್ಬಂದಿ ನೇರವಾಗಿ ಮನೆಗೆ ಹೋಗಬೇಕು, ಸಂಬಂಧಿಕರು-ಸ್ನೇಹಿತರನ್ನು ಭೇಟಿಯಾಗಲು ಹೋಗಬಾರದು. …

Read More »

ನೋಟುಗಳಂತೆ ಕಾಣುವ ಬಂಡಲ್ ತಯಾರಿಕೆ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ: ಖೋಟಾ ನೋಟಿನ ಬಂಡಲ್‌ಗಳನ್ನು ಸಿದ್ಧಪಡಿಸಿದ್ದ ಹಾಗೂ ಜನರಿಗೆ ಮೋಸ ಮಾಡಲು ಯೋಜಿಸಿದ್ದ ಆರೋಪದ ಮೇಲೆ ನಾಲ್ವರನ್ನು ಜಿಲ್ಲೆಯ ಘಟಪ್ರಭಾ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಗೋಕಾಕ ತಾಲ್ಲೂಕು ದೂಪದಾಳದ ಮಹಮದಇಸಾಕ ದೇಸಾಯಿ, ಮುನಾಫ ರಫೀಕ, ರಾಯಬಾಗ ತಾಲ್ಲೂಕು ಸಿದ್ದಾಪೂರದ ಗುಂಡು ಸದಾಶಿವ ಪಾಟೀಲ ಮತ್ತು ಗೋಕಾಕದ ಆದಿಜಾಂಬವ ನಗರದ ಮಲ್ಲಿಕಾರ್ಜುನ ಕನ್ಮಡ್ಡಿ ಬಂಧಿತರು. ಅವರಿಂದ ಪೇಪಲ್‌ ಬಂಡಲ್‌ಗಳು, ತಲಾ 2 ಕಾರ್‌ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು …

Read More »

ಚಿಕ್ಕಮಗಳೂರಿನಲ್ಲಿ 4 ದಿನಗಳಿಂದ ಧಾರಾಕಾರ ಮಳೆ; ಕಳಸ- ಹೊರನಾಡು ಸಂಪರ್ಕ ಬಂದ್

ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ತುಂಗಾ, ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಾಲ್ಕು ದಿನದ ಮಳೆಗೆ ಸುಸ್ತಾಗಿರುವ ಮಲೆನಾಡಿಗರು ಪ್ರವಾಹದ ಭೀತಿಯಲ್ಲಿದ್ದಾರೆ. ನಿನ್ನೆ ರಾತ್ರಿಯೂ ಚಿಕ್ಕಮಗಳೂರಿನಲ್ಲಿ ಎಡಬಿಡದೆ ಮಳೆ ಸುರಿದಿದೆ. ಹಲವು ಕಡೆ ರಸ್ತೆಗಳಿಗೆ ನದಿ ನೀರು ನುಗ್ಗಿದೆ. ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಮಲೆನಾಡಿನ …

Read More »