Breaking News

new delhi

ಪ್ರಧಾನಿ ಮನೆ ಸುತ್ತಲಿನ 717 ಮನೆ ತೆರವಿಗೆ ಆದೇಶ

ನವದೆಹಲಿ: ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದ ಸುತ್ತ ಸರ್ಕಾರಿ ಜಾಗದಲ್ಲಿ ನಿರ್ಮಾಣವಾಗಿದ್ದ 3 ಕೊಳಗೇರಿಗಳ ನಿವಾಸಿಗಳಿಗೆ ಮಾ.6ರ ಒಳಗಾಗಿ ಜಾಗ ಖಾಲಿ ಮಾಡುವಂತೆ ನೋಟೀಸ್‌ ನೀಡಲಾಗಿದೆ. ಅವರಿಗೆ 45 ಕಿ.ಮೀ. ದೂರದಲ್ಲಿರುವ ಸಾವ್ದಾ ಘೇವ್ಡಾದಲ್ಲಿ ಪುನರ್ವಸತಿ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಜಾಗ ಖಾಲಿ ಮಾಡುವಂತೆ ನೋಟೀಸ್‌ ಭಾಯಿ ರಾಮ್‌ ಕ್ಯಾಂಪ್‌, ಮಸ್ಜಿದ್‌ ಕ್ಯಾಂಪ್ ಮತ್ತು ಡಿಐಡಿ ಕ್ಯಾಂಪ್‌ಗಳು ಪ್ರಧಾನಿ ನಿವಾಸದಿಂದ ಕೆಲವೇ ಕಿ.ಮೀ. ದೂರದಲ್ಲಿವೆ. ಇವು ಸರ್ಕಾರಿ ಭೂಮಿಯಲ್ಲಿದ್ದುದರಿಂದ ಜಾಗ …

Read More »

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಕ್ಲೈಮ್ಯಾಕ್ಸ್‌ನತ್ತ : ಜಾರಕಿಹೊಳಿ

ನವದೆಹಲಿ : ಸದ್ದಿಲ್ಲದೆ ದೆಹಲಿಗೆ ತೆರಳಿ ಎರಡು ದಿನ ಅಲ್ಲೇ ಬೀಡು ಬಿಟ್ಟು, ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಟೀಮ್‌ಗೆ ರಾಜ್ಯದ ನಾಯಕತ್ವ ಗೊಂದಲ ಬಗೆಹರಿಸುವ ಭರವಸೆ ಹೈಕಮಾಂಡ್‌ನಿಂದ ದೊರಕಿದೆ. ಮಾಜಿ ಸಚಿವ ಕೆ.ಎನ್‌.ರಾಜಣ್ಣ ಹಾಗೂ ಪರಿಶಿಷ್ಟ ಪಂಗಡದ ಶಾಸಕರೊಂದಿಗೆ ದೆಹಲಿಗೆ ತೆರಳಿದ್ದ ಸತೀಶ್‌ ಜಾರಕಿಹೊಳಿ ತಂಡ ಶನಿವಾರ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದ …

Read More »

ಸರ್ಕಾರಿ ಕಟ್ಟಡದೊಳಗೆ ನಮಾಜ್ – ಜೋಶಿಮಠದಲ್ಲಿ ಉದ್ವಿಗ್ನ ಪರಿಸ್ಥಿತಿ

ಡೆಹ್ರಾಡೂನ್: ಉತ್ತರಾಖಂಡದ ಐತಿಹಾಸಿಕ ಪವಿತ್ರ ಪಟ್ಟಣ ಜೋಶಿಮಠದ (Joshimath) ಸರ್ಕಾರಿ ಕಟ್ಟಡದೊಳಗೆ ನಮಾಜ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ನಗರ ಪಾಲಿಕೆಯಿಂದ ಕ್ರೀಡಾ ಇಲಾಖೆಗೆ ನೀಡಲಾಗಿರುವ ಒಂದು ಕಟ್ಟಡದಲ್ಲಿ ಟೇಬಲ್ ಟೆನ್ನಿಸ್ ಹಾಲ್ ನಿರ್ಮಾಣ ಮಾಡುವ ಉದ್ದೇಶವಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಈ ಕಟ್ಟಡದೊಳಗೆ ಮುಸ್ಲಿಂ ಸಮುದಾಯದವರು ಅನುಮತಿಯಿಲ್ಲದೆ ಜಮಾತ್ ನಮಾಜ್ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಭಕ್ತರ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿರುವುದನ್ನು …

Read More »

ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ : ಪ್ರಧಾನಿ ಮೋದಿ

ನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ ಮತ್ತು ಕಾರ್ಯತಂತ್ರದ ಚಿಂತಕ,ಅವರ ಧೈರ್ಯ ಮತ್ತು ಆಡಳಿತ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಜನ ದಿನ ಹಿನ್ನಲೆಯಲ್ಲಿ ಮೋದಿ ಅವರು ಸರಣೆ ಮಾಡಿ ವಂದಿಸಿದ್ದಾರೆ. ಫೆ 19, 1630 ರಂದು ಜನಿಸಿದ ಅವರು 17 ನೇ ಶತಮಾನದಲ್ಲಿ ಮತ್ತೆ ಹಿಂದೂ ಸಾಮ್ರಾಜ ್ಯ ಸ್ಥಾಪಿಸಿದರು.ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು, …

Read More »

ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ

ನವದೆಹಲಿ: ಏಪ್ರಿಲ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಖಾಲಿಯಾಗುತ್ತಿರುವ 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸುವ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ. ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಖಾಲಿಯಾಗುತ್ತಿರುವ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ.  

