Breaking News

new delhi

ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು.

  ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …

Read More »

ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಗೋಕಾಕದ ಅಪೇಕ್ಷಾ ಸಾಂಗ್ಲಿಕರ!*

ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಗುರುಪ್ರಸಾದ್ ಸಾಂಗ್ಲಿಕರ ಅವರು ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ವಲಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.   ಕನ್ನಡದಲ್ಲಿ 125 ಕ್ಕೆ 124 ಅಂಕ, ಇಂಗ್ಲಿಷ್, ಹಿಂದಿ, ಸಮಾಜ- ವಿಜ್ಞಾನದಲ್ಲಿ ತಲಾ 100 ಕ್ಕೆ ನೂರರಷ್ಟು ಅಂಕ, ಗಣಿತ ಹಾಗೂ ವಿಜ್ಞಾನದಲ್ಲಿ 99 ರಷ್ಟು ಅಂಕ , ಒಟ್ಟು 625 ಅಂಕಗಳಿಗೆ 622 ಅಂಕ ಪಡೆದು ಶೇಕಡಾ …

Read More »

ಪ್ರಧಾನಿಯಾಗಿ ಮೋದಿಯ ದಾಖಲೆಗಳು ಅವರು ʼಹಿಂದೂ ವಿರೋಧಿʼ ಎಂದು ಸೂಚಿಸುತ್ತದೆ: ಸುಬ್ರಮಣಿಯನ್‌ ಸ್ವಾಮಿ

ಹೊಸದಿಲ್ಲಿ: ಬಿಜೆಪಿ ಪಕ್ಷದ ಹಿರಿಯ ನಾಯಕನಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸರಕಾರದ ಕೆಲ ಧೋರಣೆಗಳನ್ನು ಕಟುವಾಗಿ ಟೀಕಿಸುವ ಸುಬ್ರಮಣಿಯನ್‌ ಸ್ವಾಮಿ ಇದೀಗ ಟ್ವೀಟ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯ ಆಡಳಿತ ವೈಖರಿಗಳಿ ಹಿಂದೂ ವಿರೋಧಿಯಾಗಿವೆ ಎಂದು ಹೇಳಿಕೆ ನೀಡಿದ್ದಾರೆ.   ಟ್ವಿಟರ್‌ ನಲ್ಲಿ “ಬಿಜೆಪಿ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಎತ್ತಿ ಹಿಡಿಯುವುದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಸಾಧನೆಗಳು ಹಿಂದೂ ವಿರೋಧಿಯಾಗಿದೆ. ಇದಕ್ಕೆ ಉದಾಹರಣೆಗಳೆಂದರೆ, ರಾಮಮಂದಿರ ಮೇಲಿನ ಸುಪ್ರೀಂ …

Read More »

ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

  ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …

Read More »

ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.

ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …

Read More »

ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಸಂಧಾನ ನಡೆಸಿದ್ದಾರೆ.   ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಲ್ಲಿನ ನಿವಾಸಿಗಳ ಸಭೆ ನಡೆಸಿ …

Read More »

ಮತ್ತೆ ನಾಳೆಗೆ ಕ್ಯಾಬಿನೆಟ್ ಸಭೆ ಮುಂದೂಡಿಕೆಹೈಕಮಾಂಡ್‍ನಿಂದ ಬಿಗ್ ಸಂದೇಶ ನಿರೀಕ್ಷೆ

ನವದೆಹಲಿ/ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ. ಇಂದು ಸಿಎಂ ಅವರು ಅಮಿತ್ ಶಾ ಹಾಗೂ ನಡ್ಡಾ ಭೇಟಿಯಾಗಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಭೇಟಿ ವೇಳೆ ಹೈಕಮಾಂಡ್‍ನಿಂದ ಸ್ಪಷ್ಟ ಸಂದೇಶ ರವಾನಿಸುವ ಸಾಧ್ಯತೆ ಇದೆ. ಹೈಕಮಾಂಡ್ ಸೂಚನೆ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಕುತೂಹಲ ಹುಟ್ಟಿಕೊಂಡಿದ್ದು, ಆ ಸಂದೇಶದಿಂದ ಯಾವ ಬದಲಾವಣೆ..? ಯಾರಿಗೆ ಶಾಕ್.. ಯಾರಿಗೆ ಲಕ್ ಎಂಬುದು ತಿಳಿದುಬರಲಿದೆ. …

Read More »

G.P.L. ಕ್ರಿಕೆಟ್ ಪಂದ್ಯಾವಳಿ ಇಂದು ಸೆಮಿಫೈನಲ್ ನಾಳೆ ಫೈನಲ್,ಗೆಲ್ಲೋರು ಯಾರು..?

ರಾಹುಲ ಜಾರಕಿಹೊಳಿ ಸಧ್ಯಕ್ಕೆ ಎಲ್ಲ ಕಡೆ ಚರ್ಚೆ ಯಲ್ಲಿರುವ ವಿಷಯ ಅವರು ಪ್ರತಿದಿನ ಏನಾದ್ರೂ ಒಂದು ಕೆಲಸ ಮಾಡ್ತಾನೆ ಇರತಾರೆ , ಸಾಮಾಜಿಕ ಕಾರ್ಯ, ಕಬ್ಬಡಿ ಪಂದ್ಯಾವಳಿ, ಈ ತರ ಎಲ್ಲಾದ್ರೂ ಒಂದು ಕಡೆ ಚರ್ಚೆಯಲ್ಲಿ ಇರ್ತಾರೆ. ಇನ್ನು ಗೋಕಾಕ ನಲ್ಲಿ ನಡೆದ ಜಿ ಪೀ ಎಲ್ ಲೆದರ್ ಬಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿತ್ತು.     ಇಂದೂ ಅದರ ಸೆಮಿ ಫೈನಲ್ ನಡೆಯಿತು. ಹಾಗೂ ನಾಳೆ ಫೈನಲ್ …

Read More »

ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಇಂದು (ಮೇ 03) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ …

Read More »

ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಕರ್ನಾಟಕದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ: ಬಸನಗೌಡ ಯತ್ನಾಳ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇನ್ನು ಎರಡು ದಿನಗಳಲ್ಲಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಲಿದ್ದಾರೆ. ಅನಂತರ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ. ದೆಹಲಿಯಲ್ಲಿ …

Read More »