Breaking News

new delhi

ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!

ಬಿಗ್​-ಬಿ ಅಮಿತಾಭ್​ ಬಚ್ಚನ್​ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಇನ್ನೂ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಕಳೆದ ವರ್ಷವಷ್ಟೇ ಪದವಿ ಶಿಕ್ಷಣ ಮುಗಿಸಿರುವ ಅವರು ತಮ್ಮದೇ ಹಾದಿನಲ್ಲಿ ಸಾಗುತ್ತಿದ್ದಾರೆ. ಮಹಿಳೆಯ ಸಮಾನತೆಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಅವರು ಉತ್ತರಾಖಂಡ್​ ಮುಖ್ಯಮಂತ್ರಿ ತಿರತ್​ ಸಿಂಗ್​ ರಾವತ್​ ಅವರನ್ನು ಎದುರು ಹಾಕಿಕೊಂಡಿದ್ದಾರೆ. ಅದು ಕೂಡ ಹರಿದ ಜೀನ್ಸ್​ ಪ್ಯಾಂಟ್​ ಕಾರಣಕ್ಕೆ!     ಅರೆರೆ.. ಮುಖ್ಯಮಂತ್ರಿಗೂ, ಬಚ್ಚನ್​ ಮೊಮ್ಮಗಳಿಗೂ, ಹರಿದ ಜೀನ್ಸ್​ ಪ್ಯಾಂಟ್​ಗೂ ಏನು …

Read More »

ಕಳೆದ ಎರಡು ವರ್ಷಗಳಲ್ಲಿ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ

ನವದೆಹಲಿ:ಕಳೆದ ಎರಡು ವರ್ಷಗಳಲ್ಲಿ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ ಎಂದು ಹಣಕಾಸು ಸಚಿವಾಲಯ ಸೋಮವಾರ(ಮಾರ್ಚ್ 15) ಲೋಕಸಭೆಗೆ ತಿಳಿಸಿದೆ. ನೋಟು ಅಮಾನ್ಯೀಕರಣದ ನಂತರ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದ ನಂತರ ಇದೀಗ 2000 ಮುಖಬೆಲೆಯ ನೋಟುಗಳು ವಿರಳವಾಗಿರುವುದು ಯಾಕೆ ಎಂಬ ಪ್ರಶ್ನೆಗೆ ಹಣಕಾಸು ಸಚಿವಾಲಯ ಈ ಉತ್ತರ ನೀಡಿದೆ. 2019-20 ಹಾಗೂ 2020-21ನೇ ಸಾಲಿನಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲು ಪ್ರಿಂಟಿಂಗ್ ಪ್ರೆಸ್ …

Read More »

ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ

ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Read More »

ಕುರ್ಚಿಯಲ್ಲಿ ಅವಳೇ ಕೂರಬೇಕಿದೆ: ಗ್ರಾಮ ಪಂಚಾಯ್ತಿ ಸದಸ್ಯೆ ಸವಿತಾ ಪಾತ್ರೋಟಿ ಮಾತು

ಅವಳ (ಮಹಿಳೆ) ಕುರ್ಚಿಯಲ್ಲಿ ಇನ್ನಾರೋ ಬಂದು ಕೂರುವ ಸಂಪ್ರದಾಯ ಬಹುತೇಕ ಪಂಚಾಯ್ತಿಗಳಲ್ಲಿದೆ. ಆದರೆ ನಮ್ಮೂರ ಪಂಚಾಯ್ತಿಯಲ್ಲಿ ಮಾತ್ರ ಆ ಜಾಗದಲ್ಲಿ ಅವಳೇ ಕೂತು ಅಧಿಕಾರ ನಡೆಸಬೇಕು. ಮತ್ತೊಬ್ಬರಿಗೆ ಅವಕಾಶ ನೀಡೊಲ್ಲ. ಊರ ಜನರ ಸಮಸ್ಯೆಗೆ ಆಕೆಯೇ ಮುಕ್ತವಾಗಿ ಸ್ಪಂದಿಸಬೇಕು. ಇದು ಇಂದು ನಮ್ಮೆದುರಿಗೆ ಇರುವ ದೊಡ್ಡ ಸವಾಲು ಹೌದು. ಅದನ್ನು ನಿಭಾಯಿಸಿಯೇ ತೀರುತ್ತೇವೆ. ಹೆಣ್ಣು ಮಕ್ಕಳು ಮನೆಯಲ್ಲಿ ಇರಲು ಲಾಯಕ್ಕು, ಅಡುಗೆ ಮನೆಗೆ ಮಾತ್ರ ಸೀಮಿತ ಎಂಬುದು ಈಗ ಸವಕಲು …

Read More »

