ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಸಾವಿನ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 47,704 ಹೊಸ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. 24 ಗಂಟೆಯಲ್ಲಿ 654 ಜನರು ಸಾವನ್ನಪ್ಪಿದ್ದಾರೆ. ಈ ಸಾವುಗಳು ಇಂದು ವಿಶ್ವದಲ್ಲೇ ಅತಿ ಹೆಚ್ಚು. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ ಭಾರತಕ್ಕಿಂತ ಕಡಿಮೆಯಿದೆ. ಯುಎಸ್ ಮತ್ತು ಬ್ರೆಜಿಲ್ ನಲ್ಲಿ ಕಳೆದ …
Read More »ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಸಂದರ್ಶನ
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜಕೀಯ ಸೇರುವುದಂತೂ ಪಕ್ಕಾ ಆಗಿದೆ. ಅದಕ್ಕೂ ಮುನ್ನ ತನ್ನೂರು ಕರೂರಿನಲ್ಲಿ ಜನರೊಂದಿಗೆ ಬೆರೆತು ವಿವಿಧ ಚಟುವಟಿಕಗೆಳಲ್ಲಿ ಅವರು ತೊಡಗಿಕೊಂಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದ್ದಾರೆ. ಇತ್ತೀಚೆಗೆ ತಮಿಳು ವಾಹಿನಿಯೊಂದಕ್ಕೆ ಅವರ ನೀಡಿರುವ ಸಂದರ್ಶನ ತಮಿಳುನಾಡಿನ ರಾಜಕೀಯದಲ್ಲಿಯೇ ಸಂಚಲನ ಸೃಷ್ಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಅಪಮೌಲ್ಯೀಕರಣವನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ಕಚೇರಿಯನ್ನು ಸಾರ್ವಜನಿಕರ ಸಂಪರ್ಕಕಕ್ಕೂ ಲಭ್ಯವಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೋದಿ ಆಡಳಿತವನ್ನು ಮೆಚ್ಚಿದ್ದು …
Read More »ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ರಹಸ್ಯ ಬಯಲು
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕುರಿತಾದ ಫಾರೆನ್ಸಿಕ್ ಲ್ಯಾಬ್ ರಿಪೋರ್ಟ್ ಬಂದಿದೆ. ಅಂಗಾಂಗಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸುಶಾಂತ್ ಮೃತದೇಹದ ಮೇಲೆ ಯಾವುದೇ ಬಲ ಪ್ರಯೋಗವಾಗಿಲ್ಲ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ಸುಶಾಂತ್ ಸಿಂಗ್ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿನ ಕುರಿತಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಕೈಗೊಂಡಿದ್ದರು. ನೇಣು ಬಿಗಿದ ಕಾರಣ ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ. …
Read More »ಲಾಕ್‍ಡೌನ್ ಸಂಕಷ್ಟದಲ್ಲೂ ಸರ್ಕಾರಿ ನೌಕರರ ಹಿತ ಕಾದಿದೆ ಬಿಎಸ್‍ವೈ ಸರ್ಕಾರ: ಸವದಿ
ನವದೆಹಲಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲೂ ಸರ್ಕಾರಿ ಸೇರಿದಂತೆ ಸಾರಿಗೆ ನೌಕರರ ಹಿತ ಕಾಯುವ ಕೆಲಸವನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಢಿ ನಡೆಸಿ ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಆರಂಭದಲ್ಲಿ ಅತಿವೃಷ್ಠಿ-ಅನಾವೃಷ್ಠಿ ಕಾಡಿದ್ದು, ರಾಜ್ಯದ 20 ಜಿಲ್ಲೆಗಳು ಸಂಕಷ್ಟದಲ್ಲಿದ್ದವು. ಅದೆಲ್ಲ ಸಮಸ್ಯೆ ನಿಭಾಯಿಸುವ …
Read More »ಫ್ರಂಟ್‍ಲೈನ್ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವ ವೈದ್ಯನನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ.
