ಬೆಳಗಾವಿ: ಕೊರೊನಾ ಸೋಂಕಿತರ ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಸೋಂಕಿನ ಭಯ ಮೆರತು ಸ್ಮಶಾನದೊಳಗೆ ನುಗ್ಗಿದ ಘಟನೆ ಜಿಲ್ಲೆಯ ಸದಾಶಿವನಗರದ ಸ್ಮಶಾನದಲ್ಲಿ ನಡೆದಿದೆ. ನಿನ್ನೆ ಸಂಜೆ ನಗರ ಪಾಲಿಕೆ ಸಿಬ್ಬಂದಿ ಕೊರೊನಾ ಸೋಂಕಿತರೊಬ್ಬರ ಅಂತ್ಯಕ್ರಿಯೆ ನಡೆಸಲು ಸದಾಶಿವನಗರದ ಸ್ಮಶಾನಕ್ಕೆ ಮೃತದೇಹ ತಂದಿದ್ದಾರೆ. ಈ ವೇಳೆ ಸೋಂಕಿತರ ಸಂಬಂಧಿಕರು ಪಿಪಿಇ ಕಿಟ್ ಇಲ್ಲದೇ, ಶವದ ಅಕ್ಕಪಕ್ಕ ಓಡಾಡಿದ್ದಾರೆ. ಅಲ್ಲದೇ ಅಂತ್ಯಸಂಸ್ಕಾರದ ವೇಳೆ ಬೆಂಕಿ ಸರಿಪಡಿಸಲು ಪಾಲಿಕೆ ಸಿಬ್ಬಂದಿ ಕೂಡ ಪಿಪಿಇ ಕಿಟ್ …
Read More »63,922 ಪಡಿತರ ಕಾರ್ಡ್ ರದ್ದು: ಗಡಾದ
ಮೂಡಲಗಿ: ರಾಜ್ಯದಲ್ಲಿ ಒಟ್ಟು 1,27,00,451 ಪಡಿತರ ಕಾರ್ಡ್‌ಗಳು ಇದ್ದು ಇವುಗಳಲ್ಲಿ 63,922 ಕಾರ್ಡ್‌ಗಳನ್ನು ಅನರ್ಹ ಪಡಿತರ ಕಾರ್ಡ್‌ಗಳೆಂದು ಗುರುತಿಸಿ ರದ್ದು ಪಡಿಸಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, 43,138 ಕಾರ್ಡ್‌ಗಳನ್ನು ಬಿಪಿಎಲ್‌ದಿಂದ ಎಪಿಎಲ್‌ಗೆ ಪರಿವರ್ತಿಸಲಾಗಿದೆ ಮತ್ತು ಅಕ್ರಮ ಬಿಪಿಎಲ್ ಕಾರ್ಡ್‌ಗಳನ್ನು ವಾಪಸ್ ಪಡೆಯುವಾಗ ಕಾರ್ಡ್‌ದಾರರಿಂದ ದಂಡದ ರೂಪದಲ್ಲಿ ಒಟ್ಟು 96,27,961 ರೂ. ಖಜಾನೆಗೆ ಪಾವತಿಸಿಕೊಳ್ಳಲಾಗಿರುವ ಅಂಶವು ಮಾಹಿತಿ ಹಕ್ಕಿನಿಂದ ಬೆಳಕಿಗೆ …
Read More »ಚಿಕ್ಕೋಡಿಯ ಗಣ್ಯ ವ್ಯಕ್ತಿರೋರ್ವರಿಗೆ ಕೋವಿಡ್ ಪಾಸಿಟಿವ್: ಬೆಚ್ಚಿಬೀಳಿಸಿದ ಟ್ರಾವೆಲ್ ಹಿಸ್ಟರಿ
ಚಿಕ್ಕೋಡಿ: ನಗರದಲ್ಲಿ ಸಕ್ರಿಯವಾಗಿದ್ದ ಗಣ್ಯ ವ್ಯಕ್ತಿಯೋರ್ವರಿಗೆ ಕೋವಿಡ್-19 ಸೋಂಕು ತಗುಲಿದ್ದು, ಚಿಕ್ಕೋಡಿ ನಗರದ ಜನರನ್ನು ಬೆಚ್ಚಿ ಬೀಳಿಸಿದೆ. ಚಿಕ್ಕೋಡಿ ನಗರದ ಸಾಯಿ ಮಂದಿರ ಹತ್ತಿರ ಇರುವ ಓರ್ವ ಗಣ್ಯ ವ್ಯಕ್ತಿಗೆ ಶುಕ್ರವಾರ ಕೋವಿಡ್ ಪಾಸಿಟಿವ್ ಆಗಿರುವುದು ದೃಢವಾಗಿದೆ. ಪಾಸಿಟಿವ್ ಬಂದಿರುವ ಈ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಪುರಸಭೆ ಆವರಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ನಗರದ ಜನ ಮತ್ತಷ್ಟು ಭೀತಿಗೆ ಒಳಗಾಗಿದ್ದಾರೆ. ಹಾಲಿ ಪುರಸಭೆ ಸದಸ್ಯರು, ಪುರಸಭೆ ಅಧಿಕಾರಿಗಳು …
Read More »ಮುಂಬೈನ ಧಾರವಿ ಕೊಳೆಗೆರಿಯ ಜನತೆಯಲ್ಲಿ ಆಂಟಿ ಬಾಡಿ ಪತ್ತೆ : ವಿಜ್ಞಾನಿಗಳ ಲೆಕ್ಕಚಾರ ತಲೆಕೆಳಗು
