ಲಖನೌ: ಸಚಿವೆ ಕಮಲ ರಾಣಿ ವರುಣ್ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಭಾನುವಾರ ಅಯೋಧ್ಯೆಗೆ ಭೇಟಿ ನೀಡಬೇಕಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಇಂದು ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ನೀಡಿಲಿದ್ದರು. ಆದರೆ, ಕೊರೋನಾದಿಂದಾಗಿ ಕಮಲ ರಾಣಿ ವರಣ್ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಭೇಟಿ ರದ್ದುಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. ಈ ನಡುವೆ ಕಮಲ ರಾಣಿಯವರು ನಿಧನ …
Read More »ಖಿನ್ನತೆಗೆ ಒಳಗಾಗಿದ್ದ ಸುಶಾಂತ್ ಅರೆಹುಚ್ಚರಂತಾಗಿದ್ದರು, ತಾಯಿಯಂತೆ ರಿಯಾ ಆರೈಕೆ ಮಾಡುತ್ತಿದ್ದರು
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ದ್ವಿವ್ಯಕ್ತಿತ್ವ ಸಮಸ್ಯೆಯಿಂದ ಬಳಲುತ್ತಿದ್ದರು. ತೀವ್ರ ತರದ ಖಿನ್ನತೆಯಿಂದಾಗಿ ಅರೆಹುಚ್ಚನಂತಾಗಿದ್ದರು. ಅವರಿಗೆ ಇಂಥ ಅಟ್ಯಾಕ್ ಆದಾಗಲೆಲ್ಲ ತಾಯಿಯಂತೆ ಅಕ್ಕರೆ ತೋರಿ, ಅವರನ್ನು ಆರೈಕೆ ಮಾಡಿದ್ದು ನಟಿ ರಿಯಾ ಚಕ್ರವರ್ತಿ ಎಂದು ಸುಶಾಂತ್ಗೆ ಮಾನಸಿಕ ಚಿಕಿತ್ಸೆ ಕೊಡುತ್ತಿದ್ದ ಡಾ. ಸುಸಾನ್ ವಾಕರ್ ಹೇಳಿದ್ದಾರೆ. ರಿಯಾ ಚಕ್ರವರ್ತಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದ್ದ. ಅವರನ್ನು ಮೂಲೆಗುಂಪು ಮಾಡಲು ಸಂಚು ರೂಪಿಸಿದಂತೆ ಕಾಣುತ್ತಿದ್ದೆ. ಆದರೆ, ರಿಯಾ ಅವರಿಗೆ ಸುಶಾಂತ್ …
Read More »ಹೊಸ ರಾಷ್ಟ್ರೀಯ ಶಿಕ್ಷಣ ನೀತಿ : ಮಕ್ಕಳಿಗೆ ಬಿಸಿಯೂಟದ ಜೊತೆಗೆ ಉಚಿತ ಬೆಳಗಿನ ಉಪಾಹಾರ
ನವದೆಹಲಿ, -ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೆಳಗಿನ ಉಪಾಹಾರವನ್ನೂ ಉಚಿತವಾಗಿ ನೀಡಲು ಕೇಂದ್ರ ಸರ್ಕಾರದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಯಲ್ಲಿ ಪ್ರಸ್ತಾಪಿಸಲಾಗಿದೆ. ಶಾಲಾ ಮಕ್ಕಳಿಗೆ ಬೆಳಗ್ಗೆ ಪೌಷ್ಟಿಕಾಂಶವುಳ್ಳ ಉಪಾಹಾರ ನೀಡಬೇಕು. ಇದರಿಂದ ಮಕ್ಕಳ ಭೌತಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗಿ ಇದು ಕಲಿಕೆಗೆ ಸಹಕಾರಿಯಾಗುತ್ತದೆ ಎಂದು ಹೊಸ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ. ದೇಶದ ವಿವಿಧ ರಾಜ್ಯಗಳ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ …
Read More »ಹೊಸ ಮೊಬೈಲ್ ಖರೀದಿಸಬೇಕೆಂದುಕೊಂಡವರಿಗೆ ಗುಡ್ ನ್ಯೂಸ್
