ಇಂದೋರ್: ಗ್ರಾಮಸ್ಥರ ಆರೋಗ್ಯ ಪರೀಕ್ಷೆಗಾಗಿ ಬಂದಿದ್ದ ಸಿಬ್ಬಂದಿ ಮೇಲೆ ಕೆಲವರು ಹಲ್ಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಟಾಟಪಟ್ಟಿಯಲ್ಲಿ ನಡೆದಿದೆ. ಗ್ರಾಮಸ್ಥರಿಂದ ತಪ್ಪಿಸಿಕೊಂಡು ಓಡಿ ಹೋಗ್ತಿರುವ ದೃಶ್ಯಗಳ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬುಧವಾರ ಒಂದೇ ದಿನ ಮಧ್ಯಪ್ರದೇಶದಲ್ಲಿ 12 ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಟಾವೆಲ್ ಹಿಸ್ಟರಿ ಹಿಡಿದು ವೈದ್ಯಕೀಯ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರನ್ನು ಥರ್ಮಲ್ ಸ್ಕ್ರೀನಿಂಗ್ ಗೆ …
Read More »ರೊ ಎಂಟರ್ಪ್ರೈಸಸ್ ಲಿಮಿಟೆಡ್ ಮತ್ತು ಅಜೀಮ್ ಪ್ರೇಮ್‍ಜಿ ಫೌಂಡೇಶನ್ 1,125 ಕೋಟಿ ರೂ. ನೆರವನ್ನು ನೀಡಲು ಮುಂದಾಗಿದೆ.
ಬೆಂಗಳೂರು: ವಿಶ್ವವ್ಯಾಪಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಹಲವು ದೇಶಗಳು ಒದ್ದಾಡುತ್ತಿವೆ. ಈ ಮಹಾಮಾರಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ವಿಪ್ರೊ ಲಿಮಿಟೆಡ್, ವಿಪ್ರೊ ಎಂಟರ್ಪ್ರೈಸಸ್ ಲಿಮಿಟೆಡ್ ಮತ್ತು ಅಜೀಮ್ ಪ್ರೇಮ್‍ಜಿ ಫೌಂಡೇಶನ್ ಕೈಜೋಡಿಸಿದ್ದು, ಬರೋಬ್ಬರಿ 1,125 ಕೋಟಿ ರೂ. ನೆರವನ್ನು ನೀಡಲು ಮುಂದಾಗಿದೆ. ಸಂಸ್ಥೆ ಈಗ ನೀಡುತ್ತಿರುವ ನೆರವು ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಡಲು ಉಪಯೋಗವಾಗಲಿದೆ. ವೈದ್ಯಕೀಯ ಸೌಲಭ್ಯ, ಸೋಂಕಿತರ ಚಿಕಿತ್ಸೆಗೆ ಸಹಾಯವಾಗಲಿದೆ ಎಂದು ವಿಪ್ರೊ …
Read More »ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ
ದೆಹಲಿಯಲ್ಲಿ ನಡೆದ ಸಭೆಗೆ ತಮಿಳುನಾಡು ತತ್ತರ – ನಿನ್ನೆ 50 ಮಂದಿ, ಇಂದು 110 ಜನರಿಗೆ ಸೋಂಕು ದೃಢ ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ ಚೆನ್ನೈ: ಇಂದು ಒಂದೇ 110 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಎಲ್ಲ 110 ಮಂದಿ ದೆಹಲಿ ಮಸೀದಿಯ ಕಾರ್ಯಕ್ರಮಕ್ಕೆ ತೆರಳಿದವರು ಎಂದು ತಮಿಳುನಾಡು ಸರ್ಕಾರ ಹೇಳಿದೆ. ಒಂದೇ ದಿನದಲ್ಲಿ 110 ಪ್ರಕರಣಗಳು ಬೆಳಕಿಗೆ ಬಂದ ಪರಿಣಾಮ …
Read More »ಕೊರೊನಾ ಹೋರಾಟದಲ್ಲಿ ಆರೋಗ್ಯ ಸಿಬ್ಬಂದಿ ಮೃತಪಟ್ಟರೆ 1 ಕೋಟಿ ಪರಿಹಾರ: ಕೇಜ್ರಿವಾಲ್