ವರವರ ರಾವ್ ಆಸ್ಪತ್ರೆಯಿಂದ ಬಿಡುಗಡೆ

ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣ, ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಕವಿ, ಹೋರಾಟಗಾರ ವರವರ ರಾವ್ ಅವರು ನಾನಾವತಿ ಆಸ್ಪತ್ರೆಯಿಂದ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ. 82 ವರ್ಷದ ರಾವ್ ಅವರಿಗೆ ಫೆಬ್ರುವರಿ 22ರಂದು ವೈದ್ಯಕೀಯ ಕಾರಣಗಳಿಗಾಗಿ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಸೂಕ್ತ ಜಾಮೀನುದಾರರು ದೊರೆಯುವವರೆಗೂ ನಗದು ಜಾಮೀನು ನೀಡಲು ಅವಕಾಶ ನೀಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಕಳೆದ ಸೋಮವಾರ ನ್ಯಾಯಾಲಯ ಅನುಮತಿ …

Read More »

ಗೋಕಾಕ: ಜಿಲ್ಲಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಬಹುಮಾನ ಪಡೆಯುತ್ತಿರುವುದು.

ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರದಂದು ಆಯೋಜಿಸಿದ್ದ 5ನೇ ಜಿಲ್ಲಾ ಮಟ್ಟದ (ಬೆಳಗಾವಿ ನಗರ ಹೊರತು ಪಡಿಸಿ) ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ಗ್ರಾಮೀಣದ ರನ್ನರ್ ಆಫ್ ಆಗಿ ಸುನೀಲ ಬಾತಖಾಂಡೆ, ಖಾನಾಪೂರದ ಬೇಸ್ಟ್ ಫೋಜರ್ ಪ್ರಶಸ್ತಿಯನ್ನು ಸಂದೀಪ ಅಂಗಡಿ ಪಡೆದಿದ್ದಾರೆ. ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ …

Read More »

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವ

ಗೋಕಾಕ: ನಗರದ ಶೂನ್ಯ ಸಂಪಾದನ ಮಠದಿಂದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭವು ಮಾ-1 ರಿಂದ 4ರವರೆಗೆ ಅತೀ ವಿಜೃಂಭನೆಯಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿವೇಕ ಜತ್ತಿ ಹೇಳಿದರು. ಅವರು ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ …

Read More »

ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ

ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …

Read More »

ಭಾರತದಲ್ಲಿ ಯಾವುದೇ ಸಂದರ್ಭದಲ್ಲಿ ವ್ಯಾಕ್ಸಿನ್ ಹಂಚಿಕೆ ಆರಂಭ

ನವದೆಹಲಿ,ಡಿ.23-ದೇಶದಲ್ಲಿ ಕೊರೊನಾ ಲಸಿಕೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಲಸಿಕೆ ಹಂಚಿಕೆ ಕಾರ್ಯ ಆರಂಭಗೊಳ್ಳುವ ಸಾಧ್ಯತೆಗಳಿವೆ. ಈಗಾಗಲೇ ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ಸಂದರ್ಭದಲ್ಲಿ ಲಸಿಕೆ ಆಸ್ಪತ್ರೆಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ 90ಕ್ಕೂ ಹೆಚ್ಚು ಫ್ರೀಜರ್‍ಗಳು ಬಂದಿದ್ದು, ಕೆಲ ಫ್ರೀಜರ್‍ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಆಸ್ಪತ್ರೆಯ ನೆಲಮಹಡಿ ಮತ್ತು ಮೊದಲ ಮಹಡಿಯಲ್ಲಿ ಸ್ಥಾಪಿಸಿರುವ 4,700 ಚದುರಡಿ ಸುತ್ತಳತೆಯ ಶೀತಾಗಾರದಲ್ಲಿ ಲಸಿಕೆ …

Read More »

ಜಿಲ್ಲೆಗೊಂದು ವಿಶೇಷ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಸ್ಥಾಪನೆ

ನವದೆಹಲಿ,ಡಿ21-ದೇಶದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಪ್ರಕರಣಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗುವಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಿಶೇಷ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಸ್ಥಾಪಿಸಬೇಕು ಎಂದು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ದೇಶದಲ್ಲಿ ಆರ್ಥಿಕ ಅಪರಾಧ ಪ್ರಕರಣಗಳು, ತೆರಿಗೆ ವಂಚನೆಯಂತಹ, ಅಕ್ರಮ ಹಣ ವರ್ಗಾವಣೆಯಂತಹ ಭ್ರಷ್ಟಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಒಂದು ವರ್ಷದೊಳಗೆ ಜಿಲ್ಲೆಗೊಂದು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಬೇಕಿದೆ ಎಂದು ಬಿಜೆಪಿ ಮುಖಂಡ ಹಾಗೂ …

Read More »