ಮುಂಬೈ: ಭಾರತದ ಅತಿದೊಡ್ಡ ಕೊಳೆಗೇರಿಯಾಗಿರುವ ಧಾರಾವಿಯಲ್ಲಿ ವಾಸಿಸುವ ಹತ್ತು ಜನರಲ್ಲಿ ಆರರಲ್ಲಿ ಆರು ಜನರು ಕರೋನವೈರಸ್ ಪ್ರತಿಕಾಯಗಳನ್ನು ಹೊಂದಿದ್ದಾರೆ ಇದೇ ವೇಳೆ ಅವರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭಾರತದ ಹಣಕಾಸು ಕೇಂದ್ರವಾದ ಮುಂಬೈನ ಮೂರು ಉಪನಗರಗಳಲ್ಲಿ 6,936 ಜನರ ಜುಲೈನಲ್ಲಿ ನಡೆದ ಸಮೀಕ್ಷೆಯಲ್ಲಿ, ಈ ಬಗ್ಗೆ ತಿಳಿದು ಬಂದಿದೆ. ಭಾರತದ ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರದ ವೈಜ್ಞಾನಿಕ ಸಲಹಾ ಸಮಿತಿಯ ಅಧ್ಯಕ್ಷ ಮತ್ತು ಅದರ ಪ್ರಮುಖ ವೈದ್ಯಕೀಯ ಕಾಲೇಜುಗಳ …
Read More »ಬಸ್‌ನಲ್ಲಿ ಕಲ್ಲು ತುಂಬಿ ಸಾಗಿಸಿದರು!
ಹುಬ್ಬಳ್ಳಿ: ಕುಂದಗೋಳ-ಹುಬ್ಬಳ್ಳಿ ನಡುವೆ ಸಂಚರಿಸುವ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ, ಸಿಬ್ಬಂದಿ ಗುರುವಾರ ಕಲ್ಲು ಸಾಗಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೊಸೂರು ರಸ್ತೆ ಬಳಿ ರಸ್ತೆ ವಿಭಜಕ ಕಾಮಗಾರಿ ನಡೆಯುತ್ತಿದ್ದು, ಮೊದಲು ರಸ್ತೆಗೆ ಹಾಕಲಾಗಿದ್ದ ಕಲ್ಲುಗಳನ್ನು ತೆಗೆಯಲಾಗಿದೆ. ಗೋಕುಲ ರಸ್ತೆಯ ಬಸ್ ಡಿಪೊದಲ್ಲಿ ಉದ್ಯಾನ ಕಾಮಗಾರಿ ನಡೆಯುತ್ತಿರುವುದರಿಂದ, ಅಲ್ಲಿಗೆ ಈ ಕಲ್ಲುಗಳನ್ನು ಸಾಗಿಸಲು ಸಿಬ್ಬಂದಿ ಬಸ್ ಬಳಕೆ ಮಾಡಿಕೊಂಡಿದ್ದಾರೆ. ರಸ್ತೆ ಮೇಲಿದ್ದ ಕಲ್ಲುಗಳನ್ನು ಐದಾರು ಸಿಬ್ಬಂದಿ ಸೇರಿ ಬಸ್‌ಗೆ ತುಂಬಿದ್ದಾರೆ. 50ಕ್ಕಿಂತಲೂ …
Read More »ಕೋವಿಡ್ ನಿಯಂತ್ರಣಕ್ಕೆ ಬಿಡುಗಡೆಯಾಗಿದ್ದು ಕೇವಲ ₹ 230 ಕೋಟಿ!
ಬೆಳಗಾವಿ: ಕೋವಿಡ್ ರೋಗವನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸರ್ಕಾರ ಇದುವರೆಗೆ ಒಟ್ಟು ₹ 230.73 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಗೆ ₹ 13.97 ಕೋಟಿ ದೊರೆತಿದೆ. ಮಾಹಿತಿ ಹಕ್ಕು ಕಾರ್ಯಕರ್ತ (ಆರ್‌ಟಿಐ) ಸುರೇಂದ್ರ ಉಗಾರೆ ಅವರು ಮಾಹಿತಿ ಹಕ್ಕಿನಡಿ ಪಡೆದುಕೊಂಡ ಮಾಹಿತಿಯಿಂದ ಇದು ಬೆಳಕಿಗೆ ಬಂದಿದೆ. ‘ರಾಜ್ಯ ಸರ್ಕಾರ ಹೇಳುವಂತೆ ₹ 2,000 ಕೋಟಿ ಬಿಡುಗಡೆಯಾಗಿಲ್ಲ. ಇದಲ್ಲದೇ, ವಿರೋಧ ಪಕ್ಷದವರು ಹೇಳುವಂತೆ ಸಾವಿರಾರು ಕೋಟಿ ರೂಪಾಯಿಯ …
Read More »ಕ್ಷುದ್ರಗ್ರಹ ಕಂಡುಹಿಡಿದಿದ್ದಾರೆ 10ನೇ ಕ್ಲಾಸ್ ವಿದ್ಯಾರ್ಥಿನಿಯರು!
