ಲಕ್ನೋ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಲಕ್ನೋ, ನೋಯ್ಡಾ, ಆಗ್ರಾ, ವಾರಣಾಸಿ, ಗಾಜಿಯಾಬಾದ್, ಮೀರತ್ ಸೇರಿದಂತೆ 15 ಜಿಲ್ಲೆಗಳಲ್ಲಿ ಏಪ್ರಿಲ್ 30ರವರೆಗೂ ಲಾಕ್‍ಡೌನ್ ವಿಸ್ತರಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿ ಆರ್.ಕೆ. ತಿವಾರಿ, ರಾಜ್ಯದ ಲಕ್ನೋ, ಆಗ್ರಾ, ಗಾಜಿಯಾಬಾದ್, ಗೌತಂಬುದ್ ನಗರ, ಕಾನ್ಪುರ, ವಾರಣಾಸಿ, ಶಾಮ್ಲಿ, ಮೀರತ್, ಬರೇಲಿ, ಬುಲಂದ್‍ಶಹರ್, ಫಿರೋಜಾಬಾದ್, ಮಹಾರಾಜಗಂಜ್, ಸೀತಾಪುರ, ಸಹರಾನ್‍ಪುರ ಹಾಗೂ ಬಸ್ತಿ …
Read More »ಯಾವುದೇ ಕಾರಣಕ್ಕೂ ಲಾಕ್ಡೌನ್ ಅನ್ನು ಹಿಂಪಡೆಯುವುದಿಲ್ಲ:ಮೋದಿ
ನವದೆಹಲಿ ಏ.8. ಇಂದು ವಿಡಿಯೋ ಕಾನ್ಫೆರೆನ್ಸ್ ನಲ್ಲಿ ವಿರೋಧ ಪಕ್ಷದ ನಾಯಕರೊಂದಿಗೆ ಸಂವಾದ ನಡೆಸಿದ ಮೋದಿ ಏಪ್ರಿಲ್ 14ರಂದು ದೇಶಾದ್ಯಂತ ಲಾಕ್ಡೌನ್ ರದ್ದುಪಡಿಸುವ ಯಾವುದೇ ಪ್ರಶ್ನೆ ಇಲ್ಲ ಎಂದು ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. ತಕ್ಷಣಕ್ಕೆ ಲಾಕ್ಡೌನ್ ಹಿಂಪಡೆಯುವ ಆಲೋಚನೆ ಇಲ್ಲ ಆದರೆ ನಾಗರೀಕರಿಗೆ ಸ್ವಲ್ಪಮಟ್ಟಿನ ರಿಲೀಫ್ ನೀಡುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸರ್ವ ಪಕ್ಷ ಸಭೆ ಇಂದು ವಿಪಕ್ಷ ನಾಯಕರು ನೀಡಿದ ಸಲಹೆಗಳನ್ನು ಆಲಿಸಿದ ನಂತರ ಯಾವುದೇ …
Read More »ಪ್ರಧಾನಿ ಮೋದಿಗೆ ಸೋನಿಯಾ ಗಾಂಧಿ ಪಂಚ ಸಲಹೆ
ನವದೆಹಲಿ: ದೇಶಾದ್ಯಂತ ಹದ್ದು ಮೀರುತ್ತಿರುವ ಕೊರೊನಾ ನಿಯಂತ್ರಣಕ್ಕೆ ವಿಪಕ್ಷ ನಾಯಕರ ಸಲಹೆ ಕೇಳಿ ಪ್ರಧಾನಿ ನರೇಂದ್ರ ಮೋದಿ ಅವರು ಮೊನ್ನೆಯಷ್ಟೇ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈ ಬೆನ್ನಲ್ಲೇ, ಇವತ್ತು ಪ್ರಧಾನಿ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದರ ಶೇ.30ರಷ್ಟು ಸಂಬಳ ಕಡಿತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಟದ ಆರ್ಥಿಕ ಕ್ರೋಢೀಕರಣಕ್ಕಾಗಿ ಐದು ಸಲಹೆ ನೀಡಿದ್ದಾರೆ. ಪ್ರಧಾನಿಗೆ ಸೋನಿಯಾ ‘ಪಂಚ’ ಸಲಹೆ: ಸಲಹೆ …
Read More »ಫುಲ್ ಸೈಲೆಂಟ್ ಆದ ಬಿಜೆಪಿ ಚಾಣಕ್ಯ-ಮುಖ್ಯ ವಾಹಿನಿಯಲ್ಲಿಲ್ಲ ಗೃಹ ಸಚಿವ ಅಮಿತ್ ಶಾ
ನವದೆಹಲಿ: ಇಡೀ ದೇಶ ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿದೆ. ಈ ವೈರಸ್ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ದೇಶದ ಜನರನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮೂರು ಬಾರಿ ಮಾತನಾಡಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಮಾತ್ರ ಈ ನಡುವೆ ನಾಪತ್ತೆಯಾಗಿದ್ದಾರೆ. ಕೊರೊನಾ ಸೋಂಕು ದೇಶವನ್ನು ಕಿತ್ತು ತಿನ್ನುತ್ತಿದೆ. ಭಾರತ ಲಾಕ್‍ಡೌನ್ ಆದ್ರೂ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡು ಬರ್ತಿಲ್ಲ. ಈ ನಡುವೆ ಲಾಕ್ …