ನವದೆಹಲಿ: ಫ್ರಂಟ್‍ಲೈನ್ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವ ವೈದ್ಯನನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ. ಶನಿವಾರ ರಾತ್ರಿ ವೈದ್ಯ ಜೋಗಿಂದರ್ ಚೌಧರಿ ನಿಧನರಾಗಿದ್ದು, ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಇವರನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ನೇಮಿಸಲಾಗಿತ್ತು. ಜೂನ್ 27ರಂದು ಚೌಧರಿ ಅವರಿಗೆ ಸೋಂಕು ತಗುಲಿದ್ದು ದೃಢವಾಗಿತ್ತು. ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮೊದಲಿಗೆ ದೆಹಲಿಯ ಲೋಕ್ ನಾಯಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ …
Read More »ಶೀಘ್ರವೇ ನೀರಾವರಿ ಕಾಮಗಾರಿಗಳು ಆರಂಭ
ಗೋಕಾಕ: ನೀರಾವರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ಮಾಡಲಾಗುತ್ತಿದ್ದು, ಇಡೀ ಗೋಕಾಕ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲೋಕೋಪಯೋಗಿ ಇಲಾಖೆಯಿಂದ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗಾಗಿ 6 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ ಬಾಂದಾರ- ಕಮ್- ಸೇತುವೆಗಳನ್ನು ನಿರ್ಮಿಸಲು 14.80 ಕೋಟಿ ರೂ. ಕಾಮಗಾರಿಗಳು …
Read More »ಜಗಜ್ಯೋತಿ ಬಸವಣ್ಣನವರು ಐಕ್ಯರಾದ ದಿನವನ್ನು ನಾಗರಪಂಚಮಿ ಆಚರಿಸುವ ಬದಲು ಬಸವ ಪಂಚಮಿ ಯನ್ನಾಗಿ ಆಚರಿಸಬೇಕು ಎಂದು ಕರೆಕೊಟ್ಟರು ಸತೀಶ್ ಶುಗರ್ಸ್ ಫೌಂಡೇಶನ್
ಗೋಕಾಕ ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಗೋಕಾಕ್ ಶಾಖೆ ಹಾಗೂ ಸತೀಶ್ ಶುಗರ್ಸ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 25.07. 2020 ರಂದು ನಾಗರ ಪಂಚಮಿ ಹಬ್ಬದ ನಿಮಿತ್ಯ ಪೌಷ್ಟಿಕ ಆಹಾರ ಹಾಲನ್ನು ಹಾವಿನ ಹುತ್ತಗಳಿಗೆ ಎರೆಯುವ ಬದಲು ಗೋಕಾಕ ನಗರದ ಶಿವಾ ಫೌಂಡೇಶನಲ್ಲಿರುವ ಅನಾಥ ಮಕ್ಕಳಿಗೆ ಹಾಲನ್ನು ಕೊಟ್ಟು ಮಾನವೀಯತೆಯ ಮೆರೆದಿರುವ ಮಾನವ ಬಂಧುತ್ವ ವೇದಿಕೆ ಗೋಕಾಕ್ …
Read More »ಸರಳವಾಗಿ ಸ್ವಾತಂತ್ರ್ಯೋತ್ಸವ ಅಚರಣೆಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ
ನವದೆಹಲಿ, ಜು.24-ದೇಶದಾದ್ಯಂತ ಕೊರೊನಾ ವೈರಸ್ ಹಾವಳಿ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನಾಚರಣೆ ಸಡಗರ-ಸಂಭ್ರಮಕ್ಕೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸುತ್ತೋಲೆಗಳನ್ನು ಹೊರಡಿಸಿ ಅತ್ಯಂತ ಸರಳವಾಗಿ ಮತ್ತು ಜಾಗ್ರತೆಯಿಂದ ರಾಷ್ಟ್ರ ಹಬ್ಬ ಆಚರಿಸುವಂತೆ ತಿಳಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಸ್ವಾತಂತ್ರ ದಿನಾಚರಣೆಯಂದು ಅನುಸರಿಸಬೇಕಾದ ಕ್ರಮಗಳ ಕುರಿತು ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಅತಿ ಹೆಚ್ಚು ಜನರು ಸೇರಬಾರದು. ಅತ್ಯಂತ …
Read More »ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕನ್ನಡದಲ್ಲಿಯೇ ಪ್ರಮಾಣ…
ಹೊಸದಿಲ್ಲಿ: ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ ನಲ್ಲಿ ಕನ್ನಡಾಭಿಮಾನ ಮೆರೆದಿದ್ದಾರೆ. ಸಂಸತ್ ಭವನದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ರಾಜ್ಯಸಭೆಗೆ ಹೊಸದಾಗಿ ಚುನಾಯಿತರಾದ 61 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಮಾಣ ವಚನ ಬೋಧಿಸಿದರು. 20 ರಾಜ್ಯದ 61 ಸದಸ್ಯರು ಇತ್ತೀಚಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಕಾಂಗ್ರೆಸ್ ಹಿರಿಯ ಮುಖಂಡ, ಮಲ್ಲಿಕಾರ್ಜುನ ಖರ್ಗೆ, ಎಚ್ …
Read More »ಸೋಂಕಿತರ ಸೇವೆ ಮಾಡಿದ ವೈದ್ಯ ಕೊರೊನಾಗೆ ಬಲಿ- ಸರ್ಕಾರದಿಂದ ಸಿಗಲಿಲ್ಲ ನೆರವು
ನವದೆಹಲಿ: ನನ್ನ ಪತಿ ಕೊರೊನಾ ಸೋಂಕಿತರಿಗಾಗಿ ಮೂರು ತಿಂಗಳು ರಜೆ ಪಡೆಯದೇ ಕೆಲಸ ಮಾಡಿದ್ದರಿಂದ ಅವರಿಗೂ ಸೋಂಕು ತಗುಲಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಪತಿ ನಿಧನರಾದರು. ಆದರೆ ಇಲ್ಲಿಯವರೆಗೆ ನಮಗೆ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮೃತ ವೈದ್ಯನ ಪತ್ನಿ ಡಾ.ಹೀನಾ ಅಲಿ ಬೇಸರ ವ್ಯಕ್ತಪಡಿಸಿದ್ದಾರೆ. ಖಾಸಗಿ ಪತ್ರಿಕೆ ಜೊತೆ ಮಾತನಾಡಿರುವ ಹೀನಾ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪತಿ ಡಾ.ಜಾವೇದ್ ಅಲಿ ಮಾರ್ಚ್ ನಿಂದ ಜೂನ್ ವರೆಗೆ ನಿರಂತರವಾಗಿ …
Read More »