ನವದೆಹಲಿ: ಭಾರತಕ್ಕೆ ಮೊಬೈಲ್ ಕಂಪನಿಗಳು ಲಗ್ಗೆ ಇಡಲು ಸಜ್ಜಾಗಿವೆ. 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳ ಉತ್ಪಾದನೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮುಂದಿನ ಐದು ವರ್ಷದಲ್ಲಿ 22 ದೇಶಿ ಮತ್ತು ವಿದೇಶಿ ಕಂಪನಿಗಳು ಭಾರತದಲ್ಲಿ 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳನ್ನು ಉತ್ಪಾದಿಸುವ ಪ್ರಸ್ತಾಪ ಮಾಡಿರುವುದಾಗಿ ಕೇಂದ್ರ ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಸ್ಯಾಮ್ಸಂಗ್, ರೈಸಿಂಗ್ ಸ್ಟಾರ್, ಫಾಕ್ಸ್ ಕಾರ್ನ್ ಮೊದಲಾದ ಅಂತಾರಾಷ್ಟ್ರೀಯ …
Read More »ಲಾಕ್‌ಡೌನ್‌ನಲ್ಲೂ 100 ಯಶಸ್ವಿ ಡಯಾಲಿಸಿಸ್
ಬೆಳಗಾವಿ: ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ರೋಟರಿ-ಕೆಎಲ್‌ಇ ಡಯಾಲಿಸಿಸ್ ಕೇಂದ್ರದಲ್ಲಿ ಲಾಕ್‌ಡೌನ್ ಸಂದರ್ಭದಲ್ಲೂ 100 ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಈಚೆಗೆ ವೈದ್ಯರ ತಂಡಕ್ಕೆ ಶುಭ ಹಾರೈಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಮೂತ್ರಪಿಂಡ ತಜ್ಞ ಡಾ.ವಿಜಯಕುಮಾರ ಪಾಟೀಲ, ‘ಮೂತ್ರಪಿಂಡ ಕಾಯಿಲೆ ಇರುವ ರೋಗಿಗಳಿಗೆ ಡಯಾಲಿಸಿಸ್ ಕಡ್ಡಾಯವಾಗಿ ಬೇಕಾಗಿರುವ ಚಿಕಿತ್ಸೆಯಾಗಿದೆ. ಕೊರೊನಾ ಸೋಂಕಿನ ಭೀತಿಯ ಸಂದರ್ಭದಲ್ಲಿ ರೋಗಿಗಳು ಹೆದರುವ ಅಗತ್ಯವಿಲ್ಲ. ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಾ ಧೈರ್ಯವಾಗಿ ಆಸ್ಪತ್ರೆಗೆ …
Read More »ಕರಾವಳಿಯಲ್ಲಿ ಉತ್ತಮ ಮಳೆ
ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ. ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. …
Read More »ಸದ್ಯ 3456 ಸೋಂಕಿತರು…..
ಬೆಳಗಾವಿ: ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೂ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ಮತ್ತೆ ದ್ವಿಶತಕ ದಾಟಿದೆ. 219 ಸೋಂಕು ಪ್ರಕರಣ ದೃಢಪಟ್ಟಿವೆ. ಒಟ್ಟಾರೆ 3456 ಸೋಂಕಿತರು ಇದ್ದು, ಜತೆಗೆ ನಾಲ್ವರು ಕೋವಿಡ್ ಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿತರ ಏರಿಕೆ ಪ್ರಮಾಣ ಹೆಚ್ಚುತ್ತಲೇ ಹೊರಟಿದ್ದು, ಕಳೆದ ಒಂದು ವಾರದಿಂದ ದಿನನಿತ್ಯ 200ರ ಗಡಿ ದಾಟುತ್ತಲೇ ಸಾಗಿದೆ. ಸಾವಿನ ಸಂಖ್ಯೆಯೂ ಇಳಿಕೆ ಆಗಿಲ್ಲ. ಹೆಚ್ಚಿನ ಸೋಂಕಿತರು ಹಳ್ಳಿಗಳಲ್ಲಿ ಪತ್ತೆಯಾಗುತ್ತಿದ್ದಾರೆ. ರಾಯಬಾಗದ 60 ವರ್ಷದ ವ್ಯಕ್ತಿ, …
Read More »ಮರಾಠಿಯಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ!