Read More »ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತ
ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಸ್ತಬ್ಧಗೊಂಡಿದ್ದ ರೈಲು ಸೇವೆ ಸದ್ಯಕ್ಕೆ ಆರಂಭಗೊಳ್ಳುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಐಆರ್‌ಸಿಟಿಸಿ, ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ಮಧ್ಯೆ ಐಆರ್‌ಸಿಟಿಸಿ ಸದ್ಯ ಮೂರು ರೈಲುಗಳನ್ನು ಓಡಿಸಲಿದೆ. 2 ತೇಜಸ್ ರೈಲುಗಳು ಮತ್ತು 1 ಕಾಶಿ ಮಹಕಲ್ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ತೇಜಸ್ ಎಕ್ಸ್‌ಪ್ರೆಸ್ ರೈಲು ಅಹಮದಾಬಾದ್ – ಮುಂಬೈ ಮಧ್ಯ ಸಂಚರಿಸಿದರೆ, …
Read More »ಕ್ವಾರಂಟೈನ್ ಕೋಣೆ ಮುಂದೆಯೇ ಮಲವಿಸರ್ಜಿಸಿ ವಿಕೃತಿ – ತಬ್ಲಿಘಿಗಳ ವಿರುದ್ಧ ಕೇಸ್
ನವದೆಹಲಿ: ಕೊರೊನಾ ಕ್ವಾರಂಟೈನ್ ಕೋಣೆಯ ಮುಂದೆಯೇ ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಇಬ್ಬರು ತಬ್ಲಿಘಿಗಳು ಕ್ವಾರಂಟೈನ್ ಕೊಠಡಿಯ ಮುಂದೆಯೇ ಮಲವಿಸರ್ಜನೆ ಮಾಡಿ ವಿಕೃತಿ ಮರೆದಿರುವಂತಹ ಘಟನೆ ನರೇಲಾ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸರು, ಕ್ವಾರಂಟೈನ್ ಕೋಣೆಯ ಮುಂದೆ ಮುಲವಿಸರ್ಜನೆ ಮಾಡಿದ ಇಬ್ಬರ ಮೇಲೆ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿಗಳು ಉತ್ತರ ಪ್ರದೇಶದ ಬರಾಬಂಕಿ ನಿವಾಸಿಗಳಾಗಿದ್ದು, ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ …
Read More »ಲಾಕ್‍ಡೌನ್ ವಿಸ್ತರಣೆಗೆ ವಿವಿಧ ರಾಜ್ಯಗಳಿಂದ ಕೇಂದ್ರಕ್ಕೆ ಮನವಿ
ನವದೆಹಲಿ: ದೇಶಾದ್ಯಂತ ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಹೀಗಾಗಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್‍ಡೌನ್ ಅನ್ನು ವಿಸ್ತರಿಸುವಂತೆ ಅನೇಕ ರಾಜ್ಯ ಸರ್ಕಾರಗಳು ಮತ್ತು ತಜ್ಞರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇತ್ತ ಕೇಂದ್ರ ಸರ್ಕಾರವೂ ಲಾಕ್‍ಡೌನ್ ವಿಸ್ತರಿಸುವ ನಿಟ್ಟಿನಲ್ಲಿ ಯೋಚನೆ ನಡೆಸಿದೆ. ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ದೇಶಾದ್ಯಂತ …
