ನವದೆಹಲಿ: ದೇಶದ ಎಲ್ಲ ಪ್ರಜೆಗಳಿಗೆ ಕೊರೊನಾ ಲಸಿಕೆ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐಸಿಎಂಆರ್ ನಿರ್ದೇಶಕ ಬಲರಾಮ್ ಭಾರ್ಗವ್ ಮತ್ತು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ರಾಜೇಶ್ ಭೂಷಣ್ ದೇಶದಲ್ಲಿ ಎಲ್ಲ ಪ್ರಜೆಗಳಿಗೆ ಲಸಿಕೆ ನೀಡುವ ಬಗ್ಗೆ ಮಾತನಾಡಿಲ್ಲ. ಈ ವಿಚಾರದ ಬಗ್ಗೆ ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕೇ ಹೊರತು ಒಟ್ಟಾರೆಯಾಗಿ ಮಾತನಾಡಬಾರದು ಎಂದು ಹೇಳಿದರು. ಇಡೀ ದೇಶಕ್ಕೆ ಲಸಿಕೆ ನೀಡುವ …
Read More »ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ
ನವದೆಹಲಿ: ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಇಂದು ವಿಧಿವಶರಾಗಿದ್ದಾರೆ. ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿತ್ತು. ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಫರಿದಾಬಾದ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಹೀಗಾಗಿ ಮೆಡಂತಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ತಮಗೆ ಕೊರೊನಾ ಸೋಂಕು ತಗುಲಿದ ಕುರಿತು ಅಕ್ಟೋಬರ್ …
Read More »ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ,:ಕುನಾಲ್ ಕಮ್ರಾ
ನವದೆಹಲಿ: ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ, ಸುಪ್ರೀಂಕೋರ್ಟ್ ಕಾರ್ಯವೈಖರಿ ಟೀಕಿಸಿರುವ ಟ್ವೀಟ್‍ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ಸ್ಟಾಂಡ್‍ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ. ಅರ್ನಬ್ ಗೋಸ್ವಾಮಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್ ಮಾಡಿ ಟೀಕಿಸಿದ್ದರು. ‘ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ’ ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು 8 ಮಂದಿಗೆ ಅವಕಾಶ ನೀಡಿದ್ದರು. ಕ್ಷಮಾಪಣೆ …
Read More »ನವದೆಹಲಿ: ನೋಟು ನಿಷೇಧ ನಿರ್ಧಾರದಿಂದ ಕಪ್ಪು ಹಣ ಕಡಿಮೆಯಾಗಿದ್ದು, ತೆರಿಗೆ ಹೆಚ್ಚಳವಾಗಿದೆ : ನರೇಂದ್ರ ಮೋದಿ
ನವದೆಹಲಿ: ನೋಟು ನಿಷೇಧ ನಿರ್ಧಾರದಿಂದ ಕಪ್ಪು ಹಣ ಕಡಿಮೆಯಾಗಿದ್ದು, ತೆರಿಗೆ ಹೆಚ್ಚಳವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಐತಿಹಾಸಿಕಾ ನೋಟು ನಿಷೇಧ ನಿರ್ಧಾರಕ್ಕೆ 4 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ ಈ ನಿರ್ಧಾರದಿಂದ ಪಾರದರ್ಶಕತೆ ಹೆಚ್ಚಾಗಿದ್ದು ರಾಷ್ಟ್ರೀಯ ಅಭಿವೃದ್ಧಿಗೆ ನೆರವಾಗಿದೆ ಎಂದು ತಿಳಿಸಿದ್ದಾರೆ. ಟ್ವೀಟ್‌ನಲ್ಲೇ ಏನು ಬದಲಾವಣೆಯಾಗಿದೆ ಎಂಬುದನ್ನು ಪ್ರಧಾನಿ ಮೋದಿ ತಿಳಿಸಿದ್ದಾರೆ. ಟ್ವೀಟ್‌ನಲ್ಲಿ ಏನಿದೆ? ನೋಟು ನಿಷೇಧದ ಬಳಿಕ ‘ಆಪರೇಷನ್ ಕ್ಲೀನ್ ಮನಿʼ ಬಳಿಕ …
Read More »ಗಮನಿಸಿ, ಜನವರಿ 1 ರಿಂದ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯ
ನವದೆಹಲಿ: ಜನವರಿ 1, 2021ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿದ್ದು, 2017ಕ್ಕಿಂತ ಹಿಂದಿನ ಹಾಗೂ ನಂತರದ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯ ಮಾಡಲಾಗಿದೆ. 2021ರ ಜನವರಿಯಿಂದ ಇದು ಜಾರಿಗೆ ಬರಲಿದೆ ಎಂದು ಸರ್ಕಾರ ಹೇಳಿದೆ. 2017ರ ಡಿಸೆಂಬರ್ 1 ರಿಂದ ಮಾರಾಟವಾಗುವ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್ …
Read More »ಬಿಹಾರದಲ್ಲಿ ಮಹಾಘಟಬಂಧನ್‌ಗೆ ಮುನ್ನಡೆ – ಎನ್‌ಡಿಎ ಹಿನ್ನಡೆಗೆ ಕಾರಣ ಏನು?