ನವದೆಹಲಿ: ಕೊರೊನಾ ವೈರಸ್ ರೋಗಿಗಳಿಗೆ ಸೇವೆ ಸಲ್ಲಿಸುತ್ತಿರುವವರು “ದೇಶವನ್ನು ರಕ್ಷಿಸುವ ಸೈನಿಕರಿಗಿಂತ ಕಡಿಮೆಯಿಲ್ಲ”. ಹೀಗಾಗಿ ಕೊವೀಡ್-19 ಹೋರಾಟದಲ್ಲಿ ಭಾಗಿಯಾಗಿರುವ ಆರೋಗ್ಯ ಸಿಬ್ಬಂದಿ ಮೃತಪಟ್ಟರೆ ಅವರ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. “ಯುದ್ಧದ ಸಮಯದಲ್ಲಿ ಸೈನಿಕ ತನ್ನ ಪ್ರಾಣವನ್ನು ಪಣಕ್ಕಿಟ್ಟು ದೇಶವನ್ನು ರಕ್ಷಿಸುತ್ತಾನೆ. ಆದ್ದರಿಂದ ನಮ್ಮ ಇಡೀ ರಾಷ್ಟ್ರವು ಅವರಿಗೆ ಋಣಿಯಾಗಿದೆ. ಇಂದು ಆರೋಗ್ಯ ಕಾರ್ಯಕರ್ತರು ಕೂಡ ದೇಶದ ಜನರನ್ನು ಉಳಿಸಲು …
Read More »ಲಾಕ್‍ಡೌನ್ ಎಫೆಕ್ಟ್- ಎಲ್‍ಪಿಜಿ ಗ್ರಾಹಕರ ಹೊರೆ ಕಡಿಮೆಗೊಳಿಸಿದ ಸರ್ಕಾರ
ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರು ಈಗ ಪಡೆಯುತ್ತಿದ್ದಾರೆ. ನೈಸರ್ಗಿಕ ಅನಿಲದ ಬೆನ್ನಲ್ಲೇ ಅಡಿಗೆ (ಎಲ್‍ಪಿಜಿ) ಅನಿಲದ ಬೆಲೆಯನ್ನು ಕಡಿಮೆ ಮಾಡಲಾಗಿದೆ. ದೇಶದ ಅತಿದೊಡ್ಡ ಸರ್ಕಾರಿ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್, ರಾಜಧಾನಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಸಿಲಿಂಡರ್‌ಗೆ 61 ರೂ. ಈ ಕಡಿತಗೊಳಿಸಿದೆ. ಮಾರ್ಚ್ ನಲ್ಲಿ ಒಂದು ಸಿಲೆಂಟರ್ ಬೆಲೆ 805.50 …
Read More »ಡೇಂಜರ್ ಝೋನ್ ಆಗ್ತಿದೆಯಾ ರಾಷ್ಟ್ರ ರಾಜಧಾನಿ?
ನವದೆಹಲಿ: ಒಂದೇ ದಿನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಚಿತ್ರಣ ಬದಲಾಗುವ ಸಾಧ್ಯತೆ ಕಂಡು ಬಂದಿದೆ. ಒಂದೇ ದಿನದಲ್ಲಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದುಪ್ಪಟಾಗುವ ಸಾಧ್ಯತೆ ಇದೆ. ದೆಹಲಿಯ ನಿಜ್ಜಾಮುದ್ದಿನ್ ಮರ್ಕಸ್ ನಲ್ಲಿದ್ದ 163 ಮಂದಿಯನ್ನ ಲೋಕ ನಾಯಕ ಆಸ್ಪತ್ರೆಗೆ ರವಾನಿಸಿದ್ದು, ಐಸೋಲೇಷನ್ ನಲ್ಲಿ ಇಡಲಾಗಿದೆ. ಇವರ ಎಲ್ಲರ ಸ್ಯಾಂಪಲ್ ಗಳನ್ನು ಪಡೆದು ಲ್ಯಾಬ್‍ಗಳಿಗೆ ಕಳುಹಿಸಲಾಗಿದ್ದು ಇಂದು ಸಂಜೆ ವೇಳೆಗೆ ವರದಿ ಬರುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ ಈ …
Read More »ಭಾರತದಲ್ಲಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ..! ಮಹಾಮಾರಿಗೆ 34 ಮಂದಿ ಬಲಿ..!
