ಹೈದರಾಬಾದ್: ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಮಾಡುವುದಾಗಿ ಖ್ಯಾತ ನಿರ್ದೇಶಕ ಎಸ್‍ಎಸ್ ರಾಜಮೌಳಿ ಹೇಳಿದ್ದಾರೆ. ಆ ಮೂಲಕ ಟಾಲಿವುಡ್‍ನಲ್ಲಿ ಬಹುದಿನಗಳಿಂದ ಕೇಳಿ ಬರುತ್ತಿದ್ದ ಕ್ರೇಜಿ ಕಾಂಬಿನೇಷನ್ ಸುದ್ದಿಗಳಿಗೆ ತೆರೆ ಹೇಳಿದಿದ್ದಾರೆ. ಸದ್ಯ ಎನ್‍ಟಿಆರ್, ರಾಮ್ ಚರಣ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಆರ್‌ಆರ್‌ಆರ್ ಸಿನಿಮಾದಲ್ಲಿ ರಾಜಮೌಳಿ ಬ್ಯುಸಿಯಾಗಿದ್ದಾರೆ. ಇದೇ ವೇಳೆ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಎಂದು ಘೋಷಣೆ ಮಾಡುವ ಮೂಲಕ ಅಭಿಮಾನಿಗಳಲ್ಲಿ …
Read More »ದೇಶದಲ್ಲಿ 15 ಸಾವಿರ ದಾಟಿದ ಸೋಂಕಿತರ ಸಂಖ್ಯೆ- ಅಮೆರಿಕದಲ್ಲಿ ಒಂದೇ ದಿನ 4,600 ಸಾವು
ನವದೆಹಲಿ: ದೇಶದಲ್ಲಿ ಇಂದು ಒಂದೇ ದಿನ 1,300ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 15,232ಕ್ಕೆ ತಲುಪಿದೆ. ಈ ಪೈಕಿ ತಬ್ಲೀಘಿಗಳ ಪಾಲು 4,200ಕ್ಕೂ ಹೆಚ್ಚು. ಅಂದರೆ ಪ್ರತಿ ಮೂವರು ಸೋಂಕಿತರಲ್ಲಿ ಒಬ್ಬರು ತಬ್ಲಿಘಿಗಳು. ಕಳೆದ 24 ಗಂಟೆಗಳಲ್ಲಿ 43 ಮಂದಿ ಸಾವನ್ನಪ್ಪಿದ್ದು, ಒಟ್ಟು 505 ಜನ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3,648 ದಾಟಿದ್ದು, ಇಂದು 328 ಹೊಸ ಪ್ರಕರಣಗಳು ಪತ್ತೆಯಾಗಿವೆ. ಗುಜರಾತ್‍ನಲ್ಲಿ ಒಂದೇ ದಿನ …
Read More »ಕೂಲಿ ಕಾರ್ಮಿಕರ ಮಗಳ ಹುಟ್ಟುಹಬ್ಬ ಆಚರಿಸಿದ ಪೊಲೀಸ್……..
ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಏಕಾಏಕಿ ಲಾಕ್‍ಡೌನ್ ಜಾರಿಗೆ ಬಂದಿದೆ. ಇಂತಹ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಂದ ಅನೇಕ ಹೃದಯ ಸ್ಪರ್ಶಿಸು ಪ್ರಸಂಗಗಳು ನಡೆದಿವೆ. ಅಂತೆ ಪೊಲೀಸರ ಪುಟ್ಟ ಸಹಾಯದಿಂದ ಶನಿವಾರ ಕೂಲಿ ಕಾರ್ಮಿಕರ ನಾಲ್ಕು ವರ್ಷದ ಬಾಲಕಿಯೊಬ್ಬಳು ತನ್ನ ಜನ್ಮದಿನವನ್ನು ಆಚರಿಸಿಕೊಳ್ಳಲು ಸಾಧ್ಯವಾಯಿತು. ಫತೇಪುರಿ ಬೇರಿಯ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು …
Read More »ಅಕ್ಷಯ ಪಾತ್ರೆ ಮೂಲಕ ನಟಿ ರವೀನಾ ಟಂಡನ್ ಸಹಾಯ
ನವದೆಹಲಿ: ಕೆಜಿಎಫ್-2 ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಹೆಚ್ಚು ಸುದ್ದಿಯಾಗುತ್ತಿರುವ ಬಾಲಿವುಡ್ ನಟಿ ರವೀನಾ ಟಂಡನ್, ತಮ್ಮ ವಿವಿಧ ಕೆಲಸಗಳ ಮೂಲಕ ಸಹ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿಯೂ ಸಹಾಯ ಹಸ್ತ ಚಾಚಿದ್ದು, ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಟಿ ರವೀನಾ ಟಂಡನ್ ಲಾಕ್‍ಡೌನ್ ದಿನಗಳನ್ನು ಕುಟುಂಬದೊಂದಿಗೆ ಎಂಜಾಯ್ ಮಾಡುತ್ತಿದ್ದು, ಮೊಮ್ಮಕ್ಕಳೊಂದಿಗೆ ಆಟವಾಡುವ ಮೂಲಕ ಕಾಲ ಕಳೆಯುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಹಂಚಿಕೊಂಡಿದ್ದಾರೆ. ರವೀನಾ ತಮ್ಮ ಚಟುವಟಿಕೆಗಳ ಕುರಿತು …
Read More »ಭಾರತೀಯ ನೌಕಾಪಡೆಗೂ ತಟ್ಟಿದ ಕೊರೊನಾ ಭೀತಿ – 21 ಸಿಬ್ಬಂದಿಗೆ ಸೋಂಕು
ಮುಂಬೈ: ಭಾರತೀಯ ನೌಕಾಪಡೆಗೂ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ಮುಂಬೈನಲ್ಲಿ ಇರುವ ನೌಕಾನೆಲೆಯ 21 ಮಂದಿ ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ನೌಕಾಪಡೆಯ 20 ಸೇಲರ್ ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದಾರೆ. ಐಎನ್‍ಎಸ್ ಅಶ್ವಿನಿ ನೌಕಾಪಡೆ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿದ್ದ ಮಂದಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಸೋಂಕಿತ ಸೇಲರ್ ಗಳು ಮುಂಬೈನ ಐಎನ್‍ಎಸ್ ಆಂಗ್ರೆಯಲ್ಲಿ …
Read More »“ಕೊರೊನಾ ವೈರಸ್ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ ಚೀನಾ”..
ಬೀಜಿಂಗ್: ಕೊರೊನಾ ವೈರಸ್ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ ಚೀನಾ ವುಹಾನ್ ನಗರದಲ್ಲಿನ ಸಾವಿನ ಸಂಖ್ಯೆಯನ್ನು ಮರೆ ಮಾಡಿತ್ತೆ ಎನ್ನುವ ಪ್ರಶ್ನೆ ಈಗ ಎದ್ದಿದೆ. ಕೊರೊನಾ ವೈರಸಿನ ಹುಟ್ಟೂರು ವುಹಾನ್ ನಗರದಲ್ಲಿನ ಸಾವಿನ ಸಂಖ್ಯೆ ದಿಢೀರ್ ಶೇ.50 ರಷ್ಟು ಹೆಚ್ಚಾಗಿದೆ. ಗುರುವಾರದವರೆಗೆ ವುಹಾನ್ ನಗರದಲ್ಲಿ 2,579 ಜನ ಮೃತಪಟ್ಟಿದ್ದರು. ಆದರೆ ಈಗ ಹೊಸದಾಗಿ 1,290 ಮಂದಿ ಸೇರಿದ್ದು ಒಟ್ಟು ಸಾವನ್ನಪ್ಪಿದ ರೋಗಿಗಳ ಸಂಖ್ಯೆ 3,869ಕ್ಕೆ ಏರಿಕೆಯಾಗಿದೆ. ಅಮೆರಿಕ, ಇಟಲಿಯಲ್ಲಿ ದಿನಕ್ಕೆ …
