Breaking News

new delhi

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

ನವದೆಹಲಿ: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತ ಸೂಪರ್‌ ಪವರ್‌ ಆಗಬೇಕೆಂಬ ನಿಟ್ಟಿನಲ್ಲಿ ಆಯೋಜನೆಗೊಂಡಿರುವ ಜಾಗತಿಕ ಎಐ ಶೃಂಗಕ್ಕೆ ದೆಹಲಿಯಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಭಾರತ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಐ ಇಂಪ್ಯಾಕ್ಟ್‌ ಶೃಂಗ ಮತ್ತು ಎಐ ಇಂಪ್ಯಾಕ್ಟ್‌ ಎಕ್ಸ್‌ಪೋವನ್ನು  ಉದ್ಘಾಟಿಸಿದರು. ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ 500 ಅಧಿವೇಶನ ನಡೆಯಲಿದ್ದು 3 ಸಾವಿರ ಭಾಷಣಕಾರರು ಭಾಗಿಯಾಗಲಿದ್ದಾರೆ. ಜಾಗತಿಕ ತಂತ್ರಜ್ಞಾನ ಕಂಪನಿಗಳು, ಸ್ಟಾರ್ಟ್‌ಅಪ್‌ಗಳು, ಶೈಕ್ಷಣಿಕ ಮತ್ತು …

Read More »

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

ತಿರುವಂತಪುರಂ: ಮುಂಬರುವ ಕೇರಳ ಚುನಾವಣೆಯಲ್ಲಿ  ಕಾಂಗ್ರೆಸ್ ಗೆಲ್ಲುವುದಿಲ್ಲ. ಕಮ್ಯುನಿಸ್ಟ್ ವಿರೋಧಕ್ಕಿಂತ ಪಕ್ಷದೊಳಗಿನ ನಾಯಕರ ನಡುವೆಯೇ ಪರಸ್ಪರ ವಿರೋಧ, ಭಿನ್ನಾಭಿಪ್ರಾಯ ಇದೆ ಎಂದು ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ ಬಾಂಬ್‌ ಸಿಡಿಸಿದ್ದಾರೆ. ಮಾಧ್ಯಮಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ (Congress) ಗೆಲ್ಲಬೇಕೆಂದು ಬಯಸುತ್ತೇನೆ. ಆದರೆ ಕಾಂಗ್ರೆಸ್ ನಾಯಕರು ಪಕ್ಷದ ಒಳಗಡೆಯೇ ಕಚ್ಚಾಟ ನಡೆಸುತ್ತಿರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಲು ಬರುವುದಿಲ್ಲ. ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ ಎಂದು …

Read More »

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ

ಕೋಲಾರ: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಸಂಜೆ 4.20ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು …

Read More »

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

ಜೈಪುರ: ಇಲ್ಲಿನ ಭಿವಾಡಿಯಲ್ಲಿರುವ  ಕೆಮಿಕಲ್ ಫ್ಯಾಕ್ಟರಿಯಲ್ಲಿ  ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ 25 ಜನ ಕಾರ್ಮಿಕರಿದ್ದರು. ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ಕಾರ್ಖಾನೆಯ ತುಂಬೆಲ್ಲಾ ಆವರಿಸಿಕೊಂಡಿದ್ದು, ಕೆಲವು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. …

Read More »

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

ನವದೆಹಲಿ: 2026 ರ ವರ್ಷದ ಮೊದಲ ಸೂರ್ಯಗ್ರಹಣ  ಮಂಗಳವಾರ (ಫೆ.17) ಗೋಚರವಾಗಲಿದೆ. ಇದನ್ನ ʻರಿಂಗ್ ಆಫ್ ಫೈರ್ʼ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಮಂಗಳವಾರ ಮಧ್ಯಾಹ್ನ 3:26 ರ ವೇಳೆಗೆ ಗ್ರಹಣ ಪ್ರಾರಂಭವಾಗಿ ಸಂಜೆ 7:57 ಕ್ಕೆ ಕೊನೆಗೊಳ್ಳಲಿದೆ. ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, 2 ನಿಮಿಷ 20 ಸೆಕೆಂಡುಗಳ ವರೆಗೆ ಇರಲಿದೆ. ಸಂಪೂರ್ಣ ಸೂರ್ಯಗ್ರಹಣದ ವೇಳೆ ಸೂರ್ಯನ ಕೇಂದ್ರದ 96% ರಷ್ಟನ್ನು ಚಂದ್ರ ಆವರಿಸಲಿದೆ. …

Read More »

ಜೈಲಿನಲ್ಲಿರೋ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು ನೀಡಿ: ಸಂಸದ ಈರಣ್ಣ ಕಡಾಡಿ ಮನವಿ

ನವದೆಹಲಿ: ಜೈಲಿನ ಒಳಗಿನಿಂದ ಚುನಾವಣೆಗೆ ಸ್ಪರ್ಧಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ಅದೇ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಮತದಾನದ ಹಕ್ಕು ನೀಡುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ 1951 ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 62(5) ಕ್ಕೆ ತಿದ್ದುಪಡಿ ತರುಬೇಕು ಎಂದು ಸಂಸದ ಈರಣ್ಣ ಕಡಾಡಿ ಮನವಿ ಮಾಡಿದ್ದಾರೆ. ರಾಜ್ಯಸಭೆಯ ಶೂನ್ಯ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ‘ಸಬ್ ಕಾ ಸಾಥ್‌, ಸಬ್ ಕಾ …