Read More »ಅಮೆರಿಕಕ್ಕೆ ಭಾರತದಿಂದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ರಫ್ತು
ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನವಿಯ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಅಮೆರಿಕಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ರಫ್ತು ಮಾಡಲು ಒಪ್ಪಿಗೆ ಸೂಚಿಸಿದೆ. ಭಾರತ ಸರ್ಕಾರ ದೇಶದಲ್ಲಿ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಮಲೇರಿಯಾ ರೋಗದ ವಿರುದ್ಧವಾಗಿ ನೀಡುವ ಹೈಡ್ರಾಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮೊಲ್ ಸೇರಿದಂತೆ 16 ಮಾತ್ರೆಗಳ ರಫ್ತಿಗೆ ನಿಷೇಧ ಹೇರಿತ್ತು. ಈ ಮಧ್ಯೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿಂದ ಕೊರೊನಾ ಪೀಡಿತ ರೋಗಿಗಳು ಗುಣವಾಗುತ್ತಾರೆ ಎನ್ನುವ ವಿಚಾರ ಅಧ್ಯಯನದಿಂದ ತಿಳಿದು ಬಂದಿತ್ತು. ಅಮೆರಿಕದಲ್ಲಿ ಕೊರೊನಾ ಸಾವು …
Read More »ಭಾರತ ಸರ್ಕಾರ ಶಿಫಾರಸು ಮಾಡಿದ ಔಷಧಿಗೆ ವಿಶ್ವಾದ್ಯಂತ ಭಾರೀ ಬೇಡಿಕೆ
ನವದೆಹಲಿ(ಏ. 06): ಕೊರೋನಾ ವೈರಸ್ ಸೋಂಕು ನಿವಾರಣೆಗೆ ಇನ್ನೂ ಆಧಿಕೃತವಾಗಿ ಮದ್ದು ಘೋಷಿಸಿಲ್ಲ. ಈಗಲೂ ವಿಶ್ವಾದ್ಯಂತ ಔಷಧಿ ಕಂಡುಹಿಡಿಯಲು ಪ್ರಯೋಗಗಳಾಗುತ್ತಿವೆ. ಒಂದೆರಡು ದೇಶಗಳಲ್ಲಿ ಔಷಧಿ ಕಂಡು ಹಿಡಿದು ಮಾನವರ ಮೇಲೆ ಪ್ರಯೋಗಗಳು ಮಾತ್ರ ಬಾಕಿ ಇವೆ. ಸದ್ಯಕ್ಕೆ ಇರುವ ಕೊರೋನಾ ರೋಗಿಗಳಿಗೆ ಆಯಾ ದೇಶದ ವೈದ್ಯರು ಬೇರೆ ಬೇರೆ ಕಾಯಿಲೆಗಳಿಗೆ ಬಳಕೆಯಲ್ಲಿರುವ ಔಷಧಗಳನ್ನು ಪ್ರಯೋಗಾತ್ಮಕವಾಗಿ ನೀಡುತ್ತಿದ್ದಾರೆ. ಭಾರತ ಸರ್ಕಾರ ಕೆಲ ದಿನಗಳ ಹಿಂದೆ ಹೈಡ್ರಾಕ್ಸಿಕ್ಲೋರೋಕ್ವಿನ್ ಎಂಬ ಔಷಧವನ್ನು ಕೊರೋನಾ ಸೋಂಕಿತರ …
Read More »ಗಡಿ ಬಂದ್‍ನಿಂದ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ- ಸುಪ್ರೀಂಗೆ ಕೇರಳ ಮಾಹಿತಿ
ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಬಂದ್ ಮಾಡಲಾಗಿದ್ದು, ಪರಿಣಾಮ ಕೇರಳದ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿದೆ. ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿರುವ ಕೇರಳ ಸರ್ಕಾರ, ಕೂಡಲೇ ಗಡಿ ಭಾಗವನ್ನು ತೆರವು ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿಕೊಂಡಿದೆ. ಕೇರಳ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮತ್ತಷ್ಟು ಮಾಹಿತಿ …
Read More »