Read More »ಏ.20ರ ನಂತರ ಕೆಲ ಉದ್ಯಮಗಳಿಗೆ ವಿನಾಯಿತಿ:
ನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳಿಗೆ ಏಪ್ರಿಲ್ 20ರ ಬಳಿಕ ವಿನಾಯಿತಿ ಕೊಡೋದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಸಾಫ್ಟ್ ವೇರ್ ಮತ್ತು ಐಟಿ ಪಾರ್ಕ್‍ಗಳಲ್ಲಿರುವ ಸ್ಟಾರ್ಟ್ ಅಪ್‍ಗಳಿಗೆ 4 ತಿಂಗಳ ಬಾಡಿಗೆ ಇಲ್ಲ ಅಂತ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ. ಯಾವುದಕ್ಕೆ ವಿನಾಯಿತಿ? * ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳು * ಇತರ ಹಣಕಾಸು ಸಂಸ್ಥೆಗಳಿಗೆ ಕನಿಷ್ಠ …
Read More »ಹೇ ಕೊಹ್ಲಿ, ಚೌಕಾ ಮಾರ್ ನಾ’- ಅನುಷ್ಕಾ ಪ್ರೇರಣೆಗೆ ವಿರಾಟ್ ಸೈಲಂಟ್
ನವದೆಹಲಿ: ಲಾಕ್‍ಡೌನ್‍ನಿಂದಾಗಿ ಕ್ರಿಕೆಟ್ ಟೂರ್ನಿಗಳಿಲ್ಲದೆ ಕ್ರಿಕೆಟಿಗರು ಹಾಗೂ ಅಭಿಮಾನಿಗಳ ಮಧ್ಯೆ ಅಂತರ ಉಂಟಾಗಿದೆ. ಕೊರೊನಾ ವೈರಸ್ ಭೀತಿಯಿಂದ ಕ್ರಿಕೆಟಿಗರು ತಮ್ಮ ಮನೆಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಶುಕ್ರವಾರ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಲಾಕ್‍ಡೌನ್ ಮಧ್ಯೆ ಮನೆಯಲ್ಲಿ ಹೇಗೆ ಕಾಲ ಕಳೆಯುತ್ತಿದ್ದಾರೆ ಎಂಬ ಬಗ್ಗೆ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಪ್ರಸ್ತುತ ಸಾಮಾಜಿಕ ಅಂತರ ಹೊಂದಿರುವ ಪತಿ ಕ್ರಿಕೆಟ್ ಪಂದ್ಯಗಳ ವಾತಾವರಣದಿಂದ …
Read More »ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ
ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್‌ವುಡ್-ಕಾಲಿವುಡ್-ಟಾಲಿವುಡ್‌ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …
Read More »ವಿದೇಶಿ ನೆಲದಲ್ಲಿ ಐಪಿಎಲ್ ಆಯೋಜಿಸುವ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಸಿಬಿ ಕೋಚ್
ಮುಂಬೈ: ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಐಪಿಎಲ್ 2020 ಟೂರ್ನಿಯನ್ನು ಬಿಸಿಸಿಐ ಅಧಿಕೃತವಾಗಿ ಮುಂದೂಡಿದೆ. ಶೆಡ್ಯೂಲ್ ಅನ್ವಯ ಮಾರ್ಚ್ 29 ರಿಂದ ಐಪಿಎಲ್ ಆರಂಭವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಏ.15ಕ್ಕೆ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಆದರೆ ದೇಶಾದ್ಯಂತ ಲಾಕ್‍ಡೌನ್ ಮೇ 3ರ ವರೆಗೂ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಮತ್ತೆ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಆದರೂ ದೇಶ ಸಹಜ ಸ್ಥಿತಿಗೆ …
Read More »