Breaking News
Home / new delhi (page 143)

new delhi

ಅಮೆರಿಕಕ್ಕೆ ಭಾರತದಿಂದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ರಫ್ತು

ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನವಿಯ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಅಮೆರಿಕಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ರಫ್ತು ಮಾಡಲು ಒಪ್ಪಿಗೆ ಸೂಚಿಸಿದೆ. ಭಾರತ ಸರ್ಕಾರ ದೇಶದಲ್ಲಿ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಮಲೇರಿಯಾ ರೋಗದ ವಿರುದ್ಧವಾಗಿ ನೀಡುವ ಹೈಡ್ರಾಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮೊಲ್ ಸೇರಿದಂತೆ 16 ಮಾತ್ರೆಗಳ ರಫ್ತಿಗೆ ನಿಷೇಧ ಹೇರಿತ್ತು. ಈ ಮಧ್ಯೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿಂದ ಕೊರೊನಾ ಪೀಡಿತ ರೋಗಿಗಳು ಗುಣವಾಗುತ್ತಾರೆ ಎನ್ನುವ ವಿಚಾರ ಅಧ್ಯಯನದಿಂದ ತಿಳಿದು ಬಂದಿತ್ತು. ಅಮೆರಿಕದಲ್ಲಿ ಕೊರೊನಾ ಸಾವು …

Read More »

ಭಾರತ ಸರ್ಕಾರ ಶಿಫಾರಸು ಮಾಡಿದ ಔಷಧಿಗೆ ವಿಶ್ವಾದ್ಯಂತ ಭಾರೀ ಬೇಡಿಕೆ

ನವದೆಹಲಿ(ಏ. 06): ಕೊರೋನಾ ವೈರಸ್ ಸೋಂಕು ನಿವಾರಣೆಗೆ ಇನ್ನೂ ಆಧಿಕೃತವಾಗಿ ಮದ್ದು ಘೋಷಿಸಿಲ್ಲ. ಈಗಲೂ ವಿಶ್ವಾದ್ಯಂತ ಔಷಧಿ ಕಂಡುಹಿಡಿಯಲು ಪ್ರಯೋಗಗಳಾಗುತ್ತಿವೆ. ಒಂದೆರಡು ದೇಶಗಳಲ್ಲಿ ಔಷಧಿ ಕಂಡು ಹಿಡಿದು ಮಾನವರ ಮೇಲೆ ಪ್ರಯೋಗಗಳು ಮಾತ್ರ ಬಾಕಿ ಇವೆ. ಸದ್ಯಕ್ಕೆ ಇರುವ ಕೊರೋನಾ ರೋಗಿಗಳಿಗೆ ಆಯಾ ದೇಶದ ವೈದ್ಯರು ಬೇರೆ ಬೇರೆ ಕಾಯಿಲೆಗಳಿಗೆ ಬಳಕೆಯಲ್ಲಿರುವ ಔಷಧಗಳನ್ನು ಪ್ರಯೋಗಾತ್ಮಕವಾಗಿ ನೀಡುತ್ತಿದ್ದಾರೆ. ಭಾರತ ಸರ್ಕಾರ ಕೆಲ ದಿನಗಳ ಹಿಂದೆ ಹೈಡ್ರಾಕ್ಸಿಕ್ಲೋರೋಕ್ವಿನ್ ಎಂಬ ಔಷಧವನ್ನು ಕೊರೋನಾ ಸೋಂಕಿತರ …

Read More »

ಗಡಿ ಬಂದ್‍ನಿಂದ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ- ಸುಪ್ರೀಂಗೆ ಕೇರಳ ಮಾಹಿತಿ

ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಬಂದ್ ಮಾಡಲಾಗಿದ್ದು, ಪರಿಣಾಮ ಕೇರಳದ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿದೆ. ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿರುವ ಕೇರಳ ಸರ್ಕಾರ, ಕೂಡಲೇ ಗಡಿ ಭಾಗವನ್ನು ತೆರವು ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿಕೊಂಡಿದೆ. ಕೇರಳ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮತ್ತಷ್ಟು ಮಾಹಿತಿ …

Read More »

ಕೊರೊನಾ ಅಂಧಕಾರದ ವಿರುದ್ಧ ಬೆಳಕಿನ ಯುದ್ಧ – ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಜನ

