ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದಿವೆ.. ಆದ್ರೂ, ಇನ್ನೂ ನೂತನ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಸಿಕ್ಕಿಲ್ಲ.. ಮೇಯರ್-ಉಪಮೇಯರ್ ಆಯ್ಕೆಯಾಗಿಲ್ಲ.. ಈವರೆಗೂ ಒಂದೇ ಒಂದು ಸಭೆಯೂ ನಡೆದಿಲ್ಲ.. ಇದ್ರಿಂದ ಬೆಳಗಾವಿ ಅಭಿವೃದ್ಧಿಗೆ ಗೃಹಣ ಹಿಡಿದಿದೆ. ಬೆಳಗಾವಿ ಪಾಲಿಕೆ 4 ತಿಂಗಳಾದ್ರೂ ಅತಂತ್ರವಾಗಿಯೇ ಇದೆ! ಮೇಯರ್-ಉಪಮೇಯರ್ ಆಯ್ಕೆಯಾಗದೆ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಬಹುಮತ ಪಡೆದಿದೆ. 58 …
Read More »ನಾನು ಪ್ರೀತಿ ಇರುವ ಸಭೆಗೆ ಹೋಗುತ್ತೇನೆ -ರಮೇಶ್ ಜಾರಕಿಹೊಳಿ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ರಿಂಗಣಿಸಿದ್ದೇ ಬಂತು, ಕೇಸರಿ ಪಾಳಯದ ಶಾಸಕರು ಮತ್ತೆ ಸಿಡಿದೆದ್ದಿದ್ದಾರೆ. ಆಗಿದ್ದಾಗ್ಲಿ ಈ ಬಾರಿ ಸಚಿವ ಸ್ಥಾನ ಪಡೆದೇ ತೀರುತ್ತೇವೆ ಅಂತಾ ಜಿದ್ದಿಗೆ ಬಿದ್ದವರಂತೆ ಅಖಾಡಕ್ಕೆ ಇಳಿದು ಅಬ್ಬರಿಸ್ತಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು, ಪಕ್ಷ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ. …
Read More »ಸಚಿವೆ ಶಶಿಕಲಾ ಜೊಲ್ಲೆಗೂ ಕೋವಿಡ್
ಬೆಳಗಾವಿ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೂ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಸಚಿವರೇ ಸ್ವತಃ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಸೋಂಕು ಖಚಿತಪಟ್ಟಿದ್ದು ಹೋಂ ಐಸೋಲೇಶನ್‌ನಲ್ಲಿ ಇದ್ದೇನೆ, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ವಿನಂತಿಸಿದ್ದಾರೆ.
Read More »ಬೆಳಗಾವಿ ಜಿಲ್ಲೆಯ ಸೋಮವಾರದ ಕೊರೋನಾ ಮಾಹಿತಿ; ಸವದತ್ತಿಯ ವ್ಯಕ್ತಿ ಬಲಿ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ 625 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ನಗರದಲ್ಲಿ 325, ಸವದತ್ತಿಯಲ್ಲಿ 59, ರಾಮದುರ್ಗದಲ್ಲಿ 47, ಚಿಕ್ಕೋಡಿಯಲ್ಲಿ 43, ರಾಯಬಾಗದಲ್ಲಿ 35, ಬೈಲಹೊಂಗಲದಲ್ಲಿ 32, ಅಥಣಿಯಲ್ಲಿ 27, ಗೋಕಾಕಲ್ಲಿ 24, ಖಾನಾಪುರದಲ್ಲಿ 20 ಜನರಿಗೆ ಸೋಂಕು ಪತ್ತೆಯಾಗಿದೆ. ಸವದತ್ತಿಯ 49 ವರ್ಷದ ವ್ಯಕ್ತಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಇನ್ನೂ 1144 ಜನರು ಕೊರೋನಾ …
Read More »ಸಂಪುಟ ವಿಸ್ತರಣೆ, ಬೆಳಗಾವಿ ರಹಸ್ಯ ಸಭೆ; ಸಿಎಂ ನೀಡಿದ ಪ್ರತಿಕ್ರಿಯೆಯೇನು?