ಅಥಣಿ: ತಾಲ್ಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆ ಶನಿವಾರ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಜವಳಿ ಸಚಿವ ಶ್ರೀಮಂತ ಪಾಟೀಲ ಮರಾಠಿಯಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ‘ನಮ್ಮ ಭಾಗದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣವಾಗುತ್ತಿರುವುದು ತುಂಬಾ ಖುಷಿಯಾಗಿದೆ. ಕಾರ್ಖಾನೆಯ ಶೇ 75 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ನೀಡಬೇಕು’ ಎಂದು ಮರಾಠಿಯಲ್ಲಿ ಮನವಿ ಮಾಡಿದ್ದರು. …
Read More »ಬಕ್ರೀದ್; ಸರಳವಾಗಿ ಆಚರಿಸಿದ ಮುಸ್ಲಿಂ ಬಾಂಧವರು
ಬೆಳಗಾವಿ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಶನಿವಾರ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಿದರು. ಪ್ರತಿವರ್ಷ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದರೆ, ಈ ಸಲ ಕೋವಿಡ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲಾಗಿತ್ತು. ಹಾಗಾಗಿ, ಮಸೀದಿಗಳಲ್ಲಿ ಹಾಗೂ ಮನೆಗಳಲ್ಲಿ ಪರಸ್ಪರ ಅಂತರ ಕಾಪಾಡಿಕೊಂಡು ಪ್ರಾರ್ಥನೆ ಸಲ್ಲಿಸಿದರು. ಅಡುಗೆ ಕೂಡ ಸರಳವಾಗಿತ್ತು. ಪ್ರತಿವರ್ಷ ಹೊಸ ಉಡುಗೆ ತೊಟ್ಟು ಹಬ್ಬ ಆಚರಿಸುತ್ತಿದ್ದ ಆ ಸಂಭ್ರಮ ಕಾಣಲಿಲ್ಲ. ಪ್ರತಿ ವರ್ಷ ತಮ್ಮ ನೆಂಟರು ಹಾಗೂ …
Read More » ತಿಂಗಳ ಪ್ರಯಾಣಿಕರ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಬೆಳಗಾವಿ ವಿಮಾನ ನಿಲ್ದಾಣ
ಬೆಳಗಾವಿ: ಜೂನ್ ತಿಂಗಳ ವಿಮಾನ ಪ್ರಯಾಣದ ಮಾಹಿತಿಯನ್ನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದಲ್ಲಿನ ಪ್ರಯಾಣಿಕರ ಸಂಖ್ಯೆಯ ವಿಚಾರದಲ್ಲಿ ಬೆಳಗಾವಿ ವಿಮಾನ ನಿಲ್ದಾಣ 2ನೇ ಸ್ಥಾನಕ್ಕೇರಿದೆ ಈ ಮೂಲಕ ಬೆಳಗಾವಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೇ ಹಿಂದಿಕ್ಕಿದೆ. ಬೆಂಗಳೂರು ಮೊದಲನೇ ಸ್ಥಾನದಲ್ಲಿದ್ದು ನಂತರದ ಸ್ಥಾನವನ್ನ ಬೆಳಗಾವಿ ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಬೆಳಗಾವಿಯಿಂದ 391 ವಿಮಾನಗಳ ಹಾರಾಟವಾಗಿದ್ದು, ಒಟ್ಟು 10,224 ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಇನ್ನು …
Read More »
Laxmi News 24×7