ಬೆಂಗಳೂರು: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ. ದೇಶಾದ್ಯಂತ ದೀಪಾವಳಿಯಂತೆ ಜನ ದೀಪ ಹಚ್ಚುತ್ತಿದ್ದಾರೆ. ಮನೆಗಳ ಲೈಟ್ಸ್ ಆಫ್ ಮಾಡಿ, ದೇವರ ಮನೆ, ಮನೆ ಒಳಗೆ, ಮನೆ ಆವರಣ, ತುಳಸಿ ಗಿಡ, ಬಾಲ್ಕನಿ, ಟೆರೆಸ್‍ಗಳಲ್ಲಿ ದೀಪ, ಮೇಣದ ಬತ್ತಿ, ಮೊಬೈಲ್ ಫ್ಲ್ಯಾಶ್ ಹಾಗೂ ಟಾರ್ಚ್‍ಗಳ …

Read More »

ಆರೋಗ್ಯವಾದ ಮಗುವಿಗೆ ಜನ್ಮ ನೀಡಿದ ಕೊರೊನಾ ಪಾಸಿಟಿವ್ ಗರ್ಭಿಣಿ……..

ನವದೆಹಲಿ: ಏಮ್ಸ್ ವೈದ್ಯನ ಪತ್ನಿ ತುಂಬು ಗರ್ಭಿಣಿಯಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಹೀಗಾಗಿ ಅವರನ್ನು ಪ್ರತ್ಯೇಕ ವಾರ್ಡಿನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶುಕ್ರವಾರ ವೈದ್ಯನ ಪತ್ನಿ ಆರೋಗ್ಯಯುತವಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಅವರಿಗೆ ಸೋಂಕು ಬಂದಿರುವುದು ಧೃಡಪಟ್ಟಿತ್ತು. ನಂತರ ಅವರ ಮನೆಯವರನ್ನು ತಪಾಸಣೆ ಮಾಡಲಾಗಿತ್ತು. ಆಗ 39 ವಾರಗಳ ತುಂಬು ಗರ್ಭಿಣಿ ವೈದ್ಯನ ಪತ್ನಿಯಲ್ಲೂ ಕೊರೊನಾ ಪಾಸಿಟಿವ್ …

Read More »

ರಾಜ್ಯವನ್ನ ಮತ್ತೆ ಕಡೆಗಣಿಸಿದ ಕೇಂದ್ರ?- ಕೊರೊನಾದಿಂದ ತತ್ತರಿಸಿದ ಕರ್ನಾಟಕಕ್ಕೆ ಇಲ್ಲ ಅನುದಾನ

ನವದೆಹಲಿ: ನೆರೆ ಪರಿಹಾರ ವಿಚಾರದಲ್ಲಿ ರಾಜ್ಯವನ್ನು ಕಡೆಗಣಿಸಿದ್ದ ಕೇಂದ್ರ ಸರ್ಕಾರ ಈಗ ಮತ್ತೆ ಅದೇ ಧೋರಣೆ ಮುಂದುವರಿಸಿದೆ. ಕೊರೊನಾ ವೈರಸ್‍ನಿಂದ ತತ್ತರಿಸುತ್ತಿರುವ ಕರ್ನಾಟಕಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿದಂತೆ ಕಂಡು ಬಂದಿದೆ. ಕೊರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯಗಳಿಗೆ ನೆರವಾಗುವ ನಿಟ್ಟಿನಲ್ಲಿ ಇಂದು 17,287.08 ಕೋಟಿ ಹಣವನ್ನು ಕೇಂದ್ರ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಎಸ್‍ಡಿಆರ್‍ಎಫ್ ಅನುದಾನದ ಅಡಿ 2020-21 ರ ಮೊದಲ ಕಂತಾಗಿ …

Read More »

ಛತ್ತೀಸ್‍ಗಢ ರಾಜ್ಯದ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ

ರಾಯ್ಪುರ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೋವಿಡ್-19 ಹಾಗೂ ಕೊರೊನಾ ಎಂಬ್ ಹೆಸರು ಕೇಳಿದರೇ ಜನರು ಬೆಚ್ಚಿ ಬೀಳುವ ಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಛತ್ತೀಸ್‍ಗಢ ರಾಜ್ಯದ ದಂಪತಿ ತಮಗೆ ಜನಿಸಿದ ಅವಳಿ ಮಕ್ಕಳಿಗೆ ‘ಕೊರೊನಾ’ ಮತ್ತು ‘ಕೋವಿಡ್’ ಎಂದು ನಾಮಕರಣ ಮಾಡಿರುವುದು ಅಚ್ಚರಿ ಮೂಡಿಸಿದೆ. ರಾಯ್ಪುರ ಮೂಲದ ದಂಪತಿಗೆ ಮಾರ್ಚ್ 27ರ ಮುಂಜಾನೆ ಅವಳಿ ಮಕ್ಕಳು ಜನಿಸಿದ್ದು, ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಾಗಿದೆ. ಕೊರೊನಾ …

