Breaking News

new delhi

ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾನ್ ಶಾಪ್ ಕಳ್ಳತನ ಪ್ರಕರಣ

  ಗೋಕಾಕ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬಸವರಾಜ ಪೂಜೇರಿ ಮಾಲೀಕತ್ವದ ಪಾನ್ ಶಾಪ್ ಅಂಗಡಿ ಇಂದು ಬೆಳಿಗ್ಗೆ ಸುಮಾರು 4 ಘಂಟೆಗೆ ಕೀಲಿ ಲಾಕ್ ಮುರಿದು ಕಳ್ಳತನ ನಡೆದಿದ್ದು.ಬೆಳಿಗ್ಗೆ 5 ಘಂಟೆಗೆ ಅಂಗಡಿ ತೆಗೆಯಲು ಬಂದ್ ಮಾಲೀಕ ಬಸು ಪೂಜೇರಿ ಅಂಗಡಿ ಕಳ್ಳತನ ಆಗಿರುವುದುನ್ನು ಕಂಡು 112 ಸಹಾಯವಾಣಿಗೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಪಿಎಸ್‌ಐ ವಾಲೀಕರ ಹಾಗೂ ಪೊಲೀಸ 112 ಸಿಬ್ಬಂದಿಗಳು ತನಿಖೆ ನಡೆಸಿ ಸ್ಥಳೀಯರಿಂದ …

Read More »

ಯಮಕನಮರಡಿ ಕ್ಷೇತ್ರದ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ: ರಾಹುಲ್ ಜಾರಕಿಹೊಳಿ

      ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು.   ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಮತ್ತು ಹಳ್ಳೂರು, ಕರವಿನಕುಪ್ಪಿ ಇವೆರಡು ಗ್ರಾಮಕ್ಕೆ 6 ಲಕ್ಷ ರೂ. ಅನುದಾನದಲ್ಲಿ ಬಸ್ ನಿಲ್ದಾಣ …

Read More »

ಹಾನಗಲ್ ಉಪಚುನಾವಣೆ: ರೇಸ್​ನಲ್ಲಿ 11 ಮಂದಿ.. ಇಕ್ಕಟ್ಟಿನಲ್ಲಿ ಬಿಜೆಪಿ ಹೈಕಮಾಂಡ್..!

ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್​ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್​ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್​ ರೇಸ್​ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್​ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …

Read More »

ರಾನು ಮಂಡಲ್​ ಕಂಠದಲ್ಲಿ ‘ಮನಿಕೆ ಮಗೆ ಹಿತೆ’; ಕಿರಿಕಿರಿ ತಾಳಲಾಗದೇ ಕಮೆಂಟ್​ ಮಾಡುತ್ತಿರುವ ನೆಟ್ಟಿಗರು

ಯೂಟ್ಯೂಬ್​, ಇನ್​ಸ್ಟಾಗ್ರಾಮ್​ ಮತ್ತು ಇತರೆ ಸೋಶಿಯಲ್​ ಮೀಡಿಯಾದಲ್ಲಿ ‘ಮನಿಕೆ ಮಗೆ ಹಿತೆ’ (Manike Mage Hithe) ಹಾಡನ್ನು ಕೇಳದವರೇ ಇಲ್ಲ. ಅಷ್ಟರಮಟ್ಟಿಗೆ ಈ ಗೀತೆ ಫೇಮಸ್​ ಆಗಿದೆ. ಶ್ರೀಲಂಕಾದ ಗಾಯಕಿ ಯೊಹಾನಿ ಕಂಠದಲ್ಲಿ ಮೂಡಿಬಂದಿರುವ ಈ ಹಾಡು 135 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಇದರದ್ದೇ ಹಾವಳಿ. ಜನ ಸಾಮಾನ್ಯರು ಮಾತ್ರವಲ್ಲದೇ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡ ‘ಮನಿಕೆ ಮಗೆ ಹಿತೆ’ ಹಾಡಿಗೆ ಮರುಳಾಗಿದ್ದಾರೆ. ಆದರೆ ಅದೇ …

Read More »

ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?

ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …

Read More »

ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್‌ಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್​ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್‌ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್‌ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್‌ ಹಾಗೂ ಕ್ರಿಮಿನಲ್‌ ಕೇಸ್‌ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …

Read More »

ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, ದಂಡಾಪೂರ, ರಾಜಾಪೂರ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿರುವ ಚರ್ಚಗಳ ಜೀರ್ಣೋದ್ಧಾರಕ್ಕೆ ಈ ಅನುದಾನ ಬಿಡುಗಡೆಯಾಗಿದೆ …

Read More »

ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone)  ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …

Read More »

ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.

Read More »

ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ …

Read More »