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಲು ಕಾರಣವಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಚಿವಾಕಾಂಕ್ಷಿಗಳು ಮಾರ್ಚ್ ನಲ್ಲಿ ಬೇಡ ಸಂಪುಟ ವಿಸ್ತರಣೆ ಈಗಲೇ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸದ್ಯಕ್ಕೆ ನಾಲ್ಕು ಸ್ಥಾನಗಳು ಖಾಲಿ ಇದೆ. ಅದನ್ನು ಯಾವಾಗ ಭರ್ತಿ …
Read More »ಗೆಲುವಿಗಾಗಿ ನೂರೆಂಟು ಸರ್ಕಸ್.. ಪಂಚರಾಜ್ಯಗಳಲ್ಲಿ ‘ರಾಜಕೀಯ ತಂತ್ರ’ ಹೇಗಿದೆ..?
ಪಂಚರಾಜ್ಯಗಳ ಚುನಾವಣೆ ಬಿಸಿ ಏರ್ತಿದೆ. ಉತ್ತರ ಪ್ರದೇಶದಲ್ಲಿ ಕುರ್ಚಿಯಾಟ ಮುಂದುವರೆದಿದೆ. ಪಂಜಾಬ್ನಲ್ಲಿ ಕ್ಯಾಪ್ಟನ್ ತನ್ನ ಪಕ್ಷದ ಹುರಿಯಾಳುಗಳನ್ನ ಪ್ರಕಟಿಸಿದ್ದಾರೆ. ಇತ್ತ ಗೋವಾದಲ್ಲಿ ಕಳೆದ ಬಾರಿ ಕೈ ಸುಟ್ಕೊಂಡಿದ್ದ ಕಾಂಗ್ರೆಸ್, ಈ ಸಲ ಚುನಾವಣೆ ಮುನ್ನವೇ ಆಣೆ ಪ್ರಮಾಣದ ಮೊರೆ ಹೋಗಿದೆ. ಸಮೀಕ್ಷೆಗಳಿಗೆ ಬೀಳುತ್ತಾ ಬ್ರೇಕ್..? ವಿವಿಧ ಸುದ್ದಿ ವಾಹಿನಗಳಲ್ಲಿ ಪ್ರಸಾರ ಆಗ್ತಿರುವ ಚುನಾವಣೆ ಸಮೀಕ್ಷೆಗಳಿಗೆ ಬ್ರೇಕ್ ಹಾಕುವಂತೆ ಸಮಾಜವಾದಿ ಪಕ್ಷ ಆಗ್ರಹಿಸಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಅಂತ …
Read More »3ನೇ ಅಲೆ ಎಫೆಕ್ಟ್.. ಒಂದು ವೇಳೆ ನೀವು ಪತ್ರಿಕೆ ಕೊಳ್ಳದಿದ್ರೆ 3.5 ಲಕ್ಷ ಕುಟುಂಬಗಳು ಬೀದಿಗೆ
ಬಂದ್ ಇರಲಿ, ಲಾಕ್ ಡೌನ್ ಇರಲಿ. ದಿನ ಪತ್ರಿಕೆ ಹಾಕೋರು ಮಳೆ ಚಳಿ ಗಾಳಿ ಲೆಕ್ಕಿಸದೇ ಅದೇನೇ ಕಷ್ಟಗಳಿದ್ರೂ ನಾವು ಬೆಡ್ನಿಂದ ಎದ್ದೇಳುವಷ್ಟರಲ್ಲಿ ಹಳ್ಳಿಯಿಂದ ದಿಲ್ಲಿವರೆಗಿನ ಸುದ್ದಿಗಳನ್ನ ನಮ್ಮ ಮನೆ ಬಾಗಿಲುಗಳಿಗೆ ತಲುಪಿಸುವ ಕೆಲಸ ಮಾಡ್ತಾರೆ. ಆದರೆ ಅವರ ಸಮಸ್ಯೆಗಳು ಮಾತ್ರ ಬೆಟ್ಟದಷ್ಟು. ಹೀಗೆ ಕಷ್ಟದಲ್ಲೇ ಜೀವನ ಸಾಗಿಸುತ್ತಿದ್ದವರೂ ಸದ್ಯ ಕಂಗಾಲಾಗಿದ್ದಾರೆ. ದಿನ ಬೆಳಗಾದ್ರೆ ಸಾಕು ಬಿಸಿ ಬಿಸಿ ಕಾಫಿ ಜೊತೆಗೆ ದಿನ ಪತ್ರಿಕೆ ಓದುವುದರೊಂದಿಗೆ ಬಹುತೇಕರ ದಿನಚರಿ ಶುರುವಾಗುತ್ತೆ. …
Read More »ಕರ್ನಾಟಕದ ಆಕ್ಷೇಪ ತಿರಸ್ಕರಿಸಿದ ತಮಿಳುನಾಡು -ಟಾಪ್ 10 ಸುದ್ದಿಗಳ ಕ್ವಿಕ್ರೌಂಡಪ್