ನವದೆಹಲಿ : ತೀವ್ರ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆ ಚುನಾವಣೆ ಅಂತ್ಯವಾಗಿದ್ದು. ಮೂರು ಹಂತದಲ್ಲಿ ಮತದಾನ ಮುಕ್ತಾಯವಾಗಿದೆ. ಈ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆಯಾಗಿದ್ದು ಮಹಾಘಟಬಂಧನ್ ಸರ್ಕಾರ ರಚಿಸುವ ಹೊಸ್ತಿಲಲ್ಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಸಿ – ವೋಟರ್ ಸೇರಿ ಹಲವು ಸಮೀಕ್ಷೆಗಳು ಬಿಹಾರದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟವಾದ ಬಹುಮತ ಇಲ್ಲ ಎಂದರೆ ಇನ್ನು ಹಲವು ಸಮೀಕ್ಷೆಗಳು ಎನ್‌ಡಿಎ ಮೈತ್ರಿಗೆ ಭಾರೀ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಿವೆ. ಕೆಲವು ಸಮೀಕ್ಷೆಗಳು ಮಹಾಘಟಬಂಧನ್ …
Read More »ಭಾರತದ ಸಶಸ್ತ್ರ ಪಡೆಗಳಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಏಕಶ್ರೇಣಿ, ಏಕಪಿಂಚಣಿ
ನವದೆಹಲಿ,ನ.7-ಭಾರತದ ಸಶಸ್ತ್ರ ಪಡೆಗಳಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಏಕಶ್ರೇಣಿ, ಏಕಪಿಂಚಣಿ(ಒಆರ್ ಒಪಿ) ಐತಿಹಾಸಿಕ ನಿರ್ಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕೇಂದ್ರ ಸರ್ಕಾರದ ಈ ಯೋಜನೆಯಿಂದ ನಮ್ಮ ಸೇನಾಪಡೆಗಳು ಮತ್ತು ಯೋಧರಲ್ಲಿ ನೈತಿಕ ಸ್ಥೈರ್ಯ ಮೂಡಿಸಿದ್ದು, ಅವರ ಸೌಖ್ಯತೆಗಾಗಿ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ. ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಒಆರ್ ಒಪಿ ಜಾರಿಗೆ ತಂದು ಇಂದಿಗೆ 5 ವರ್ಷಗಳು ಪೂರೈಸಿದ ಸಂದರ್ಭದಲ್ಲಿ ಪ್ರಧಾನಿಯವರು ಟ್ವೀಟ್ ಮಾಡಿ, ಸೇನಾಪಡೆ ಮತ್ತು …
Read More »ಭಾರತೀಯ ಪ್ರಯಾಣಿಕರಿಗೆ ನಿಷೇಧ ಹೇರಿದ ಚೀನಾ
ನವದೆಹಲಿ: ಕೊರೊನಾ ವೈರಸ್ ಹುಟ್ಟಿಗೆ ಕಾರಣವಾಗಿರುವ ಚೀನಾ, ಇದೀಗ ಭಾರತೀಯ ಪ್ರಯಾಣಿಕರಿಗೆ ನಿಷೇಧ ಹೇರುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಈ ಮೂಲಕ ಕೊರೊನಾ ನೆಪವೊಡ್ಡಿ ಭಾರತೀಯರ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಚೀನೀ ರಾಯಭಾರ ಕಚೇರಿ ಈ ಕುರಿತು ಸ್ಪಷ್ಟಪಡಿಸಿದ್ದು, ಭಾರತದಿಂದ ಆಗಮಿಸುವ ಪ್ರಯಾಣಿಕರಿಗೆ ತಾತ್ಕಾಲಿಕವಾಗಿ ನಿಷೇಧ ಹೇರಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ಚೀನಾದ ಅಧೀಕೃತ ವಿಸಾ ಅಥವಾ ನಿವಾಸ ಪರವಾನಗಿ …
Read More »ಕರ್ನಾಟಕ ಸಂಸದ ಅಶೋಕ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 1 ರಂದು ಉಪಚುನಾವಣೆ
ಹೊಸದಿಲ್ಲಿ: ಕರ್ನಾಟಕ ಸಂಸದ ಅಶೋಕ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 1 ರಂದು ಉಪಚುನಾವಣೆ ನಡೆಯಲಿದೆ. ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1 ರಂದು ಮತದಾನ ಹಾಗೂ ಮತ ಎಣಿಕೆ ನಡೆಯಲಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಅಶೋಕ್ ಗಸ್ತಿಯವರು ಸೆಪ್ಟೆಂಬರ್ 17 ರಂದು ಕೊರೊನಾ ಸೋಂಕಿನಿಂದಾಗಿ ನಿಧನರಾಗಿದ್ದರು. ಅವರ ರಾಜ್ಯಸಭಾ ಅವಧಿ 2026ರ ಜೂನ್‌ವರೆಗೆ ಇತ್ತು. ಉಪ ಚುನಾವಣೆಗೆ ನವೆಂಬರ್ 11 ರಂದು …
Read More »ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 75 ರೂಪಾಯಿ ಹೆಚ್ಚಿಸಲಾಗಿದೆ.
ಹೊಸದಿಲ್ಲಿ: ತರಕಾರಿ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನತೆಗೆ ಮತ್ತೆ ಎಲ್ ಪಿ ಜಿ ದರ ಏರಿಕೆಯ ಬಿಸಿ ತಟ್ಟಿದೆ. ಕಳೆದ ತಿಂಗಳಷ್ಟೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿತ್ತು. ಮತ್ತೆ ಇದೀಗ 19 ಕೆಜಿ ಕಮರ್ಷಿಯಲ್ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 75 ರೂಪಾಯಿ ಹೆಚ್ಚಿಸಲಾಗಿದೆ. ಈ ಕುರಿತು ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. 19 …
Read More »
Laxmi News 24×7