Read More »

ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ: ಪಿಯೂಷ್ ಗೋಯಲ್

ನವದೆಹಲಿ: ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದದ  ಅಡಿಯಲ್ಲಿ ಬಾಂಗ್ಲಾದೇಶಕ್ಕೆ ವಿಸ್ತರಿಸಿದಂತೆಯೇ ಭಾರತವು ಜವಳಿ ಉತ್ಪನ್ನಗಳಿಗೆ ಶೂನ್ಯ ಸುಂಕ ಪ್ರಯೋಜನ ಪಡೆಯುವ ಸಾಧ್ಯತೆಯಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಆದ್ರೆ ಭಾರತ – ಅಮೆರಿಕ ಒಪ್ಪಂದದ ಜಂಟಿ ಹೇಳಿಕೆಯಾಗಲಿ ಅಥವಾ ಶ್ವೇತಭವನ ಫ್ಯಾಕ್ಟ್‌ಶೀಟ್ ಆಗಲಿ ಈ ಷರತ್ತನ್ನ ಸ್ಪಷ್ಟವಾಗಿ ಉಲ್ಲೇಖಿಸಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವ್ಯಾಪಾರ ಒಪ್ಪಂದದಲ್ಲಿ ಬಾಂಗ್ಲಾದೇಶವು ಭಾರತಕ್ಕಿಂತ ಹೆಚ್ಚಿನ ಪ್ರಯೋಜನ ಪಡೆದುಕೊಂಡಿದೆ ಎಂಬ ರಾಹುಲ್‌ …

Read More »

ಸಾಲದ ಬಗ್ಗೆ ಕಾಂಗ್ರೆಸ್‌ದು ಮೊಸಳೆ ಕಣ್ಣೀರು; ರಾಜ್ಯಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವ್ಯಂಗ್ಯ

ನವದೆಹಲಿ: ದೇಶದ ಸಾಲದ ಬಗ್ಗೆ ಕಾಂಗ್ರೆಸ್ ಸುಳ್ಳು ಕಾಳಜಿ ತೋರಿಸುತ್ತಿದೆ ಎಂದು ಟೀಕಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಒಂ ದೆಡೆ ಸಾಲ ಏರುತ್ತಿದೆ ಎಂದು ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್, ಮತ್ತೊಂದೆಡೆ ರಾಜ್ಯಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಿ ಮತ್ತು ಹೆಚ್ಚು ಸಾಲ ಮಾಡಿ ಎಂದು ಒತ್ತಾಯಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿ 2026-27ರ ಕೇಂದ್ರ ಬಜೆಟ್ ಮೇಲಿನ ಸುದೀರ್ಘ ಚರ್ಚೆಗೆ ಉತ್ತರಿಸಿದ ಸೀತಾರಾಮನ್, ಸರ್ಕಾರದ ಹಣಕಾಸು ನಿರ್ವಹಣೆಯ …

Read More »

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರಿಗೆ ಬೇಟಿ ಮಾಡಿದ ಆಹಾರ ಸಚಿವ ಕೆಹೆಚ್:- ಮುನಿಯಪ್ಪ

ಕನಿಷ್ಠ ಬೆಂಬಲ ಬೆಲೆ ಯೋಜನೆಯ ಬಾಕಿ ಮೊತ್ತ 1446 ಕೋಟಿ ರೂ ಗಳ ಬಿಡುಗಡೆಗೆ ಮನವಿ ನವದೆಹಲಿ:ಮಾನ್ಯ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ನವದೆಹಲಿಯ ಕೃಷಿ ಭವನದಲ್ಲಿ ನಡೆದ ಆಹಾರ ಇಲಾಖೆಯ ಸಭೆಯಲ್ಲಿ ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕರ್ನಾಟಕ ಸರ್ಕಾರವು ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ಧಾನ್ಯಗಳು ಹಾಗೂ ಭತ್ತ/ಕಸ್ಟಮ್ ಮಿಲ್ಡ್ ರೈಸ್ (CMR) ಖರೀದಿ …

Read More »

Gold, Silver ಪ್ರಿಯರಿಗೆ ಶಾಕ್;‌ 10 ಗ್ರಾಂ ಚಿನ್ನಕ್ಕೆ 5,400 ರೂ, ಕೆಜಿ ಬೆಳ್ಳಿಗೆ 15,000 ರೂ. ಏರಿಕೆ

ನವದೆಹಲಿ: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ರಾಜಕೀಯ ಅನಿಶ್ಚಿತತೆ ಮತ್ತು ಡಾಲರ್ ದುರ್ಬಲಗೊಳ್ಳುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಚಿನ್ನ, ಬೆಳ್ಳಿ ದರಗಳಲ್ಲಿ ಏರಿಳಿತ ಆಗುತ್ತಿದೆ. ಎರಡೂ ಲೋಹಗಳ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡಿದ್ದು, ಹೂಡಿಕೆದಾರರು ಸುರಕ್ಷಿತ ಸ್ವರ್ಗದ ಸ್ವತ್ತುಗಳತ್ತ ಮುಖ ಮಾಡಲು ಕಾರಣವಾಗಿದೆ. ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 5,400 ರೂ. ಏರಿಕೆಯಾಗಿ 1,59,710 ರೂ.ಗೆ ತಲುಪಿದೆ. …

Read More »