Breaking News

new delhi

ದೇವನಹಳ್ಳಿ: ಸಿಮೆಂಟ್ ಲಾರಿಗಳ ಡಿಕ್ಕಿ, ಚಾಲಕ ಸಜೀವ ದಹನ

ಬೆಂಗಳೂರು: ಎರಡು ಸಿಮೆಂಟ್ ಲಾರಿಗಳು ಡಿಕ್ಕಿಯಾಗಿ, ಹೊತ್ತಿಕೊಂಡ ಬೆಂಕಿಯಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ಘಟನೆ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ. ಭುಕ್ತಿ ಡಾಬಾ ಬಳಿ ಸಂಭವಿಸಿದ ಅಪಘಾತದಲ್ಲಿ ಎರಡೂ ಸಿಮೆಂಟ್ ಸಾಗಣೆ ಲಾರಿಗಳು ಹೊತ್ತಿ ಉರಿದವು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಓರ್ವ ಚಾಲಕನನ್ನು ಸ್ಥಳೀಯರು ರಕ್ಷಿಸಿದರು. ಆದರೆ ಮತ್ತೋರ್ವ ಚಾಲಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟ. ಅಪಘಾತ ಮತ್ತು ಬೆಂಕಿಯಿಂದಾಗಿ ರಾಷ್ಟ್ರೀಯ …

Read More »

ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ

ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರುವುದು ಬಿಜೆಪಿ ಹಿಡನ್ ಅಜೆಂಡಾ- ಸತೀಶ ಜಾರಕಿಹೊಳಿ ಬೆಳಗಾವಿ: ಹಿಂದೂ ದೇವಸ್ಥಾನಗಳಲ್ಲಿ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿರ್ಬಂಧ ಹೇರಿರುವುದು ಬಿಜೆಪಿ ಹಿಡನ್ ಅಜೆಂಡಾ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ದೇಶ. ವಿವಿಧ ಜಾತಿ, ಧರ್ಮ ಕೂಡಿದ ದೇಶ. ಎಲ್ಲರೊಂದಿಗೂ ಸಂಬಂಧ ಇರುತ್ತದೆ. ಮುಸ್ಲಿಮ್‌ರಿಗೆ ವ್ಯಾಪಾರ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯಗಳು …

Read More »

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ

    ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ …

Read More »

100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ

  ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …

Read More »

ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ …

Read More »

ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.   22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …

Read More »

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …

Read More »

ಬಿಕಿನಿಯಾದರೂ ಧರಿಸಲಿ ಎಂದ ಪ್ರಿಯಾಂಕಾ ಗಾಂಧಿ!

ನವದೆಹಲಿ:  ಕರ್ನಾಟಕದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿಚಿತ್ರ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ವಿವೇಚನಗೆ ಬಿಟ್ಟದ್ದು ಎಂದು ಹೇಳಿದ್ದಾರೆ. ಅಲ್ಲದೇ ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ ಇಲ್ಲವೇ …

Read More »

ಕಡೋಲಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಬೆಳಗಾವಿ : ಹೊಲದಲ್ಲಿನ ಬಾವಿಗೆ ಅಳವಡಿಸಿದ ಪಂಪಸೇಟ್ ರಿಪೇರಿ ಮಾಡಲು ಹೋಗಿ ಕಾಲು ಜಾರಿ ಬಿದ್ದು ಕಡೋಲಿ ಗ್ರಾಮದ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ನಿನ್ನೆ (ಶನಿವಾರ) ರಾತ್ರಿ ವೇಳೆ ನಡೆದಿದೆ. ಕಡೋಲಿ ಗ್ರಾಮದ ಲಕ್ಷ್ಮಿ ಗಲ್ಲಿಯ ಅನೀಲ ಕಲ್ಲಪ್ಪಾ ಉಚ್ಚುಕರ  (48 ವರ್ಷ ) ಮೃತ ವ್ಯಕ್ತಿ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿನಾಶ್ ಯರಗೊಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ …

Read More »