Read More »

ಆಟೋ, ಕ್ಯಾಬ್ ಚಾಲಕರಿಗೆ 5 ಸಾವಿರ ರೂಪಾಯಿ ನೆರವು – ಕೇಜ್ರಿವಾಲ್ ಘೋಷಣೆ

ನವದೆಹಲಿ: ಲಾಕ್‍ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ಆಟೋ, ರಿಕ್ಷಾ, ಇ ರಿಕ್ಷಾ, ಕ್ಯಾಬ್ ಚಾಲಕರ ನೆರವಿಗೆ ನಿಂತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ರಿಕ್ಷಾ, ಆಟೋ, ಇ ರಿಕ್ಷಾ ಚಾಲಕರು, ಕ್ಯಾಬ್ ಚಾಲಕರಿಗೆ 5,000 ರೂಪಾಯಿಗಳ ನೆರವು ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಘೋಷಣೆ ಮಾಡಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಲಾಕ್‍ಡೌನ್ ಹಿನ್ನೆಲೆ ಆಟೋ ರಿಕ್ಷಾ ಚಾಲಕರಿಗೆ ಸಂಕಷ್ಟ …

Read More »

ದೆಹಲಿಯ ಜಮಾತ್ ಸಭೆಯಿಂದ ದೇಶಾದ್ಯಂತ ಕೊರೊನಾ ಹರಡಿದ್ದು ಹೇಗೆ?

ತಬ್ಲಿಘಿ ಸಭೆಗೆ ಹಾಜರಾಗಿದ್ದ ತಮಿಳುನಾಡಿನ 264 ಮಂದಿಗೆ ಕೊರೊನಾ ನವದೆಹಲಿ: ದೇಶದ ಒಟ್ಟು ಕೊರೊನಾ ಸೋಂಕಿತರಲ್ಲಿ ಶೇ.20 ರಷ್ಟು ಜನರು ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದರವೇ ಆಗಿರುವುದು ಆಂತಕಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 19 ಮಂದಿ ವಿವಿಧ ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ. ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ ಮೊದಲ ವಾರದಿಂದ ನಡೆದ ಸಭೆಯಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿ ಬಳಿಕ ಊರುಗಳಿಗೆ ತೆರಳಿದ್ದರು. …

Read More »

ಬೆಳಗಿನಿಂದ ಮಧ್ಯಾಹ್ನದವರೆಗೆ ಕೊರೋನಾಗೆ 7 ರಾಜ್ಯಗಳಲ್ಲಿ 7 ಸಾವು..!

ನವದೆಹಲಿ/ಮುಂಬೈ, ಏ.2-ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂದು ಬೆಳಗಿನಿಂದ ಮಧಾಹ್ಯದವರೆಗೆ ಒಟ್ಟು ಏಳು ರಾಜ್ಯಗಳಲ್ಲಿ ಏಳು ಸಾವು ಸಂಭವಿಸಿದ್ದು, ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹರಿಯಾಣ, ಪಂಜಾಬ್, ಮಹಾರಾಷ್ಟ್ರ, ಗುಜರಾತ್, ಅರುಣಾಚಲ ಪ್ರದೇಶ, ಮಧ್ಯಪ್ರದೇಶ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಈ ಸಾವುಗಳು ವರದಿಯಾಗಿವೆ. ಹರಿಯಾಣದಲ್ಲಿ ಪ್ರಥಮ ಕೋವಿಡ್-19 ಸಾವು ಸಂಭವಿಸಿದೆ. ಸಂಬಾಲ ಪ್ರದೇಶದ 67 ವರ್ಷದ ವೃದ್ದರೊಬ್ಬರನ್ನು ಹೆಮ್ಮಾರಿ ಬಲಿ ಪಡೆದಿದೆ. ಹರಿಯಾಣಗೆ ಹೊಂದಿಕೊಂಡಿರುವ …

Read More »