Breaking News

new delhi

ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

ಗೋಕಾಕ :  ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ಕುಡಿದ ಅಮಲಿನಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಅಮಲಿನಲ್ಲಿ ತಿಲಕ ಎಂಬಾತ ಚೇತನ ಎಂಬ ಯುವಕನನ್ನು ಕೊಲೆ ಮಾಡಿದ್ದಾನೆ.   ಗೋಕಾಕ ಫಾಲ್ಸ್ ನ ಸಮೀಪವಿರುವ ವಾಲ್ಮೀಕಿ ನಗರದಲ್ಲಿ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.   ಗೋಕಾಕ ಗ್ರಾಮೀಣ ಪೊಲೀಸ್ …

Read More »

ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*   *ನಾಗನೂರ*- ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ ಮಾಜಿ ಸಚಿವ ಆರ್. …

Read More »

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.

ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …

Read More »

ಅಂಧ ಮಹಿಳೆಯರ ಕ್ರಿಕೆಟ್ 9ರಿಂದ

ಬೆಂಗಳೂರು: ಭಾರತ ಅಂಧರ ಕ್ರಿಕೆಟ್ ಸಂಸ್ಥೆ ಮತ್ತು ಸಮರ್ಥನಂ ಟ್ರಸ್ಟ್‌ ಫಾರ್ ದಿ ಡಿಸೇಬಲ್ಸ್‌ ಸಹಯೋಗದೊಂದಿಗೆ ಇದೇ 9ರಿಂದ 13ರವರೆಗೆ ಇಂಡಸ್‌ಇಂಡ್ ಬ್ಯಾಂಕ್ ಮಹಿಳಾ ರಾಷ್ಟ್ರೀಯ ಟಿ20 ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. 16 ರಾಜ್ಯಗಳ ತಂಡಗಳು ಸ್ಪರ್ಧಿಸಲಿವೆ. ಬರ್ಮಿಂಗ್ ಹ್ಯಾಮ್ ನ 2023ರ ವಿಶ್ವ ಅಂಧರ ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡವನ್ನೂ ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಗುವುದು. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮರ್ಥನಂ ಟ್ರಸ್ಟ್ ಸಂಸ್ಥಾಪಕ …

Read More »

ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ (Assault on boy) ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕನಕರಾಯಪ್ಪ, ರಾಜೇಶ್ವರಿ ಸೇರಿ 6 ಜನರು, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕನ ಮೈಮೇಲೆ ಹಾಗೂ ಗುಪ್ತಾಂಗಕ್ಕೂ ಗಾಯವಾಗಿದೆ. ಕನಕರಾಯಪ್ಪ ಎಂಬುವರು ಮಂಜುಳಾ ಮಡಿವಾಳ ಎಂಬುವರಿಗೆ …

Read More »

ಬೆಳಗಾವಿ: ವಿದ್ಯಾರ್ಥಿಗಳ ಹೆಣಗಾಟ; ಸಾರಿಗೆ ಅಧಿಕಾರಿಗಳಿಗೆ ಶಾಪ..

: ಸಮರ್ಪಕ ಬಸ್‌ ವ್ಯವಸ್ಥೆ ಮೊದಲೇ ಇಲ್ಲ, ಇದ್ದ ಬಸ್‌ಗಳಂತೂ ಸರಿಯಾದ ಸಮಯಕ್ಕೆ ಬರದೇ ವಿದ್ಯಾರ್ಥಿಗಳು ನಿಗದಿತ ತರಗತಿಗಳಿಂದ ವಂಚಿತವಾದರೇ ಪ್ರಯಾಣಿಕರಿಗೆ ನಿತ್ಯವೂ ಭಾರಿ ತೊಂದರೆಯನ್ನು ಅನುಭವಿಸುವಂತಾಗಿದ್ದು ಸಾರಿಗೆ ಇಲಾಖೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ. ಗ್ರಾಮೀಣ ಭಾಗದಿಂದ ನಗರ, ಪಟ್ಟಣದ ಶಾಲಾ-ಕಾಲೇಜು ಹೋಗುವ ವಿದ್ಯಾರ್ಥಿಗಳು ಬಸ್‌ಗಾಗಿ ಗಂಟೆಗಟ್ಟಲೇ ಕಾಯುತ್ತಿದ್ದಾರೆ. ಹಾಗೆಯೇ ಮನೆಗೆ ಮರಳಿ ಹೋಗುವಾಗಲೂ ಸರಿಯಾದ ಸಮಯಕ್ಕೆ ಬಸ್‌ ಬಾರದೇ ಬಸ್‌ ನಿಲ್ದಾಣದಲ್ಲಿಯೇ ಕಾಲ ಕಳೆಯಬೇಕಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಸಂಚರಿಸುವ …

Read More »

ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ

ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ …

Read More »

ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಸನತ ಜಾರಕಿಹೊಳಿ

ಗೋಕಾಕ : ಪಠ್ಯದಷ್ಟೆ ಪತ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆಗಳ ಮೂಲಕ ಪ್ರದರ್ಶಸಿಸುವ ಮುಖೇನ ಪ್ರೋತ್ಸಾಹಿಸಿಕೊಳ್ಳಿ. …

Read More »

ಕೆ.ಆರ್‌.ಪೇಟೆಯಲ್ಲಿ ಬಸ್‌ ಉರುಳಿ 32 ಮಂದಿಗೆ ಗಾಯ, ಹುಕ್ಕೇರಿ ಸಮೀಪ ಹೊತ್ತಿ ಉರಿದ ಬಸ್

ಮಂಡ್ಯ/ಚಿಕ್ಕೋಡಿ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ ಉರುಳಿ ಬಿದ್ದು 32 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿಯ ಚನ್ನರಾಯಪಟ್ಟಣ- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿ ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಕೆ ಆರ್ …

Read More »

ಬೆಳಗಾವಿ: ಲಿಂಗಾಯತ ಪಂಚಮಸಾಲಿಗಳಿಗೆ 24 ಗಂಟೆಯೊಳಗೆ 2ಎ ಸ್ಥಾನಮಾನ ನೀಡಿ- ಶಾಸಕ ಬಸನಗೌಡ ಪಾಟೀಲ್

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 24 ಗಂಟೆಯೊಳಗೆ 2ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಡುವು ನೀಡಿದ್ದಾರೆ. ನಗರದ ಗಾಂಧಿ ಭವನದಲ್ಲಿ ಗುರುವಾರ 2ಡಿ ಪಡೆದಿರುವ ಪಂಚಮಸಾಲಿ ಸಮಾಜಕ್ಕೆ ನ್ಯಾಯವೋ ಅನ್ಯಾಯವೋ ಎಂಬ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, 24 ಗಂಟೆಯೊಳಗೆ ಮೀಸಲಾತಿ ನೀಡದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಮುಖ್ಯಮಂತ್ರಿ ಸ್ಪರ್ಧಿಸಲಿರುವ ಹಾವೇರಿ …

Read More »