ನವದೆಹಲಿ: ವಿಜ್ಞಾನ ವಿಷಯದಲ್ಲಿ ಅತೀವ ಆಸಕ್ತಿ ಹೊಂದಿರುವ ಗುಜರಾತ್‌ನ ಸೂರತ್‌ನ ಇಬ್ಬರು ವಿದ್ಯಾರ್ಥಿನಿಯರು ಕ್ಷುದ್ರ ಗ್ರಹವೊಂದನ್ನು ಕಂಡುಹಿಡಿಯುವ ಮೂಲಕ ಇದೀಗ ಭಾರಿ ಶ್ಲಾಘನೆಗೆ ಒಳಗಾಗಿದ್ದಾರೆ. ಈ ಕ್ಷುದ್ರ ಗ್ರಹವು ಇನ್ನು ಕೆಲವೇ ದಿನಗಳಲ್ಲಿ ಭೂಮಿಯ ಸಮೀಪದಿಂದ ಹಾದು ಹೋಗಲಿದೆ. ಅದನ್ನು ಈ ಬಾಲಕಿಯರು ಪತ್ತೆ ಹಚ್ಚಿದ್ದಾರೆ. ವೈದೇಹಿ ವೆಕರಿಯ ಸಂಜಯ್‌ಭಾಯಿ ಹಾಗೂ ರಾಧಿಕಾ ಲಖನಿ ಪ್ರಫುಲ್ಲಭಾಯಿ ಎಂಬ ಬಾಲಕಿಯರು ಈ ಸಾಧನೆ ಮಾಡಿದ್ದಾರೆ. ಈ ರೀತಿಯ ಯಾವುದೇ ಸಂಶೋಧನೆ ಮಾಡಿದರೆ …
Read More »ಕೋವಿಡ್-19: ಪ್ರತೀ ದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿರುವ ಕರ್ನಾಟಕ, ಕೊರೋನಾ ಪಾಸಿಟಿವ್ ದುಪ್ಪಟ್ಟು!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಕರ್ನಾಟಕ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ರಾಜ್ಯದಲ್ಲಿ ಸೋಂಕಿನ ಸರಾಸರಿ ಪಾಸಿಟಿವಿಟಿ ಪ್ರಮಾಣ ದುಪ್ಪಟ್ಟಾಗಿದೆ. ಕಳೆದ ಜು.10ರವರೆಗೆ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.4.18ರಷ್ಟಿದ್ದ ಪಾಸಿಟಿವಿಟಿ ದರ ಇದೀಗ ಶೇ.8.60ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕಳೆದ 18 ದಿನಗಳಲ್ಲಿ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.16.88 ಮಂದಿಗೆ ಸೋಂಕು ದೃಢಪಡುವ ಮೂಲಕ ಆತಂಕ ಹೆಚ್ಚಾಗುವಂತೆ ಮಾಡಿದೆ. ರಾಜ್ಯದಲ್ಲಿ ಜು.10ರವರೆಗೆ ಪಾಸಿಟಿವಿಟಿ …
Read More »ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್ ಕಿಟ್ ವಿತರಣೆ
ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್.ಎಸ್. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿದ್ದ ಶಾಸಕರು ಈಗ …
Read More »ಪಂಜಾಬ್ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್ ವಿತರಿಸಲಿದೆ.
ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್ ವಿತರಿಸಲಿದೆ. ಈಗಾಗಲೇ ಒಟ್ಟು 50 ಸಾವಿರ ಸ್ಮಾರ್ಟ್‌ಫೋನ್‌ಗಳು ಪಂಜಾಬಿಗೆ ಆಗಮಿಸಿದ್ದು, ಯಾರ ಬಳಿ ಫೋನ್ ಇಲ್ಲವೋ ಆ ವಿದ್ಯಾರ್ಥಿನಿಯರಿಗೆ ಈ ಫೋನ್‌ಗಳನ್ನು ನೀಡಲಾಗುವುದು. ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಈ ಫೋನ್‌ಗಳು ಸಹಾಯವಾಗಲಿದೆ ಎಂದು ಸಿಎಂ ಅಮರಿಂದರ್ ಸಿಂಗ್ ತಿಳಿಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಜನತೆಗೆ …
Read More »