Breaking News

new delhi

ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ

  ಇತ್ತೀಚೆಗೆ ಅತಿ ಹೆಚ್ಚು ಸುದ್ದಿ ಆಗಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. ಅದೇನಾಯ್ತೋ ಅವರ ಮೇಲೆ ಇನ್ನೊಬ್ಬ ಮಹಿಳಾ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ರು. ಕೊನೆಗೆ ಇಬ್ಬರು ಅಧಿಕಾರಿಗಳ ವರ್ಗಾವಣೆಯೊಂದಿಗೆ ಎಲ್ಲವೂ ತಣ್ಣಗಾಗಿತ್ತು. ಆದ್ರೆ ರೋಹಿಣಿ ಸಿಂಧೂರಿ ಸಿಕ್ಕಾಪಟ್ಟೆ ಫೇಮಸ್ ಆಗಿ ಬಿಟ್ರು. ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ. ಮೊನ್ನೆ ಮೊನ್ನೆಯವರಿಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದರು. ಆದರೆ, ಮೈಸೂರಿನಲ್ಲಿ …

Read More »

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.   ಇಂದು ಸೂರ್ಯಗ್ರಹಣ : ದೇಶದಲ್ಲಿ ಎಲ್ಲೆಲ್ಲಿ ಸೂರ್ಯಗ್ರಹಣ ಗೋಚರ?   ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.   ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ ಭೈರೇಗೌಡ ಸೇರಿ ‌ಇನ್ನಿತರ ಮುಖಂಡರು ಇದ್ದರು.   ಅನಾರೋಗ್ಯದಿಂದ ಚೇತರಿಸಿಕೊಂಡ ಸಿದ್ದರಾಮಯ್ಯ:   ಕಳೆದ ವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ …

Read More »

ಮುಂಬೈ ಮಳೆಗೆ ಕಟ್ಟಡ: ಕುಸಿತ ಹನ್ನೊಂದು ಸಾವು

ಮುಂಬೈ : ಮುಂಬೈನಲ್ಲಿ ಸುರಿಯುತ್ತಿರುವ ಸತತ ಮಾನ್ಸೂನ್ ಮಳೆಯಿಂದ ಮುಂಬೈ ನಗರದ ಕಟ್ಟಡವೊಂದು ಕುಸಿದು ಬಿದ್ದಿದೆ. ಮಲಾಡ್ West ನ ಈ ಕಟ್ಟಡ ಕುಸಿತಕ್ಕೆ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 15 ಹೆಚ್ಚು ಜನರನ್ನು ಇದುವರೆಗೆ ರಕ್ಷಿಸಲಾಗಿದೆ. ಕಟ್ಟಡ ಕುಸಿಯುತ್ತಿದ್ದಂತೆ ಬದಿಗೆ ಇರುವ 3 ಕಟ್ಟಡಗಳಲ್ಲಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಕ್ಷಿಪ್ರಗತಿಯಲ್ಲಿ ಸಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಮುಂಬೈ, ಥಾಣೆ, ಪಾಲ್ಘರ್ …

Read More »

ಅಲೆಮಾರಿ ಜನಾಂಗದ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಗೋಕಾಕ: ಹಿಂದುಳಿದ ಹಾಗೂ ಅಲೆಮಾರಿ ಜನಾಂಗದ ಕುಟುಂಬಗಳಿಗೆ ಇಲ್ಲಿಯ ನಗರಸಭೆ ವಾರ್ಡ ನಂ 12ರ ಸದಸ್ಯೆ ಭಾರತಿ ಶಿವಾನಂದ ಹತ್ತಿ ಅವರು ಆಸರೆಯಾಗಿದ್ದಾರೆ. ನಗರದ ಹೊರವಲಯದಲ್ಲಿ ವಾಸವಾಗಿರುವ ಅಲೆಮಾರಿ ಜನಾಂಗ ಹಾಗೂ ನಿರ್ಗತಿಕ ಕುಟುಂಬಗಳಿಗೆ ಆಹಾರ ದಿನಸಿ ಕಿಟ್ ವಿತರಿಸಿ ಮಾನವಿಯತೆ ಮೆರದಿದ್ದಾರೆ. ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಗರದ ಎಪಿಎಮ್‌ಸಿ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಕುಟುಂಬದವರಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ …

Read More »

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಬೇಡಿಕೆ?

ದೆಹಲಿ: ‘ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡುವುದಾದರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ತಮಗೆ ಕೊಡಬೇಕು’ ಎಂದು ಹಾಲಿ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಬೇಡಿಕೆ ಇಟ್ಟಿದ್ದಾರೆಯೇ? ಇಂತಹದೊಂದು ಚರ್ಚೆ ದೆಹಲಿ ಮಟ್ಟದ ನಾಯಕರ ವಲಯದಲ್ಲಿ ಹರಿದಾಡುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿಯಾದ ವಿಜಯೇಂದ್ರ, ಈ ಬೇಡಿಕೆಯ ಜತೆಗೆ ಯತ್ನಾಳ ಹಾಗೂ ಯೋಗೇಶ್ವರ್ ಅವರನ್ನು ಉಚ್ಛಾಟಿಸಬೇಕು ಎಂಬ ಅಹವಾಲನ್ನೂ ಸಲ್ಲಿಸಿದ್ದಾರೆ. ‘ಭಿನ್ನಮತೀಯರಿಗೆ ತಕ್ಕ ಶಾಸ್ತಿ ಕಲಿಸುವ ಬಗ್ಗೆ …

Read More »

ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ

  ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್‍ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಕಾರಿಗಳಾದ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು.     ಅವರು ಶುಕ್ರವಾರ ಪಟ್ಟಣದ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ …

Read More »

ಇಂದು ಕೊರೋನಾ ರಣಕೇಕೆ: 839 ಹೊಸ ಪ್ರಕರಣ, 10 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 839 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10 ಸೋಂಕಿತರು ಬಲಿಯಾಗಿದ್ದಾರೆ.   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 839 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68,621 ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 39, ಬೆಳಗಾವಿಯಲ್ಲಿ 291, …

Read More »

ಸಂಪೂರ್ಣ ಲಾಕ್ ಡೌನ್ ಅನಗತ್ಯ ಹೊರಗಡೆ ಬಂದ್ರೆ ಲಾಠಿ ಬಿಸಿ

ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ವಾರದ ಕೊನೆಯ ಮೂರು,ದಿನ,ಶುಕ್ರವಾರದಿಂದ,ಸೋಮವಾರಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ಗೋಕಾಕ ನಗರ ಠಾಣೆ ಪಿಎಸ್‌ಐ ಕೆ ವಾಲಿಕಾರ ಇವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.   ಇನ್ನು ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು …

Read More »

ನನ್ನ ಬಂಧಿಸುವ ಧೈರ್ಯ ಯಾರಿಗೂ ಇಲ್ಲ: ಐಎಂಎಗೆ ಸೆಡ್ಡುಹೊಡೆದ ಬಾಬಾ ರಾಮ್ ದೇವ್

ನವದೆಹಲಿ: ಅಲೋಪತಿ ಮೂರ್ಖತನದ ಪದ್ಧತಿ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದು, ನನ್ನನ್ನು ಬಂಧಿಸುವ ಧೈರ್ಯ ಯಾರಿಗೂ ಇಲ್ಲ ಎಂದು ಹೇಳುವ ಮೂಲಕ ಭಾರತೀಯ ವೈದ್ಯಕೀಯ ಸಂಘಕ್ಕೆ ಸಡ್ಡುಹೊಡೆದಿದ್ದಾರೆ. ಅಲೋಪತಿ ಮೂರ್ಖತನದ ವಿಜ್ಞಾನ ಎಂದು ಟೀಕಿಸಿದ್ದ ಯೋಗ ಗುರು ಬಾಬಾ ದೇವ್ ಅವರನ್ನು ದೇಶದ್ರೋಹ ಆರೋಪದ ಮೇಲೆ ಬಂಧಿಸುವಂತೆ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ …

Read More »