ನವದೆಹಲಿ : ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಜತೆಗೆ, ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ದೇಶದಲ್ಲಿ ಕೊರೊನಾ ಈಗಲೂ ಸ್ಥಳೀಯ ಹರಡುವಿಕೆ ಹಂತದಲ್ಲಿ ಇದೆಯಷ್ಟೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ …
Read More »ಕೇಂದ್ರ ಸರ್ಕಾರಕ್ಕೆ ಸವಾಲಾಗಿದೆ ವೆಂಟಿಲೇಟರ್‌ಗಳ ಸಮಸ್ಯೆ..!
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಚಿಕಿತ್ಸೆ ನೀಡಬೇಕಾದರೆ, ವೆಂಟಿಲೇಟರ್‌ಗಳ ಅಗತ್ಯವಿದೆ. ಆದರೆ, ಸದ್ಯ ವೆಂಟಿಲೇಟರ್‌ಗಳ ಸಂಖ್ಯೆ ಕಡಿಮೆ ಇರುವುದು ಇರುವುದು ತಲೆನೋವಾಗಿ ಪರಿಣಮಿಸಿದೆ. ಹೀಗಾಗಿಯೇ ಕೇಂದ್ರ ಸರ್ಕಾರ ದೇಶದಲ್ಲಿರುವ ಎಲ್ಲಾ ಆಟೋ ಮೇಕರ್ಸ್ ಕಂಪನಿಗಳಿಗೆ ಕೊರೊನಾ ವಿರುದ್ಧ ಹೋರಾಡಲು ಹೆಚ್ಚು ಹೆಚ್ಚು ವೆಂಟಿಲೇಟರ್‌ಗಳ ತಯಾರಿಕೆಗೆ ಮುಂದಾಗುವಂತೆ ಕೇಳಿಕೊಂಡಿದೆ. ಈಗಾಗಲೇ ಆನಂದ್ ಮಹಿಂದ್ರಾ ಮಾಲೀಕತ್ವದ ಮಹಿಂದ್ರಾ ಅಂಡ್ ಮಹಿಂದ್ರಾ ಕಂಪನಿ ಬೆಂಗಳೂರು ಮೂಲದ ವೆಂಟಿಲೇಟರ್ ರಫ್ತು ಮಾಡುವ …
Read More »92 ಹೊಸ ಕೊರೊನಾ ಪ್ರಕರಣ, ಭಾರತದಲ್ಲಿ 1071ಕ್ಕೆ ಏರಿಕೆ
ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 92 ಪ್ರಕರಣಗಳು ಬಂದಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ 1071ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ ಅಗರ್‍ವಾಲ್ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಒಟ್ಟು 29 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿಯವರೆಗೆ ಕೊರೊನಾ ಸ್ಥಳೀಯವಾಗಿ ಹರಡುತ್ತಿದೆಯೇ ಹೊರತು ಸಮುದಾಯಕ್ಕೆ ಬಂದಿಲ್ಲ ಎಂದು ತಿಳಿಸಿದರು. ಕರ್ನಾಟಕದಲ್ಲಿ ಇಂದು 5 ಪ್ರಕರಣ ಬಂದಿದ್ದು, ಒಟ್ಟು ಕೊರೊನಾ ಪೀಡಿತರ ಸಂಖ್ಯೆ …
Read More »ಪ್ರಧಾನಿ ಹೆಸರಲ್ಲಿ ನಕಲಿ ಖಾತೆ – ಕೊರೊನಾ ಸೋಂಕಿತರ ನೆರವಿಗೆ ಸ್ವೀಕರಿಸುತ್ತಿರೋ ದೇಣಿಗೆ ಲಪಟಾಯಿಸಲು ಯತ್ನ
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿತರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಮುಂದಾಗಿತ್ತು. ಆದರೆ ಕೇಂದ್ರ ಸರ್ಕಾರದ ಮಾದರಿಯಲ್ಲೇ ನಕಲಿ ಖಾತೆ ಸೃಷ್ಟಿಸಿ ಹಣ ಕೊಳ್ಳೆ ಹೊಡೆಯಲು ಪ್ರಯತ್ನಿಸಿದ ಘಟನೆ ನಡೆದಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಕೊರೊನಾ ಸೋಂಕು ಪೀಡಿತರ ನೆರವುಗಾಗಿ ಸಾರ್ವಜನಿಕರು ದೇಣಿಗೆ ನೀಡುವಂತೆ …
Read More »