Read More »

ಭಯ ಬೇಡ, ಎಐ ಹೊಸ ಉದ್ಯೋಗ ಸೃಷ್ಟಿಸುತ್ತೆ : ಮೋದಿ

ನವದೆಹಲಿ: ಕೆಲ ವರ್ಷಗಳ ಹಿಂದೆ ಅಂಬೆಗಾಲಿಡುತ್ತಿದ್ದ ಎಐ ಇದೀಗ ದಾಪುಗಾಲಿಡುತ್ತಾ ಎಲ್ಲಾ ಕ್ಷೇತ್ರಗಳನ್ನು ಆವರಿಸಿಕೊಂಡು, ನಿರುದ್ಯೋಗದ ಆತಂಕವನ್ನು ಹೆಚ್ಚಿಸಿರುವ ಹೊತ್ತಿನಲ್ಲಿ, ‘ಈ ಭಯಕ್ಕೆ ತಯಾರಿಯೊಂದೇ ಮದ್ದು. ಎಐನಿಂದ ಹೊಸ ಉದ್ಯೋಗಗಳು ಸೃಷ್ಟಿ ಆಗಲಿದ್ದು, ರೂಪಾಂತರಗೊಳ್ಳುವ ಕೆಲಸಗಳನ್ನು ಕಲಿತು ಅವನ್ನು ಬಾಚಿಕೊಳ್ಳಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಯ ನೀಡಿದ್ದಾರೆ ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆಯ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು, ‘ಇತಿಹಾಸವನ್ನು ನೋಡಿದರೆ, ತಂತ್ರಜ್ಞಾನವು ಕೆಲಸ ಕಸಿಯುವ ಬದಲು ಹೊಸ …

Read More »

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

ಬೆಂಗಳೂರು: ಕೋಲಾರದ ವೇಮಗಲ್ ಗ್ರಾಮದಲ್ಲಿಂದು ಹಮ್ಮಿಕೊಳ್ಳಲಾಗಿರುವ TASL ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಫ್ರೆಂಚ್ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಫ್ರೆಂಚ್ ರಕ್ಷಣಾ ಸಚಿವರಿಗೆ ವಿವಿಧ ಮಿಲಿಟರಿ ಪಡೆಗಳಿಂದ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕೋಲಾರದ ವೇಮಗಲ್ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ TASL ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸಂಜೆ ನವದೆಹಲಿಗೆ ಹಿಂದಿರುಗಲಿದ್ದಾರೆ.

Read More »

ಕರ್ನಾಟಕದ 9 ರಸ್ತೆಗಳು NHAI ಉಸ್ತುವಾರಿಗೆ

ನವದೆಹಲಿ: ರಾಜ್ಯದ ಒಂಬತ್ತು ಪ್ರಮುಖ ರಸ್ತೆಗಳನ್ನು ರಾಜ್ಯ ಲೋಕೋಪಯೋಗಿ ಇಲಾಖೆಯಿಂದ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರ ಪಡೆಯಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮತಿಸಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಕೆಲವು ರಾಷ್ಟ್ರೀಯ ಹೆದ್ದಾರಿಗಳನ್ನು ಎನ್‌ಹೆಚ್‌ಎಐ ಹಸ್ತಾಂತರ ಪಡೆಯುತ್ತಿದ್ದು, ಈ ನಿರ್ಧಾರದಿಂದ ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕದವರೆಗಿನ ಪ್ರದೇಶಗಳಿಗೆ ಲಾಭವಾಗಲಿದೆ. ರಸ್ತೆಗಳ ನಿರ್ವಹಣೆಯನ್ನು ಏಕರೂಪಗೊಳಿಸಿ, ಅಭಿವೃದ್ಧಿ ಯೋಜನೆಗಳನ್ನು ವೇಗಗೊಳಿಸುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಬಳ್ಳಾರಿ-ಜೇವರ್ಗಿ: 265 …

Read More »

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

ನವದೆಹಲಿ: ದೇಶದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ ಕಂಡಿದೆ. 279ರೂ.ಯೊಂದಿಗೆ ಭಾರತ ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಹೊಸ ಜಾಗತಿಕ ಮಾನದಂಡ ಸ್ಥಾಪಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದರು. ಮುಂಬೈಯಲ್ಲಿ ಆಯೋಜಿಸಿದ್ದ “ಹವಾಮಾನ ಸಪ್ತಾಹ 2026” ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279ರೂ. ಕನಿಷ್ಠ ಮಟ್ಟಕ್ಕೆ ಇಳಿದಿದೆ. ಸೂರ್ಯಘರ್ ಯೋಜನೆಯಡಿ …

Read More »

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಸಿವಿಲ್ ನ್ಯಾಯಾಧೀಶರ ನೇಮಕಾತಿಗಳ  ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಹೈಕೋರ್ಟ್‌ಗೆ ಅನುಮತಿ ನೀಡಿದೆ. ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಮಲಿಕ್ ಮಝಾರ್ ಸುಲ್ತಾನ್ ವಿರುದ್ಧ ಯುಪಿ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ದೇಶಾದ್ಯಂತ ಟ್ರಯಲ್ ಕೋರ್ಟ್‌ಗಳಲ್ಲಿ ನ್ಯಾಯಧೀಶರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಗಾಗ್ಗೆ ಇಂತಹ ಆದೇಶಗಳನ್ನು ಹೊರಡಿಸುತ್ತಿದೆ. ಕರ್ನಾಟಕದಲ್ಲಿ ಸಿವಿಲ್ ಜಡ್ಜ್‌ಗಳ …

Read More »