ಬಾದಾಮಿ ಪ್ರವಾಸ ಕೈಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಮೂರು ದಿನಗಳ ಬದಾಮಿ ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ. ವಿಶೇಷ ವಿಮಾನದ ಮೂಲಕ ಈಗಾಗ್ಲೆ ಸಿದ್ದರಾಮಯ್ಯ ಹುಬ್ಬಳ್ಳಿಗೆ ತೆರಳಿದ್ದು, ಹುಬ್ಬಳ್ಳಿಯಿಂದ ಬದಾಮಿಗೆ ಭೇಟಿ ನೀಡಲಿದ್ದಾರೆ. ಇಂದು ಬಾದಾಮಿ ಕ್ಷೇತ್ರದಲ್ಲಿಯೇ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದು, ನಾಳೆ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಗುಳೇದಗುಡ್ಡ ಹಾಗೂ ಬಾದಾಮಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಭಾಗಿಯಾಗಲಿದ್ದು, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಹೊಗೆನಕಲ್ …
Read More »ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೊನಾ ಹೆಚ್ಚಾಗಿದೆ: ಕೆ.ಎಸ ಈಶ್ವರಪ್ಪಾ ಆರೋಪ
ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೊನಾ ಹೆಚ್ಚಾಗಿದೆ ಎಂದು ಶಿವಮೊಗ್ಗ ದಲ್ಲಿ ಕೆ.ಎಸ್ ಈಶ್ವರಪ್ಪಾ ಗಂಭೀರ ಆರೋಪ ಮಾಡಿದ್ದಾರೆ.ಹೌದು ಶಿವಮೊಗ್ಗದಲ್ಲಿ ಇಂದು ಕೆ.ಎಸ್ ಈಶ್ವರಪ್ಪಾ ಅವರು ಮಾತನಾಡಿ ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಾಗಿದ್ದು, ಪಾದಯಾತ್ರೆ ಪ್ರಾರಂಭವಾಗುವ ಮೊದಲೇ ಕೆಎಸ್ ಈಶ್ವರಪ್ಪಾ ಅವರು ವಿಷಯದ ಕುರಿತಂತೆ ಪ್ರಸ್ತಾಪ ಮಾಡುತ್ತಿದ್ದರು. ಈ ಹಿನ್ನಲೆಯಲ್ಲಿ ಮಲ್ಲಿಕಾರ್ಜುನ ಕರಗೆ ಸೇರಿದಂತೆ ಹಲವಾರೂ ಕಾಂಗ್ರೇಸ್ ಮುಖಂಡರಿಗೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಕೊರೊನಾ ಪಾಸಿಟಿವ್ ಬಂದಿದೆ ಎಂದರು.ಇದು ಖಂಡಿತ ರಾಜಕೀವಲ್ಲ, ಕೇವಲ ಆರೋಗ್ಯದ …
Read More »ಎನ್.ಸಿ.ಸಿ ಯಲ್ಲಿ 7500 ಹೊಸ ಕೆಡೆಟ್‍ಗಳಿಗೆ ಅವಕಾಶ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು:ಸ್ವಾತಂತ್ರೋತ್ಸವದ 75 ನೇ ವರ್ಷಾಚರಣೆಯ ಸಂದರ್ಭದಲ್ಲಿ 75 ಯುನಿಟ್‍ಗಳನ್ನು ಶಾಲಾ ಕಾಲೇಜುಗಳಲ್ಲಿ ಪ್ರಾರಂಭಿಸಿ, 7500 ಹೊಸ ಕೆಡೆಟ್‍ಗಳಿಗೆ ಈ ಬಾರಿ ಎನ್.ಸಿ.ಸಿ ಯಲ್ಲಿ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನಾಚರಣೆ ಅಂಗವಾಗಿ ಹೊಸ 75 ನೇತಾಜಿ ಅಮೃತ ಎನ್.ಸಿ.ಸಿ ಶಾಲೆಗಳ ಘೋಷಣೆ, ನವೀಕೃತ ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ ಚಾಲನೆ, 75 ಪೈಲಟ್‍ಗಳ ತರಬೇತಿಗೆ …
Read More »